• About
  • Advertise
  • Careers
  • Contact
Thursday, November 19, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

ಗ್ರಾಮೀಣ ಎಲ್ಲಾ ಆಸ್ತಿಗಳಿಗೆ ಇ-ಸ್ವತ್ತು ದೃಢೀಕರಣ

cknewsnow desk by cknewsnow desk
November 18, 2026
in NEWS IN USE, STATE
Reading Time: 1 min read
0
ಗ್ರಾಮೀಣ ಎಲ್ಲಾ ಆಸ್ತಿಗಳಿಗೆ ಇ-ಸ್ವತ್ತು ದೃಢೀಕರಣ
914
VIEWS
FacebookTwitterWhatsuplinkedinEmail

ಇನ್ನು ಮುಂದೆ ಅಂಗೈನಲ್ಲಿ ಆಸ್ತಿ ದಾಖಲೆ

ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗದಲ್ಲಿನ ಎಲ್ಲಾ ನಿವೇಶನ ಮತ್ತು ಮನೆ ಸೇರಿದಂತೆ ಆಸ್ತಿಗಳಿಗೆ ಇ-ಸ್ವತ್ತು ದೃಢೀಕರಣ ಪತ್ರ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಇಂದಿಲ್ಲಿ ಘೋಷಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅರಣ್ಯ ಮತ್ತು ಸರ್ಕಾರಿ ಭೂಮಿ ಹೊರತುಪಡಿಸಿ, ಕಂದಾಯ ಹಾಗೂ ಸ್ವಂತ ಭೂಮಿಗಳಲ್ಲಿನ ಮನೆ, ನಿವೇಶನ ಆಸ್ತಿ ಹೊಂದಿರುವವರಿಗೆ ಸರ್ಕಾರಿ ದಾಖಲೆಗಳನ್ನು ಒದಗಿಸಲಾಗುವುದು.

8 ಲಕ್ಷ ಗ್ರಾಮಠಾಣಾ ಆಸ್ತಿ

ಇ-ಸ್ವತ್ತು ದಾಖಲೆ ನೀಡುವಲ್ಲಿ ಆಗುತ್ತಿದ್ದ ವಿಳಂಬ ತಪ್ಪಿಸುವ ಉದ್ದೇಶದಿಂದ ಹಾಲಿ ನಿಯಮಗಳಿಗೆ ತಿದ್ದುಪಡಿ ಮಾಡಲಾಗಿದ್ದು, ಡಿಸೆಂಬರ್ 31ರೊಳಗೆ 8 ಲಕ್ಷ ಗ್ರಾಮಠಾಣಾ ಆಸ್ತಿಗಳಿಗೆ ಇ-ಸ್ವತ್ತು ನೀಡಲಾಗುವುದು ಎಂದರು.

ಭೂಗ್ಯಾರಂಟಿ ಇ-ಸ್ವತ್ತು ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ಸುಮಾರು 1,50,69,090 ಗ್ರಾಮೀಣ ಆಸ್ತಿ ಇದ್ದು, ಈ ಪೈಕಿ ಈಗಾಗಲೇ 42,92,484 ಆಸ್ತಿಗಳಿಗೆ ನಮೂನೆ 11 ಹಾಗೂ 10,16,730 ಸ್ವತ್ತುಗಳಿಗೆ ನಮೂನೆ ಬಿ ವಿತರಿಸಲಾಗಿದೆ.

ಇನ್ನೂ 97,59,867 ಆಸ್ತಿಗಳಿಗೆ ಇ-ಸ್ವತ್ತು ನೀಡಬೇಕಾಗಿದ್ದು, ವ್ಯಾಜ್ಯರಹಿತ, ಸರ್ಕಾರಿ, ಅರಣ್ಯ ಭೂಮಿಯಲ್ಲಿಲ್ಲದ 80 ಲಕ್ಷ ಗ್ರಾಮೀಣ ಆಸ್ತಿಗಳಿಗೆ ಮುಂದಿನ ವರ್ಷಾಂತ್ಯದೊಳಗೆ ಅಂದರೆ, 2027ರ ಡಿಸೆಂಬರ್ 31ರ ಒಳಗಾಗಿ ಇ-ಸ್ವತ್ತು ನೀಡಲು ಇ-ಸ್ವತ್ತು ನೀಡಲು 5927 ಗ್ರಾಮ ಪಂಚಾಯತ್‌ಗಳಿಗೆ ಗುರಿ ನಿಗದಿ ಪಡಿಸಲಾಗಿದೆ.

ಭೂಗ್ಯಾರಂಟಿ ಇ-ಸ್ವತ್ತು

ನಮ್ಮ ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯಂತೆ 5 ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ, ಭೂಗ್ಯಾರಂಟಿ ಇ-ಸ್ವತ್ತು ಅಭಿಯಾನಕ್ಕೆ ಇಂದು ಚಾಲನೆ ನೀಡಲಾಗಿದ್ದು, ಇದು 6ನೇ ಗ್ಯಾರಂಟಿಯಾಗಿದೆ ಎಂದರು.

ಶೇ.61ರಷ್ಟು ಜನರು ಗ್ರಾಮೀಣ ಪ್ರದೇಶದಲ್ಲಿದ್ದು, ಇ-ಸ್ವತ್ತು ಪಡೆಯುವಲ್ಲಿ ಸಾಕಷ್ಟು ವಿಳಂಬ ಆಗುತ್ತಿತ್ತು, ತೊಡಕು ನಿವಾರಿಸಲು ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿ ನೇತೃತ್ವದಲ್ಲಿ ಬೆಂಗಳೂರು ನಗರ, ಮಂಗಳೂರು, ಕಲಬುರಗಿ ಮತ್ತು ಬೆಳಗಾವಿ ಜಿಲ್ಲಾ ಪಂಚಾಯತ್‌ಗಳ ಸಿಇಓಗಳನ್ನು ಒಳಗೊಂಡ ಪಂಚ ಸದಸ್ಯರ ಸಮಿತಿ ರಚಿಸಿ, ಅದರ ಶಿಫಾರಸಿನಂತೆ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ (ಗ್ರಾಮ ಪಂಚಾಯತ್‌ಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು, 2025ಕ್ಕೆ ತಿದ್ದುಪಡಿ ತರಲಾಗಿದೆ ಎಂದರು.

ಗ್ರಾಮೀಣ ಭಾಗದಲ್ಲಿ ಪ್ರತಿಯೊಬ್ಬ ನಾಗರಿಕರಿಗೂ ಸುರಕ್ಷಿತ, ನಿಖರ, ಡಿಜಟಲೀಕರಿಸಿದ ಮತ್ತು ಭೌಗೋಳಿಕವಾಗಿ ಉಲ್ಲೇಖಿಸಲಾದ ಭೂಮಿ ಮತ್ತು ಆಸ್ತಿ ದಾಖಲೆ ವಿತರಿಸಲು ಭೂ-ಗ್ಯಾರಂಟಿ ಯೋಜನೆ ಅನುಷ್ಠಾನಗೊಳಿಸಲಾಗಿದೆ.

5927 ಗ್ರಾಮ ಪಂಚಾಯತ್‌

ಮೊದಲ ಹಂತದಲ್ಲಿ ರಾಜ್ಯದ ಎಲ್ಲಾ 5927 ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ವಿಶೇಷವಾಗಿ ಗ್ರಾಮಠಾಣಾ ಪ್ರದೇಶದಲ್ಲಿ ಇ-ಸ್ವತ್ತು ನೀಡಲು ಪ್ರಕ್ರಿಯೆ ಆರಂಭಿಸಲಾಗಿದೆ. ಕಂದಾಯ ಭೂಮಿಯಲ್ಲಿ ಅಭಿವೃದ್ಧಿ ಪಡಿಸಲಾದ ಪರಿವರ್ತಿತ ಭೂಮಿ ಮತ್ತು ಪರಿವರ್ತನೆ ಆಗದ ಭೂಮಿಯಲ್ಲಿ ಮನೆ ನಿರ್ಮಿಸಿಕೊಂಡವರಿಗೂ ಇ-ಸ್ವತ್ತು ನೀಡಲು ಕ್ರಮ ವಹಿಸಲಾಗಿದ್ದು, ಮೊದಲ ಹಂತದಲ್ಲಿ ಪರಿವರ್ತಿತ ಭೂಮಿಯಲ್ಲಿ ಅಭಿವೃದ್ಧಿ ಪಡಿಸಲಾದ ಬಿ ಖರಾಬು ಭೂಮಿ ಇಲ್ಲದ ಸರ್ವೆ ನಂಬರ್ ಸ್ವತ್ತುಗಳಿಗೂ ಇ-ಸ್ವತ್ತು ನೀಡಲಾಗುವುದು. ನಂತರ ಭೂಪರಿವರ್ತನೆ ಆಗದ ಭೂಮಿ ಸ್ವತ್ತಿಗೂ ಇ-ಸ್ವತ್ತು ನೀಡಲು ಕೆಲವೇ ತಿಂಗಳುಗಳಲ್ಲಿ ನಿಯಮಗಳಿಗೆ ಮಾರ್ಪಾಡು ಮಾಡಿ, ಕ್ರಮ ವಹಿಸಲಾಗುವುದು.

ಪ್ರವಾಹ, ಮಳೆ, ಬೆಂಕಿ ಅನಾಹುತ

ಹಲವು ತಲೆಮಾರು ಹಾಗೂ ದಶಕಗಳಿಂದ ಗ್ರಾಮಠಾಣಾ ವ್ಯಾಪ್ತಿಯಲ್ಲಿ ತಮ್ಮ ಆಸ್ತಿಯಲ್ಲೇ ವಾಸಿಸುತ್ತಿದ್ದರೂ ಆಸ್ತಿ ದಾಖಲೆಗಳು ಪ್ರವಾಹ, ಮಳೆ, ಬೆಂಕಿ ಅನಾಹುತದಲ್ಲಿ ಹಾಳಾಗಿವೆ, ಮತ್ತೆ ಕೆಲವೆಡೆ ಆಸ್ತಿ ದಾಖಲೆ ಗೆದ್ದಲು ತಿಂದು ಹಾಳಾಗಿದೆ. ದಾಖಲೆಗಳು ಲಭ್ಯವಿಲ್ಲದವರಿಗೆ 07.04.2025 ರ ಪೂರ್ವದಲ್ಲಿನ ವಿದ್ಯುತ್‌ ಬಿಲ್ ಆಧಾರದ ಮೇಲೆ ಮತ್ತು ಸ್ಥಳ ಮಹಜರು ಮಾಡಿ, ಆಕ್ಷೇಪಣೆ ಸಲ್ಲಿಸಲು 21 ದಿನ ಕಾಲಾವಕಾಶ ನೀಡಿ ನಂತರ ಇ-ಸ್ವತ್ತು ನೀಡಲಾಗುವುದು.

ಮಲೆನಾಡು ಭಾಗದ ಜನರ ವಾಸಸ್ಥಳಗಳ ಸ್ವರೂಪ ಗಮನದಲ್ಲಿ ಇಟ್ಟುಕೊಂಡು, ಕಣ, ಮನೆ ಮತ್ತು ಮನೆದಳ ಆಸ್ತಿಗಳಿಗೂ ಇ-ಸ್ವತ್ತು ನೀಡಲು ಅವಕಾಶ ಕಲ್ಪಿಸಲಾಗಿದೆ, ಕೃಷಿ ಜಮೀನಿನಲ್ಲಿ ವಾಸಕ್ಕಾಗಿ ಅಥವಾ ಕೃಷಿ ಉದ್ದೇಶಕ್ಕಾಗಿ ನಿರ್ಮಿಸಿಕೊಂಡಿರುವ ಕಟ್ಟಡಗಳಿಗೆ ನೋಂದಾಯಿತ ದಾಖಲೆಗಳು ಇಲ್ಲದಿದ್ದರೂ, ನಿಯಮಾನುಸಾರ ಇ-ಸ್ವತ್ತು ದಾಖಲೆ ಪಡೆಯಲು ಅವಕಾಶ ಕಲ್ಪಿಸುವ ಪ್ರಕ್ರಿಯೆ ಸರಳೀಕರಿಸಲಾಗಿದೆ, 4000 ಚದರಡಿವರೆಗಿನ ಸ್ವತ್ತಿಗೆ ಈ ಸೌಲಭ್ಯ ಲಭಿಸಲಿದೆ.

ಇ-ಸ್ವತ್ತು 3.0 ತಂತ್ರಾಂಶ ಅಭಿವೃದ್ಧಿ

ಇ-ಸ್ವತ್ತು ಅಭಿಯಾನದ ಯಶಸ್ವಿ ಅನುಷ್ಠಾನಕ್ಕೆ ಇ-ಸ್ವತ್ತು 2.0 ತಂತ್ರಾಂಶ ಜಾರಿಯಲ್ಲಿದೆ, ಎಲ್ಲ ಗ್ರಾಮೀಣ ಆಸ್ತಿಗಳ ಸುರಕ್ಷಿತೆ ಮತ್ತು ಸರ್ಕಾರಿ ಆಸ್ತಿ, ಬಿ ಖರಾಬು ಭೂಮಿಗೆ ಇ-ಸ್ವತ್ತು ನೀಡುವುದನ್ನು ತಡೆಯಲು ಕಂದಾಯ ಇಲಾಖೆ ತಂತ್ರಾಂಶ ಮಾಹಿತಿಯನ್ನು ಸ್ವಯಂಚಾಲಿತವಾಗಿ ಪಡೆಯುವಂತೆ ಇ-ಸ್ವತ್ತು 3.0 ತಂತ್ರಾಂಶ ಅಭಿವೃದ್ಧಿ ಪಡಿಸಲಾಗುತ್ತಿದೆ.

ಗ್ರಾಮೀಣ ಪ್ರದೇಶದಲ್ಲಿನ ಜಮೀನುಗಳ ಅಳತೆ (ಸರ್ವೆ)ಯಲ್ಲಿ ಸಮಸ್ಯೆ ಇದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲೇ ಪ್ರತ್ಯೇಕ ಮೋಜಣಿ ವಿಭಾಗ ಆರಂಭಿಸಲು ಮತ್ತು ಸಿಬ್ಬಂದಿಗೆ ತರಬೇತಿ ನೀಡಿ ರೋವರ್ ಗಳ ಮೂಲಕ ಸರ್ವೆ ನಡೆಡಲು ಕಾರ್ಯಯೋಜನೆ ರೂಪಿಸಲಾಗುತ್ತಿದ್ದು, ಶೀಘ್ರವೇ ಸಚಿವ ಸಂಪುಟದ ಮುಂದೆ ಮಂಡಿಸಲಾಗುವುದು ಎಂದರು.

ಇ-ಸ್ವತ್ತು ಪಡೆಯುವಲ್ಲಿ ಯಾವುದೇ ತೊಡಕು ಎದುರಾದರೆ ಸಾರ್ವಜನಿಕರು ಸಹಾಯವಾಣಿ- 9483476000 ಅನ್ನು ಸಂಪರ್ಕಿಸಬಹುದಾಗಿದೆ.

ರಾಜ್ಯ ಸರ್ಕಾರ ಗ್ರಾಮೀಣ ಜನರಿಗೆ ಆಸ್ತಿ ಹಕ್ಕು ಕೊಡಿಸಲು ಭೂ ಗ್ಯಾರಂಟಿ ಇ-ಸ್ವತ್ತು ಅಭಿಯಾನಕ್ಕೆ ಚಾಲನೆ ನೀಡಿದ್ದು, ಸಮಸ್ಯೆ ಆಗದಂತೆ ಮತ್ತು ಸರ್ಕಾರಿ ಆಸ್ತಿ ಸಂರಕ್ಷಣೆ ಜವಾಬ್ದಾರಿಯೊಂದಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಪ್ರಾಮಾಣಿಕತೆ, ದಕ್ಷತೆ ಮತ್ತು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಈಶ್ವರ ಖಂಡ್ರೆ ತಿಳಿಸಿದರು.

Tags: Bengaluruckcknewsnowe swattueshwar khanderekarnatakaland records
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

Belonging: A Journey of Love

ಸೋನಿಯಾ ಗಾಂಧಿ ಆತ್ಮಚರಿತ್ರೆ #BelongingA JourneyofLove ಓದಲ್ಲ

by cknewsnow desk
November 18, 2026
0

ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿಕೆ

ಕಾವೇರಿ ಬಿಕ್ಕಟ್ಟು; ಮೋದಿ ಮಧ್ಯಪ್ರವೇಶಕ್ಕೆ ಹೆಚ್.ಡಿ.ದೇವೇಗೌಡರ ಒತ್ತಾಯ

ಕಾವೇರಿ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ದೇವೇಗೌಡರ ಪತ್ರ

by cknewsnow desk
November 17, 2026
0

ಮೇಕೆದಾಟು ಯೋಜನೆಗೆ ಅನುಮತಿ ನೀಡಿ, ಕಾವೇರಿ ನ್ಯಾಯಮಂಡಳಿ ತೀರ್ಪು ಮರು ಪರಿಶೀಲಿಸಿ ಎಂದು ಆಗ್ರಹ

ರಾಜ್ಯ ರಾಜಕಾರಣಕ್ಕೆ ಬರ್ತೀರಾ ಎಂದರೆ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಎಂದ HDK

ರಾಜ್ಯ ರಾಜಕಾರಣಕ್ಕೆ ಬರ್ತೀರಾ ಎಂದರೆ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಎಂದ HDK

by cknewsnow desk
November 15, 2026
0

ರಾಷ್ಟ್ರ ರಾಜಕಾರಣದಲ್ಲಿ ಎಷ್ಟೇ ಬ್ಯುಸಿ ಇದ್ದರೂ ರಾಮನಗರಕ್ಕೆ ಸಮಯ ಕೊಡುತ್ತೇನೆ

ಶ್ರೀ ಹಾಸನಾಂಬೆ ದರ್ಶನೋತ್ಸವ, ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ #live

ಶ್ರೀ ಹಾಸನಾಂಬೆ ದರ್ಶನೋತ್ಸವ, ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ #live

by cknewsnow desk
November 15, 2026
0

ಭಕ್ತರಿಂದ ಕಳೆಗಟ್ಟಿದ ಹಾಸನ ನಗರ

ಕರ್ನಾಟಕ, ತಮಿಳುನಾಡು ಜಲ ಸಂಕಷ್ಟಕ್ಕೆ ಮೇಕೆದಾಟು ಒಂದೇ ಪರಿಹಾರ ಎಂದ ಸಿಎಂ

ಕಾವೇರಿ ನೀರಿನ ವಿಷಯವೇ ತಮಿಳುನಾಡು ರಾಜಕೀಯ ಪಕ್ಷಗಳಿಗೆ ವೋಟಿನಾಧಾರ!

by cknewsnow desk
November 15, 2026
0

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಿಡಿ

ದಸರಾ ಜಟಾಪಟಿ: ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ವರ್ಗಾವಣೆ

ದಸರಾ ಜಟಾಪಟಿ: ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ವರ್ಗಾವಣೆ

by cknewsnow desk
November 15, 2026
0

ದಸರಾ ಅವ್ಯವಸ್ಥೆಗೆ ವರ್ಗಾವಣೆ ಶಿಕ್ಷೆಗೆ ಗುರಿಯಾದರಾ ಐಪಿಎಸ್ ಅಧಿಕಾರಿ

Leave a Reply Cancel reply

Your email address will not be published. Required fields are marked *

Recommended

370ನೇ ವಿಧಿ ಇನ್ನಿಲ್ಲವಾಗಿ ಎರಡು ವರ್ಷ; ಬದಲಾಗಿದೆ ಜಮ್ಮು-ಕಾಶ್ಮೀರ

370ನೇ ವಿಧಿ ಇನ್ನಿಲ್ಲವಾಗಿ ಎರಡು ವರ್ಷ; ಬದಲಾಗಿದೆ ಜಮ್ಮು-ಕಾಶ್ಮೀರ

5 years ago
ಪ್ರಾಧ್ಯಾಪಕರಾದ ದಳಪತಿ

ದೇವೇಗೌಡರು ಮತ್ತು ಸಿಂಧಗಿ ಕ್ಷೇತ್ರದ ಕರುಳಬಳ್ಳಿ ಸಂಬಂಧ ಬಿಡಿಸಿಟ್ಟ ಹೆಚ್.ಡಿ.ಕುಮಾರಸ್ವಾಮಿ

5 years ago

Popular News

  • ಗ್ರಾಮೀಣ ಎಲ್ಲಾ ಆಸ್ತಿಗಳಿಗೆ ಇ-ಸ್ವತ್ತು ದೃಢೀಕರಣ

    ಗ್ರಾಮೀಣ ಎಲ್ಲಾ ಆಸ್ತಿಗಳಿಗೆ ಇ-ಸ್ವತ್ತು ದೃಢೀಕರಣ

    0 shares
    Share 0 Tweet 0
  • ಸೋನಿಯಾ ಗಾಂಧಿ ಆತ್ಮಚರಿತ್ರೆ #BelongingA JourneyofLove ಓದಲ್ಲ

    0 shares
    Share 0 Tweet 0
  • Belonging: A Journey of Love

    0 shares
    Share 0 Tweet 0
  • ಕಾವೇರಿ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ದೇವೇಗೌಡರ ಪತ್ರ

    0 shares
    Share 0 Tweet 0
  • ರಾಜ್ಯ ರಾಜಕಾರಣಕ್ಕೆ ಬರ್ತೀರಾ ಎಂದರೆ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಎಂದ HDK

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಗ್ರಾಮೀಣ ಎಲ್ಲಾ ಆಸ್ತಿಗಳಿಗೆ ಇ-ಸ್ವತ್ತು ದೃಢೀಕರಣ

ಗ್ರಾಮೀಣ ಎಲ್ಲಾ ಆಸ್ತಿಗಳಿಗೆ ಇ-ಸ್ವತ್ತು ದೃಢೀಕರಣ

November 18, 2026
Belonging: A Journey of Love

ಸೋನಿಯಾ ಗಾಂಧಿ ಆತ್ಮಚರಿತ್ರೆ #BelongingA JourneyofLove ಓದಲ್ಲ

November 18, 2026
Belonging: A Journey of Love

Belonging: A Journey of Love

November 18, 2026
ಕಾವೇರಿ ಬಿಕ್ಕಟ್ಟು; ಮೋದಿ ಮಧ್ಯಪ್ರವೇಶಕ್ಕೆ ಹೆಚ್.ಡಿ.ದೇವೇಗೌಡರ ಒತ್ತಾಯ

ಕಾವೇರಿ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ದೇವೇಗೌಡರ ಪತ್ರ

November 17, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ