• About
  • Advertise
  • Careers
  • Contact
Wednesday, October 28, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಚಾಮುಂಡಿಬೆಟ್ಟದಲ್ಲಿ ಅಪರಾಧ ತಡೆಗೆ ಟಾಸ್ಕ್ ಫೋರ್ಸ್

P K Channakrishna by P K Channakrishna
September 3, 2024
in STATE
Reading Time: 1 min read
0
ಚಾಮುಂಡಿಬೆಟ್ಟದಲ್ಲಿ ಅಪರಾಧ ತಡೆಗೆ ಟಾಸ್ಕ್ ಫೋರ್ಸ್
917
VIEWS
FacebookTwitterWhatsuplinkedinEmail

ಚಾಮುಂಡಿ ಕ್ಷೇತ್ರ, ಬೆಟ್ಟಕ್ಕೆ ಸೇರಿದ 23 ದೇವಾಲಯಗಳ ಅಭಿವೃದ್ದಿ

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಸ್ಟರ್ ಪ್ಲಾನ್ ರೂಪಿಸುವಂತೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಚಾಮುಂಡೇಶ್ವರಿ ಪ್ರಾಧಿಕಾರವನ್ನು ಸರ್ಕಾರ ರಚಿಸಿದ್ದು, ಹಿಂದೆ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿಯಡಿ ಕಾರ್ಯನಿರ್ವಾಹಕ ಅಧಿಕಾರಿಗಳು ದೇವಸ್ಥಾನದ ಅಭಿವೃದ್ಧಿ ಮತ್ತು ಭಕ್ತಾದಿಗಳಿಗೆ ಸೌಲಭ್ಯಗಳನ್ನು ಒದಗಿಸುವ ಕಾರ್ಯ ಮಾಡುತ್ತಿದ್ದರು. ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವೂ ರಚನೆಯಾಗಿದೆ.

ಹುಲಿಗೆಮ್ಮ ದೇವಸ್ಥಾನ ಮಹದೇಶ್ವರ ದೇವಸ್ಥಾನ, ಸವದತ್ತಿಯ ಯಲ್ಲಮ್ಮ, ಘಾಟಿ ಸುಬ್ಮಣ್ಯ ದೇವಸ್ಥಾನಕ್ಕೂ ಪ್ರಾಧಿಕಾರವನ್ನು ಸರ್ಕಾರ ರಚಿಸಿದೆ. ವಿಶ್ವವಿಖ್ಯಾತ ದಸರಾ ಹಬ್ಬದ ಜೊತೆಗೆ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಾವಿರಾರು ಜನ ಭಕ್ತಾದಿಗಳು ಶುಕ್ತವಾರ, ಶನಿವಾರ ಭಾನುವಾರಗಳಂದು ಬಹಳ ಭಕ್ತಾದಿಗಳು ಭೇಟಿ ನೀಡುತ್ತಾರೆ. ಶ್ರೀಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. ಅವುಗಳ ಪೈಕಿ ಕೆಲವು ಪೂರ್ಣಗೊಂಡಿದ್ದರೆ ಕೆಲವು ಪೂರ್ಣಗೊಂಡಿಲ್ಲ ಎಂದರು.

ಚಾಮುಂಡಿ ಕ್ಷೇತ್ರ ಮತ್ತು ಬೆಟ್ಟಕ್ಕೆ ಸೇರಿದ 23 ದೇವಾಲಯಗಳ ಅಭಿವೃದ್ದಿ ಪ್ರಾಧಿಕಾರವು ಚಾಮುಂಡಿ ಕ್ಷೇತ್ರ ಮತ್ತು ಬೆಟ್ಟಕ್ಕೆ ಸೇರಿದ 23 ದೇವಾಲಯಗಳ ಅಭಿವೃದ್ಧಿ, ಹಾಗೂ ಭಕ್ತಾದಿಗಳಿಗೆ ಸೌಲಭ್ಯಗಳನ್ನು ಒದಗಿಸಿಕೊಡಬೇಕು ಎಂಬ ಉದ್ದೇಶದಿಂದ ಪ್ರಾಧಿಕಾರ ರಚನೆಯಾಗಿದೆ. ಹಿಂದೆ ಬಸ್ ನಿಲ್ದಾಣ, ವಾಹನ ನಿಲುಗಡೆ ಮತ್ತು ಮಳಿಗೆಗಳ ನಿರ್ಮಾಣವಾಗಿದೆ. ಹಿಂದೆ ಕೈಗೆತ್ತಿಕೊಂಡಿರುವ ಕಾರ್ಯಕ್ರಮಗಳನ್ನು ಕೂಡಲೇ ಪೂಣಗೊಳಿಸಲು ಸೂಚನೆ ನೀಡಲಾಗಿದೆ.

2018 ರಲ್ಲಿ ಕುಡಿಯುವ ನೀರಿನ ಕಾಮಗಾರಿ ಮಂಜೂರಾಗಿದ್ದರೂ ಇನ್ನೂ ಪೂರ್ಣವಾಗಿಲ್ಲ. ಅದನ್ನು ಕೂಡಲೇ ಪೂರ್ಣಗೊಳಿಸಲು ನಗರಾಭಿವೃದ್ಧಿ ಪ್ರಾಧಿಕಾರದವರಿಗೆ ಸೂಚನೆ ನೀಡಲಾಗಿದೆ. ಕಸ ವಿಲೇವಾರಿ ಕಾಮಗಾರಿಯ ಸಿವಿಲ್ ಕಾಮಗಾರಿಗಳು ಪೂರ್ಣವಾಗಿದ್ದು, ಈ ತಿಂಗಳೊಳಗೆ ವಿದ್ಯುದ್ದೀಕರಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸವೇಕು. ಸ್ವಚ್ಛತೆಗೆ ಗಮನ ಹರಿಸಬೇಕೆಂದು ಸೂಚಿಸಲಾಗಿದೆ ಚಾಮುಂಡಿ ದೇವಸ್ಥಾನ ಮಾತ್ರವಲ್ಲದೇ ಎಲ್ಲಾ ದೇವಸ್ಥಾನಗಳಲ್ಲಿಯೂ ಸ್ವಚ್ಛತೆಯನ್ನು ಕಾಪಾಡಬೇಕು ಎಂದರು.

ಪ್ರತಿ ವರ್ಷ ಆದಾಯ ಹೆಚ್ಚಳ

ಪ್ರಾಧಿಕಾರದಲ್ಲಿ ಒಟ್ಟು ₹169.22 ಕೋಟಿ ಲಭ್ಯವಿದ್ದು, ದೇವಾಲಯದ ಉಳಿತಾಯ ಖಾತೆಯಲ್ಲಿ 20.24 ಕೋಟಿ ರೂ.ಗಳು ಲಭ್ಯವಿದೆ. 2023-24 ರಲ್ಲಿ ₹49.64 ಕೋಟಿ ಆದಾಯ ₹28.18 ಕೋಟಿ ನಿವ್ವಳ ಆದಾಯ ಬಂದಿದೆ. ಜುಲೈ ಕೊನೆಯವರೆಗೆ ₹17.4 ಕೋಟಿ ಆದಾಯ ಬಂದಿದ್ದು, ₹6.97 ಕೋಟಿ ವೆಚ್ಚವಾಗಿದೆ.

ಪ್ರತಿ ವರ್ಷ ಆದಾಯ ಹೆಚ್ಚಾಗುತ್ತಿದೆ. ಅಂದರೆ ಭೇಟಿ ನೀಡುವ ಭಕ್ತಾದಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಚಾಮುಂಡಿ ಬೆಟ್ಟದಲ್ಲಿರುವ ದೇವಿಕೆರೆ, ನಂದಿ ಪ್ರತಿಮೆ ಅಭಿವೃದ್ಧಿಗೆ ತೀರ್ಮಾನ ಮಾಡಲಾಗಿದೆ. ಶಾಸಕರು ಹಾಗೂ ಸಚಿವರು ವ್ಯಕ್ತ ಮಾಡಿರುವ ಅಭಿಪ್ರಾಯಗಳನ್ನು ಗಮನದಲ್ಲಿ ಇಟ್ಟುಕೊಂಡು ಪ್ರಾಧಿಕಾರ ಕೆಲಸ ಮಾಡುತ್ತದೆ ಎಂದು ತಿಳಿಸಿದರು.

ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿ; ರೋಪ್ ವೇ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆಯಾಗಿಲ್ಲ. ಪರಿಸರವಾದಿಗಳು ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರಿಂದ ಅದನ್ನು ಹಿಂದೆಯೇ ಸ್ಥಗಿತಗೊಳಿಸಲಾಗಿದೆ ಎಂದರು.

ವಸ್ತ್ರ ಸಂಹಿತೆ ಇಲ್ಲ

ಬೆಟ್ಟಕ್ಕೆ ಬರುವ ಮೆಟ್ಟಿಲುಗಳನ್ನು ಅಭಿವೃದ್ಧಿಪಡಿಲಾಗುವುದು ಎಂದ ಮುಖ್ಯಮಂತ್ರಿಗಳು; ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುವವರಿಗೆ ಯಾವುದೇ ವಸ್ತ್ರ ಸಂಹಿತೆಯನ್ನು ಜಾರಿ ಮಾಡಿಲ್ಲ. ಎಲ್ಲಾ ಜಾತಿ , ಧರ್ಮದವರು ದೇವಸ್ಥಾನಕ್ಕೆ ಬರಬಹುದು ಎಂದರು.

ಬೆಟ್ಟದಲ್ಲಿ ಅಪರಾಧ ತಡೆಗೆ ಟಾಸ್ಕ್ ಫೋರ್ಸ್

ದೇವಾಲಯಗಳಲ್ಲಿ ಅಗತ್ಯವಿರುವೆಡೆ ಸಿಸಿಟಿವಿ ಅಳವಡಿಸಬೇಕೆಂದು ತೀರ್ಮಾನಿಸಿ, ಯೂನಿಯನ್ ಬ್ಯಾಂಕ್ ನವರು ಸಿಎಸ್ ಆರ್ ನಿಧಿಯಿಂದ ಸಿಸಿಟಿವಿಗಳನ್ನು ಅಳವಡಿಕೆಗೆ ಸಹಕಾರ ನೀಡಲಿದ್ದಾರೆ. ದೇವಸ್ಥಾನದ ಸುತ್ತಮುತ್ತಲಿನ ದೀಪದ ವ್ಯವಸ್ಥೆಗೊಳಿಸುವ ಜೊತೆಗೆ ಈ ಪ್ರದೇಶದಲ್ಲಿ ಅಪರಾಧಗಳನ್ನು ನಿಗ್ರಹಿಸಲು ಒಂದು ಟಾಸ್ಕ್ ಫೋರ್ಸ್ ನ್ನು ರಚನೆ ಮಾಡಲಾಗುವುದು ಎಂದರು.

ಚಾಮುಂಡಿ ಬೆಟ್ಟ ಪ್ಲಾಸ್ಟಿಕ್ ಮುಕ್ತ

ಚಾಮುಂಡಿ ಬೆಟ್ಟದ ಮೇಲೆ ಧೂಮಪಾನ, ಮದ್ಯಪಾನ, ಗುಟ್ಕಾ ಪಾನ್ ಗಳನ್ನು ಸಂಪೂರ್ಣ ನಿಷೇದಿಸಲಾಗಿದೆ. ಬೆಟ್ಟದ ಪ್ರದೇಶವನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ತೀರ್ಮಾನಿಸಲಾಗಿದೆ. ಪ್ರಸಾದ ಯೋಜನೆಯನ್ನು ಕೇಂದ್ರ ಸರ್ಕಾರ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಜಾರಿಗೊಳಿಸಲು ಅನುಮೋದನೆ ನೀಡಲಾಗಿದ್ದು, ಈ ಯೋಜನೆಗೆ ಹೆಚ್ಚುವರಿಯಾಗಿ ಬೇಕಾಗುವ ₹11 ಕೋಟಿಯನ್ನು ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದಿಂದ ಭರಿಸಲಾಗುವುದು. ದೇವಾಲಯದ ಒಳಗೆ ಛಾಯಾಗ್ರಹಣವನ್ನು ನಿಷೇದಿಸಲಾಗಿದ್ದು, ಮೊಬೈಲ್ ಗಳನ್ನು ಬಂದ್ ಮಾಡಿಕೊಳ್ಳುವ ಆದೇಶ ನೀಡಲಾಗುವುದು ಎಂದರು.

5 ದೇವಾಲಯ ಸಮೂಹದ ಜೀರ್ಣೋದ್ಧಾರ

ಪ್ರಸನ್ನ ಕೃಷ್ಣ ಸ್ವಾಮಿ ದೇವಾಲಯ,ಗಾಯತ್ರಿಯಮ್ಮನವರ ದೇವಾಲಯ,ಭುವನೇಶ್ವರಿ ಅಮ್ಮನವರ ದೇವಾಲಯ , ಕೋಟೆ ಆಂಜನೀಯದೇವಾಲಯ, ವರಾಹ ಸ್ವಾಮಿ ದೇವಾಲಯಗಳ ಐದು ದೇವಾಲಯಗಳ ಸಮೂಹವನ್ನು ಜೀರ್ಣೋದ್ಧಾರ ಕಾರ್ಯವನ್ನು ಕೈಗೊಳ್ಳಲಾಗುವುದು. ಇಲ್ಲಿ ಕರ್ತವ್ಯನಿರ್ವಹಿಸುವ ಖಾಯಂ ಸಿಬ್ಬಂದಿಗಳಿಗೆ ವೈದ್ಯಕೀಯ ಸೌಲಭ್ಯ ಹಾಗೂಅವರ ಮಕ್ಕಳಿಗೆ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ ಎಂದರು.

ಚಾಮುಂಡಿಬೆಟ್ಟ ಕ್ಷೇತ್ರವನ್ನು ಹೆಚ್ಚು ಆಕರ್ಷಣೀಯವಾಗಿ ಮಾಡುವ ಜೊತೆಗೆ ಹೆಚ್ಚಿನ ಸವಲತ್ತುಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ. ಇಲ್ಲಿನ ದಾಸೋಹ ಭವನದ ವ್ಯವಸ್ಥೆಗಳನ್ನು ಸುಧಾರಿಸಿ, ಭಕ್ತಾದಿಗಳಿಗೆ ಶುಚಿ ರುಚಿಯಿರುವಂತಹ ಊಟವ್ಯವಸ್ಥೆಗಳನ್ನು ಮಾಡಲು ವ್ಯವಸ್ಥೆಗೊಳಿಸಲು ತೀರ್ಮಾನಿಸಲಾಗಿದೆ. ಚಾಮುಂಡಿಕ್ಷೇತ್ರದ ಪ್ರಾದಿಕಾರದಲ್ಲಿ 169 ಕೋಟಿ ಖಾಯಂ ಠೇವಣಿ ಇದ್ದು, ಇದರ ಆದಾಯದಲ್ಲಿ ಈ ಎಲ್ಲ ವೆಚ್ಚಗಳನ್ನು ಭರಿಸಬಹುದಾಗಿದೆ ಎಂದರು.

ದೇವಸ್ಥಾನದ ಆಸ್ತಿಗಳ ಸರ್ವೆ

ದೇವಸ್ಥಾನದ ಆಸ್ತಿಯಾಗಿರುವ ಭೂಮಿ ಒತ್ತುವರಿ ಆಗಿರುವ ಸಾಧ್ಯತೆಯಿರುವುದರಿಂದ, ಅವುಗಳ ಸರ್ವೇ ಮಾಡಲು ತಿಳಿಸಲಾಗಿದ್ದು, ಸರ್ವೆ ನಡೆಸಿದ ವರದಿಯನ್ನು ಪ್ರಾಧಿಕಾರದ ಮುಂದಿನ ಸಭೆಯಲ್ಲಿ ಮಂಡಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು. ಆರ್ ಎಸ್ ಎಸ್ ನವರು ಜಾತಿ ಜನಗಣತಿ ವರದಿ ದುರ್ಬಳಕೆಯಾಗಬಾರದು ಎಂದು ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಜಾತಿ ಜನಗಣತಿ ವರದಿಯನ್ನು ಆರ್ಥಿಕ ಹಾಗೂ ಸಾಮಾಜಿಕ ಕಾರ್ಯಗಳಿಗಾಗಿ ಮಾತ್ರ ಬಳಕೆಯಾಗಬೇಕೆಂಬ ಷರತ್ತಿದೆ ಎಂದರು.

Tags: chamundi bettachamundi hillsckcknewsnowMysurunewssiddaramaiah
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಉಚಿತ ವಿದ್ಯುತ್

ಜಾತಿಗಣತಿ ವರದಿ ಇಟ್ಟುಕೊಂಡು ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗಿ; ಕಾಂಗ್ರೆಸ್ಸಿಗೆ ಹೆಚ್.ಡಿ.ಕುಮಾರಸ್ವಾಮಿ ಚಾಲೆಂಜ್

Leave a Reply Cancel reply

Your email address will not be published. Required fields are marked *

Recommended

ಗಡಿದಂನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಗಡಿದಂನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

5 years ago
ಮುಖ್ಯಮಂತ್ರಿ ವಿರುದ್ಧವೇ ಧಿಕ್ಕಾರ ಕೂಗಿದ ಬಿಜೆಪಿ ಕಾರ್ಯಕರ್ತರು

ಮುಖ್ಯಮಂತ್ರಿ ವಿರುದ್ಧವೇ ಧಿಕ್ಕಾರ ಕೂಗಿದ ಬಿಜೆಪಿ ಕಾರ್ಯಕರ್ತರು

4 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ