• About
  • Advertise
  • Careers
  • Contact
Wednesday, October 7, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CKPLUS

ನಾಳೆ ಬಾ ಎತ್ತಿನಹೊಳೆ!

cknewsnow desk by cknewsnow desk
October 6, 2026
in CKPLUS, NATION, POLITICS, STATE
Reading Time: 1 min read
0
ನಾಳೆ ಬಾ ಎತ್ತಿನಹೊಳೆ!
938
VIEWS
FacebookTwitterWhatsuplinkedinEmail

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಲೇವಡಿ

ಚಿಕ್ಕಬಳ್ಳಾಪುರ, ಕೋಲಾರಕ್ಕೆ ಈ ಸರಕಾರಕ್ಕೆ ನೀರು ಕೊಡಲು ಸಾಧ್ಯವಿಲ್ಲ

ಕೋಲಾರ (ಮುಳಬಾಗಿಲು) 6 ಅಕ್ಟೋಬರ್ 2026

ಈ ಹಿಂದೆಯೇ ನಾನು ಹೇಳಿದ್ದ ಮಾತಿಗೆ ಈಗಲೂ ಬದ್ಧನಿದ್ದೇನೆ. ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ಎತ್ತಿನಹೊಳೆ ನೀರು ಕೊಡುವುದು ಈ ಸರಕಾರಕ್ಕೆ ಸಾಧ್ಯವಿಲ್ಲ. ಇವತ್ತು ನೀರು ಕೊಡುತ್ತೇವೆ, ನಾಳೆ ಕೊಡುತ್ತೇವೆ ಎಂದು ಜನರಿಗೆ ಸುಳ್ಳು ಹೇಳುತ್ತಿದ್ದಾರೆ. ಈ ಜಿಲ್ಲೆಗಳ ಪಾಲಿಗೆ ಎತ್ತಿನಹೊಳೆ ‘ನಾಳೆ ಬಾ’ ಅನ್ನುವ ಯೋಜನೆಯಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಲೇವಡಿ ಮಾಡಿದರು.

ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಮಂಗಳವಾರ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು; ಯೋಜನೆಯ ಪೈಪ್‌ಲೈನ್ ಹಾಕುವುದನ್ನು ಯಾರು ಬೇಕಾದರೂ ಮಾಡಬಹುದು. ಆದರೆ ನೀರು ಕೊಡಬೇಕಲ್ಲ? ನೀರು ಕೊಡಿಸುವುದಕ್ಕೆ ವ್ಯವಸ್ಥೆ ಮಾಡದೆ ಕೇವಲ ಪೈಪ್‌‌ಲೈನ್ ಹಾಕಿದರೆ ಅದು ದುಡ್ಡು ಹೊಡೆಯುವ ಕೆಲಸವಾಗುತ್ತದೆ ಅಷ್ಟೇ. ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ನೀರು ತರುತ್ತೇವೆ ಎಂದು ಹೇಳಿ ಆ ಭಾಗದ ಜನತೆಗೆ ದ್ರೋಹ ಬಗೆಯಬೇಡಿ, ದುಡ್ಡು ಹೊಡೆಯುವ ಕಾರ್ಯಕ್ರಮ ಮಾಡಬೇಡಿ ಎಂದರು.

ಆ ಜಿಲ್ಲೆಗಳ ಜನರ ಶ್ರಮ ರಾಜ್ಯಕ್ಕೆ ದೊಡ್ಡ ಕೊಡುಗೆ ಎನ್ನುವುದರಲ್ಲಿ ಎರಡು ಮಾತಿಲ್ಲ. ನೀರಿಲ್ಲದಿದ್ದರೂ ತಮ್ಮ ಕಾಯಕದಿಂದ ರಾಜ್ಯದ ಆರ್ಥಿಕತೆಗೆ ಅವರು ಶಕ್ತಿ ತುಂಬಿದ್ದಾರೆ. ನಾನು 2013-14ರಲ್ಲಿ ಆದಿಚುಂಚನಗಿರಿ ಮಹಾಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಚಿಕ್ಕಬಳ್ಳಾಪುರದಲ್ಲಿ ಈ ಯೋಜನೆಗೆ ಭೂಮಿಪೂಜೆ ನೆರವೇರಿಸಿದ ದಿನವೇ ನಾನು ಕೋಲಾರದಲ್ಲಿ ಇದ್ದೆ. ಆವತ್ತೇ ನಾನು ಹೇಳಿದ್ದೆ. ಇವರಿಂದ ನೀರು ಕೊಡಲು ಆಗುವುದಿಲ್ಲ ಎಂದು. ಶಂಕುಸ್ಥಾಪನೆ ಮಾಡಿದ್ದ ಅಂದಿನ ಮುಖ್ಯಮಂತ್ರಿ ಒಂದೆರಡು ವರ್ಷಗಳಲ್ಲಿ ಕೋಲಾರದ ಕೊನೆ ಅಂಚಿನವರೆಗೂ ನೀರು ಕೊಡುತ್ತೇವೆ ಎಂದು ಭರವಸೆ ನೀಡಿದ್ದರು ಎಂಬ ಮಾತನ್ನು ಕೇಂದ್ರ ಸಚಿವರು ಕಾಂಗ್ರೆಸ್ ಸರಕಾರಕ್ಕೆ ನೆನಪಿಸಿದರು.ಸಿದ್ದರಾಮಯ್ಯ ಅವರು 1-2 ವರ್ಷದಲ್ಲಿ ನೀರು ಹರಿಸುತ್ತೇವೆ ಎಂದಿದ್ದರು. ಅದು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದ ನನ್ನ ಮಾತನ್ನು ಅಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲಘುವಾಗಿ ತಳ್ಳಿಹಾಕಿದ್ದರು. ಅವರು ಮಾತು ಕೊಟ್ಟು 12-13 ವರ್ಷ ಕಳೆದಿದೆ. ಆದರೆ ಯೋಜನೆ ಹಾಸನ ದಾಟಿ ಮುಂದೆ ಬರಲಿಲ್ಲ. ಜಲಾಶಯ ಎಲ್ಲಿ ನಿರ್ಮಾಣ ಮಾಡ್ತಿದ್ದಾರೆ?ದೇವರಾಯನದುರ್ಗದ ಬಳಿ 10 ಟಿಎಂಸಿ ನೀರು ಸಂಗ್ರಹಕ್ಕೆ ಜಲಾಶಯ ಕಟ್ಟುತ್ತೇವೆ ಎಂದರು. ಆಮೇಲೆ ಅದು 5 ಟಿಎಂಸಿ ಮಟ್ಟಕ್ಕೆ ಬಂತು. ಈಗ 2 ಟಿಎಂಸಿಗೆ ಬಂದಿದೆ. ಇವತ್ತಿನವರೆಗೂ ಈ ಕುರಿತು ನಿಖರ ತೀರ್ಮಾನ ಮಾಡಿಲ್ಲ. ಕಳೆದ ಮೂರು ವರ್ಷಗಳಿಂದ ಮುಂದಿನ ಜೂನ್‌ಗೆ ನೀರು ಹರಿಸುತ್ತೇವೆ ಎಂದು ಹೇಳುತ್ತಲೇ ಇದ್ದಾರೆ ಎಂದು ಸಚಿವ ಕುಮಾರಸ್ವಾಮಿ ಅವರು ಕಿಡಿಕಾರಿದರು.

ಈ ಹಿಂದೆ ಹಳ್ಳಿಗಳಲ್ಲಿ ಮನೆ ಬಾಗಿಲ ಮೇಲೆ ‘ನಾಳೆ ಬಾ’ ಎಂದು ಬರೆಯುತ್ತಿದ್ದ ರೀತಿಯಲ್ಲಿ ಎತ್ತಿನಹೊಳೆ ಯೋಜನೆಗೆ ‘ನಾಳೆ ಬಾ’ ಯೋಜನೆ ಎಂದು ಕರೆಯಬಹುದು. ಇನ್ನೊಂದು ವರ್ಷದಲ್ಲಿ ಚುನಾವಣೆ ಬರುತ್ತದೆ ನೋಡೋಣ. ಅಷ್ಟರಲ್ಲಿ ಯಾವ ಮಟ್ಟಕ್ಕೆ ಈ ಜಿಲ್ಲೆಯ ಜನರ ಬೇಡಿಕೆಗಳನ್ನು ಈಡೆರಿಸುತ್ತಾರೆ ಎಂದು ಕಾದು ನೋಡೋಣ ಎಂದು ಸಚಿವರು ಹೇಳಿದರು.

ಯಾವುದೇ ಇಲಾಖೆಯನ್ನು ಬೇಕಾದರೂ ಉದಾಹರಣೆಯಾಗಿ ತೆಗೆದುಕೊಳ್ಳಿ. ಯಾವ ಇಲಾಖೆಯಲ್ಲಿ ಎಷ್ಟು ದುಡ್ಡು ಹೊಡೆಯುವುದಕ್ಕೆ ಸಾಧ್ಯ ಅನ್ನುವ ಒಂದೇ ಒಂದು ದಂಧೆ ನಡೆಯುತ್ತಿದೆ. ಯಾವುದೇ ಒಂದು ಇಲಾಖೆಯಲ್ಲೂ ಪಾರದರ್ಶಕ ಆಡಳಿತ ಎಲ್ಲೂ ಕಾಣುತ್ತಿಲ್ಲ. ಯಾವ ಇಲಾಖೆಯಲ್ಲಿ ಎಷ್ಟು ಹಣ ಲೂಟಿ ಮಾಡಬಹುದು ಎಂಬುದಷ್ಟೇ ನಡೆಯುತ್ತಿದೆ ಎಂದು ಕೇಂದ್ರ ಸಚಿವರು ಟೀಕಾಪ್ರಹಾರ ನಡೆಸಿದರು.

₹2500 ಯಾರಿಗೆ ಕೊಟ್ಟಿದ್ದಾರೆ?

ಸಿದ್ದರಾಮಯ್ಯನವರು 2ನೇ ಬಾರಿ ಮುಖ್ಯಮಂತ್ರಿಯಾದಾಗ ಪ್ರಮುಖವಾಗಿ ಮುನ್ನೆಲೆಗೆ ಬಂದಿದ್ದು ಅಧಿಕಾರ ಹಂಚಿಕೆ ವಿಚಾರ ಮಾತ್ರ. ಎರಡೂವರೆ ವರ್ಷದ ಅವಧಿ, ಯಾವಾಗ ಮುಖ್ಯಮಂತ್ರಿ ರಾಜೀನಾಮೆ ಕೊಡುತ್ತಾರೆ, ಯಾವಾಗ ಇನ್ನೊಬ್ಬರು ಬಂದು ಕೂರುತ್ತಾರೆ ಎನ್ನುವುದೇ ಆಯಿತು. ಯಾರು ಮುಂದಿನ ಸಿಎಂ ಆಗ್ತಾರೆ ಎನ್ನುವ ಚರ್ಚೆಯೇ ಮುನ್ನೆಲೆಗೆ ಬಂತು. ಇದರ ಜತೆಗೆ ಗ್ಯಾರಂಟಿ ಯೋಜನೆಗಳನ್ನು ಹೇಳಿಕೊಂಡು ಬಂದಿದ್ದಾರೆ. ನುಡಿದಂತೆ ನಡೆದಿದ್ದೇವೆ ಎಂದು ನಡೆದಿದ್ದೆವೆ ಅಂತಾ ಹೇಳಿಕೊಂಡು ಬಂದಿದ್ದಾರೆ. ಗ್ಯಾರಂಟಿಯಿಂದ ರಾಜ್ಯದ ಜನರ ಅರ್ಥಿಕ ಶಕ್ತಿ ವೃದ್ದಿ ಮಾಡಿದ್ದೀವಿ ಎಂದು ಹೇಳಿದ್ದಾರೆ. ಹಾಗಿದ್ದರೆ ಬರದಿಂದ ಕಂಗೆಟ್ಟಿರುವ ಜನರು ಯಾಕೆ ಕಣ್ಣೀರು ಹಾಕುತ್ತಿದ್ದಾರೆ. ಮೂರು ದಿನಗಳಿಂದ ಕೇಂದ್ರ ತಂಡ ಬಂದು ರಾಜ್ಯ ಪ್ರವಾಸ ಮಾಡುತ್ತಿದೆ, ಅವರ ಎದುರು ಹಳ್ಳಿಗಳಲ್ಲಿ ರೈತರು ಕಣ್ಣಿರು ಹಾಕ್ತಿದಾರೆ, ದಿನಗೂಲಿ ಸಿಕ್ತಿಲ್ಲ, ಹಳ್ಳಗಳಿಗೆ ಜನ ಮನೆಗೆ ಬೀಗ ಹಾಕಿ ಗುಳೆ ಹೋಗ್ತಿದ್ದಾರೆ. ಈ ಸರಕಾರ ನೋಡಿದರೆ ₹2,500 ಘೋಷಣೆ ಮಾಡಿ ಕೈತೊಳೆದುಕೊಂಡಿದೆ. ಎಷ್ಟು ಜನ ರೈತರಿಗೆ ಈ ಹಣ ತಲುಪಿದೆ ಎಂಬುದು ಗೊತ್ತಿಲ್ಲ ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಹುದ್ದೆ ಕಿತ್ತುಕೊಳ್ಳುವುದಕ್ಕೆ, ಅದನ್ನು ಕಿತ್ತುಕೊಂಡು ಕುರ್ಚಿ ಮೇಲೆ ಕೂತು ಮೇಲೆ ಪ್ರಮಾಣ ಸ್ವೀಕಾರ ಮಾಡೋದಕ್ಕೆ, ಪ್ರಮಾಣ ಸ್ವೀಕರಿಸಿದ ಮೇಲೆ ಕ್ಯಾಬಿನೆಟ್ ಮಾಡುವುದಕ್ಕೆ, ಕ್ಯಾಬಿನೆಟ್ ಮಾಡಿದ ಮೇಲೆ ಖಾತೆಗಳ ಹಂಚಿಕೆಗೆ ದೆಹಲಿಗೆ ಮುಖ್ಯಮಂತ್ರಿ ಸುತ್ತಿದ್ದು ಬಿಟ್ಟರೆ ರಾಜ್ಯಕ್ಕೆ ಏನು ಮಾಡಿದ್ದಾರೆ? ಮೂರು ದಿನಗಳ ಆಡಳಿತ ಅಂದ್ರೆ ಅದರಲ್ಲಿ ಅರ್ಧ ಪಾಲು ಬರಿ ದೆಹಲಿಗೆ ಹೋಗಿಬರುವುದಷ್ಟೇ ಆಯಿತು. ಯಾವ ಪುರುಷಾರ್ಥಕ್ಕೆ ಇವರು ಮೂರು ದಿನಗಳ ಸಂಭ್ರಮ ಆಚರಿಸಿಕೊಂಡರು ಎಂಬುದು ನನಗೆ ಅರ್ಥವಾಗುತ್ತಿಲ್ಲ ಎಂದು ಸಚಿವರು ಟೀಕಿಸಿದರು.

ಸಿಎಂ ಪ್ರಧಾನಿಯನ್ನು ಕಾಪಿ ಮಾಡುತ್ತಿದ್ದಾರೆ

ಪ್ರಧಾನಿ ನರೇಂದ್ರ ಮೋದಿ ಅವರಿಗಿಂತ ನಾನೇನು ಕಡಿಮೆ ಇಲ್ಲ ಎನ್ನುವ ರೀತಿಯಲ್ಲಿ ಈ ಮುಖ್ಯಮಂತ್ರಿ ಬಿಂಬಿಸಿಕೊಳ್ಳುತ್ತಿದ್ದಾರೆ. ಆದರೆ ರಾಜ್ಯದ ವಾಸ್ತವ ಸ್ಥಿತಿಯೇ ಬೇರೆ ಇದೆ. ಮುಖ್ಯಮಂತ್ರಿ ವಿಷನ್ 2037, ವಿಷನ್ 2047 ಎಂದೆಲ್ಲ ಹೇಳುತ್ತಿದ್ದಾರೆ. ಅದಕ್ಕೆಲ್ಲ ಹಣ ಎಲ್ಲಿಂದ ತರುತ್ತಾರೆ? ಈಗ ಬೇರೆ ಇಂಟಿಗ್ರೇಟೆಡ್ ಟೌನ್ಷಿಪ್‌ಗಳನ್ನು ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಅವರ ಭೂಮಿಗೆ ಬೆಲೆ ತಂದುಕೊಳ್ಳುವುದು ಅದರ ಹಿಂದಿನ ಉದ್ದೇಶವಾಗಿದೆ. 2006ರಲ್ಲಿ ನಾನು 5 ಟೌನ್‌ಶಿಪ್ ಮಾಡಲು ಹೊರಟಾಗ ರೈತರ ಭೂಮಿ ಕಿತ್ತುಕೊಳ್ಳುತ್ತಿದ್ದಾರೆ ಎಂದು ನನ್ನ ಮೇಲೆ ಮುಗಿಬಿದ್ದಿದ್ದರು. ಇವತ್ತು ಈಗಾಗಲೇ 7,500 ಎಕರೆ ಭೂಮಿಯನ್ನು ನೋಟಿಫೈ ಮಾಡಿದ್ದಾರೆ. ಮುಂದಿನ ಮಾರ್ಚ್ ಒಳಗೆ 50 ಸಾವಿರ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎನ್ನುತ್ತಾರೆ. ಇಲ್ಲಿಗೆ ಬಂಡವಾಳ ಹೂಡಲು ಯಾರು ಬಂದಿದ್ದಾರೆ? ನಮ್ಮ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಯ ಎಷ್ಟು ಮಕ್ಕಳಿಗೆ ಉದ್ಯೋಗ ಕೊಟ್ಟಿದ್ದಾರೆ? ಬೇರೆ ರಾಜ್ಯಗಳಿಂದ ಬಂದವರೇ ತುಂಬಿಕೊಂಡಿದ್ದಾರೆ. ಕೆಜಿಎಫ್‌ನಲ್ಲಿ ಇಂಡಸ್ಟ್ರಿಯಲ್ ಕಾರಿಡಾರ್ ಮಾಡುವುದಾಗಿ ಘೋಷಿಸಿದ್ದಾರೆ. ಆದರೆ ಅದಕ್ಕೆ ನೀರು ಎಲ್ಲಿಂದ ತರುತ್ತಾರೆ? ಎಂದು ಅವರು ಪ್ರಶ್ನಿಸಿದರು.

ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡಿ

ಹಾಲಿನ ದರ ಏರಿಕೆಗೆ ನನ್ನ ವಿರೋಧವಿಲ್ಲ ಎಂದ ಸಚಿವ ಕುಮಾರಸ್ವಾಮಿ ಅವರು; ಬೆಲೆ ಏರಿಕೆಯ ಹೊರೆಯನ್ನು ಗ್ರಾಹಕರ ಮೇಲೆ ಹಾಕಬಾರದು. ರೈತರಿಗೆ ಕೊಡುವ ₹5 ಪ್ರೋತ್ಸಾಹ ಧನವನ್ನು ಹೆಚ್ಚಿಸಿ 6ನೇ ಗ್ಯಾರಂಟಿ ಎಂದು ಕೊಡಿ. ಸಾಧ್ಯವಾದರೆ ₹5 ಅಥವಾ ₹10 ಮೊತ್ತವನ್ನು ರೈತನಿಗೆ ಪ್ರೋತ್ಸಾಹ ಧನದ ರೂಪದಲ್ಲಿ ಕೊಡಿ. ನೀವು ಒಂದು ಕಡೆ ಹಾಲಿನ ದರ ಹೆಚ್ಚಿಸಿ ಅದರ ಭಾರವನ್ನು ಗ್ರಾಹಕರ ಮೇಲೆ ಹಾಕಬೇಡಿ ಎಂದು ಕೇಂದ್ರ ಸಚಿವರು ಸಲಹೆ ನೀಡಿದರು.

ಬೆಂಗಳೂರಿನ ಸಮಸ್ಯೆಗಳನ್ನು ಬಗೆಹರಿಸಲು ಯೋಗ್ಯತೆ ಇಲ್ಲದವರು, ಸಿಂಗಾಪುರ ಮಾಡುತ್ತೇವೆ ಎಂದು ಭ್ರಮೆ ಹುಟ್ಟಿಸುತ್ತಿದ್ದಾರೆ. 975 ಅರ್ಜಿಗಳು ವಿಲೇವಾರಿಯಾಗದೆ ಧೂಳು ಹಿಡಿದು ಬಿದ್ದಿವೆ, ಉದ್ಯಮಿಗಳು ಬೇರೆ ರಾಜ್ಯಗಳಿಗೆ ಹೋಗುತ್ತಿದ್ದಾರೆ. ಹಿಂದೆ ಸಿದ್ದರಾಮಯ್ಯನವರ ಮೊದಲ ಅವಧಿಯಲ್ಲಿ 1 ಲಕ್ಷ ಮನೆ ಕಟ್ಟಿಕೊಡುವುದಾಗಿ ಘೋಷಿಸಿದ್ದರು. ಕೃಷ್ಣ ಬೈರೇಗೌಡರ ಕ್ಷೇತ್ರದಲ್ಲಿ ಗುದ್ದಲಿಪೂಜೆ ಮಾಡಿದ್ದರು. ಇವತ್ತಿನವರೆಗೆ ಎಷ್ಟು ಮನೆ ಕೊಟ್ಟಿದ್ದಾರೆ? 20 ಸಾವಿರ ಮನೆಗಳನ್ನೂ ಪೂರ್ಣಗೊಳಿಸಲು ಆಗಿಲ್ಲ. ಫಲಾನುಭವಿಗಳು ಹಣ ಕಟ್ಟಲು ಶಕ್ತರಿಲ್ಲ. ಈಗ ಮತ್ತೆ 50 ಸಾವಿರ ಕಾರ್ಮಿಕರಿಗೆ ಮನೆ ಕಟ್ಟಿಕೊಡುವುದಾಗಿ ಹೊಸ ಘೋಷಣೆ ಮಾಡಿದ್ದಾರೆ. ಬರೀ ಗಾಳಿಗೋಪುರ ಕಟ್ಟುವುದು ಬಿಟ್ಟರೆ ವಾಸ್ತವದಲ್ಲಿ ಏನೂ ಆಗುತ್ತಿಲ್ಲ ಎಂದು ಕೇಂದ್ರ ಸಚಿವರು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಕಾಂಗ್ರೆಸ್ ನಾಯಕರು ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಸಂವಿಧಾನದ ಹೆಸರು ಹೇಳುತ್ತಾರೆ. ಆದರೆ ಪೊಲೀಸ್ ಇಲಾಖೆಯನ್ನು ದುರುಪಯೋಗಪಡಿಸಿಕೊಂಡು ವಿಪಕ್ಷಗಳ ಮೇಲೆ ಸುಳ್ಳು ಎಫ್‌ಐಆರ್ ದಾಖಲಿಸುತ್ತಿದ್ದಾರೆ. ಚುನಾವಣಾ ಆಯೋಗಕ್ಕೆ ನೀಡಬೇಕಾದ ದೂರುಗಳನ್ನು ನೇರವಾಗಿ ಪೊಲೀಸರ ಮೂಲಕ ಕೇಸ್ ಮಾಡಿಸುತ್ತಿದ್ದಾರೆ ಎಂದು ಸಚಿವರು ಕಿಡಿಕಾರಿದರು.

ಸಿದ್ಧಾರ್ಥ ಟ್ರಸ್ಟ್ ಮೇಲೆ ಯಾಕೆ FIR ಮಾಡಿಲ್ಲ

ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಸಿದ್ದಾರ್ಥ ವಿಹಾರ ಟ್ರಸ್ಟ್‌ಗೆ ಸರ್ಕಾರಿ ಜಮೀನು ಪಡೆದ ವಿಚಾರದಲ್ಲಿ ಹೈಕೋರ್ಟ್ ಆದೇಶದ ನಂತರವೂ ಲೋಕಾಯುಕ್ತ ತನಿಖೆ ಮಾಡಿಸಲು ಇವರಿಗೆ ಧೈರ್ಯವಿಲ್ಲ ಎಂದು ಪ್ರಶ್ನಿಸಿದ ಸಚಿವರು; ಬುದ್ಧ, ಸಿದ್ದಾರ್ಥ, ಅಂಬೇಡ್ಕರ್ ಹೆಸರು ಹೇಳಿಕೊಂಡು ತಮ್ಮ ಕುಟುಂಬದ ಹಿತಾಸಕ್ತಿ ನೋಡಿಕೊಳ್ಳುತ್ತಿದ್ದಾರೆ. ಮೊದಲು ತಮ್ಮ ಮನೆಯ ದೋಷಗಳನ್ನು ಸರಿಪಡಿಸಿಕೊಳ್ಳಲಿ, ಆಮೇಲೆ ನಮ್ಮ ಕುಟುಂಬದ ಬಗ್ಗೆ ಮಾತನಾಡಲಿ ಎಂದು ತಿರುಗೇಟು ಕೊಟ್ಟರು.

ಮೈತ್ರಿಯ ಸ್ಥಳೀಯ ಮಟ್ಟದಲ್ಲಿ ಸಣ್ಣಪುಟ್ಟ ಸಮಸ್ಯೆಗಳು, ಭಿನ್ನಾಭಿಪ್ರಾಯಗಳು ಸಹಜ. ರಾಜಕಾರಣಿಗಳು ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ಯೋಚಿಸುವುದುಂಟು. ವಿಜಯೇಂದ್ರ ಅವರು ಹೇಳಿದಂತೆ, ಈಗಲೇ ಸೀಟು ಹೊಂದಾಣಿಕೆ ಮತ್ತು ಚರ್ಚೆ ನಡೆಸುವುದು ಒಳ್ಳೆಯ ಬೆಳವಣಿಗೆ. ಅಂತಿಮ ನಿರ್ಧಾರವನ್ನು ವರಿಷ್ಠರು ತೆಗೆದುಕೊಳ್ಳುತ್ತಾರೆ. ಕೋಲಾರ ಜಿಲ್ಲೆಯಲ್ಲಿ ಮೈತ್ರಿ ನಡೆಯಲ್ಲ ಎಂದು ಹೇಳಿದವರು ಯಾರು? ನಮ್ಮಿಂದಲೇ ರಾಜಕೀಯ ಜೀವನ ಆರಂಭಿಸಿ, ನಮಗೇ ಟೋಪಿ ಹಾಕಿ ಹೋದವರು ಹೇಳಿದ್ದು ಅಲ್ಲವೇ? ಸಮಯ ಬಂದಾಗ ಎಲ್ಲದಕ್ಕೂ ಉತ್ತರ ಸಿಗುತ್ತದೆ ಎಂದರು ಅವರು.ಪೆರಿಫೆರಲ್ ರಿಂಗ್ ರೋಡ್ (PRR) ಯೋಜನೆಯಲ್ಲಿ ನೈಸ್ ಕಂಪನಿಗೆ ಅನುಕೂಲ ಮಾಡಿಕೊಡಲು ರಾಜ್ಯ ಸರಕಾರ ಮುಂದಾಗಿದೆ. ಬಿಡಿಎ ಖಾಲಿ ಸೈಟ್‌ಗಳನ್ನು ಮಾರಾಟ ಮಾಡಿ ಹಣ ಹೊಂದಿಸಲು ಹೊರಟಿದ್ದಾರೆ. ಜನರ ಮನೆಗಳನ್ನು ಬುಲ್ಡೋಜರ್ ಹಚ್ಚಿ ಕೆಡವಿ ಬೀದಿಗೆ ತರುತ್ತಿದ್ದಾರೆ. ಇದು ಬಡವರ ಪರವಾದ ಸರ್ಕಾರವಲ್ಲ, ನೈಸ್ ಮಾಲೀಕರ ಜೊತೆ ಕೈಜೋಡಿಸಿರುವ ಸರ್ಕಾರ. ರಾಜ್ಯದಲ್ಲಿ ಭೀಕರ ಬರಗಾಲವಿದೆ. ರೈತರು ಕಂಗಾಲಾಗಿ ಅಧಿಕಾರಿಗಳ ಕಾಲಿಗೆ ಬೀಳುತ್ತಿದ್ದಾರೆ. ಹಳ್ಳಿಗಳಿಂದ ಜನರು ಮನೆಗೆ ಬೀಗ ಹಾಕಿ ಗುಳೆ ಹೋಗುತ್ತಿದ್ದಾರೆ. ಸರ್ಕಾರ ಘೋಷಿಸಿದ ₹2,000-₹2,500 ಪರಿಹಾರ ಎಷ್ಟು ಜನರಿಗೆ ತಲುಪಿದೆ? ಕೇಂದ್ರದ ಮುಂದೆ ಪರಿಹಾರ ಕೇಳುವಲ್ಲೂ ಸರ್ಕಾರ ಗೊಂದಲದಲ್ಲಿದೆ. ಮೊದಲು ಕೇಂದ್ರದ ಮುಂದೆ ₹3,800 ಕೋಟಿ ನಷ್ಟ ಎಂದರು,

ಆಮೇಲೆ ₹7,500 ಕೋಟಿ ಎಂದರು. ಈಗ ಕಂದಾಯ ಸಚಿವರು ₹11,000 ಕೋಟಿ ಕೇಳುತ್ತೇವೆ ಎನ್ನುತ್ತಿದ್ದಾರೆ. ಯಾವುದೇ ಪೂರ್ವಸಿದ್ಧತೆ ಇಲ್ಲ, ಸರಿಯಾದ ಲೆಕ್ಕಾಚಾರವಿಲ್ಲ. ಕೇಂದ್ರಕ್ಕೆ ವಾರಕ್ಕೊಂದು ರೀತಿ, ಹತ್ತು ದಿನಕ್ಕೊಂದು ರೀತಿ ಪ್ರಸ್ತಾವನೆ ಸಲ್ಲಿಸಿದರೆ ಅವರು ಪರಿಹಾರ ಹೇಗೆ ನೀಡುತ್ತಾರೆ? ಮೊದಲು ಸರಿಯಾದ ಕ್ರಿಯಾಯೋಜನೆ ರೂಪಿಸಿ, ರೈತರಿಗೆ ನೆರವಾಗುವ ಕೆಲಸ ಮಾಡಿ ಎಂದು ಸಚಿವರು ಹೇಳಿದರು.

ಮಾಧ್ಯಮಗೋಷ್ಟಿಯಲ್ಲಿ ಸಂಸದ ಮಲ್ಲೇಶ್ ಬಾಬು, ಶಾಸಕ ಸಮೃದ್ಧಿ ಮಂಜುನಾಥ್, ಮಾಜಿ ಶಾಸಕ ಚೌಡರೆಡ್ಡಿ ತೂಪಲ್ಲಿ ಮುಂತಾದವರು ಹಾಜರಿದ್ದರು.

Tags: Chikkaballapur water troubledrinking waterKarnataka under water crisissKolar water crissis
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

36 ಎಕರೆ ಸರಕಾರಿ ಭೂಮಿ ಲಪಟಾಯಿಸಿದ ಸಚಿವ ಹೆಚ್.ಸಿ.ಬಾಲಕೃಷ್ಣ

36 ಎಕರೆ ಸರಕಾರಿ ಭೂಮಿ ಲಪಟಾಯಿಸಿದ ಸಚಿವ ಹೆಚ್.ಸಿ.ಬಾಲಕೃಷ್ಣ

by cknewsnow desk
October 6, 2026
0

ಬಾಲಕೃಷ್ಣ ವಿಚಾರಣೆ; ರಾಜ್ಯಪಾಲರ ಅನುಮತಿ ಕೋರಲಿರುವ JDS

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

Next Post
36 ಎಕರೆ ಸರಕಾರಿ ಭೂಮಿ ಲಪಟಾಯಿಸಿದ ಸಚಿವ ಹೆಚ್.ಸಿ.ಬಾಲಕೃಷ್ಣ

36 ಎಕರೆ ಸರಕಾರಿ ಭೂಮಿ ಲಪಟಾಯಿಸಿದ ಸಚಿವ ಹೆಚ್.ಸಿ.ಬಾಲಕೃಷ್ಣ

Leave a Reply Cancel reply

Your email address will not be published. Required fields are marked *

Recommended

ಪಂಚನಾರಾಯಾಣ ಕ್ಷೇತ್ರ ಎಲ್ಲೋಡು ಶ್ರೀ ಆದಿನಾರಾಯಣ ಬೆಟ್ಟದಲ್ಲಿ ಬೆಂಕಿ ದುರಂತ;  ಅಗ್ನಿಗೆ ಆಹುತಿಯಾದ ಅರಣ್ಯವೆಷ್ಟು? ಜೀವ ಸಂಕುಲದ ಸ್ಥಿತಿ ಏನು? ಇಲ್ಲಿದೆ ಒಂದು ರೌಂಡಪ್

ಪಂಚನಾರಾಯಾಣ ಕ್ಷೇತ್ರ ಎಲ್ಲೋಡು ಶ್ರೀ ಆದಿನಾರಾಯಣ ಬೆಟ್ಟದಲ್ಲಿ ಬೆಂಕಿ ದುರಂತ; ಅಗ್ನಿಗೆ ಆಹುತಿಯಾದ ಅರಣ್ಯವೆಷ್ಟು? ಜೀವ ಸಂಕುಲದ ಸ್ಥಿತಿ ಏನು? ಇಲ್ಲಿದೆ ಒಂದು ರೌಂಡಪ್

6 years ago
ಕೋವಿಡ್ ಕೆಸರು; ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಗೆ ಪಂಚಪ್ರಶ್ನೆ ಹಾಕಿದ ಎಚ್ಡಿಕೆ

ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಸಿದ್ದು ಆಗ್ರಹ

5 years ago

Popular News

  • 36 ಎಕರೆ ಸರಕಾರಿ ಭೂಮಿ ಲಪಟಾಯಿಸಿದ ಸಚಿವ ಹೆಚ್.ಸಿ.ಬಾಲಕೃಷ್ಣ

    36 ಎಕರೆ ಸರಕಾರಿ ಭೂಮಿ ಲಪಟಾಯಿಸಿದ ಸಚಿವ ಹೆಚ್.ಸಿ.ಬಾಲಕೃಷ್ಣ

    0 shares
    Share 0 Tweet 0
  • ನಾಳೆ ಬಾ ಎತ್ತಿನಹೊಳೆ!

    0 shares
    Share 0 Tweet 0
  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

36 ಎಕರೆ ಸರಕಾರಿ ಭೂಮಿ ಲಪಟಾಯಿಸಿದ ಸಚಿವ ಹೆಚ್.ಸಿ.ಬಾಲಕೃಷ್ಣ

36 ಎಕರೆ ಸರಕಾರಿ ಭೂಮಿ ಲಪಟಾಯಿಸಿದ ಸಚಿವ ಹೆಚ್.ಸಿ.ಬಾಲಕೃಷ್ಣ

October 6, 2026
ನಾಳೆ ಬಾ ಎತ್ತಿನಹೊಳೆ!

ನಾಳೆ ಬಾ ಎತ್ತಿನಹೊಳೆ!

October 6, 2026
ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ