• About
  • Advertise
  • Careers
  • Contact
Monday, October 26, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

cknewsnow desk by cknewsnow desk
October 25, 2026
in NATION, POLITICS, STATE
Reading Time: 1 min read
0
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ
916
VIEWS
FacebookTwitterWhatsuplinkedinEmail
ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ
ನಾನೇ ಸ್ಟಿಂಗ್ ಮಾಡಿದ್ದು ಎಂದು ಆರೋಪಿ ಹೇಳಿದ ಮೇಲೆಯೂ ನಮ್ಮ ಸೋಶಿಯಲ್ ಮೀಡಿಯಾ ಹುಡುಗರನ್ನು ಹೆದರಿಸುತ್ತಿದ್ದಾರೆ
ಪವರ್ ಟಿವಿ ಉದ್ಯೋಗಿ ಸಾವಿನ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದೇನೆ

ಹಾಸನ: ಸಿದ್ದರಾಮಯ್ಯ ಅವರ ವಿರುದ್ಧ ಸ್ಟಿಂಗ್ ಮಾಡಿದ್ದ ಆರೋಪಿ ನಾನೇ ಸ್ಟಿಂಗ್ ಮಾಡಿದ್ದು ಎಂದು ಸತ್ಯ ಒಪ್ಪಿಕೊಂಡ ಮೇಲೆಯೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಬ್ಬರು ಇಡೀ ಪ್ರಕರಣವನ್ನು ನನ್ನ ಕಡೆಗೆ ತಿರುಗಿಸಿ ನನ್ನ ಬಗ್ಗೆ ಅನುಮಾನ ಹುಟ್ಟುವಂತೆ ಮಾಡಲು ವ್ಯವಸ್ಥಿತ ಷಡ್ಯಂತ್ರ ರೂಪಿಸಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು.

ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಬೆಟ್ಟದಲ್ಲಿ ಶನಿವಾರ ಬೆಳಗ್ಗೆ ಶ್ರೀ ರಂಗನಾಥಸ್ವಾಮಿ ದೇವರ ದರ್ಶನ ಪಡೆದ ನಂತರ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು.

ಪತ್ರಕರ್ತ ರಾಕೇಶ್ ಶೆಟ್ಟಿ, ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾ, ಅವರ ಸಹಚರರು ಸ್ಟಿಂಗ್ ನಡೆಸಿದ್ದಾರೆ ಎಂಬುದು ಎಲ್ಲರೂ ಬಲ್ಲ ಸಂಗತಿ. ಅಲ್ಲದೆ, ಇವರಿಬ್ಬರ ಹೆಸರನ್ನು ಸ್ವತಃ ಸಿದ್ದರಾಮಯ್ಯ ಅವರು, ಅವರ ಪುತ್ರ ಯತೀಂದ್ರ ಸಹ ಹೇಳಿದ್ದಾರೆ. ಹೀಗಿದ್ದರೂ ಮುಖ್ಯಮಂತ್ರಿ, ಗೃಹ ಮಂತ್ರಿ ಇಬ್ಬರೂ ಸೇರಿ ಇಡೀ ವಿಷಯವನ್ನು ನಮ್ಮತ್ತ ತಿರುಗಿಸಲು ಪ್ರಯತ್ನ ಮಾಡುತ್ತಿದ್ದಾರೆ. ಅದಕ್ಕೆ ನಾವು ಹೆದರುವುದಿಲ್ಲ, ಎದುರಿಸುವ ಶಕ್ತಿ ನಮ್ಮ ಪಕ್ಷಕ್ಕಿದೆ ಎಂದು ಸಚಿವರು ಗುಡುಗಿದರು.

ರಾಜ್ಯದಲ್ಲಿ ಸ್ಟಿಂಗ್ ವಿಷಯವನ್ನು ಮೊದಲು ಪ್ರಸ್ತಾಪ ಮಾಡಿದವರೇ ಹಾಲಿ ಮುಖ್ಯಮಂತ್ರಿ. ಅದಾದ ಮೇಲೆ ಮಾಜಿ ಸಿಎಂ ವಿರುಧ್ದ ಸ್ಟಿಂಗ್ ನಡೆದಿದೆ ಎನ್ನುವ ಮಾಹಿತಿ ಹೊರಗೆ ಬಂತು. ಅಂದಿನಿಂದಲೇ ಈ ಗೃಹ ಸಚಿವ, ಮುಖ್ಯಮಂತ್ರಿ ಇಬ್ಬರೂ ಸೇರಿ ಜೆಡಿಎಸ್ ತಲೆಗೆ ಕಟ್ಟಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಆರೋಪಿಸಿದರು.

ಮೊದಲ ದಿನದಿಂದಲೇ ಗೃಹ ಸಚಿವರು ನಮ್ಮ ಪಕ್ಷದ ವಾರ್ ರೂಂನಲ್ಲಿ, ಸೋಶಿಯಲ್ ಮೀಡಿಯಾ ವಿಭಾಗದಲ್ಲಿ ಕೆಲಸ ಮಾಡುವ ಯುವಕರ ಕುಟುಂಬಗಳನ್ನು ಟಾರ್ಗೆಟ್ ಮಾಡಿ ಸರ್ಚ್ ವಾರೆಂಟ್ ಕೊಡಿಸಿದ್ದಾರೆ. ಅವರೆಲ್ಲರೂ ಅಪರಾಧ ಎಸಗಿದ್ದಾರೆ ಎನ್ನುವ ರೀತಿಯಲ್ಲಿ ಆಪಾದನೆ ಮಾಡುತ್ತಿದ್ದಾರೆ. ಸರಕಾರ ಹೇಳಿದಂತೆ ಕೆಲಸ ಮಾಡುವ ಪೊಲೀಸರನ್ನು ಬಿಟ್ಟು ಈ ಕೆಲಸ ಮಾಡಿಸುತ್ತಿದ್ದಾರೆ. ಸ್ಟಿಂಗ್ ಮಾಡಿ ಚಿತ್ರೀಕರಣ ಮಾಡಿದ ಆರೋಪಿಗಳನ್ನು ಬಿಟ್ಟು ನಮ್ಮ ಕಾರ್ಯಕರ್ತರ ಸುತ್ತ ಸುತ್ತುತ್ತಿದ್ದಾರೆ. ಇದು ಕುಮಾರಸ್ವಾಮಿ ಬಗ್ಗೆ ಅನುಮಾನ ಬರುವ ರೀತಿಯಲ್ಲಿ ನಡೆಯುತ್ತಿರುವ ತನಿಖೆ ಎಂದು ಕೇಂದ್ರ ಸಚಿವರು ನೇರ ಆರೋಪ ಮಾಡಿದರು.

ಯಾವ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತರ ಜೊತೆಗೂಡಿ 2023ರಲ್ಲಿ ಸ್ಟಿಂಗ್ ಆಪರೇಷನ್‌ ಏತಕ್ಕೆ ಮಾಡಿದ? ಆತನನ್ನು ರಕ್ಷಿಸಲು ಸರ್ಕಾರವೇ ಸಂಪೂರ್ಣ ಸಹಕಾರ ಕೊಡುತ್ತಿದೆ. ಆತನ ನಿರೀಕ್ಷಣಾ ಜಾಮೀನು ಅರ್ಜಿಗೆ ಸರ್ಕಾರದ ಕಡೆಯಿಂದ ಆಕ್ಷೇಪಣೆಯನ್ನು ಸಲ್ಲಿಸುವುದಿಲ್ಲ ಎಂದರೆ ಈ ಸರಕಾರ ಹೇಗೆ ತನಿಖೆ ನಡೆಸುತ್ತಿದೆ ಎಂಬುದು ಅರ್ಥವಾಗುತ್ತದೆ. ಶೋಧ ಮಾಡುವ ನೆಪದಲ್ಲಿ ನಮ್ಮ ವಾರ್ ರೂಂ ಹುಡುಗರ ಕುಟುಂಬದ ಹೆಣ್ಣುಮಕ್ಕಳಿಗೆ ಬೆದರಿಕೆ ಹಾಕಿ ಕಿರುಕುಳ ನೀಡುತ್ತಿದ್ದಾರೆ. ಭಯದ ವಾತಾವರಣ ಸೃಷ್ಟಿ ಮಾಡಲು ಹೊರಟಿದ್ದಾರೆ. ಸಿದ್ದರಾಮಯ್ಯ ಮತ್ತು ಅವರ ಪುತ್ರ ಹೇಳಿದ ಹೆಸರುಗಳ ವ್ಯಕ್ತಿಗಳನ್ನು ಇವರು ರಕ್ಷಣೆ ಮಾಡುತ್ತಿದ್ದಾರೆ. ರಾಕೇಶ್ ಶೆಟ್ಟಿ, ಕೃಪಾ ಆಳ್ವಾ ಯಾಕೆ ಸ್ಟಿಂಗ್ ಮಾಡಿದರು? ಯಾರನ್ನು ಅಧಿಕಾರದಿಂದ ಕೆಳಕ್ಕೆ ಇಳಿಸಲು ಕುತಂತ್ರ ರೂಪಿಸಿದ್ದರು ಎಂಬುದರ ಬಗ್ಗೆ ಗೃಹ ಸಚಿವರು ಹೇಳಬೇಕು ಎಂದು ಕೇಂದ್ರ ಸಚಿವರು ಒತ್ತಾಯಿಸಿದರು.

ಸಿದ್ದರಾಮಯ್ಯ ಅವರನ್ನು ಹೇಗಾದರೂ ಅಧಿಕಾರದಿಂದ ಕೆಳಕ್ಕೆ ಇಳಿಸಬೇಕು ಎಂಬ ದುರುದ್ದೇಶದಿಂದ ಸ್ಟಿಂಗ್ ಅನ್ನು ಗುರಾಣಿಯಾಗಿ ಬಳಸಿಕೊಂಡರು. ಈ ವಿಷಯ ಹಾಲಿ ಮುಖ್ಯಮಂತ್ರಿಗೆ ಸಂಪೂರ್ಣವಾಗಿ ಗೊತ್ತಿದೆ. ಕಾಂಗ್ರೆಸ್ ಪಕ್ಷದ ಹಲವಾರು ನಾಯಕರಿಗೆ ವಿಷಯ ಗೊತ್ತಿದೆ. ಅದನ್ನೆಲ್ಲಾ ಮುಚ್ಚಿಟ್ಟು ನಮ್ಮನ್ನು ಬ್ಲಾಕ್‌ಮೇಲ್ ಮಾಡಲು ಹೊರಟಿದ್ದಾರೆ. ಮೊದಲಿನಿಂದಲೂ ತನಿಖೆ ದಾರಿ ತಪ್ಪಿಸುತ್ತಿದ್ದಾರೆ ಎಂದು ಸಚಿವರು ಆಪಾದಿಸಿದರು.

ನಮ್ಮ ಹುಡುಗರ ಮೊಬೈಲ್, ಲ್ಯಾಪ್‌ಟಾಪ್ ವಶಪಡಿಸಿಕೊಳ್ಳುತ್ತಿದ್ದಾರೆ. ನಮ್ಮ ಪಕ್ಷದದಿಂದಲೇ ಸ್ಟಿಂಗ್ ಆಪರೇಷನ್ ಮಾಡಿದ್ದಾರೆ ಎನ್ನುವ ರೀತಿ ದಾಖಲೆಗಳನ್ನು ಸೃಷ್ಟಿಸಲು ಹುನ್ನಾರ ಮಾಡುತ್ತಿದ್ದಾರೆ. ಈ ಸಂಚನ್ನು ಎದುರಿಸುವ ಶಕ್ತಿ ನನಗಿದೆ. ಅಷ್ಟು ಸುಲಭವಾಗಿ ಬಿಡಲ್ಲ, ಉಗ್ರ ಹೋರಾಟ ಮಾಡುತ್ತೇವೆ. ಅವರು ಮುಚ್ಚಿ ಹಾಕಲು ಪ್ರಯತ್ನ ಮಾಡಿದಷ್ಟು ನಾವು ಹೋರಾಟ ತೀವ್ರಗೊಳಿಸುತ್ತೇವೆ ಎಂದು ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದರು.

ಪವರ್ ಟಿವಿ ಉದ್ಯೋಗಿ ಸಾವಿನ ಬಗ್ಗೆ ಮಾಹಿತಿ

ಪವರ್ ಟಿವಿಯಲ್ಲಿ ಕೆಲಸ ಮಾಡುತ್ತಿದ್ದ ವಿಕ್ಕಿ ಎಂಬ ಉದ್ಯೋಗಿಯ ಅನುಮಾನಾಸ್ಪದ ಸಾವಿನ ಬಗ್ಗೆ ಪ್ರಸ್ತಾಪಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು; ನಡೆದಿರುವ ಘಟನೆ ಅದು. ಅದನ್ನು ಯಾಕೆ ಮುಚ್ಚಿ ಹಾಕಿದರು? ಯುಡಿಆರ್ ಏಕೆ ಮಾಡಿದರು? ತನಿಖೆ ಏಕೆ ಮಾಡಲಿಲ್ಲ? ಮರಣೋತ್ತರ ಪರೀಕ್ಷೆ ಯಾಕೆ ಮಾಡಲಿಲ್ಲ? ಅಸಹಜ ಸಾವಾಗಿದ್ದರೆ ಏಕೆ ಮರಣೋತ್ತರ ಪರೀಕ್ಷೆ ಮಾಡಲಿಲ್ಲ? ಎಂದು ಪ್ರಶ್ನಿಸಿದರು.

ಆ ಕುಟುಂಬಕ್ಕೆ ₹10 ಲಕ್ಷ ಪರಿಹಾರ ಕೊಡುತ್ತೇನೆ ಎಂದು ಹೇಳಿದ್ದ ವ್ಯಕ್ತಿ ₹2 ಲಕ್ಷ ಕೊಟ್ಟಿದ್ದಾನೆ ಎಂಬ ಚರ್ಚೆ ಮಾಹಿತಿ ಇದೆ ನನಗೆ. ಈ ಘಟನೆಯಿಂದ ಅವರು ಎಕ್ಸ್‌ಪೋಸ್ ಆಗುತ್ತಿದ್ದಾರೆ. ಎಲ್ಲದಕ್ಕೂ ಸಾಕ್ಷಿ, ಸಾಕ್ಷಿ ಅಂಥ ನಮ್ಮನ್ನು ಕೇಳುವುದಾದರೆ ಪೊಲೀಸ್ ಇಲಾಖೆ ಏಕೆ ಬೇಕು? ಸುಳ್ಳುಸಾಕ್ಷಿಗಳನ್ನು ಸೃಷ್ಟಿ ಮಾಡಲು ಪೊಲೀಸ್ ಇಲಾಖೆ ಬೇಕಾ? ನಾನೇ ಸ್ಟಿಂಗ್ ಮಾಡಿದೆ ಎಂದು ಅವನು ಟೀವಿಯಲ್ಲಿ ಕೂತು ಹೇಳಿದ ಮೇಲೆಯೂ ಸ್ಟಿಂಗ್ ಬಗ್ಗೆ ಸಾಕ್ಷಿ ಕೊಡಿ ಕೇಳುತ್ತಿದ್ದಾರೆ. ಇದೇನಾ ತನಿಖೆ ಮಾಡುವ ವಿಧಾನ? ಸ್ಟಿಂಗ್ ಆಪರೇಷನ್ ಬಗ್ಗೆ ಗೃಹ ಸಚಿವರು ಬೋಲ್ಡ್ ಸ್ಟೆಪ್ ಎಲ್ಲಿ ತೆಗೆದುಕೊಂಡಿದ್ದಾರೆ? ಮುಚ್ಚಿ ಹಾಕುವ ಸ್ಟೆಪ್ ತೆಗೆದುಕೊಂಡಿದ್ದಾರೆ! ಮೊದಲ ದಿನದಿಂದಲೂ ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ವಿರುಧ್ಧ ವಾಗ್ದಾಳಿ ನಡೆಸಿದರು.

ಯಾವ ಬಂಟನೂ ಓಡಿ ಹೋಗಿಲ್ಲ

ಕುಮಾರಸ್ವಾಮಿ ಅವರ ಬಲಗೈ ಬಂಟ, ಎಡಗೈ ಬಂಟ ಓಡಿ ಹೋಗಿದ್ದಾರೆ ಎಂದು ಗೃಹ ಸಚಿವ ಖರ್ಗೆ ಹೇಳಿದ್ದಾರೆ ಎನ್ನುವ ಪ್ರಶ್ನೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವರು; ಯಾರು ಓಡಿ ಹೋಗಿದ್ದಾರೆ? ಯಾರು ಓಡಿ ಹೋಗಲು ಸಾಧ್ಯ? ಅವರ ಮೇಲೆ ಏನಿದೆ ಓಡಿ ಹೋಗಲು? ಪ್ರೀಯಾಂಕ್ ಖರ್ಗೆ ಇದನ್ನೆಲ್ಲಾ ಏಕೆ ಸೃಷ್ಟಿ ಮಾಡುತ್ತಿದ್ದಾರೆ ಎಂದು ಗೊತ್ತಿದೆ. ಕೆಪಿಎಸ್‌ಸಿ ಹಗರಣ ಮುಚ್ಚಿ ಹಾಕಿಕೊಳ್ಳಲು ಸ್ಟಿಂಗ್ ವಿಷಯವನ್ನು ಜೆಡಿಎಸ್ ಕಡೆಗೆ ತಿರುಗಿಸಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಚಿವರು ದೂರಿದರು.

ಕೆಪಿಎಸ್ಸಿ ಹಗರಣವನ್ನು 90% ಮುಚ್ಚಿ ಹಾಕಿದ್ದಾರೆ

ಸ್ಟಿಂಗ್ ಬಗ್ಗೆ 80% ಸ್ಟಿಂಗ್ ತನಿಖೆ ಮುಗಿದು ಹೋಗಿದೆ ಎಂಬ ಸಚಿವ ಪ್ರೀಯಾಂಕ್ ಖರ್ಗೆ ಹೇಳಿಕೆ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ ಸಚಿವರು; ಪಾಪ.. ಅವರು 80% ಸ್ಟಿಂಗ್ ತನಿಖೆ ಮುಗಿಸಿದ್ದಾರೆ. ಕೆಪಿಎಸ್‌ಸಿ ಹಗರಣವನ್ನು 90% ಮುಚ್ಚಿ ಹಾಕಿದ್ದಾರೆ. ಸ್ಟಿಂಗ್ ಬಗ್ಗೆ ಇನ್ನು 20% ತನಿಖೆ ಇನ್ನೇನು ಮಾಡ್ತಾರೆ ನೋಡೋಣ. ಇವರು ಮಾಡಿರುವಂತಹ ಅಪರಾಧಗಳು, ಮಾಡಿರುವ ಅಕ್ರಮಗಳನ್ನು ಮುಚ್ಚಿಕೊಳ್ಳಲು ತನಿಖೆ ಮಾಡುತ್ತಿದ್ದಾರೆ. ಇವರಿಗೆ ಬೇಕಾದಂತಹ ಅಧಿಕಾರಿಗಳನ್ನು ಯಾವ್ಯಾವ ರೀತಿಯಲ್ಲಿ ವ್ಯವಸ್ಥಿತವಾಗಿ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ನಾನು ಗಮನಿಸುತ್ತಿದ್ದೇನೆ. ಸಿದ್ದರಾಮಯ್ಯ ಅವರು ತನಿಖೆ ಆಗಬೇಕು ಎಂದಿದ್ದಾರೆ. ಸ್ಟಿಂಗ್ ಮೂಲಪುರುಷ ಅರೆಸ್ಟ್ ಮಾಡಿದಂತೆ ತೋರಿಸಿಕೊಂಡು ಸರ್ಕಾರದಿಂದ ತಕರಾರು ಮಾಡದೆ ಬೇಲ್ ಕೊಡಿಸಿದ್ದಾರೆ. ನಿರೀಕ್ಷಣಾ ಬೇಲ್‌ ಕೊಡಿಸಿದ್ದಾರೆ. ಇವರ ನಾಟಕ ಗೊತ್ತಾಗುತ್ತಿದೆ. ಆ ವ್ಯಕ್ತಿಗೆ ಇವರೇ ನಿರೀಕ್ಷಣಾ ಜಾಮೀನು ತೆಗೆದುಕೊಳ್ಳಲು ಯಾರಿಗೆ ಸಹಕಾರ ಕೊಟ್ಟಿದ್ದಾರೆ ಎಂದು ಸಚಿವರು ಹೇಳಿದರು.

ಎಲ್ಲವನ್ನೂ ಕಾಲವೇ ನಿರ್ಣಯ ಮಾಡುತ್ತದೆ, ಕಾಯಿರಿ

ಎಲ್ಲವನ್ನು ಕಾಲ ನಿರ್ಣಯ ಮಾಡುತ್ತದೆ ಎಂದು ಸಿಎಂ ಹೇಳಿದ್ದಾರೆ. ಯಾವ ರೀತಿ ಕಾಲ ನಿರ್ಣಯ ಮಾಡಿಸಬೇಕು ಅಂತಲೇ, ಪಾಪ ಅವರು ಮೌನಕ್ಕೆ ಶರಣಾಗಿದ್ದಾರೆ. ಕಾಲವೇ ನಿರ್ಣಯ ಮಾಡುತ್ತದೆ, ಇವರು ಕಾಯಬೇಕು. ಪಾಪ.. ಅವರು ಇದರಲ್ಲಿ ಬಹಳ ಎಕ್ಸ್‌ಪರ್ಟ್ ಇದ್ದಾರೆ. ಚೆಸ್‌ ಪಾನ್ ಹೇಗೆ ಇಡಬೇಕೆಂದು ತನಿಖೆ ನಡೆಸುತ್ತಿದ್ದಾರೆ. ಈ ತನಿಖೆಯನ್ನು ಸಹ ಯಾವ ರೀತಿಯಲ್ಲೂ ತಾರ್ತಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುವುದಿಲ್ಲ. ಇದನ್ನು ಯಾವ ರೀತಿ ಮುಚ್ಚಿ ಹಾಕಬೇಕೆಂದು ಸುಮ್ಮನೆ ತನಿಖೆ ಮಾಡಿ ಅದನ್ನು ಇನ್ನೊಬ್ಬರ ತನಿಖೆಗೆ ಕಟ್ಟಿ ಕ್ಲೋಸ್ ಮಾಡಲು ಈಗಾಗಲೇ ಮುಖ್ಯಮಂತ್ರಿಗಳು, ಗೃಹ ಸಚಿವರು ಸೇರಿ ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ರೂಪಿಸುತ್ತಿದ್ದಾರೆ. ಮುಂದೆ ಈ ರೀತಿ ಮಾಡದೆ ಇರಲು ಭಯ, ಭಕ್ತಿ ನಿರ್ಮಾಣ ಮಾಡಲು ಇವರಿಂದ ಸಾಧ್ಯವಿಲ್ಲ ಎಂದರು ಅವರು.

Tags: ckDK Shivakumarhd kumaraswamyindiakarnatakaKarnataka sting operationnewsPriyank Khargesting against former cm
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

ದಸರಾದಲ್ಲಿ ದಲಿತ ಮಂತ್ರಿಗಳಿಗೆ ಅವಮಾನ; ಪ್ರಿಯಾಂಕ್ ಖರ್ಗೆ ನೈತಿಕ ಹೊಣೆ ಹೊರಬೇಕು ಎಂದ JDS

ದಸರಾದಲ್ಲಿ ದಲಿತ ಮಂತ್ರಿಗಳಿಗೆ ಅವಮಾನ; ಪ್ರಿಯಾಂಕ್ ಖರ್ಗೆ ನೈತಿಕ ಹೊಣೆ ಹೊರಬೇಕು ಎಂದ JDS

by cknewsnow desk
October 22, 2026
0

ಜೂನಿಯರ್ ಖರ್ಗೆ ರಾಜೀನಾಮೆಗೆ ಜೆಡಿಎಸ್ ದಲಿತ ನಾಯಕರ ಅಗ್ರಹ; ಶಿಷ್ಟಾಚಾರ ಲೋಪಕ್ಕೆ ಗೃಹ ಇಲಾಖೆ ಕಾರಣ

ಅಭ್ಯರ್ಥಿಗಳಿಗೆ ಬರ; ಬಿಜೆಪಿ ಅತೃಪ್ತರಿಗೆ ಕಾಂಗ್ರೆಸ್ ಟಿಕೆಟ್ ಭಾಗ್ಯ!

ಡಿಕೆಶಿ ಸರಕಾರ ಪತನ ಸನ್ನಿಹಿತ

by cknewsnow desk
October 19, 2026
0

ಕಾಂಗ್ರೆಸ್ ಸರಕಾರ ಅಂತ್ಯದ ಹತ್ತಿರದಲ್ಲಿದೆ, ಸ್ಟಿಂಗ್'ಗೆ ಸರಕಾರ ಬಲಿಯಾಗಲಿದೆ ಎಂದ HDK

Next Post
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

Leave a Reply Cancel reply

Your email address will not be published. Required fields are marked *

Recommended

#CashForJob : ನೇಮಕಾತಿ ಗೋಲ್‌ಮಾಲ್;‌ ಕಾಸಿಗೆ ಹುದ್ದೆ ಮಾರಿಕೊಂಡ ಕೋಚಿಮುಲ್‌!!

#CashForJob : ನೇಮಕಾತಿ ಗೋಲ್‌ಮಾಲ್;‌ ಕಾಸಿಗೆ ಹುದ್ದೆ ಮಾರಿಕೊಂಡ ಕೋಚಿಮುಲ್‌!!

3 years ago
ಪ್ರಧಾನಿಗೆ ಬರೆದ ಪತ್ರದಲ್ಲಿ ರಾಜ್ಯ ಜಲ ಸಂಕಷ್ಟವನ್ನು ಎಳೆಎಳೆಯಾಗಿ ಬಿಡಿಸಿಟ್ಟ ಗೌಡರು

ಪ್ರಧಾನಿಗೆ ಬರೆದ ಪತ್ರದಲ್ಲಿ ರಾಜ್ಯ ಜಲ ಸಂಕಷ್ಟವನ್ನು ಎಳೆಎಳೆಯಾಗಿ ಬಿಡಿಸಿಟ್ಟ ಗೌಡರು

3 years ago

Popular News

  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0
  • ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026
ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

October 22, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ