ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳಿಗೆ ಎಲೆಕ್ಷನ್
ನವದೆಹಲಿ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ನವದೆಹಲಿಯ ವಿಜ್ಞಾನ ಭವನದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ದೇಶದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ದಿನಾಂಕ ಘೋಷಣೆ ಮಾಡಿದರು.
ಶಿಗ್ಗಾಂವಿ ಶಾಸಕರಾಗಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ-ಹಾವೇರಿಯಿಂದ, ಚನ್ನಪಟ್ಟಣ ಪ್ರತಿನಿಧಿಸುತ್ತಿದ್ದ ಹೆಚ್.ಡಿ ಕುಮಾರಸ್ವಾಮಿ ಅವರು ಮಂಡ್ಯದಿಂದ, ಸಂಡೂರು ಕ್ಷೇತ್ರದ ಈ.ತುಕಾರಾಮ್ ಬಳ್ಳಾರಿಯಿಂದ ಲೋಕಸಭಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರು ಪ್ರತಿನಿಧಿಸುತ್ತಿದ್ದ ವಿಧಾನಸಭೆ ಕ್ಷೇತ್ರಗಳಿಗೆ ಈಗ ಉಪ ಚುನಾವಣೆ ಘೋಷಣೆ ಆಗಿದೆ ಶಾಸಕರಾಗಿ,ನಂತರ ಬಳ್ಳಾರಿಯಿಂದ ಸ್ಪರ್ಧಿಸಿ ಸಂಸದರಾಗಿದ್ದಾರೆ.
ಈ ಮೂರು ಕ್ಷೇತ್ರಗಳಿಗೆ ನವೆಂಬರ್ 13 ರಂದು ಉಪಚುನಾವಣೆ ನಡೆಯಲಿದೆ ಎಂದು ಆಯುಕ್ತರು ತಿಳಿಸಿದರು.
ಇದೇ ವೇಳೆ ಕೇಂದ್ರ ಚುನಾವಣಾ ಆಯೋಗವು ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗಳಿಗೆ ದಿನಾಂಕ ಘೋಷಣೆ ಮಾಡಿದೆ.
ಮಹಾರಾಷ್ಟ್ರದಲ್ಲಿ 1 ಹಂತದಲ್ಲಿ 288 ಕ್ಷೇತ್ರಗಳಿಗೆ ನವೆಂಬರ್ 20 ರಂದು ಮತದಾನ ನಡೆಯಲಿದೆ. ಜಾರ್ಖಂಡ್ ನಲ್ಲಿ 2 ಹಂತಗಳಲ್ಲಿ 81 ಕ್ಷೇತ್ರಗಳಿಗೆ ನವೆಂಬರ್ 13 ರಂದು ಮೊದಲ ಹಂತದ ಮತದಾನ, 2ನೇ ಹಂತದ ಮತದಾನ ನವೆಂಬರ್ 20 ರಂದು ನಿಗದಿಯಾಗಿದೆ. ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ ಎಂದು ರಾಜೀವ್ ಕುಮಾರ್ ತಿಳಿಸಿದರು. ರಾಜ್ಯದ ಮೂರು ಕ್ಷೇತ್ರಗಳ ಫಲಿತಾಂಶೂ ಇದೇ ದಿನ ಪ್ರಕಟವಾಗಲಿದೆ.
ಇತ್ತೀಚೆಗೆ ಪೂರ್ಣಗೊಂಡ ಹರಿಯಾಣ, ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಗಳಲ್ಲಿ ಯಾವುದೇ ಉಪಚುನಾವಣೆಗಳು ಇಲ್ಲ ಎಂದು ಮುಖ್ಯ ಆಯುಕ್ತರು ಘೋಷಿಸಿದರು.