• About
  • Advertise
  • Careers
  • Contact
Monday, October 26, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

cknewsnow desk by cknewsnow desk
October 25, 2026
in EDITORS'S PICKS, NATION, NEWS & VIEWS, POLITICS, STATE
Reading Time: 1 min read
0
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!
917
VIEWS
FacebookTwitterWhatsuplinkedinEmail

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಬೆಂಗಳೂರು: ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರ ಕುಟುಂಬವನ್ನು ಮುಗಿಸಲು ಹಾಲಿ ಮುಖ್ಯಮಂತ್ರಿ ₹600 ಕೋಟಿಯಷ್ಟು ಬೃಹತ್ ಮೊತ್ತದ ಡೀಲ್ ಕೊಟ್ಟಿರುವ ವಿಷಯದಲ್ಲಿ ಯಾವುದೇ ಸಂಶಯವಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು.

ಬೆಂಗಳೂರಿನ ಮಲ್ಲೇಶ್ವರದಲ್ಲಿ ಖಾಸಗಿ ಕಾರ್ಯಕ್ರಮ ಒಂದರಲ್ಲಿ ಪಾಲ್ಗೊಂಡ ನಂತರ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಕೇಂದ್ರ ಸಚಿವರು; ಒಂದು ಕುಟುಂಬವನ್ನು ಮುಗಿಸಲು ₹600 ಕೋಟಿ ಮೊತ್ತದ ಡೀಲ್ ಕೊಟ್ಡಿರುವ ವಿಚಾರದ ಬಗ್ಗೆ ಸುದ್ದಿಗಾರರು ಗಮನ ಸೆಳೆದಾಗ ಉತ್ತರಿಸಿದರು.

ಅದು ಬೇರೆ ಯಾರೂ ಅಲ್ಲ. ಈಗಿನ ಮಹಾನ್ ಮುಖ್ಯಮಂತ್ರಿಗಳೇ ಒಂದು ಕುಟುಂಬವನ್ನು ಮುಗಿಸಲು ಹೇಳಿರುವುದು. ಅದು ದೇವೇಗೌಡರ ಕುಟುಂಬವೇ ಆಗಿದೆ. ನಮ್ಮ ಕುಟುಂಬವನ್ನು ಮುಗಿಲುಸಲು ಈ ಮುಖ್ಯಮಂತ್ರಿ ನಡೆಸಿರುವ ಕುತಂತ್ರ ಒಂದೆರಡಲ್ಲ. ಅನೇಕ ಕುತಂತ್ರಗಳನ್ನು ಅವರು ಮಾಡಿದ್ದು ಅದರಲ್ಲಿ ₹600 ಕೋಟಿ ಸುಫಾರಿ ಡೀಲ್ ಕೂಡ ಒಂದು. ಅವರು ಈ ಕೃತ್ಯ ಎಸಗಿದ್ದಾರೆ ಎಂಬುದರಲ್ಲಿ ಎರಡು ಮಾತೇ ಇಲ್ಲ. ಸಂಶಯವೇ ಇಲ್ಲ ಎಂದರು ಕೇಂದ್ರ ಸಚಿವರು.

ಅದರಿಂದಲೇ ಇದೆಲ್ಲವನ್ನು ತನಿಖೆ ಮಾಡಬೇಕು ಎಂದು ನಾನು ಹೇಳಿದ್ದು. ಸ್ಟಿಂಗ್ ಮಾಡಿದ ಪಾತಕಿಗಳನ್ನು ಬಂಧಿಸಿ ಎಂದರೆ ಅವರಿಗೆ ಸುರಕ್ಷಿತವಾಗಿ ನಿರೀಕ್ಷಣಾ ಸಿಗುವಂತೆ ಮಾಡಿ, ಅದಕ್ಕೆ ಸಂಬಂಧ ಇಲ್ಲದವರನ್ನು ಕಾಡುತ್ತಿದ್ದಾರೆ. ಇವರ ಪಾಪದ ಕೊಡ ತುಂಬಿದೆ. ಆ ಭಗವಂತನೇ ಇದೆಲ್ಲವನ್ನು ಹೊರಗೆ ತರುತ್ತಿದ್ದಾನೆ ಎಂದು ಅವರು ಹೇಳಿದರು.

ಕರ್ನಾಟಕದಲ್ಲಿ ಹಲವಾರು ಸಮಸ್ಯೆಗಳಿವೆ. ಅವುಗಳ ನಡುವೆ ಒಂದು ಸೂಕ್ಷ್ಮ ವಿಚಾರದ ತನಿಖೆ ನಡೆಯುತ್ತಿದೆ. ಇನ್ನೂ ಐದು ದಿನ ಸಮಯ ಕೊಡುತ್ತೇನೆ. ಏನು ಮಾಡುತ್ತಾರೋ ನೋಡೋಣ. ನಮ್ಮ ಯುವಕರು ಭಯಪಡುವುದು ಬೇಡ. ಅವರಿಗೆ ನಾನು ಹೇಳುವುದು ಇಷ್ಟೇ, ಪೊಲೀಸರ ತನಿಖೆಗೆ ಸಹಕರಿಸಿ. ಅವರು ಕರೆದಾಗ ಹೋಗಿ. ಕೇಳಿದ ಉಪಕರಣಗಳನ್ನು ಕೊಡಿ. ಆಗ ಇವರ ತನಿಖೆ ಯಾವ ದಿಕ್ಕಿನತ್ತ ಹೋಗುತ್ತಿದೆ ಎಂದು ತಿಳಿಯುತ್ತಿದೆ. ನನಗೂ ಒಳಗೆ ಏನು ನಡೆಯುತ್ತಿದೆ ಎಂಬ ಮಾಹಿತಿ ಇದೆ. ಸಿದ್ದರಾಮಯ್ಯ ಅವರು ಹಾಗೂ ಅವರ ಪುತ್ರ ಯತೀಂದ್ರ ಅವರ ಹೇಳಿಕೆ ಕೂಡ ಗಮನಿಸಿದ್ದೇನೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಈ ತನಿಖೆಯ ಬಗ್ಗೆ ಸಿದ್ದರಾಮಯ್ಯ ಅವರಲ್ಲಿ ಕೂಡ ಅನುಮಾನ ಇದೆ. ಒಬ್ಬ ವ್ಯಕ್ತಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆ ಈ ಸ್ಟಿಂಗ್ ಆಪರೇಷನ್ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿಗಳಿಗೆ ಆಗಿರುವ ಅನ್ಯಾಯದ ಬಗ್ಗೆ ಬಗ್ಗೆ ಅಸಲಿ ಅಪರಾಧಿಗಳನ್ನು ಹಿಡಿಯಬೇಕಲ್ಲವೇ? ಮೂಲವನ್ನು ಹುಡುಕುವುದು ಬಿಟ್ಟು ಇವರು ಬಲವನ್ನು ಬಡಿಯುತ್ತಾ ಕೂತಿದ್ದಾರೆ ಎಂದು ಕೇಂದ್ರ ಸಚಿವರು ಟೀಕಿಸಿದರು.

ವಿಕ್ಕಿ ಸಾವು ಮುಚ್ಚಿ ಹಾಕಲು ಪೊಲೀಸರು ಶಾಮೀಲು

ವಿಕಾಸ್ (ವಿಕ್ಕಿ) ಅನುಮಾಸ್ಪದ ಸಾವಿನ ಬಗ್ಗೆ ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಸ್ಟಿಂಗ್ ಮಾಡಿದ ಆ ವ್ಯಕ್ತಿಯ ಸಂಸ್ಥೆಯಲ್ಲಿ ಆಗಿರುವ ಘಟನೆ ಬಗ್ಗೆ ಗೃಹ ಸಚಿವರು ದಾಖಲೆ ಕೇಳುತ್ತಾರೆ. ಲಿಫ್ಟ್ ಬಿದ್ದು ಈ ಸಾವು ಆಗಿದೆ ಎಂದು ಹೇಳುತ್ತಾರೆ. ಇದರ ಬಗ್ಗೆ ಸರಿಯಾದ ತನಿಖೆ ನಡೆಸದೆ ಇಡೀ ಪ್ರಕರಣವನ್ನೇ ಮುಚ್ಚಿ ಹಾಕಿದ್ದಾರೆ. ಈ ಪ್ರಕರಣ ಮುಚ್ಚಿ ಹಾಕುವುದರಲ್ಲಿ ಸರಕಾರ ಸೇರಿ ಪೊಲೀಸರು ಕೂಡ ಶಾಮೀಲಾಗಿದ್ದಾರೆ ಎಂದು ಸಚಿವರು ಗಂಭೀರ ಆರೋಪ ಮಾಡಿದರು.

ಸ್ಟಿಂಗ್ ಪಿನ್ ನಡೆಸುತ್ತಿರುವ ಮಾಧ್ಯಮ ಸಂಸ್ಥೆಯಲ್ಲಿ ಅನೇಕ ಅಕ್ರಮಗಳು, ಅಪರಾಧಗಳು ನಡೆದಿವೆ. ಎಷ್ಟೋ ಕೊಲೆಗಳು ಕೂಡ ಆಗಿವೆ. ಕೋಲಾರ ಬಳಿ ಒಬ್ಬ ಡ್ರೈವರ್ ಕೊಲೆ ಆಗಿದೆ. ಆ ಆ ಪ್ರಕರಣದ ಮಾಹಿತಿಗಳು ನನಗೆ ಬರುತ್ತಿವೆ ಎಂದು ಸಚಿವ ಕುಮಾರಸ್ವಾಮಿ ಅವರು ಹೇಳಿದರು.

ಅಂತಹ ಕೊಲೆಗಡಕರನ್ನು ರಾಜವಾದ ಶಿವಾಜಿ ತಿರುಗಾಡಲು ಬಿಟ್ಟು ನಮ್ಮ ಹುಡುಗರ ಬೆನ್ನು ಬಿದ್ದಿದ್ದಾರೆ. ಅವರನ್ನು ತನಿಖೆ ಮಾಡಿ, ನಮ್ಮ ಹುಡುಗರನ್ನು ಕೂಡ ತನಿಖೆ ಮಾಡಿ. ಏನಿದೆಯೋ ಎಲ್ಲಾ ಹೊರಗೆ ಬರಲಿ. ನಾನೇ ಸ್ಟಿಂಗ್ ಮಾಡಿದ್ದು, ಏನೀಗ? ನಾನು ಕಿಂಗ್ ಆಫ್ ಸ್ಟಿಂಗ್! ಎಂದು ಕೊಚ್ಚಿಕೊಂಡ ಕಿಡಿಗೇಡಿಯನ್ನು ಹಾಗೆಯೇ ಬಿಟ್ಟಿದ್ದೀರಿ! ಯಾಕೆ? ಎಂದು ಸಚಿವರು ಪ್ರಶ್ನಿಸಿದರು.

ಯತೀಂದ್ರ ಅವರು ಏನು ಹೇಳಿದ್ದಾರೆ ಎಂಬುದನ್ನು ಗೃಹ ಮಂತ್ರಿ ಕೇಳಿಲ್ಲವೇ? ಸಿದ್ದರಾಮಯ್ಯ ಅವರು ಹೇಳಿದ್ದನ್ನು ಕೂಡ ಅವರು ಕೇಳಿರಬೇಕಲ್ಲವೇ? ಕಾಂಗ್ರೆಸ್ ಪಕ್ಷದ ನಾಯಕಿ ಒಬ್ಬರು ಸ್ಟಿಂಗ್ ನಲ್ಲಿ ಇದ್ದಾರೆ ಎಂದು ಅವರು ಹೇಳಿಲ್ಲವೇ? ಇಷ್ಟೆಲ್ಲಾ ಮಾತನಾಡುವ ಪ್ರಿಯಾಂಕ್ ಖರ್ಗೆ ಅವರು ಸ್ಟಿಂಗ್ ಆಪರೇಷನ್ ವೀಡಿಯೊಗಳನ್ನು ನೋಡಿರುವುದಿಲ್ಲವೇ? ಹಾಗಾದರೆ ಅವರು ಯಾರನ್ನು, ಯಾರ ಒತ್ತಡ, ಆದೇಶದ ಮೇರೆಗೆ ರಕ್ಷಣೆ ಮಾಡುತ್ತಿದ್ದಾರೆ? ಎಂಬುದನ್ನು ಹೇಳಬೇಕಲ್ಲವೇ? ಎಂದು ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.

ಈಗ ನಿರೀಕ್ಷಣಾ ಜಾಮೀನು ತೆಗೆದುಕೊಂಡಿದಾರೆ ಒಬ್ಬರು. ಅವರಿಗೆ ನಿರೀಕ್ಷಣಾ ಜಾಮೀನು ಸಿಗದ ರೀತಿಯಲ್ಲಿ ಪೋಲೀಸ್ ಇಲಾಖೆ ಏನಾದರೂ ಪ್ರಯತ್ನ ಪಟ್ಟಿದ್ದಾರಾ? ನಾನು ಯಾರನ್ನು ಹೆದರಿಸಲು ಈ ಮಾತನ್ನು ಹೇಳುತ್ತಿಲ್ಲ. ಪ್ರಾಮಾಣಿಕವಾಗಿ ತನಿಖೆ ಮಾಡಿ ಎಂದಷ್ಟೇ ಹೇಳುತ್ತಿದ್ದೇನೆ. ನಾನು ಮುಂದಿನ ಐದು ದಿನಗಳ ಕಾಲ ನವದೆಹಲಿಗೆ ತೆರಳುತ್ತಿದ್ದೇನೆ. ಈ ಸರಕಾರಕ್ಕೆ ಐದು ದಿನ ಸಮಯ ಕೊಡುತ್ತೇನೆ. ನೋಡೋಣ ಯಾವ ರೀತಿ ತನಿಖೆ ಮಾಡುತ್ತಾರೆ ಎಂದು ಸಚಿವರು ಹೇಳಿದರು.

ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಬೇಕು ಅಂತ ನಾನು ಹೇಳಿದ್ದಲ್ಲ. ಅವರು ಹಿರಿಯರು ಇದ್ದಾರೆ. ಅಗತ್ಯಬಿದ್ದರೆ ಭೇಟಿ ಮಾಡುತ್ತೇನೆ. ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ನವರೇ ಸೇರಿಕೊಂಡು ಮುಗಿಸಲು ಹೊರಟಿದ್ದಾರೆ. ಅದೆಲ್ಲ ತನಿಖೆ ಆಗಲಿ. ನಮ್ಮ ಕಾರ್ಯಕರ್ತರು ಕೈಗೆ ಸಿಗದಂತೆ ತಪ್ಪಿಸಿಕೊಂಡಿದ್ದಾರೆ ಎಂದು ಮೀಡಿಯಾದಲ್ಲಿ ವರದಿಯಾಗಿದೆ. ಯಾರೂ ತಪ್ಪಿಸಿಕೊಳ್ಳುವ ಪ್ರಶ್ನೆ ಇಲ್ಲ. ಬಂದು ನಿಮ್ಮನ್ನು ಭೇಟಿ ಮಾಡುತ್ತಾರೆ. ತನಿಖೆಯನ್ನು ಹಳ್ಳ ಹಿಡಿಸಲು ಪ್ರಯತ್ನ ಮಾಡ್ತಿದ್ದಾರೆ. ನಮ್ಮ ವಾರ್ ರೂಂನಲ್ಲಿ ಕೆಲಸ ಮಾಡುವ ಹುಡುಗರಿಗೆ ಹೇಳಿದ್ದೇನೆ. ಯಾರು ಕೂಡ ಹೆದರುವ ಅಗತ್ಯ ಇಲ್ಲ ಎಂದರು ಕೇಂದ್ರ ಸಚಿವರು.

ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಇದ್ದರು.

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

ದಸರಾದಲ್ಲಿ ದಲಿತ ಮಂತ್ರಿಗಳಿಗೆ ಅವಮಾನ; ಪ್ರಿಯಾಂಕ್ ಖರ್ಗೆ ನೈತಿಕ ಹೊಣೆ ಹೊರಬೇಕು ಎಂದ JDS

ದಸರಾದಲ್ಲಿ ದಲಿತ ಮಂತ್ರಿಗಳಿಗೆ ಅವಮಾನ; ಪ್ರಿಯಾಂಕ್ ಖರ್ಗೆ ನೈತಿಕ ಹೊಣೆ ಹೊರಬೇಕು ಎಂದ JDS

by cknewsnow desk
October 22, 2026
0

ಜೂನಿಯರ್ ಖರ್ಗೆ ರಾಜೀನಾಮೆಗೆ ಜೆಡಿಎಸ್ ದಲಿತ ನಾಯಕರ ಅಗ್ರಹ; ಶಿಷ್ಟಾಚಾರ ಲೋಪಕ್ಕೆ ಗೃಹ ಇಲಾಖೆ ಕಾರಣ

ಅಭ್ಯರ್ಥಿಗಳಿಗೆ ಬರ; ಬಿಜೆಪಿ ಅತೃಪ್ತರಿಗೆ ಕಾಂಗ್ರೆಸ್ ಟಿಕೆಟ್ ಭಾಗ್ಯ!

ಡಿಕೆಶಿ ಸರಕಾರ ಪತನ ಸನ್ನಿಹಿತ

by cknewsnow desk
October 19, 2026
0

ಕಾಂಗ್ರೆಸ್ ಸರಕಾರ ಅಂತ್ಯದ ಹತ್ತಿರದಲ್ಲಿದೆ, ಸ್ಟಿಂಗ್'ಗೆ ಸರಕಾರ ಬಲಿಯಾಗಲಿದೆ ಎಂದ HDK

Leave a Reply Cancel reply

Your email address will not be published. Required fields are marked *

Recommended

ರಾಜಕೀಯಕ್ಕೆ ನಟಿ ತ್ರಿಷಾ

ರಾಜಕೀಯಕ್ಕೆ ನಟಿ ತ್ರಿಷಾ

4 years ago
ಅಪಘಾತದಲ್ಲಿ ಗಾಯಗೊಂಡಿದ್ದ ತೆಲುಗು ನಟ, ಸಿನಿಮಾ ವಿಮರ್ಶಕ ಕತ್ತಿ ಮಹೇಶ್ ಇನ್ನಿಲ್ಲ

ಅಪಘಾತದಲ್ಲಿ ಗಾಯಗೊಂಡಿದ್ದ ತೆಲುಗು ನಟ, ಸಿನಿಮಾ ವಿಮರ್ಶಕ ಕತ್ತಿ ಮಹೇಶ್ ಇನ್ನಿಲ್ಲ

5 years ago

Popular News

  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0
  • ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026
ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

October 22, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ