• About
  • Advertise
  • Careers
  • Contact
Friday, November 6, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಬರದ ನಷ್ಟ ₹62,000 ಕೋಟಿ; ಕೇಂದ್ರಕ್ಕೆ ಕೇಳಿದ ಮೊತ್ತ ₹22,000 ಕೋಟಿ!

cknewsnow desk by cknewsnow desk
November 6, 2026
in NATION, NEWS & VIEWS, POLITICS, STATE
Reading Time: 1 min read
0
ಆಪರೇಷನ್‌ ಕಮಲಕ್ಕೆ ಸಿಕ್ಕಿ ಬೇಲಿ ಹಾರಿದ್ದವರಿಗೆ ಶಾಕ್!‌
915
VIEWS
FacebookTwitterWhatsuplinkedinEmail

ಈವರೆಗೆ ಕ್ಷೇತ್ರಕ್ಕೆ ಮೂರು ಪತ್ರಗಳನ್ನು ಬರೆದಿರುವ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಬರದಿಂದ ಉಂಟಾಗಿರುವ ಬೆಳೆ ನಷ್ಟಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಈಗಾಗಲೇ 3 ಮನವಿಗಳನ್ನು ಸಲ್ಲಿಸಲಾಗಿದ್ದು, ಎನ್‌ಡಿಆರ್‌ಎಫ್ ಮಾರ್ಗಸೂಚಿಗಳ ಅನ್ವಯ ₹22,000 ಕೋಟಿ ಪರಿಹಾರ ನೀಡುವಂತೆ ಸರಕಾರ ಮನವಿ ಮಾಡಿದೆ.

ಈ ಸಂಬಂಧ ಪ್ರಧಾನಮಂತ್ರಿ, ಕೇಂದ್ರ ಗೃಹ ಸಚಿವರು ಹಾಗೂ ಕೃಷಿ ಸಚಿವರನ್ನು ಖುದ್ದಾಗಿ ಭೇಟಿಯಾಗಿ ರಾಜ್ಯದ ಪರಿಸ್ಥಿತಿಯನ್ನು ವಿವರಿಸಲು ಸಮಯಾವಕಾಶ ಕೋರಿ ಪತ್ರ ಬರೆಯಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ.

ಅವರು ಹೇಳಿದ್ದು ಇಷ್ಟು;

ರಾಜ್ಯದಲ್ಲಿ ಬರದಿಂದ ಉಂಟಾಗಿರುವ ಒಟ್ಟು ನಷ್ಟವನ್ನು ಅಂದಾಜಿಸಿದಾಗ ಸುಮಾರು ₹62,000 ಕೋಟಿಯಷ್ಟಾಗಿದೆ. ಆದರೆ ಸಂಪೂರ್ಣ ಮೊತ್ತವನ್ನು ಕೇಂದ್ರದಿಂದ ಕೇಳಲು ಸಾಧ್ಯವಿಲ್ಲ. ಎನ್‌ಡಿಆರ್‌ಎಫ್ ಮಾರ್ಗಸೂಚಿಗಳ ಆಧಾರದ ಮೇಲೆ ಲೆಕ್ಕಾಚಾರ ಮಾಡಿ ₹22,000 ಕೋಟಿ ಪರಿಹಾರಕ್ಕೆ ಮನವಿ ಸಲ್ಲಿಸಲಾಗಿದೆ.

ಕೇಂದ್ರಕ್ಕೆ ಅಧಿಕೃತವಾಗಿ ಮೆಮೊರಾಂಡಮ್‌ಗಳನ್ನು ಈಗಾಗಲೇ ಕಳುಹಿಸಲಾಗಿದೆ. ಇದೀಗ ಪ್ರಧಾನಮಂತ್ರಿ, ಗೃಹ ಸಚಿವರು ಮತ್ತು ಕೃಷಿ ಸಚಿವರನ್ನು ಖುದ್ದಾಗಿ ಭೇಟಿ ಮಾಡಿ ಮನವಿ ಸಲ್ಲಿಸುವ ಉದ್ದೇಶವಿದೆ. ಸಮಯಾವಕಾಶ ದೊರೆತರೆ ಸರ್ವಪಕ್ಷ ನಿಯೋಗದೊಂದಿಗೆ ತೆರಳಲಾಗುವುದು. ಒಂದು ವೇಳೆ ಸಮಯ ನೀಡದಿದ್ದರೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಾವೇ ತೆರಳಿ ಮನವಿ ಸಲ್ಲಿಸಲು ನಿರ್ಧರಿಸಿದ್ದೇವೆ.

ರೈತರಿಗೆ ₹5,000 ಬರ ಪರಿಹಾರ

ರಾಜ್ಯ ಸರ್ಕಾರ ಈಗಾಗಲೇ ಮೊದಲ ಹಂತದಲ್ಲಿ ರೈತರಿಗೆ ತಲಾ ₹2,500 ಪರಿಹಾರ ನೀಡಲು ನಿರ್ಧರಿಸಿದ್ದು, ಇದಕ್ಕಾಗಿ ₹1,250 ಕೋಟಿ ಬಿಡುಗಡೆ ಮಾಡಲಾಗಿದೆ. ಈ ಮೊತ್ತವನ್ನು ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ರೈತರ ಖಾತೆಗಳಿಗೆ ಜಮೆ ಮಾಡಲಾಗುತ್ತಿದೆ.

ಈಗಾಗಲೇ ಯಾದಗಿರಿ ಜಿಲ್ಲೆಯಲ್ಲಿ ಮೂರು ಲಕ್ಷಕ್ಕೂ ಹೆಚ್ಚು ರೈತರಿಗೆ ಪರಿಹಾರ ತಲುಪಿರುವ ಮಾಹಿತಿ ಬಂದಿದೆ. ಸರ್ಕಾರ ನಿಗದಿಪಡಿಸಿರುವ ಅರ್ಹತಾ ಮಾನದಂಡಗಳು ಹಾಗೂ ಮಾರ್ಗಸೂಚಿಗಳ ಆಧಾರದ ಮೇಲೆ ಅರ್ಹ ರೈತರಿಗೆ ಪರಿಹಾರ ದೊರೆಯಲಿದೆ.

ವಿರೋಧ ಪಕ್ಷಗಳು ₹2,500 ಪರಿಹಾರ ಸಾಕಾಗುವುದಿಲ್ಲ ಎಂದು ಟೀಕಿಸಿದ್ದವು. ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ನೀಡಬೇಕಾದ ಪರಿಹಾರದ ಮೊತ್ತವನ್ನು ಹೆಚ್ಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ರೈತರಿಗೆ ಮತ್ತಷ್ಟು ನೆರವು ನೀಡುವ ಉದ್ದೇಶದಿಂದ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿತ್ತು. ಅದರಂತೆ ಹೆಚ್ಚುವರಿಯಾಗಿ ₹2,500 ನೀಡಲು ಮುಖ್ಯಮಂತ್ರಿಗಳು ಸಮ್ಮತಿಸಿದ್ದು, ಮುಂದಿನ ಒಂದು ವಾರದಿಂದ 15 ದಿನಗಳೊಳಗೆ ಈ ಮೊತ್ತವನ್ನೂ ಬಿಡುಗಡೆ ಮಾಡಲಾಗುವುದು.ಇದಕ್ಕಾಗಿ ಹೆಚ್ಚುವರಿಯಾಗಿ ₹1,250 ಕೋಟಿ ವೆಚ್ಚವಾಗಲಿದೆ. ಹೀಗಾಗಿ ರೈತರಿಗೆ ಒಟ್ಟು ತಲಾ ₹5,000 ಪರಿಹಾರ ನೀಡಲಾಗುವುದು.

ಬರ ಪರಿಸ್ಥಿತಿಯನ್ನು ಎದುರಿಸಲು ಪರಿಹಾರ ವಿತರಣೆಯಷ್ಟೇ ಅಲ್ಲದೆ ಕುಡಿಯುವ ನೀರಿಗೆ, ಕಾಮಗಾರಿಗಳಿಗೂ ಸರ್ಕಾರ ಆದ್ಯತೆ ನೀಡಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ ₹1 ಕೋಟಿ ಹಾಗೂ ಜಿಲ್ಲೆಗಳಿಗೆ ₹4ರಿಂದ ₹5 ಕೋಟಿ ಅನುದಾನವನ್ನು ಕುಡಿಯುವ ನೀರಿನ ವ್ಯವಸ್ಥೆಗಾಗಿ ಒದಗಿಸಲಾಗಿದೆ.

ಕೇಂದ್ರದಿಂದ ಹೆಚ್ಚಿನ ಅನುದಾನ ದೊರೆತರೆ ರೈತರಿಗೆ ಮತ್ತಷ್ಟು ನೆರವು ನೀಡುವುದರ ಜೊತೆಗೆ ಕುಡಿಯುವ ನೀರು ಸೇರಿದಂತೆ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳಲು ಸಾಧ್ಯವಾಗಲಿದೆ. ಮುಖ್ಯಮಂತ್ರಿಗಳೂ ಪ್ರಧಾನಮಂತ್ರಿ ಕಚೇರಿ ಹಾಗೂ ಕೇಂದ್ರ ಗೃಹ ಸಚಿವರನ್ನು ಸಂಪರ್ಕಿಸಿ ಭೇಟಿಗೆ ಸಮಯಾವಕಾಶ ಕೋರಲಾಗುವುದು.

ಆದಾಯದ ಸ್ಥಿತಿಗತಿಗಳನ್ನು ಪರಿಶೀಲಿಸಿಯೇ ಸರ್ಕಾರ ವಿವಿಧ ಕ್ರಮಗಳನ್ನು ಕೈಗೊಂಡಿದೆ. ಸರ್ಕಾರ ಯಾವುದೇ ವೆಚ್ಚ ಮಾಡಿದರೂ ಅದು ಆರ್ಥಿಕ ಹೊರೆ ಎನಿಸಿಕೊಳ್ಳುತ್ತದೆ. ಆದರೆ ಆದಾಯ ಮತ್ತು ವೆಚ್ಚ ಎರಡನ್ನೂ ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಳ್ಳಬೇಕಾಗುತ್ತದೆ.

ಈ ಬಾರಿ ಕಳೆದ ವರ್ಷಕ್ಕಿಂತ ಸರ್ಕಾರದ ಆದಾಯ ಉತ್ತಮವಾಗಿದೆ. ವಾಣಿಜ್ಯ ತೆರಿಗೆ, ಅಬಕಾರಿ ತೆರಿಗೆ, ಮುದ್ರಾಂಕ ಮತ್ತು ನೋಂದಣಿ ಇಲಾಖೆಗಳ ಮೂಲಕ ಉತ್ತಮ ಆದಾಯ ಬರುತ್ತಿದೆ. ಆದಾಯದ ಸ್ಥಿತಿಗತಿಗಳನ್ನು ಪರಿಶೀಲಿಸಿಯೇ ಸರ್ಕಾರ ವಿವಿಧ ಕ್ರಮಗಳನ್ನು ಕೈಗೊಂಡಿದೆ.

ಸಾರಿಗೆ ದರ, ಹಾಲು ಮತ್ತು ಮೊಸರಿನ ಬೆಲೆ ಏರಿಕೆಯ ಬಗ್ಗೆ ಚರ್ಚೆ ಆಗುತ್ತಿದೆ. ಸರ್ಕಾರ ಎಲ್ಲ ವರ್ಗದ ಜನರ ಹಿತಾಸಕ್ತಿಯನ್ನು ಗಮನಿಸಬೇಕಾಗುತ್ತದೆ. ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಪರಿಹಾರ ನೀಡಬೇಕು. ಬರದಿಂದಾಗಿ ಸುಮಾರು 50 ಲಕ್ಷ ರೈತರು 67 ಲಕ್ಷ ಎಕರೆ ಪ್ರದೇಶದಲ್ಲಿ ಬೆಳೆ ನಷ್ಟ ಅನುಭವಿಸಿದ್ದಾರೆ. ಅವರಿಗೆ ಪರಿಹಾರ ನೀಡಬೇಕಿದೆ. ಅದೇ ರೀತಿ ಲಕ್ಷಾಂತರ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ನೀಡುವಾಗಲೂ ಆರ್ಥಿಕ ಲೆಕ್ಕಾಚಾರ ಮಾಡಬೇಕಾಗುತ್ತದೆ.

ಸರ್ಕಾರದ ಆದಾಯ ಮತ್ತು ಲಭ್ಯವಿರುವ ಸಂಪನ್ಮೂಲಗಳನ್ನು ಗಮನದಲ್ಲಿಟ್ಟುಕೊಂಡು ಎಲ್ಲರಿಗೂ ನ್ಯಾಯ ಒದಗಿಸುವ ರೀತಿಯಲ್ಲಿ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿದೆ.

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿರುವ ದರ ಏರಿಕೆ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಸಾರಿಗೆ ದರ 3 ಬಾರಿ ಏರಿಕೆಯಾಗಿದೆ ಎಂದು ಟೀಕಿಸುವವರು ಕೇಂದ್ರ ಸರ್ಕಾರದ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯನ್ನು ಏಕೆ ಪ್ರಶ್ನಿಸುತ್ತಿಲ್ಲ?

ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸುಮಾರು 14 ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿದೆ. ಇದರ ಪರಿಣಾಮ ಸಾರಿಗೆ ವೆಚ್ಚದ ಮೇಲೂ ಬೀಳುತ್ತದೆ. ಕೃಷಿ ಚಟುವಟಿಕೆಗಳಿಗೆ ಟ್ರ್ಯಾಕ್ಟರ್ ಸೇರಿದಂತೆ ವಿವಿಧ ಕೆಲಸಗಳಿಗೆ ರೈತರು ಡೀಸೆಲ್ ಅವಲಂಬಿಸಿದ್ದಾರೆ. ಇಂಧನ ದರ ಏರಿಕೆಯಾದಾಗ ಕೃಷಿ ವೆಚ್ಚವೂ ಹೆಚ್ಚಾಗುತ್ತದೆ. ಹೀಗಾಗಿ ಇವೆಲ್ಲವೂ ಒಂದಕ್ಕೊಂದು ಸಂಬಂಧ ಹೊಂದಿರುವ ಸಂಚಿತ ಪರಿಣಾಮಗಳಾಗಿವೆ. ಈ ವಿಚಾರಗಳನ್ನು ಮರೆಮಾಚಿ ರಾಜ್ಯ ಸರ್ಕಾರವನ್ನು ಮಾತ್ರ ಟೀಕಿಸುವುದು ಅರ್ಥಹೀನ.

ಎಸ್‌ಐಆರ್ ಕುರಿತು ಪಕ್ಷದ ನಿಲುವು ಸ್ಪಷ್ಟ

ಎಸ್‌ಐಆರ್ ಕುರಿತು ನಡೆದ ಚರ್ಚೆಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕೆಲವು ಸಚಿವರು ತಮ್ಮ ಕ್ಷೇತ್ರಗಳಲ್ಲಿ ಎಸ್‌ಐಆರ್‌ನಿಂದ ಹೆಚ್ಚಿನ ಪರಿಣಾಮವಾಗಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಆದರೆ ಅದರಿಂದ ರಾಜ್ಯಾದ್ಯಂತ ಪ್ರಕ್ರಿಯೆ ಸರಿಯಾಗಿದೆ ಎಂದರ್ಥವಲ್ಲ. ಕೆಲವು ಕ್ಷೇತ್ರಗಳಲ್ಲಿ ಸುಮಾರು ಎರಡು ಸಾವಿರ ಮತದಾರರ ಹೆಸರುಗಳು ಮಾತ್ರ ಬಿಟ್ಟುಹೋಗಿರಬಹುದು ಅಥವಾ ಸೇರ್ಪಡೆಯಾಗಿರಬಹುದು. ಆದರೆ ಒಟ್ಟಾರೆ ಚಿತ್ರಣವನ್ನು ಗಮನಿಸಿದರೆ ಗಂಭೀರ ಪ್ರಶ್ನೆಗಳು ಎದುರಾಗುತ್ತವೆ.

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಸುಮಾರು ಒಂದು ಕೋಟಿ ಎಂಟು ಲಕ್ಷ ಮತದಾರರ ಹೆಸರುಗಳನ್ನು ತೆಗೆದುಹಾಕಲಾಗಿದೆ. ಈ ಪೈಕಿ 16 ಲಕ್ಷ ಮಂದಿ ಮೃತಪಟ್ಟಿದ್ದಾರೆ ಎಂದು ದಾಖಲಿಸಲಾಗಿದೆ. ಆದರೆ ಅವರಲ್ಲಿ ಕೆಲವರು ಜೀವಂತವಾಗಿದ್ದಾರೆ ಎಂಬ ದೂರುಗಳಿವೆ. ಇನ್ನು ಸುಮಾರು 65 ಲಕ್ಷ ಮಂದಿ ಸ್ಥಳಾಂತರಗೊಂಡಿದ್ದಾರೆ ಎಂದು ಹೇಳಲಾಗಿದೆ.

ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸ್ಥಳಾಂತರಗೊಂಡಿದ್ದರೆ, ಅವರ ಹೆಸರು ಹೊಸ ಸ್ಥಳದ ಮತದಾರರ ಪಟ್ಟಿಯಲ್ಲಿ ಇರಬೇಕಲ್ಲವೇ? ಉದಾಹರಣೆಗೆ ಬೆಂಗಳೂರಿನಿಂದ ಮೈಸೂರಿಗೆ ಸ್ಥಳಾಂತರಗೊಂಡಿದ್ದರೆ ಮೈಸೂರಿನ ಪಟ್ಟಿಯಲ್ಲಿ ಹೆಸರು ಇರಬೇಕು. ಆದರೆ ಅಲ್ಲಿ ಹೆಸರು ಇಲ್ಲದಿರುವುದು ಗಂಭೀರ ಪ್ರಶ್ನೆಯಾಗಿದೆ.

ಇಂತಹ ಉದಾಹರಣೆಗಳ ಕಾರಣದಿಂದಲೇ ಎಸ್‌ಐಆರ್ ಪ್ರಕ್ರಿಯೆ ಸರಿಯಾಗಿಲ್ಲ ಎಂಬುದು ಕಾಂಗ್ರೆಸ್‌ನ ನಿಲುವಾಗಿದೆ ಎಂದು ತಿಳಿಸಿದರು.ಎಸ್‌ಐಆರ್ ಕುರಿತು ಪಕ್ಷದ ನಿಲುವು ಸ್ಪಷ್ಟವಾಗಿದೆ. ಕಾಂಗ್ರೆಸ್‌ನ ಎಐಸಿಸಿ ಮತ್ತು ಕೆಪಿಸಿಸಿ ಮಟ್ಟದಲ್ಲಿ ಈ ಪ್ರಕ್ರಿಯೆಯನ್ನು ವಿರೋಧಿಸುವ ನಿಲುವು ತೆಗೆದುಕೊಳ್ಳಲಾಗಿದೆ. ಅದಕ್ಕೆ ವಿರುದ್ಧವಾಗಿ ಸರ್ಕಾರ ಪ್ರತ್ಯೇಕ ನಿಲುವು ತೆಗೆದುಕೊಳ್ಳಲು ಸಾಧ್ಯವಿಲ್ಲ.

ಪಿಂಚಣಿ ಸಮಸ್ಯೆ 15 ದಿನದೊಳಗೆ ಬಗೆಹರಿಸಲಾಗುವುದು

ವೃದ್ಧಾಪ್ಯ, ಅಂಗವಿಕಲ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಪಿಂಚಣಿಗಳು ಸ್ಥಗಿತಗೊಂಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಸಂಬಂಧ ಈಗಾಗಲೇ ಎರಡು-ಮೂರು ಸಭೆಗಳನ್ನು ನಡೆಸಲಾಗಿದೆ. ಈ ಹಿಂದೆ ₹30,000 ಇದ್ದ ಆದಾಯದ ಮಿತಿಯನ್ನು ₹1.20 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಹೀಗಾಗಿ ಆದಾಯದ ಕಾರಣದಿಂದ ಅರ್ಹರಿಗೆ ಸಮಸ್ಯೆಯಾಗುವುದಿಲ್ಲ.

ಇನ್ನೊಂದು ಪ್ರಮುಖ ಸಮಸ್ಯೆಯೆಂದರೆ ಅರ್ಹ ವಯಸ್ಸು ತಲುಪದವರು ಪಿಂಚಣಿಗಾಗಿ ಅರ್ಜಿ ಸಲ್ಲಿಸಿರುವುದು. 60 ವರ್ಷ ಮೇಲ್ಪಟ್ಟವರಿಗೆ ನೀಡಬೇಕಾದ ವೃದ್ಧಾಪ್ಯ ಪಿಂಚಣಿಗೆ 40, 30 ಹಾಗೂ 20 ವರ್ಷದವರೂ ಅರ್ಜಿ ಸಲ್ಲಿಸಿರುವ ಪ್ರಕರಣಗಳು ಗಮನಕ್ಕೆ ಬಂದಿವೆ. ಇಂತಹ ಸುಮಾರು 23 ಲಕ್ಷ ಅರ್ಜಿಗಳನ್ನು ಪರಿಶೀಲಿಸಿ ಅನರ್ಹ ಅರ್ಜಿಗಳನ್ನು ವಿಲೇವಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈ ಕಾರಣದಿಂದಾಗಿ ಮಧ್ಯಂತರದಲ್ಲಿ ಪಿಂಚಣಿ ವಿತರಣೆ ಪ್ರಕ್ರಿಯೆ ಕೆಲವು ದಿನಗಳ ಕಾಲ ಸ್ಥಗಿತಗೊಂಡಿತ್ತು. ಇದೀಗ ಮತ್ತೆ ಚಾಲನೆ ನೀಡಲಾಗಿದ್ದು, ಮುಂದಿನ ಒಂದು ವಾರದಿಂದ 15 ದಿನಗಳೊಳಗೆ ಸಮಸ್ಯೆ ಬಗೆಹರಿಯಲಿದೆ.

Tags: Central aidckcknewsnowdcm parameshwardroughtDrought in karnatakaindia
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಮೈತ್ರಿ ಹೋರಾಟಕ್ಕೆ ದೇವೇಗೌಡ-ಬಿಎಸ್‌ವೈ ಭೇಟಿ ದಿಕ್ಸೂಚಿ

ಮೈತ್ರಿ ಹೋರಾಟಕ್ಕೆ ದೇವೇಗೌಡ-ಬಿಎಸ್‌ವೈ ಭೇಟಿ ದಿಕ್ಸೂಚಿ

by cknewsnow desk
November 6, 2026
0

ಇನ್ನೊಂದು ಅವಧಿಗೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅವರನ್ನು ಮುಂದುವರಿಸಲು ಮಾಜಿ ಪ್ರಧಾನಿ ಜತೆ ಮಾಜಿ ಸಿಎಂ ಚರ್ಚಿಸಿದರಾ?

ನಾನು ಹಳ್ಳಿಯವನು, ಏನೀಗ?

ನಾನು ಹಳ್ಳಿಯವನು, ಏನೀಗ?

by cknewsnow desk
November 6, 2026
0

ಹಳ್ಳಿ ಗುಗ್ಗು ಎಂದ ಪ್ರಿಯಾಂಕ್ ಖರ್ಗೆ ಹಳ್ಳಿಗರಿಗೆ ಅಪಮಾನ ಮಾಡಿದ್ದಾರೆ ಎಂದು ಕೇಂದ್ರ ಸಚಿವರ ಬೇಸರ

ಕಾಂತರಾಜು ವರದಿ ನೈಜತೆ ಬಗ್ಗೆ ಅನುಮಾನಗಳಿವೆ ಎಂದ ಅಶೋಕ್

ಸಾರಿಗೆ ನಿಗಮಗಳಿಗೆ ₹5,650 ಕೋಟಿ ಬಾಕಿ! ಜನರ ಮೇಲೆ ದರ ಏರಿಕೆಯ ಹೊರೆ

by cknewsnow desk
November 5, 2026
0

ಸಾರಿಗೆ ನಿಗಮಗಳ ಒಟ್ಟು ಹೊಣೆಗಾರಿಕೆ ₹7,130.80 ಕೋಟಿ

ಕೇಂದ್ರ ಪೆಟ್ರೋಲ್, ಡೀಸೆಲ್ ದರ ಇಳಿಸಿದರೆ ಬಸ್ ಪ್ರಯಾಣ ದರ ಕಡಿಮೆ ಮಾಡುತ್ತೇವೆ

ಕೇಂದ್ರ ಪೆಟ್ರೋಲ್, ಡೀಸೆಲ್ ದರ ಇಳಿಸಿದರೆ ಬಸ್ ಪ್ರಯಾಣ ದರ ಕಡಿಮೆ ಮಾಡುತ್ತೇವೆ

by cknewsnow desk
November 5, 2026
0

ಮಹಿಳೆಯರಿಗೆ ಫ್ರೀ ಬಸ್ ಕೊಟ್ಟಿದ್ದಕ್ಕೆ ಆರ್ಥಿಕ ಹೊರೆ ಆಗಿದೆ ಎಂದ ಮುಖ್ಯಮಂತ್ರಿ

ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಅಗತ್ಯವಿಲ್ಲ: ರಾಜಮಾತೆ ಪ್ರಮೋದಾ ದೇವಿ ಒಡೆಯರ್

ಮೈಸೂರು ಅರಮನೆ ಖಾಸಗಿ ಸ್ವತ್ತು, ಸರ್ಕಾರ ಕಟ್ಟಿಸಿದ್ದಲ್ಲ; ರಾಜಮಾತೆ ಪ್ರಮೋದಾ ದೇವಿ

by cknewsnow desk
November 4, 2026
0

ಸರಕಾರ ಬೇಕಾದರೆ ಇನ್ನೊಂದು ಅಂಬಾರಿಯನ್ನು ಮಾಡಿಸಿಕೊಳ್ಳಲಿ

ಬಸ್‌ ಪ್ರಯಾಣ ದರ ಶೇ.23ರಿಂದ ಶೇ.37ರಷ್ಟು ಹೆಚ್ಚಳ

ಬಸ್‌ ಪ್ರಯಾಣ ದರ ಶೇ.23ರಿಂದ ಶೇ.37ರಷ್ಟು ಹೆಚ್ಚಳ

by cknewsnow desk
November 4, 2026
0

ಇಂದು ಮಧ್ಯರಾತ್ರಿಯಿಂದಲೇ ಬರೆ ಏರಿಕೆ ಜಾರಿ

Leave a Reply Cancel reply

Your email address will not be published. Required fields are marked *

Recommended

ವಿಜಯನಗರ ಜಿಲ್ಲೆಗೆ ಅಸ್ತು ಎಂದ ಸಂಪುಟ; ಬಳ್ಳಾರಿ ರಾಜಕೀಯದಲ್ಲಿ ಹೊಸ ಸಮೀಕರಣ ಖಚಿತ

ವಿಜಯನಗರ ಜಿಲ್ಲೆಗೆ ಅಸ್ತು ಎಂದ ಸಂಪುಟ; ಬಳ್ಳಾರಿ ರಾಜಕೀಯದಲ್ಲಿ ಹೊಸ ಸಮೀಕರಣ ಖಚಿತ

6 years ago
ತಮಿಳುನಾಡಿಗೆ ಕೇರ್‌ ಮಾಡಬೇಡಿ, ಮೊದಲು ಪ್ರಧಾನಿ ಮನವೊಲಿಸಿ

ಕೊಲೆಯಾದ ಕೂಡಲೇ ಕಾಲ್ಕಿತ್ತ ಸಿಎಂ!!

4 years ago

Popular News

  • ಆಪರೇಷನ್‌ ಕಮಲಕ್ಕೆ ಸಿಕ್ಕಿ ಬೇಲಿ ಹಾರಿದ್ದವರಿಗೆ ಶಾಕ್!‌

    ಬರದ ನಷ್ಟ ₹62,000 ಕೋಟಿ; ಕೇಂದ್ರಕ್ಕೆ ಕೇಳಿದ ಮೊತ್ತ ₹22,000 ಕೋಟಿ!

    0 shares
    Share 0 Tweet 0
  • ಮೈತ್ರಿ ಹೋರಾಟಕ್ಕೆ ದೇವೇಗೌಡ-ಬಿಎಸ್‌ವೈ ಭೇಟಿ ದಿಕ್ಸೂಚಿ

    0 shares
    Share 0 Tweet 0
  • ನಾನು ಹಳ್ಳಿಯವನು, ಏನೀಗ?

    0 shares
    Share 0 Tweet 0
  • ಸಾರಿಗೆ ನಿಗಮಗಳಿಗೆ ₹5,650 ಕೋಟಿ ಬಾಕಿ! ಜನರ ಮೇಲೆ ದರ ಏರಿಕೆಯ ಹೊರೆ

    0 shares
    Share 0 Tweet 0
  • ಕೇಂದ್ರ ಪೆಟ್ರೋಲ್, ಡೀಸೆಲ್ ದರ ಇಳಿಸಿದರೆ ಬಸ್ ಪ್ರಯಾಣ ದರ ಕಡಿಮೆ ಮಾಡುತ್ತೇವೆ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಪರೇಷನ್‌ ಕಮಲಕ್ಕೆ ಸಿಕ್ಕಿ ಬೇಲಿ ಹಾರಿದ್ದವರಿಗೆ ಶಾಕ್!‌

ಬರದ ನಷ್ಟ ₹62,000 ಕೋಟಿ; ಕೇಂದ್ರಕ್ಕೆ ಕೇಳಿದ ಮೊತ್ತ ₹22,000 ಕೋಟಿ!

November 6, 2026
ಮೈತ್ರಿ ಹೋರಾಟಕ್ಕೆ ದೇವೇಗೌಡ-ಬಿಎಸ್‌ವೈ ಭೇಟಿ ದಿಕ್ಸೂಚಿ

ಮೈತ್ರಿ ಹೋರಾಟಕ್ಕೆ ದೇವೇಗೌಡ-ಬಿಎಸ್‌ವೈ ಭೇಟಿ ದಿಕ್ಸೂಚಿ

November 6, 2026
ನಾನು ಹಳ್ಳಿಯವನು, ಏನೀಗ?

ನಾನು ಹಳ್ಳಿಯವನು, ಏನೀಗ?

November 6, 2026
ಕಾಂತರಾಜು ವರದಿ ನೈಜತೆ ಬಗ್ಗೆ ಅನುಮಾನಗಳಿವೆ ಎಂದ ಅಶೋಕ್

ಸಾರಿಗೆ ನಿಗಮಗಳಿಗೆ ₹5,650 ಕೋಟಿ ಬಾಕಿ! ಜನರ ಮೇಲೆ ದರ ಏರಿಕೆಯ ಹೊರೆ

November 5, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ