• About
  • Advertise
  • Careers
  • Contact
Sunday, November 8, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಸಂಪುಟಕ್ಕೆ ಬಿ.ನಾಗೇಂದ್ರ ಪಕ್ಕಾ! ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೂ ಮರಳಿ ಮಂತ್ರಿಗಿರಿ!!

cknewsnow desk by cknewsnow desk
November 8, 2026
in NATION, POLITICS, STATE
Reading Time: 2 mins read
0
ಸಂಪುಟಕ್ಕೆ ಬಿ.ನಾಗೇಂದ್ರ ಪಕ್ಕಾ! ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೂ ಮರಳಿ ಮಂತ್ರಿಗಿರಿ!!
913
VIEWS
FacebookTwitterWhatsuplinkedinEmail

ಇಬ್ಬರ ಪರ ಹೈಕಮಾಂಡ್ ಮುಂದೆ ಡಿಕೆಶಿ ಬ್ಯಾಟಿಂಗ್

ಬೆಂಗಳೂರು: ಮಹರ್ಷಿ ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದ ಆರೋಪಿ ಬಿ.ನಾಗೇಂದ್ರ ಅವರನ್ನು ಮತ್ತೆ ಮಂತ್ರಿಮಂಡಲಕ್ಕೆ ಸೇರಿಸಿಕೊಳ್ಳಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮುಂದಾಗಿದ್ದಾರೆ.

ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಿಸಿ ಖಾಲಿ ಇರುವ ಎರಡು ಸ್ಥಾನಗಳನ್ನು ಭರ್ತಿ ಮಾಡಲಿದ್ದಾರೆ.

ಲಕ್ಷ್ಮೀ ಹೆಬ್ಬಾಳ್ಕರ್‌ ಸೇರ್ಪಡೆ ಖಚಿತ

ನಾಗೇಂದ್ರ ಜೊತೆಗೆ ಬೆಳಗಾವಿ ಜಿಲ್ಲೆಯ ಲಕ್ಷ್ಮೀ ಹೆಬ್ಬಾಳ್ಕರ್‌ ಅವರನ್ನು ಮಂತ್ರಿಮಂಡಲಕ್ಕೆ ಸೇರ್ಪಡೆ ಮಾಡಿಕೊಂಡು ಮಹಿಳಾ ಕೋಟಾ ತುಂಬಲು ನಿರ್ಧರಿಸಿದ್ದಾರೆ.

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)‌ ವಿರುದ್ಧ ಮುಂದಿನ ಹೋರಾಟ ಕುರಿತು ಚರ್ಚೆ ನಡೆಸಲು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಶುಕ್ರವಾರ ರಾತ್ರಿ ದೆಹಲಿಯಲ್ಲಿ ಪಕ್ಷದ ನಾಯಕಿ ಸೋನಿಯಾ ಗಾಂಧಿ ನಿವಾಸದಲ್ಲಿ ಕರೆದಿದ್ದ ಚಹಾ ಕೂಟದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ, ಪಕ್ಷದ ಅಧಿನಾಯಕನ ಜೊತೆ ನಡೆಸಿದ ಮಾತುಕತೆ ವೇಳೆ ಕರ್ನಾಟಕದಲ್ಲಿ ಸ್ಟಿಂಗ್‌ ಆಪರೇಷನ್‌ ಸೇರಿದಂತೆ ಕೆಲವು ರಾಜಕೀಯ ವಿದ್ಯಮಾನಗಳನ್ನು ಗಮನಕ್ಕೆ ತಂದಿದ್ದಾರೆ.

ಅಲ್ಲದೆ, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಗಮನದಲ್ಲಿ ಇಟ್ಟುಕೊಂಡು ಮಂತ್ರಿಮಂಡಲದಲ್ಲಿ ಖಾಲಿ ಇರುವ ಎರಡು ಸ್ಥಾನ ಭರ್ತಿ ಮಾಡುವುದಾಗಿ ತಿಳಿಸಿದ್ದಾರೆ.

ರಾಹುಲ್‌ ಗಾಂಧಿ ಒಪ್ಪಿಗೆ

ಮುಖ್ಯಮಂತ್ರಿ ಮಾತಿಗೆ ಒಪ್ಪಿಗೆ ಸೂಚಿಸಿದ ರಾಹುಲ್‌ ಗಾಂಧಿ, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಜೊತೆ ಮಾತುಕತೆ ನಡೆಸಿ ಮುಂದುವರೆಯಲು ಹೇಳಿದ್ದಾರೆ.

ಶಿವಕುಮಾರ್‌ ಮುಖ್ಯಮಂತ್ರಿಯಾಗಿ ಸರ್ಕಾರ ರಚನೆ ವೇಳೆ ಹಗರಣದ ಆರೋಪ ಹೊತ್ತಿದ್ದರೂ ನಾಗೇಂದ್ರ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡಿದ್ದರು.ನಂತರ ನಡೆದ ವಿಧಾನಮಂಡಲದ ಅಧಿವೇಶನದಲ್ಲಿ ಪ್ರತಿಪಕ್ಷ ಬಿಜೆಪಿ, ಸದನದ ಒಳಗೆ ಮತ್ತು ಹೊರಗೆ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿದ ಬೆನ್ನಲ್ಲೇ ಸಂಪುಟದಿಂದ ಅವರನ್ನು ಕೈಬಿಡಲಾಗಿತ್ತು.

ಕಾಂಗ್ರೆಸ್‌ ಸೋಲು ಹಿನ್ನೆಲೆ

ವಿಧಾನ ಪರಿಷತ್ತಿನ ತಾಲಾ ಎರಡು ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಹೀನಾಯ ಸೋಲು ಕಂಡಿತ್ತು, ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿ ಅಭ್ಯರ್ಥಿಗಳು ಭಾರೀ ಅಂತರದ ಜಯ ಗಳಿಸಿದ್ದರು.

ಕಾಂಗ್ರೆಸ್‌ ಅಭ್ಯರ್ಥಿಗಳ ಸೋಲಿಗೆ ಎಸ್‌ಟಿ ಮತ್ತು ಇತರ ಹಿಂದುಳಿದ ವರ್ಗಗಳು ಪಕ್ಷದಿಂದ ದೂರವಾಗುತ್ತಿವೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ವಾಲ್ಮೀಕಿ ಸಮುದಾಯದ ಮುಖಂಡ ನಾಗೇಂದ್ರ ಅವರನ್ನು ಮಂತ್ರಿಮಂಡಲಕ್ಕೆ ಸೇರ್ಪಡೆ ಮಾಡಿಕೊಳ್ಳಲು ಮುಖ್ಯಮಂತ್ರಿ ನಿರ್ಧರಿಸಿದರು ಎಂದು ಉನ್ನತ ಮೂಲಗಳು ತಿಳಿಸಿವೆ.

ಪಂಚಮಸಾಲಿ ಸಮುದಾಯಕ್ಕೆ ಸೇರಿದ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಮಂತ್ರಿಮಂಡಲದಲ್ಲಿ ಅವಕಾಶ ಮಾಡಿಕೊಡುವ ಮೂಲಕ ಸಮುದಾಯವನ್ನು ಪಕ್ಷದತ್ತ ಸೆಳೆಯಲು ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ಒತ್ತಾಯ

ಇತ್ತೀಚೆಗೆ ರಾಹುಲ್‌ ಗಾಂಧಿ ಭೇಟಿ ಮಾಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಾವೇರಿಯ ನೀಲಪ್ಪ ಶಿವಣ್ಣನವರ್‌ ಹಾಗೂ ಬಳ್ಳಾರಿಯಿಂದ ಅನ್ನಪೂರ್ಣ ತುಕಾರಾಂ ಅವರನ್ನು ಮಂತ್ರಿ ಮಾಡುವಂತೆ ಒತ್ತಾಯಿಸಿದ್ದರು.

ಆದರೆ, ಸಿದ್ದರಾಮಯ್ಯ ಸೂಚಿಸಿದ್ದ ಎರಡೂ ಹೆಸರುಗಳನ್ನು ಬದಿಗಿಟ್ಟು ನಾಗೇಂದ್ರ ಮತ್ತು ಹೆಬ್ಬಾಳ್ಕರ್‌ ಅವರನ್ನು ಸೇರ್ಪಡೆ ಮಾಡಿಕೊಳ್ಳಲು ಶಿವಕುಮಾರ್‌ ನಿರ್ಧರಿಸಿದ್ದಾರೆ.ಕೆಲವು ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಅವರು, ಮಂತ್ರಿಮಂಡಲಕ್ಕೆ ಸದ್ಯದಲ್ಲೇ ಮಹಿಳಾ ಪ್ರತಿನಿಧಿ ಸೇರ್ಪಡೆ ಆಗಲಿದ್ದಾರೆ ಎಂದಿದ್ದನ್ನು ಸ್ಮರಿಸಬಹುದು.

Tags: cabinet expansionckcknewsnowdk shivakumar sarkarLakshmi hebbalkarnagendranews
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಹೆಚ್ಚು ಎಥೆನಾಲ್ ಮಿಶ್ರಣದಿಂದ ವಾಹನಗಳಿಗೆ ಧಕ್ಕೆ

ಹೆಚ್ಚು ಎಥೆನಾಲ್ ಮಿಶ್ರಣದಿಂದ ವಾಹನಗಳಿಗೆ ಧಕ್ಕೆ

by cknewsnow desk
November 8, 2026
0

ಎಂಜಿನ್ ಸಮಸ್ಯೆಯಿಂದ ವಾಹನ ಮಾಲೀಕರಿಗೆ ರಿಪೇರಿ ಖರ್ಚಿನ ಹೊರೆ

ಆಪರೇಷನ್‌ ಕಮಲಕ್ಕೆ ಸಿಕ್ಕಿ ಬೇಲಿ ಹಾರಿದ್ದವರಿಗೆ ಶಾಕ್!‌

ಬರದ ನಷ್ಟ ₹62,000 ಕೋಟಿ; ಕೇಂದ್ರಕ್ಕೆ ಕೇಳಿದ ಮೊತ್ತ ₹22,000 ಕೋಟಿ!

by cknewsnow desk
November 7, 2026
0

ಈವರೆಗೆ ಕ್ಷೇತ್ರಕ್ಕೆ ಮೂರು ಪತ್ರಗಳನ್ನು ಬರೆದಿರುವ ರಾಜ್ಯ ಸರಕಾರ

ಮೈತ್ರಿ ಹೋರಾಟಕ್ಕೆ ದೇವೇಗೌಡ-ಬಿಎಸ್‌ವೈ ಭೇಟಿ ದಿಕ್ಸೂಚಿ

ಮೈತ್ರಿ ಹೋರಾಟಕ್ಕೆ ದೇವೇಗೌಡ-ಬಿಎಸ್‌ವೈ ಭೇಟಿ ದಿಕ್ಸೂಚಿ

by cknewsnow desk
November 6, 2026
0

ಇನ್ನೊಂದು ಅವಧಿಗೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅವರನ್ನು ಮುಂದುವರಿಸಲು ಮಾಜಿ ಪ್ರಧಾನಿ ಜತೆ ಮಾಜಿ ಸಿಎಂ ಚರ್ಚಿಸಿದರಾ?

ನಾನು ಹಳ್ಳಿಯವನು, ಏನೀಗ?

ನಾನು ಹಳ್ಳಿಯವನು, ಏನೀಗ?

by cknewsnow desk
November 6, 2026
0

ಹಳ್ಳಿ ಗುಗ್ಗು ಎಂದ ಪ್ರಿಯಾಂಕ್ ಖರ್ಗೆ ಹಳ್ಳಿಗರಿಗೆ ಅಪಮಾನ ಮಾಡಿದ್ದಾರೆ ಎಂದು ಕೇಂದ್ರ ಸಚಿವರ ಬೇಸರ

ಕಾಂತರಾಜು ವರದಿ ನೈಜತೆ ಬಗ್ಗೆ ಅನುಮಾನಗಳಿವೆ ಎಂದ ಅಶೋಕ್

ಸಾರಿಗೆ ನಿಗಮಗಳಿಗೆ ₹5,650 ಕೋಟಿ ಬಾಕಿ! ಜನರ ಮೇಲೆ ದರ ಏರಿಕೆಯ ಹೊರೆ

by cknewsnow desk
November 5, 2026
0

ಸಾರಿಗೆ ನಿಗಮಗಳ ಒಟ್ಟು ಹೊಣೆಗಾರಿಕೆ ₹7,130.80 ಕೋಟಿ

ಕೇಂದ್ರ ಪೆಟ್ರೋಲ್, ಡೀಸೆಲ್ ದರ ಇಳಿಸಿದರೆ ಬಸ್ ಪ್ರಯಾಣ ದರ ಕಡಿಮೆ ಮಾಡುತ್ತೇವೆ

ಕೇಂದ್ರ ಪೆಟ್ರೋಲ್, ಡೀಸೆಲ್ ದರ ಇಳಿಸಿದರೆ ಬಸ್ ಪ್ರಯಾಣ ದರ ಕಡಿಮೆ ಮಾಡುತ್ತೇವೆ

by cknewsnow desk
November 5, 2026
0

ಮಹಿಳೆಯರಿಗೆ ಫ್ರೀ ಬಸ್ ಕೊಟ್ಟಿದ್ದಕ್ಕೆ ಆರ್ಥಿಕ ಹೊರೆ ಆಗಿದೆ ಎಂದ ಮುಖ್ಯಮಂತ್ರಿ

Next Post
ಶ್ರೀ ಹಾಸನಾಂಬೆ ದಿವ್ಯ ದರ್ಶನ #Live

ಶ್ರೀ ಹಾಸನಾಂಬೆ ದಿವ್ಯ ದರ್ಶನ #Live

Leave a Reply Cancel reply

Your email address will not be published. Required fields are marked *

Recommended

ಪಕ್ಕಾ ಟೀಂ, ಸೂಪರ್ ಪ್ಲಾನ್; ಸಿಇಟಿ ಪರೀಕ್ಷೆ ಸಕ್ಸಸ್

ಸಿಇಟಿ ರಿಸಲ್ಟ್ ಬೇಕೆ? ಇಲ್ಲಿ ನೋಡಿ, ಕ್ಲಿಕ್ ಮಾಡಿ

6 years ago
ಕೋವಿಡ್-19 ವಿರುದ್ಧದ ಹೋರಾಟಕ್ಕೆ ಆಯುರ್ವೇದದ ಬಲ; ಖೋಡೆ ಉದ್ಯಮ ಸಮೂಹದಿಂದ  ವೈರಾನಾರ್ಮ್ ಅಭಿವೃದ್ಧಿ, ಎನ್/ಎಲ್ ಅನುಪಾತ ತಗ್ಗಿಸುವ ಪ್ರತಿರೋಧಕ

ಕೋವಿಡ್-19 ವಿರುದ್ಧದ ಹೋರಾಟಕ್ಕೆ ಆಯುರ್ವೇದದ ಬಲ; ಖೋಡೆ ಉದ್ಯಮ ಸಮೂಹದಿಂದ ವೈರಾನಾರ್ಮ್ ಅಭಿವೃದ್ಧಿ, ಎನ್/ಎಲ್ ಅನುಪಾತ ತಗ್ಗಿಸುವ ಪ್ರತಿರೋಧಕ

5 years ago

Popular News

  • ಶ್ರೀ ಹಾಸನಾಂಬೆ ದಿವ್ಯ ದರ್ಶನ #Live

    ಶ್ರೀ ಹಾಸನಾಂಬೆ ದಿವ್ಯ ದರ್ಶನ #Live

    0 shares
    Share 0 Tweet 0
  • ಸಂಪುಟಕ್ಕೆ ಬಿ.ನಾಗೇಂದ್ರ ಪಕ್ಕಾ! ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೂ ಮರಳಿ ಮಂತ್ರಿಗಿರಿ!!

    0 shares
    Share 0 Tweet 0
  • ಹೆಚ್ಚು ಎಥೆನಾಲ್ ಮಿಶ್ರಣದಿಂದ ವಾಹನಗಳಿಗೆ ಧಕ್ಕೆ

    0 shares
    Share 0 Tweet 0
  • ಬರದ ನಷ್ಟ ₹62,000 ಕೋಟಿ; ಕೇಂದ್ರಕ್ಕೆ ಕೇಳಿದ ಮೊತ್ತ ₹22,000 ಕೋಟಿ!

    0 shares
    Share 0 Tweet 0
  • ಮೈತ್ರಿ ಹೋರಾಟಕ್ಕೆ ದೇವೇಗೌಡ-ಬಿಎಸ್‌ವೈ ಭೇಟಿ ದಿಕ್ಸೂಚಿ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಸಂಪುಟಕ್ಕೆ ಬಿ.ನಾಗೇಂದ್ರ ಪಕ್ಕಾ! ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೂ ಮರಳಿ ಮಂತ್ರಿಗಿರಿ!!

ಸಂಪುಟಕ್ಕೆ ಬಿ.ನಾಗೇಂದ್ರ ಪಕ್ಕಾ! ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೂ ಮರಳಿ ಮಂತ್ರಿಗಿರಿ!!

November 8, 2026
ಹೆಚ್ಚು ಎಥೆನಾಲ್ ಮಿಶ್ರಣದಿಂದ ವಾಹನಗಳಿಗೆ ಧಕ್ಕೆ

ಹೆಚ್ಚು ಎಥೆನಾಲ್ ಮಿಶ್ರಣದಿಂದ ವಾಹನಗಳಿಗೆ ಧಕ್ಕೆ

November 8, 2026
ಆಪರೇಷನ್‌ ಕಮಲಕ್ಕೆ ಸಿಕ್ಕಿ ಬೇಲಿ ಹಾರಿದ್ದವರಿಗೆ ಶಾಕ್!‌

ಬರದ ನಷ್ಟ ₹62,000 ಕೋಟಿ; ಕೇಂದ್ರಕ್ಕೆ ಕೇಳಿದ ಮೊತ್ತ ₹22,000 ಕೋಟಿ!

November 7, 2026
ಮೈತ್ರಿ ಹೋರಾಟಕ್ಕೆ ದೇವೇಗೌಡ-ಬಿಎಸ್‌ವೈ ಭೇಟಿ ದಿಕ್ಸೂಚಿ

ಮೈತ್ರಿ ಹೋರಾಟಕ್ಕೆ ದೇವೇಗೌಡ-ಬಿಎಸ್‌ವೈ ಭೇಟಿ ದಿಕ್ಸೂಚಿ

November 6, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ