• About
  • Advertise
  • Careers
  • Contact
Tuesday, June 17, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

cknewsnow desk by cknewsnow desk
June 2, 2025
in NATION, STATE
Reading Time: 1 min read
0
ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ
912
VIEWS
FacebookTwitterWhatsuplinkedinEmail

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: “ಕೃಷ್ಣಾ ನ್ಯಾಯಾಧೀಕರಣದ ತೀರ್ಪಿನಂತೆ ನಮ್ಮ ರಾಜ್ಯದ ಪಾಲಿನ ನೀರು ಬಳಸಿಕೊಳ್ಳಲು ಆಲಮಟ್ಟಿ ಅಣೆಕಟ್ಟೆ ಎತ್ತರವನ್ನು 524 ಮೀಟರ್ ಗೆ ಹೆಚ್ಚಿಸಬೇಕಿದೆ. ನ್ಯಾಯಧೀಕರಣದ ತೀರ್ಪು ಬಂದಾಗ ಸುಮ್ಮನಿದ್ದ ಮಹಾರಾಷ್ಟ್ರ ಸಿಎಂ ಈಗ ಹಠಾತ್ತನೇ ಕರ್ನಾಟಕದ ಸಿಎಂ ಅವರಿಗೆ ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಿರುವುದು ತೀವ್ರ ಆಶ್ಚರ್ಯ ತಂದಿದೆ. ಈ ಹಿನ್ನೆಲೆಯಲ್ಲಿ, ಯೋಜನೆ ಜಾರಿ ಮಾಡಿ ರಾಜ್ಯ ಹಾಗೂ ರೈತರ ಹಿತ ಕಾಯಲು ಎಲ್ಲಾ ಸಂಸದರು, ಕೇಂದ್ರ ಸಚಿವರು ಸಹಕರಿಸಬೇಕು ಎಂದು ಕೈಮುಗಿದು ಕೇಳಿಕೊಳ್ಳುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮನವಿ ಮಾಡಿದರು.

ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದಲ್ಲಿ ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

“ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಅವರು ನಮ್ಮ ಸಿಎಂ ಸಿದ್ದರಾಮಯ್ಯ ಅವರಿಗೆ ಮೇ 9 ರಂದು ಪತ್ರ ಬರೆದಿದ್ದಾರೆ. ಆಣೆಕಟ್ಟೆ ಎತ್ತರ ಹೆಚ್ಚಳ ಮಾಡಿದರೆ ಮಹಾರಾಷ್ಟ್ರದ ಸಾಂಗ್ಲಿ, ಕೊಲ್ಹಾಪುರ ಜಿಲ್ಲೆಗಳು ಪ್ರವಾಹ ಸಮಸ್ಯೆ ಎದುರಿಸುತ್ತವೆ. ಹೀಗಾಗಿ ಈ ತೀರ್ಮಾನ ಮರುಪರಿಶೀಲಿಸಿ ಎಂದು ಪತ್ರದಲ್ಲಿ ತಿಳಿಸಿದ್ದಾರೆ” ಎಂದರು.

“ಮಹಾರಾಷ್ಟ್ರ ಸಿಎಂ ಅವರ ಈ ಪತ್ರ ನಮಗೆ ಆಘಾತ ತಂದಿದೆ. ಕಾರಣ ಇದುವರೆಗೂ ಈ ಯೋಜನೆ ವಿಚಾರವಾಗಿ ಮಹಾರಾಷ್ಟ್ರ ಎಂದೂ ಆಕ್ಷೇಪ ಸಲ್ಲಿಸಿರಲಿಲ್ಲ. 2010 ರ ತೀರ್ಪಿನ ಬಗ್ಗೆ ಮಹಾರಾಷ್ಟ್ರ ಎಲ್ಲೂ ಪ್ರಶ್ನೆ ಎತ್ತಿರಲಿಲ್ಲ. ಈ ಯೋಜನೆ ಜಾರಿ ಮಾಡಲಿ ಎಂದು ಮಹಾರಾಷ್ಟ್ರ ಕೂಡ ಅಫಿಡವಿಟ್ ಸಲ್ಲಿಸಿತ್ತು. ಆದರೆ ಈಗ ಇದ್ದಕ್ಕಿದ್ದಂತೆ ಈ ಪತ್ರ ಬರೆದಿದ್ದಾರೆ.”

“ಈ ಯೋಜನೆ ನ್ಯಾಯಾಧಿಕರಣದಲ್ಲಿ ನಮಗೆ ಸಿಕ್ಕಿರುವ ಹಕ್ಕು. ಹೀಗಾಗಿ ನಮ್ಮ ಸಿಎಂ ಸಹ ಒಂದೆರಡು ದಿನಗಳಲ್ಲಿ ಪತ್ರ ಬರೆಯಲಿದ್ದಾರೆ. ನಮ್ಮ ರಾಜ್ಯದಿಂದ ಆಯ್ಕೆಯಾಗಿರುವ ಎಲ್ಲಾ ಸಂಸದರು, ಕೇಂದ್ರದ ಸಚಿವರು ಈ ವಿಚಾರವಾಗಿ ನಮಗೆ ಸಹಕಾರ ನೀಡಬೇಕು ಎಂದು ಕೈ ಮುಗಿದು ಮನವಿ ಮಾಡುತ್ತೇನೆ” ಎಂದು ತಿಳಿಸಿದರು.

“ಕೇಂದ್ರ ಸಚಿವ ಸೋಮಣ್ಣ ಅವರು ಕೇಂದ್ರ ಜಲಶಕ್ತಿ ಸಚಿವಾಲಯದ ಭಾಗ. ಆಲಮಟ್ಟಿ ಯೋಜನೆ ನಮ್ಮ ರಾಜ್ಯದ ಹಿತ. ನಮಗೆ ನೆರೆ ರಾಜ್ಯಗಳ ಜತೆ ತಿಕ್ಕಾಟ ಇಷ್ಟವಿಲ್ಲ. ಈ ಯೋಜನೆ ತಡವಾಗುತ್ತಿರುವುದರಿಂದ ಯೋಜನೆ ವೆಚ್ಚ ವಿಪರೀತ ಏರಿಕೆಯಾಗುತ್ತಿದೆ. ಯೋಜನೆ ಭೂಸ್ವಾಧೀನಕ್ಕೆ 1 ಲಕ್ಷ ಕೋಟಿ ರೂಪಾಯಿ ಬೇಕಾಗಿದೆ. ನಮ್ಮ ಪಾಲಿನ ನೀರು ಬಳಸಲು ಈ ಯೋಜನೆ ಮುಖ್ಯ” ಎಂದು ಹೇಳಿದರು.

ಮಹಾರಾಷ್ಟ್ರ ಸಮಸ್ಯೆ ಆಂತರಿಕ: ಅವರೇ ಪರಿಹರಿಸಿಕೊಳ್ಳಲಿ

“ಅವರ ರಾಜ್ಯದಲ್ಲಿ ಪ್ರವಾಹ ಎದುರಾದರೆ ಅದನ್ನು ಅವರು ಆಂತರಿಕವಾಗಿ ಸರಿಪಡಿಸಿಕೊಳ್ಳಲಿ. ನಾವು ಈ ವಿಚಾರವಾಗಿ ಕೇಂದ್ರ ಸಚಿವರು ಹಾಗೂ ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿ ಒತ್ತಡ ಹಾಕಬೇಕಿದೆ. ಈ ವಿಚಾರದಲ್ಲಿ ನಾವು ಒಗ್ಗಟ್ಟಿನಿಂದ ಧ್ವನಿ ಎತ್ತಬೇಕು. 2013ರಿಂದ ಈ ಯೋಜನೆಗೆ ಗೆಜೆಟ್ ನೋಟಿಫಿಕೇಶನ್ ಆಗಬೇಕು ಎಂದು ಕಾಯುತ್ತಿದ್ದೇವೆ. ಇನ್ನು ಎಷ್ಟು ದಿನ ಕಾಯಬೇಕು?” ಎಂದು ಪ್ರಶ್ನಿಸಿದರು.

“ನಮ್ಮ ರೈತರ ಹಿತ ಕಾಯಲು ನೀವು ಯಾವಾಗ ಎಲ್ಲಿಗೆ ಕರೆಯುತ್ತೀರೋ ಅಲ್ಲಿಗೆ ಬರಲು ನಮ್ಮ ಸರ್ಕಾರ ಸಿದ್ಧವಿದೆ. ಮಹಾರಾಷ್ಟ್ರ ಸಿಎಂ ಹಾಗೂ ಅದಕ್ಕೆ ನಮ್ಮ ಸಿಎಂ ಬರೆಯುವ ಪತ್ರವನ್ನು ಎಲ್ಲಾ ಸಂಸದರಿಗೆ ರವಾನಿಸುತ್ತೇವೆ.
ನ್ಯಾಯಾಧಿಕರಣ ತೀರ್ಪಿನ ಅನ್ವಯ ನಮ್ಮ ಪಾಲಿನ ನೀರನ್ನು ಪಡೆಯಲು ಆಲಮಟ್ಟಿ ಅಣೆಕಟ್ಟನ್ನು 524 ಮೀಟರ್ ಗೆ ಎತ್ತರಿಸುವ ಯೋಜನೆ ವಿಚಾರವಾಗಿ ನಾನು ಹಾಗೂ ಮುಖ್ಯಮಂತ್ರಿಗಳು ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದೆವು. ಈ ಬಗ್ಗೆ ಸಭೆ ಕರೆದು ಚರ್ಚೆ ಮಾಡಿ ಅಧಿಸೂಚನೆ ಹೊರಡಿಸಿ ಎಂದು ಮನವಿ ಮಾಡಿದ್ದೆವು” ಎಂದರು.

“ಕೇಂದ್ರ ಸಚಿವರು ನಮ್ಮ ಮನವಿ ಪರಿಗಣಿಸಿ ಸಭೆಗೆ ದಿನಾಂಕ ನಿಗದಿ ಮಾಡಿದ್ದರು. ಹೀಗಾಗಿ ನಾನು ಸಚಿವರು, ಕಾನೂನು ತಜ್ಞರು ಹಾಗೂ ಆ ಭಾಗದ ಶಾಸಕರ ಜತೆ ಆಂತರಿಕ ಸಭೆ ಮಾಡಿ ಸಲಹೆ ಪಡೆದಿದ್ದೆ. ಸಭೆಗೆ ತೆರಳುವಾಗ ಈ ಸಭೆ ಮುಂದೂಡಲಾಗಿದೆ ಎಂದು ಸಂದೇಶ ಬಂದಿತು. ಯುದ್ಧದ ವಾತಾವರಣ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿರಬಹುದು ಎಂದು ಭಾವಿಸಿದ್ದೆ” ಎಂದು ತಿಳಿಸಿದರು.

ಮಹಾರಾಷ್ಟ್ರ ಸಿಎಂ ಪತ್ರದ ಹಿಂದೆ ರಾಜಕೀಯ ಇದೆಯೇ ಎಂದು ಕೇಳಿದಾಗ, “ಈ ವಿಚಾರ ರಾಜಕೀಯವೋ ಅಲ್ಲವೋ ಎಂಬ ಪ್ರತಿಕ್ರಿಯೆ ನಾನು ನೀಡುವುದಿಲ್ಲ. ನಮ್ಮ ರಾಜ್ಯದ ಹಿತಾಸಕ್ತಿ ಬಗ್ಗೆ ಮಾತ್ರ ಮಾತನಾಡುತ್ತೇನೆ. ನಮ್ಮ ಪಾಲಿನ ಹಕ್ಕಿನ ನೀರನ್ನು ಬಳಸಲು ಯೋಜನೆ ಜಾರಿಯಾಗುವುದಷ್ಟೇ ನಮಗೆ ಮುಖ್ಯ. ನಾನು ಈ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ. ನಿಮ್ಮ ಪಾಲಿನ ನೀರನ್ನು ನೀವು ಪಡೆದು, ನಮ್ಮ ಪಾಲಿನ ಹಕ್ಕನ್ನು ಪಡೆಯಲು ನಮಗೆ ಬಿಡಿ ಎಂದು ಮಹಾರಾಷ್ಟ್ರ, ಆಂಧ್ರಪ್ರದೇಶ ಸೇರಿದಂತೆ ಇದಕ್ಕೆ ಸಂಬಂಧಿಸಿದ ಎಲ್ಲರಿಗೂ ಮನವಿ ಮಾಡುತ್ತೇನೆ” ಎಂದು ತಿಳಿಸಿದರು.

ಅವರ ಆಕ್ಷೇಪಕ್ಕೆ ಯಾವ ವೈಜ್ಞಾನಿಕ ನೆಲೆ ಇದೆ ಎಂದು ಕೇಳಿದಾಗ, “ಏನೂ ಇಲ್ಲ. ಅವರ ಆಕ್ಷೇಪಗಳ ಬಗ್ಗೆ ನ್ಯಾಯಾಧಿಕರಣದಲ್ಲಿ ಚರ್ಚೆ ಮಾಡಿದ ನಂತರವೇ ತೀರ್ಪು ಬಂದಿದೆ. ಈಗ ಕೇಂದ್ರ ಸರ್ಕಾರದ ಅಧಿಸೂಚನೆ ಮಾತ್ರ ಬಾಕಿ ಇದೆ” ಎಂದರು.

Tags: alamatti damckcknewsnowDK Shivakumarkarnatakakrishna rivermaharastra
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Leave a Reply Cancel reply

Your email address will not be published. Required fields are marked *

Recommended

ಯಾವ ಕನಸು ನಿಮ್ಮನ್ನು ನಿದ್ದೆ ಮಾಡಲು ಬಿಡುವುದಿಲ್ಲವೋ ಅದೇ ನಿಜವಾದ ಕನಸು

ಪೀಪಲ್ಸ್ ಪ್ರೆಸಿಡೆಂಟ್ ಮತ್ತು ಕನಸುಗಳ ಶಿಕಾರಿ

2 years ago
ಹಿತವಾದ ಸುದ್ದಿ!; ಕನ್ನಡಕ್ಕೆ ಬರಲಿದೆ ಎಸ್ಪಿಬಿ, ಲಕ್ಷ್ಮೀ ನಟನೆಯ ದೃಶ್ಯಕಾವ್ಯ ಮಿಥುನಂ

ಹಿತವಾದ ಸುದ್ದಿ!; ಕನ್ನಡಕ್ಕೆ ಬರಲಿದೆ ಎಸ್ಪಿಬಿ, ಲಕ್ಷ್ಮೀ ನಟನೆಯ ದೃಶ್ಯಕಾವ್ಯ ಮಿಥುನಂ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ