• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಜಾತಿಗಣತಿ ವರದಿ ಇಟ್ಟುಕೊಂಡು ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗಿ; ಕಾಂಗ್ರೆಸ್ಸಿಗೆ ಹೆಚ್.ಡಿ.ಕುಮಾರಸ್ವಾಮಿ ಚಾಲೆಂಜ್

cknewsnow desk by cknewsnow desk
October 7, 2024
in NATION, STATE
Reading Time: 1 min read
0
ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಉಚಿತ ವಿದ್ಯುತ್
916
VIEWS
FacebookTwitterWhatsuplinkedinEmail

ಮೂಡಾ ಮುಚ್ಚಿ ಹಾಕಲು ಜಾತಿಗಣತಿ

ಬೆಂಗಳೂರು: ಮೂಡಾ ಹಗರಣದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಜಾತಿಗಣತಿ ವಿಷಯವನ್ನು ಮುನ್ನಲೆಗೆ ತಂದು ನಾಟಕ ಆಡಲಾಗುತ್ತಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ದೂರಿದ್ದಾರೆ.

ತಮ್ಮ ನಿವಾಸದ ಸೋಮವಾರ ಬೆಳಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಸರ್ಕಾರದ ವಿರುದ್ಧ ಗುರುತರ ಆರೋಪಗಳು ಕೇಳಿ ಬಂದಾಗಲೆಲ್ಲ ಜನರ ಗಮನ ಬೇರೆಡೆಗೆ ಹೊರಳಿಸಲು ತಂತ್ರಗಾರಿಕೆ ಮಾಡುತ್ತಿದ್ದಾರೆ. ಈಗ ಮೂಡಾ ಹಗರಣದ ಮೂಲಕ ಜನರ ದಿಕ್ಕು ತಪ್ಪಿಸಲು ಜಾತಿಗಣತಿಯ ವಿಚಾರವನ್ನು ಮುಂದಕ್ಕೆ ತಂದಿದೆ ಎಂದು ಆರೋಪಿಸಿದರು.

ಚುನಾವಣೆಗೆ ಮೊದಲೇ ವರದಿ ಕೊಟ್ಟಿದ್ದರು!!

ಕಾಂತರಾಜು ಆಯೋಗ ರಚನೆ ಮಾಡಿದ್ದು 10 ವರ್ಷಗಳ ಹಿಂದೆ. ಈಗ ಅ ವರದಿಗೆ 10 ವರ್ಷ ಆಗಿ ಹೋಗಿದೆ. 10 ವರ್ಷಗಳಲ್ಲಿ ಅನೇಕ ಬೆಳವಣಿಗೆಗಳು ಆಗಿವೆ. ಹಳೆಯ ಜಾತಿಗಣತಿ ವರದಿಯನ್ನು ಇಷ್ಟು ದಿನ ಯಾಕೆ ಬಿಡುಗಡೆ ಮಾಡಿರಲಿಲ್ಲ? ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ಕುಮಾರಸ್ವಾಮಿ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಲು ಬಿಡಲಿಲ್ಲ ಎಂದು ನನ್ನ ಮೇಲೆ ಆರೋಪ ಮಾಡುತ್ತಲೇ ಇದ್ದಾರೆ. ಲೋಕಸಭೆ ಚುನಾವಣೆಗೆ ಮೊದಲೇ ಸಿದ್ದರಾಮಯ್ಯ ಅವರ ಕೈಗೆ ಜಾತಿಗಣತಿ ವರದಿ ಕೊಡಲಾಗಿದೆ, ಅಲ್ಲವೇ? ಲೋಕಸಭೆ ‌ಚುನಾವಣೆ ಮೊದಲೇ ವರದಿ ಪಡೆದರೂ ಇಷ್ಟು ದಿನಗಳವರೆಗೂ ಅದರ ಬಗ್ಗೆ ಸದ್ದೇ ಇರಲಿಲ್ಲ, ಯಾಕೆ? ಎಂದು ಖಾರವಾಗಿ ತೀಕ್ಷ್ಣವಾಗಿ ಕೇಳಿದರು.

ಮೂಡಾ ಅಕ್ರಮದಿಂದ ರಕ್ಷಣೆ ಪಡೆಯಲು ಯತ್ನ

ಈಗ ಮೂಡಾ ಹಗರಣದ ಹಿನ್ನಲೆಯಲ್ಲಿ ಜನರನ್ನು ದಾರಿ ತಪ್ಪಿಸಲು ಮತ್ತು ಜಾತಿಗಣತಿ ವರದಿ ಇಟ್ಟುಕೊಂಡು ಮೂಡಾ ಅಕ್ರಮದಿಂದ ರಕ್ಷಣೆ ಪಡೆಯುವ ಕೆಲಸಕ್ಕೆ ಹೊರಟಿದ್ದಾರೆ. 10 ವರ್ಷಗಳ ಹಿಂದೆ ಮಾಡಿರುವ ಈ ಜಾತಿಗಣತಿ ವರದಿಯಿಂದ ಯಾವುದೇ ಸಮುದಾಯಕ್ಕೆ ಅನುಕೂಲಗಳು ಆಗುವುದಿಲ್ಲ. ಮೂಡಾ ಹಗರಣವನ್ನು ಮರೆಮಾಚಿಕೊಳ್ಳಲು ಈಗ ಜಾತಿಗಣತಿ ವಿಷಯವನ್ನು ಮುನ್ನೆಲೆಗೆ ತಂದಿದ್ದಾರೆ. ಇಷ್ಟು ದಿನ ಇಲ್ಲದೇ ಇರೋದು ಈಗ ಯಾಕೆ ಮುನ್ನಲೆಗೆ ತರಲು ಹೊರಟಿದ್ದಾರೆ ಎಂದು ನೇರ ಆರೋಪ ಮಾಡಿದರು.

ಜಾತಿಗಣತಿ ವರದಿ ಜಾರಿ ಮಾಡದಂತೆ ಸಿದ್ದರಾಮಯ್ಯ ಅವರನ್ನು ಹಿಡಿದುಕೊಂಡವರು ಯಾರು? ನನ್ನ ಬಗ್ಗೆ ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ವರದಿ ಸ್ವೀಕಾರ ಮಾಡಿ ಎಷ್ಟು ದಿನವಾಯಿತು? ಇನ್ನೂ ಯಾಕೆ ಇಟ್ಟುಕೊಂಡು ಕೂತಿದ್ದಾರೆ? ಇಷ್ಟು ದಿನ ಸದ್ದುಗದ್ದಲ ಇರಲಿಲ್ಲ. ಈಗ ಈ ವಿಷಯ ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. ಇವರು ಮಾಡಿರುವ ತಪ್ಪುಗಳನ್ನು ಮುಚ್ಚಿಕೊಳ್ಳೋಕೆ‌ ಜಾತಿಯಂತಹ ವಿಷಯಗಳನ್ನು ಮುಂದೆ ಬಿಟ್ಟುಕೊಂಡು ಹೊರಟಿದ್ದಾರೆ ಎಂದು ಸರ್ಕಾರದ ವಿರುದ್ದ ಕುಮಾರಸ್ವಾಮಿ ಅವರು ಕಿಡಿಕಾರಿದರು.

ಚುನಾವಣೆಗೆ ಹೋಗಿ

ಜಾತಿಗಣತಿ ವರದಿ ಇಟ್ಟುಕೊಂಡು ರಾಜಕೀಯ ಮಾಡುತ್ತೀರಿ, ಈ ವಿಷಯ ಇಟ್ಟುಕೊಂಡು ಚುನಾವಣೆ ಹೋಗಿ ನೋಡೋಣ ಎಂದು ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದ ಕುಮಾರಸ್ವಾಮಿ ಅವರು; ಸರ್ಕಾರ ಹೋದರೆ ಹೋಗಲಿ ಎನ್ನುವ ಬದಲಿಗೆ ಮುಕ್ತವಾಗಿ ಘೋಷಣೆ ಮಾಡಿ ಚುನಾವಣೆಗೆ ಹೋಗಲಿ ಎಂದರು.ಸರ್ಕಾರ ಹೋದರೆ ಹೋಗಲಿ, ಜಾತಿಗಣತಿ ಜಾರಿ ಮಾಡಿ ಎಂಬ ಬಿ.ಕೆ. ಹರಿಪ್ರಸಾದ್‌ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು; ಜಾತಿಗಣತಿ ವಿಷಯ ಇಟ್ಟುಕೊಂಡು ಸರ್ಕಾರ ವಿಸರ್ಜನೆ ಮಾಡಿ ಚುನಾವಣೆಗೆ ಹೋಗಿ ನೋಡೋಣ. ಹರಿಪ್ರಸಾದ್‌ ಅವರು ಈ ರೀತಿ ಹೇಳುವುದು ಏನಿದೆ? ಅದರ ಬದಲು ವಿಧಾನಸಭೆಯನ್ನು ವಿಸರ್ಜನೆ ಮಾಡಿ ಚುನಾವಣೆಗೆ ಹೋಗಬಹುದಲ್ಲವೆ? ಎಂದು ಕೇಂದ್ರ ಸಚಿವರು ಸವಾಲು ಹಾಕಿದರು.

ಸಿದ್ದರಾಮಯ್ಯನವರು ಹಾಗೂ ಕಾಂಗ್ರೆಸ್ ನಾಯಕರು ಜಾತಿಗಣತಿ ವರದಿ ಇಟ್ಟುಕೊಂಡು ನಾವು ಅನುಷ್ಠಾನ ಮಾಡುತ್ತೇವೆ, ನಮಗೆ ಇನ್ನೊಂದು ಅವಕಾಶ ಕೊಡಿ ಅಂತ ಜನರ ಮುಂದೆ ಹೋಗಬಹುದು. ದೆಹಲಿಯಲ್ಲಿ ರಾಹುಲ್ ಗಾಂಧಿ ಒಂದು ಹೇಳುತ್ತಾರೆ.. ಇಲ್ಲಿ ಇವರು ಇನ್ನೊಂದು ಹೇಳುತ್ತಾರೆ. ಸರ್ಕಾರದಲ್ಲಿ ಆಗಿರುವ ಹಲವಾರು ತಪ್ಪುಗಳನ್ನು ಮುಚ್ಚಿಕೊಳ್ಳೋದಕ್ಕೆ ಜಾತಿಗಣತಿ ವಿಷಯವನ್ನು ಮುನ್ನೆಲೆಗೆ ತಂದಿದ್ದಾರೆ ಎಂದು ಕುಮಾರಸ್ವಾಮಿ ಅವರು ಆರೋಪ ಮಾಡಿದರು.

ರಾಜ್ಯದಲ್ಲಿ ಅಭಿವೃದ್ಧಿ ಇಲ್ಲ. ಇದೆಲ್ಲವನ್ನು ಜನರ ಮನಸಿನಿಂದ ಡೈವರ್ಟ್ ಮಾಡೋದಕ್ಕೆ ಈ ಡ್ರಾಮಾಗಳು ಪ್ರಾರಂಭ ಮಾಡಿದ್ದಾರೆ ಎಂದು ಅವರು ದೂರಿದರು.

Tags: casteCaste census in Karnatakackcknewsnowmuda
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ರಾಜ್ಯಕ್ಕೆ ಚೊಂಬು ಕೊಟ್ಟ ನಿರ್ಮಲಾ ಸೀತಾರಾಮನ್‌

ಜಾತಿಗಣತಿ ಬಗ್ಗೆ ಸಂಪುಟದಲ್ಲಿ ನಿರ್ಧಾರ ಎಂದ ಸಿಎಂ

Leave a Reply Cancel reply

Your email address will not be published. Required fields are marked *

Recommended

ಚಿಕ್ಕಬಳ್ಳಾಪುರದ SJC ಸೇರಿ 4 ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಕನ್ನಡದಲ್ಲಿ ಬೋಧನೆ

ಚಿಕ್ಕಬಳ್ಳಾಪುರದ SJC ಸೇರಿ 4 ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಕನ್ನಡದಲ್ಲಿ ಬೋಧನೆ

5 years ago
ಎಲ್-1 ಪಾಯಿಂಟ್ ಸೇರಿದ ಆದಿತ್ಯ ನೌಕೆ; ಹೆಮ್ಮೆಯ  ಇಸ್ರೋ ತಂಡದಲ್ಲಿ ನಮ್ಮ ಗುಡಿಬಂಡೆಯ ಗುರ್ರಪ್ಪ, ಗೌರಿಬಿದನೂರಿನ ಶ್ರೀನಾಥ

ಎಲ್-1 ಪಾಯಿಂಟ್ ಸೇರಿದ ಆದಿತ್ಯ ನೌಕೆ; ಹೆಮ್ಮೆಯ ಇಸ್ರೋ ತಂಡದಲ್ಲಿ ನಮ್ಮ ಗುಡಿಬಂಡೆಯ ಗುರ್ರಪ್ಪ, ಗೌರಿಬಿದನೂರಿನ ಶ್ರೀನಾಥ

2 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ