• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS

ಕೋವಿಡ್-19; ಕಾಂಗ್ರೆಸ್ಸಿಗರ ಲೆಕ್ಕಕ್ಕೆ ಅಸಲಿ ಲೆಕ್ಕ ಕೊಟ್ಟರಾ ಡಿಸಿಎಂ ಮತ್ತು ಶ್ರೀರಾಮುಲು?

cknewsnow desk by cknewsnow desk
July 21, 2020
in NEWS & VIEWS
Reading Time: 2 mins read
0
ಕೋವಿಡ್-19; ಕಾಂಗ್ರೆಸ್ಸಿಗರ ಲೆಕ್ಕಕ್ಕೆ ಅಸಲಿ ಲೆಕ್ಕ ಕೊಟ್ಟರಾ ಡಿಸಿಎಂ ಮತ್ತು ಶ್ರೀರಾಮುಲು?
914
VIEWS
FacebookTwitterWhatsuplinkedinEmail

ಬೆಂಗಳೂರು: ಕೋವಿಡ್-19 ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ ಅಕ್ರಮ ನಡೆದಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಮತ್ತು ಆರೋಗ್ಯ ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ. ಜನರಿಗೆ ಕಾಂಗ್ರೆಸ್ಸಿನ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಸುಳ್ಳುಲೆಕ್ಕ ಹೇಳುತ್ತಿದ್ದಾರೆ. ನಮ್ಮಲ್ಲಿದೆ ಅಸಲಿ ಲೆಕ್ಕ ಎಂದು ಅವರಿಬ್ಬರು ಸವಾಲು ಹಾಕಿದ್ದು, ಈ ಹಿನ್ನಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನಡೆಯುತ್ತಿರುವ ಕೋವಿಡ್ ಹಗರಣ ಸಂಘರ್ಷ ಸದ್ಯಕ್ಕೆ ಮುಗಿಯುವ ಹಾಗೆ ಕಾಣುತ್ತಿಲ್ಲ.

ಸೋಮವಾರ ಬೆಳಗ್ಗೆಯೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಡಿಸಿಎಂ ಅಶ್ವತ್ಥನಾರಾಯಣ ಮತ್ತು ಶ್ರೀರಾಮುಲು ಅವರನ್ನು ತಮ್ಮ ನಿವಾಸಕ್ಕೆ ಕರೆದುಕೊಂಡು ಮಾತುಕತೆ ನಡೆಸಿದ ಬೆನ್ನಲ್ಲಿಯೇ ಬೆಂಗಳೂರಿನಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರಿಬ್ಬರೂ, ಪ್ರತಿಯೊಂದು ಪರಿಕರವನ್ನು ಆಯಾ ಸಂದರ್ಭದಲ್ಲಿ ಕಾನೂನಿನ ಚೌಕಟ್ಟಿನಲ್ಲಿಯೇ ಖರೀದಿ ಮಾಡಲಾಗಿದೆ. ಇದರಲ್ಲಿ ಒಂದು ನಯಾಪೈಸೆಯಷ್ಟೂ ಅಕ್ರಮ ನಡೆದಿಲ್ಲ. ಕೇವಲ ದುರುದ್ದೇಶದಿಂದ ಮಾತ್ರ ಪ್ರತಿಪಕ್ಷಗಳ ನಾಯಕರು ಅರೋಪ ಮಾಡುತ್ತಿದ್ದಾರೆಂದು ತಿರುಗೇಟು ನೀಡಿದರು.

ಕೋವಿಡ್‌ -19 ಉಪಕರಣಗಳ ಖರೀದಿಯಲ್ಲಿ 2,200 ಕೋಟಿ ರೂ. ಅವ್ಯವಹಾರ ನಡೆದಿದೆ ಎಂಬುದು ಸಿದ್ದರಾಮಯ್ಯ ಅವರ ಅರೋಪ. ಅದು ಅವರ ಕಪೋಲಕಲ್ಪಿತ ಊಹೆ ಮಾತ್ರ. ಕೇವಲ ಆರೋಪ ಮಾಡಲಿಕ್ಕೆ ಮಾತ್ರವೇ ಅವರು ಹೀಗೆ ಹೇಳಿರುವುದು ಎಂದು ಡಿಸಿಎಂ ಹೇಳಿದರೆ, ವೆಂಟಿಲೇಟರ್​​ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂದು ವಿಪಕ್ಷ ನಾಯಕರು ಆರೋಪಿಸಿರುವುದು ಸರಿಯಲ್ಲ. ನನ್ನ ಅವಧಿಯಲ್ಲಿ ಒಂದು ವೇಳೆ ಅವ್ಯವಹಾರ ನಡೆದಿದ್ದರೇ ಒಂದು ಕ್ಷಣವೂ ನಿಲ್ಲದೆ ರಾಜೀನಾಮೆ ನೀಡುತ್ತೇನೆ ಎಂದು ಶ್ರೀರಾಮುಲು ಸವಾಲು ಹಾಕಿದರು.

ಅವರಿಬ್ಬರ ಸಮರ್ಥನೆ ಹೀಗಿತ್ತು:

*ಅಂಕಿ-ಅಂಶಗಳನ್ನು ಹೇಳುವ ಭರದಲ್ಲಿಯೇ ಪ್ರತಿಪಕ್ಷ ನಾಯಕರು ಸುಳ್ಳು ಲೆಕ್ಕ ಹೇಳಿದ್ದಾರೆ. 2,220 ಕೋಟಿ ರೂ. ಅಕ್ರಮ ನಡೆದಿದೆ ಎಂದು ಅವರು ಹೇಳಿದ್ದಾರೆ. ಆದರೆ, ಇಡೀ ಕೋವಿಡ್’ಗಾಗಿ ಸರಕಾರ ಖರೀದಿ ಮಾಡಿರುವ ಪರಿಕರಗಳ ಒಟ್ಟಾರೆ ಮೊತ್ತ 290.6 ಕೋಟಿ ರೂ. ಮಾತ್ರ. ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 33 ಕೋಟಿಯಷ್ಟು ಮೊತ್ತದ ಪರಿಕರಗಳನ್ನು ಖರೀದಿಸಲಾಗಿದೆ. ಹಾಗಾದರೆ ಉಳಿದ ಲೆಕ್ಕದ ಬಗ್ಗೆ ಅವರು ಏನು ಹೇಳುತ್ತಾರೆ? ಅವರು ಜನರನ್ನು ದಿಕ್ಕು ತಪ್ಪಿಸಲು ಹಾಗೂ ಸರಕಾರಕ್ಕೆ ಮಸಿ ಬಳಿಯಲು ಇಂಥ ಲೆಕ್ಕಗಳನ್ನು ಸೃಷ್ಟಿಸಿದ್ದಾರೆ. ಇದು ಇಲ್ಲಿಗೇ ನಿಲ್ಲಲಿ.

*ವೆಂಟಿಲೇಟರ್​​​​ ಖರೀದಿ ಎಂಬುದು ಸುಖಾಸುಮ್ಮನೆ ಮಾಡುವಂಥದ್ದಲ್ಲ. ಹತ್ತಾರು ರೀತಿಯಲ್ಲಿ ಮುನ್ನೆಚ್ಚರಿಕೆ ವಹಿಸಬೇಕಾಗುತ್ತದೆ. ಜತೆಗೆ,  ತಾಂತ್ರಿಕ ಅಂಶಗಳ ಆಧಾರದ ಮೇಲೆ ಖರೀದಿ ಮಾಡಬೇಕಾಗುತ್ತದೆ. ಸುಮಾರು 4 ಲಕ್ಷ ರೂ.ಗಳಿಂದ 50-60 ಲಕ್ಷ ರೂ. ಮೌಲ್ಯದ ವೆಂಟಿಲೇಟರ್’​​ಗಳೂ ಇವೆ.  ಅವುಗಳಲ್ಲಿ ಅಡಗಿರುವ ಸೌಲಭ್ಯಗಳ ಮೇಲೆ ದರ ನಿಗದಿ ಆಗುತ್ತದೆ. ಕೇವಲ 4 ಲಕ್ಷ ದರದ ಮೇಲೆ ಮಾತ್ರ ವೆಂಟಿಲೇಟರ್’ಗಳನ್ನು​ ಖರೀದಿ ಮಾಡಲಾಗಿಲ್ಲ. ಜತೆಗೆ, ತುರ್ತು ನಿಗಾ ಘಟಕದಲ್ಲಿ ಬಳಸಲ್ಪಡುವ ವೆಂಟಿಲೇಟರ್‌ಗೆ 18 ಲಕ್ಷಕ್ಕೂ ಹೆಚ್ಚು ದರವಿದೆ. ಇವೆಲ್ಲ ಮಾಹಿತಿಯನ್ನು ಪ್ರತಿಪಕ್ಷ ನಾಯಕರು ಸೂಕ್ತವಾಗಿ ಸಂಗ್ರಹ ಮಾಡಬೇಕಾಗಿತ್ತು. ಸುಮ್ಮನೆ ಊಹೆ ಮೇಲೆ ಅವರು ಆರೋಪಿಸಿದ್ದಾರೆ.

*ವೆಂಟಿಲೇಟರ್ ಖರೀದಿ ವ್ಯವಹಾರ ಒಂದರಲ್ಲೇ 120 ಕೋಟಿ ರೂ. ಅವ್ಯವಹಾರ ಆಗಿದೆ ಎಂದು ಅವರು ದೂರಿದ್ದಾರೆ. ಇದುವರೆಗೂ 10.61 ಕೋಟಿ ರೂ. ಮೌಲ್ಯದ ವೆಂಟಿಲೇಟರ್’ಗಳನ್ನಷ್ಟೇ ಖರೀದಿ ಮಾಡಲಾಗಿದೆ. ಇನ್ನು, ಪಿಪಿಇ ಕಿಟ್‌ ಖರೀದಿಗೆ 79.35 ಕೋಟಿ ರೂ.ಗಳಷ್ಟು ಖರ್ಚು ಮಾಡಲಾಗಿದೆ. ಇದೊಂದರಲ್ಲಿಯೇ 150 ಕೋಟಿ ರೂ.ಗಳಿಗೂ ಹೆಚ್ಚು ಅಕ್ರಮ ನಡೆದಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದರು. ಎಲ್ಲಿದೆ ಅವರ ಲೆಕ್ಕ? ಈಗ ಹೇಳಲಿ ಉತ್ತರ. ಅಸಲಿ ಲೆಕ್ಕ ನಮ್ಮಲ್ಲಿದೆ.

*N-95 ಮಾಸ್ಕ್ ಖರೀದಿಯಲ್ಲೂ ಸರಕಾರ ನಿಯಮಗಳನ್ನು ಬಿಟ್ಟು ಆಚೀಚೆ ಕದಲಿಲ್ಲ. ಪ್ರತಿ ಒಂದು ಮಾಸ್ಕ್ ಅನ್ನು ಆರಂಭದಲ್ಲಿ ಅಂದರೆ ಮಾರ್ಚ್’ನಲ್ಲಿ 147 ರೂ.ಗೆ ಖರೀದಿಸಿದ್ದೇವೆ. ಈಗ ಅದರ ಬೆಲೆ 44.75 ರೂಪಾಯಿಗೆ ಇಳಿದಿದೆ. ರಾಜ್ಯದ ವಿವಿಧ ಕಡೆಗಳಲ್ಲಿ ಈ ಮಾಸ್ಕ್ ಖರೀದಿಗೆ 11.51 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ.  ಇದೇ ರೀತಿ ಅಗತ್ಯಕ್ಕೆ ತಕ್ಕಂತೆ ಸರ್ಜಿಕಲ್ ಗ್ಲೌಸ್’ಗಳನ್ನು ಖರೀದಿ ಮಾಡಲಾಗಿದೆ. ಕೇರಳದ ಕಂಪನಿಯವರು ತಲಾ ಒಂದು ಸರ್ಜಿಕಲ್ ಗ್ಲೌಸ್‌ಗೆ 8.10 ರೂ. ಕೊಡುತ್ತೇವೆಂದು ಒಪ್ಪಿದ್ದರು. ಬಳಿಕ ಅವರು ಸರಬರಾಜು ಮಾಡಲಿಲ್ಲ. ಆಮೇಲೆ ಬೆಂಗಳೂರಿನ ಕಂಪನಿಯೊಂದಕ್ಕೆ ಆದೇಶ ನೀಡಲಾಯಿತು. ಪ್ರತಿ ಒಂದು ಗ್ಲೌಸ್​​ 9.50 ರೂ.ಗೆ ಕೊಡುತ್ತೇವೆ ಎಂದು ಅವರು ತಿಳಿಸಿದ್ದರು. ಅವರಿಗೆ 3 ಲಕ್ಷ ಗ್ಲೌಸುಗಳಿಗೆ ಆದೇಶ ನೀಡಲಾಗಿತ್ತು. ಅವರು ನೋಡಿದರೆ ಕೇವಲ 30 ಸಾವಿರ ಗ್ಲೌಸುಗಳನ್ನು ಪೂರೈಕೆ ಮಾಡಿದ್ದಾರೆ. ಇದಕ್ಕೆ  28.5 ಲಕ್ಷ ಆಗಿದೆ.

*ಸ್ಯಾನಿಟೈಸರ್ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಕೇಂದ್ರ ಸರ್ಕಾರದ ಆದೇಶದಂತೆ ಸ್ಯಾನಿಟೈಸರ್ ಖರೀದಿ ಆಗಿದೆ. 500 ಎಂ.ಎಲ್.  ಬಾಟಲಿಯ  25 ಸಾವಿರ ಲೀಟರ್‌ಗೆ ಆದೇಶ ನೀಡಿದ್ದೇವೆ. ಈವರೆಗೂ ಬೇರೆ ಬೇರೆ ಕಂಪನಿಗಳೊಂದಿಗೆ 2.65 ಕೋಟಿ ರೂ. ಮೊತ್ತದಷ್ಟು ಸ್ಯಾನಿಟೈಸರ್ ಖರೀದಿ ಮಾಡಲಾಗಿದೆ. ಸಿಎಸ್ ಆರ್ ಹಣದಿಂದ ಹಲವಾರು ಸರಬರಾಜು ‌ಮಾಡುತ್ತಿರುವ ಕಾರಣ ಇದರ ಖರೀದಿ‌ ನಿಲ್ಲಿಸಿದ್ದೇವೆ.

ಶ್ರೀರಾಮುಲು ಸವಾಲು:

ಇಡೀ ದೇಶದಲ್ಲಿ ಕೊರೋನಾಗೆ ಮೊದಲ ಸಾವು ಆಗಿದ್ದು ಕಲ್ಬುರ್ಗಿಯಲ್ಲಿ. ನಾನು ಎರಡು ದಿನ ಅಲ್ಲೇ ಇದ್ದು ವೈದ್ಯರಿಗೆ ಧೈರ್ಯ ತುಂಬಿದೆ. ಕೇವಲ 4 ಕಾಂಪೋನೆಂಟ್ ಇರುವ ಪಿಪಿಇ ಕಿಟ್ ಕೊಟ್ಟರೇ ಆಗಲ್ಲ ಎಂದು ವೈದ್ಯರೇ ಹೇಳಿದ್ದರು. ಬಳಿಕ 6 ಕಾಂಪೋನೆಂಟ್ ಇರುವ ಪಿಪಿಇ ಕಿಟ್ ಬೇಕು ಎಂದರು. ಅದನ್ನು ತಯಾರು ಮಾಡಲು ಮುಂದಾಗಿದ್ದೆವು. 1 ಲಕ್ಷ ಕಿಟ್ ತಯಾರು ಮಾಡಲು ಆದೇಶ ನೀಡಿದೆವು. ಈವರೆಗೂ ನಮಗೆ 40 ಸಾವಿರ ಕಿಟ್ ಮಾತ್ರ ಪೂರೈಕೆಯಾಗಿದೆ. ನಾವು ಕೆಲಸ ಮಾಡುತ್ತಿರುವುದು ಪ್ರತಿಪಕ್ಷದ ಕಣ್ಣಿಗೆ ಕಾಣುವುದಿಲ್ಲವೇ? ಅಕ್ರಮವನ್ನು ಅವರು ಸಾಬೀತು ಮಾಡಿದರೆ ಈಗಲೇ ಕುರ್ಚಿ ಬಿಟ್ಟು ಎದ್ದು ಹೋಗುತ್ತೇನೆ ಎಂದು ಸವಾಲು ಹಾಕಿದರು ಶ್ರೀರಾಮುಲು.

ಮುಖ್ಯಮಂತ್ರಿಯಾದಿಯಾಗಿ ನಾವೆಲ್ಲರೂ ಬಹಳ ಕಷ್ಟಪಟ್ಟು ಕೋವಿಡ್ ಪರಿಸ್ಥಿತಿಯನ್ನು ನಿಭಾಯಿಸುತ್ತಿದ್ದೇವೆ. ಅಂಥ ವೇಳೆಯಲ್ಲಿ 6 ಕಾಂಪೋನೆಂಟ್‌ನಿಂದ 10 ಕಾಂಪೋನೆಂಟ್ ಇರುವ ಪಿಪಿಇ ಕಿಟ್ ಬೇಕು ಎಂದು ವೈದ್ಯರು ಬೇಡಿಕೆ ಇಟ್ಟರು. ಚೀನಾ, ಸಿಂಗಾಪುರದಿಂದ ಈ ಕಿಟ್ ಖರೀದಿ ಮಾಡಿದ್ದೇವೆ. ಮೂರು ಕಂಪನಿಗಳಿಂದ ಒಟ್ಟು 10 ಲಕ್ಷ ಕಿಟ್ ಖರೀದಿಸಿದ್ದೇವೆ. ಆರಂಭದಲ್ಲಿ ಅದರ ಬೆಲೆ ಹೆಚ್ಚಿತ್ತು. ಇದರ ಬೆಲೆ ಇದ್ದಿದ್ದು ಬೇರೆ, ಈಗಿನ ದರ ಬೇರೆ ಇದೆ.

ವಸ್ತುಸ್ಥಿತಿ ಅರಿಯಬೇಕೆಂದ ಡಿಸಿಎಂ:

ಕೋವಿಡ್-19 ಬಂದಾಗ ಒಂದು‌ ಕಂಪನಿ ಮಾತ್ರ ವೆಂಟಿಲೇಟರ್’ಗಳನ್ನು ತಯಾರು ಮಾಡುತ್ತಿತ್ತು. ಹೀಗಾಗಿ ಆಗಲೇ 130 ವೆಂಟಿಲೇಟರ್‌ಗೆ ಆದೇಶ ನೀಡಲಾಗಿತ್ತು. ಅದನ್ನು ವೈದ್ಯಕೀಯ ಶಿಕ್ಷಣ ಇಲಾಖೆಯಿಂದಲೂ ಆರ್ಡರ್ ಮಾಡಲಾಗಿತ್ತು. ಆ ಕಂಪನಿ 130 ವೆಂಟಿಲೇಟರ್ ಪೈಕಿ 80 ಮಾತ್ರ ಪೂರೈಸಿತ್ತು. ಪ್ರತಿಯೊಂದರ ಬೆಲೆ 5.65 ಲಕ್ಷ. 18 ಲಕ್ಷ ರೂ.ಗಳಿಗೆ ಐಸಿಯು‌ನಲ್ಲಿ‌ ಬಳಸಬಹುದಾದ ಉತ್ಕೃಷ್ಟ ಗುಣಮಟ್ಟದ ವೆಂಟಿಲೇಟರ್ ಖರೀದಿಯಾಗಿದೆ. ಇನ್ನು ತಮಿಳುನಾಡಿನಲ್ಲಿ ಕೇವಲ 4 ಲಕ್ಷಕ್ಕೆ ವೆಂಟಿಲೇಟರ್ ಕೊಡುತ್ತಾರೆ ಎನ್ನುತ್ತಾರೆ. ಅದು ಮೊಬೈಲ್ ವೆಂಟಿಲೇಟರ್. ಒಂದು‌ ಕಡೆಯಿಂದ ಇನ್ನೊಂದು ಕಡೆ ತೆಗೆದುಕೊಂಡು ಹೋಗಲು, ಕೇವಲ ಅಂಬ್ಯುಲೆನ್ಸ್‌ನಲ್ಲಿ ಬಳಕೆಯಾಗುವ ವೆಂಟಿಲೇಟರ್ ಅದು. ಶಿವಾನಂದ ಪಾಟೀಲ್ ಆರೋಗ್ಯ ಸಚಿವರಾಗಿದ್ದಾಗ 2019ರಲ್ಲಿ ವೆಂಟಿಲೇಟರ್ ಖರೀದಿಯಾಗಿದೆ. ಆಗ 15,12,000 ರೂ. ವೆಚ್ಚ ಮಾಡಲಾಗಿದೆ. ಅಂದಿನ ಪರಿಸ್ಥಿತಿ ಏನಿತ್ತು? ಇದುವರೆಗೆ ಮೂರು ಬಾರಿ ವೆಂಟಿಲೇಟರ್ ಖರೀದಿಯಾಗಿದೆ. ಇದೆಲ್ಲ ಪ್ರತಿಪಕ್ಷ ನಾಯಕರಿಗೆ ಗೊತ್ತಿಲ್ಲವೇ? ಎಂದು ಡಿಸಿಎಂ ಡಾ. ಸಿ.ಎನ್. ಅಶ್ವತ್ಥನಾರಾಯಣ ಪ್ರಶ್ನಿಸಿದ್ದಾರೆ.

ರಾಜ್ಯ ಈ ವರ್ಷದ ಆರಂಭದಿಂದಲೂ ಕೋವಿಡ್-19 ಎದುರಿಸುವ ಪರಿಸ್ಥಿತಿ ಬಂದಿದೆ. ಆರೋಗ್ಯ ಇಲಾಖೆಯಲ್ಲಿ ಹೆಚ್ಚಿನ ವ್ಯವಸ್ಥೆ ಮಾಡಬೇಕಿತ್ತು. ಬೇರೆ ಹಂತದಲ್ಲಿ ಹುಷಾರು ತಪ್ಪಿದವರು ಆಸ್ಪತ್ರೆಗೆ ಬರುತ್ತಾರೆ. ಹಿಂದೆ ದುಡ್ಡು ಕೊಟ್ಟರೂ ಸ್ಯಾನಿಟೈಜೇಷರ್, N-95 ಮಾಸ್ಕ್ ಸಿಗುತ್ತಿರಲಿಲ್ಲ. ಪಿಪಿಇ ಕಿಟ್ ಕೂಡ ಇರಲಿಲ್ಲ. ಎಲ್ಲಾ ಪರಿಕರಗಳನ್ನು ಚೀನಾದಿಂದಲೇ ಆಮದು ಮಾಡಿಕೊಳ್ಳಲಾಗುತ್ತಿತ್ತು. ಈ ಸೋಂಕಿನಿಂದ ಏಕಾಏಕಿ ಬೇಡಿಕೆ ಹೆಚ್ಚಾಯಿತು. ಅಂತಹ ಸಂದರ್ಭದಲ್ಲಿ ಚೀನಾ ಕೂಡ ಕೈಕೊಟ್ಟಿತು. ಇವತ್ತು ಒಳ್ಳೆಯ ಪಿಪಿಇ ಕಿಟ್ 3,900 ರೂ. ಇದೆ ಎಂದು ಡಿಸಿಎಂ ಮಾಹಿತಿ ನೀಡಿದರು.

ತನಿಖೆಯ ಪ್ರಶ್ನೆಯೇ ಇಲ್ಲ:

ಕಾಂಗ್ರೆಸ್ ಕೇವಲ ರಾಜಕೀಯಕ್ಕಾಗಿ ಆರೋಪ ಮಾಡುತ್ತಿದೆ. ಇದರಲ್ಲಿ ತನಿಖೆಯ ಪ್ರಶ್ನೆಯೇ ಇಲ್ಲ. ಅಗತ್ಯಬಿದ್ದರೆ ಸದನದಲ್ಲಿ ಉತ್ತರ ನೀಡಲು ಸರಕಾರ ಸಿದ್ಧವಿದೆ. ಸರಕಾರದ್ದು ಎಳ್ಳಷ್ಟು ತಪ್ಪಿಲ್ಲ. ಹೀಗೆ ತಪ್ಪಿಲ್ಲ ಎಂದ ಮೇಲೆ ತನಿಖೆಯ ಮಾತೇ ಬರುವುದಿಲ್ಲ. ಸುಖಾಸುಮ್ಮನೆ ಹಿಟ್ ಅಂಡ್ ರನ್ ಮಾಡಬಾರದು ಎಂದು ಡಿಸಿಎಂ ತರಾಟೆಗೆ ತೆಗೆದುಕೊಂಡರು. ಪತ್ರಿಕಾಗೋಷ್ಠಿಯಲ್ಲಿ ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದಶೀ ಜಾವೇದ್ ಆಖ್ತರ್, ರಾಜ್ಯ ಡ್ರಗ್ಸ್ ಲಾಜಿಸಿಕ್ಟಿಕ್ಸ್ ಸಂಸ್ಥೆ ಹೆಚ್ಚುವರಿ ನಿರ್ದೇಶಕಿ ಎನ್ ಮಂಜುಶ್ರೀ ಸೇರಿದಂತೆ ಇತರ ಅಧಿಕಾರಿಗಳು ಹಾಜರಿದ್ದರು.

ಸಿದ್ದರಾಮಯ್ಯ ಟಾಂಗ್:

ಇದೇ ವೇಳೆ ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಹಾಗೂ ಸಚಿವ ಶ್ರೀರಾಮುಲು ನೀಡಿರುವ ಲೆಕ್ಕ ತಮಗೆ ತೃಪ್ತಿ ನೀಡಿಲ್ಲ ಎಂದು ಸಿದ್ದರಾಮಯ್ಯ ಹೇಳೀದ್ದಾರೆ. ಜಂಟಿ ಪತ್ರಿಕಾಗೋಷ್ಠಿ ಮುಗಿದ ಕೂಡಲೇ ಸರಣಿ ಟ್ವೀಟುಗಳನ್ನು ಮಾಡಿರುವ ಅವರು, ಅವರಿಬ್ಬರೂ ಸತ್ಯವನ್ನು ಬಿಚ್ಚಿಡುವ ಬದಲು ಸುಳ್ಳನ್ನು ಮುಚ್ಚಿಟ್ಟಿದ್ದಾರೆ. ಜತೆಗೆ, ಈ ಪತ್ರಿಕಾಗೋಷ್ಠಿಯಲ್ಲಿ ವೈದ್ಯಕೀಯ ಸಚಿವ ಸುಧಾಕರ್ ಕಾಣಲಿಲ್ಲ. ಸರಕಾರದೊಳಗೊಂದು ಸರಕಾರ ಇದೆಯೇ ಎಂದು ಅವರು ಕಾಲೆಳೆದಿದ್ದಾರೆ.

ಅವರೇ ಲೆಕ್ಕ ಹೇಳಿದಂತೆ ಈವರೆಗೂ 233 ಕೋಟಿಯಷ್ಟು ವೈದ್ಯಕೀಯ ಉಪಕರಣಗಳನ್ನು ಖರೀದಿ ಮಾಡಲಾಗಿದೆ. ಆದರೆ ಅವರು ಹೇಳಿರುವ ಲೆಕ್ಕವನ್ನು ಎಷ್ಟೇ ಕೂಡಿದರೂ 100 ಕೋಟಿ ರೂ. ದಾಟುವುದಿಲ್ಲ. ಉಳಿದ ಹಣಕ್ಕೆ ಲೆಕ್ಕ ಎಲ್ಲಿದೆ? ಎಂದು ಸಿದ್ದು ಪ್ರಶ್ನಿಸಿದ್ದಾರೆ.

ಕೋವಿಡ್ ನಿಯಂತ್ರಣ ಸಲಕರಣೆಗಳ ಲೆಕ್ಕವನ್ನಷ್ಟೇ ನಾನು ಕೇಳಿದ್ದಲ್ಲ. ಆಹಾರ ಧಾನ್ಯ, ಆಹಾರ ಸಾಮಗ್ರಿ ಹಾಗೂ ಕಿಟ್, ಹಾಸಿಗೆಗಳು, ಕ್ವಾರಂಟೈನ್ ಕೇಂದ್ರಗಳಿಗೆ ಮಾಡಲಾದ ವೆಚ್ಚ, ಐಸೋಲೇಷನ್ ಕೇಂದ್ರಗಳಿಗೆ ಆಗಿರುವ ಒಟ್ಟಾರೆ ವೆಚ್ಚವನ್ನು ಕೇಳೀದ್ದೇನೆ. ಪಿಎಂ ಕೇರ್ಸ್ ನಿಧಿಯ ಅಡಿಯಲ್ಲಿ ಕೇಂದ್ರ ಸರಕಾರ 4 ಲಕ್ಷಕ್ಕೆ ಒಂದರಂತೆ ವೆಂಟಿಲೇಟರ್ ಖರೀದಿ ಮಾಡಿದೆ. ಆದರೆ ನಮ್ಮ ರಾಜ್ಯದಲ್ಲಿ 12ರಿಂದ 18 ಲಕ್ಷ ರೂ. ಕೊಟ್ಟು ಖರೀದಿ ಮಾಡಲಾಗಿದೆ. ಬೆಲೆಯಲ್ಲಿ ಇಷ್ಟೊಂದು ದೊಡ್ಡ ವ್ಯತ್ಯಾಸ ಇರುತ್ತದೆಯೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಜನಾಂದೋಲನ:
ಸರಕಾರದ ಜಂಟಿ ಪತ್ರಿಕಾಗೋಷ್ಠಿಯ ನಂತರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಖಾಡಕ್ಕೆ ಧುಮಿಕಿದ್ದಾರೆ. ಸಿದ್ದರಾಮಯ್ಯ ಸರಕಾರದ ಮಟ್ಟದಲ್ಲಿ ಹೋರಾಟ ನಡೆಸಿದರೆ, ಪಕ್ಷ ಕೋವಿಡ್ ಪರಿಕರಗಳ ಖರೀದಿ ವ್ಯವಹಾರವನ್ನು ಜನರ ಬಳಿಗೆ ಕೊಂಡೊಯ್ಯಲು ನಿರ್ಧರಿಸಿದೆ. ಈ ಮೂಲಕ ಜನಾಂದೋಲನಕ್ಕೆ ಕೆಪಿಸಿಸಿ ಮುಂದಾಗಿದೆ. ಇಡೀ ಖರೀದಿಗೆ ಸಂಬಂಧಿಸಿದಂತೆ ದಾಖಲೆಗಳನ್ನೂ ಆಮೂಲಾಗ್ರವಾಗಿ ಸಂಗ್ರಹ ಮಾಡಿರುವುದಾಗಿ ಪಕ್ಷ ಹೇಳಿಕೊಂಡಿದೆ. ಹೀಗಾಗಿ ರಾಜ್ಯದ 30 ಜಿಲ್ಲೆಗಳಲ್ಲಿಯೂ ಹೋರಾಟ ನಡೆಸುವುದಾಗಿ ರಾಜ್ಯಾಧ್ಯಕ್ಷ ಡಿಕೆಶಿ ಹೇಳಿದ್ದಾರೆ.

ಇದಕ್ಕಿಂತ ಮಿಗಿಲಾಗಿ ಈ ಬಗ್ಗೆ ಸರಕಾರ ನ್ಯಾಯಾಲಯಕ್ಕೆ ಸಲ್ಲಿಸಿರುವ ದಾಖಲೆಗಳು ಹಾಗೂ ತಮಿಳುನಾಡು ಸರಕಾರ ಖರೀದಿ ಮಾಡಿರುವ ದಾಖಲೆಗಳೂ ತಮ್ಮಲ್ಲಿವೆ ಎಂದು ಡಿಕೆಶಿ ಹೇಳೀದ್ದಾರೆ. ಹೀಗಾಗಿ ಕೋವಿಡ್ ಖರೀದಿ ತಿಕ್ಕಾಟ ಮುಂದಿನ ದಿನಗಳಲ್ಲಿ ತೀವ್ರ ಸ್ವರೂಪ ಪಡೆದುಕೊಳ್ಳುವುದು ಖಚಿತವಾಗಿದೆ.

Tags: b sriramuluBJP-Congress warcovid-19 karnatakadcm
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಜುಲೈ 30-31ಕ್ಕೆ ಸಿಇಟಿ; ಕೋವಿಡ್ ಪಾಸಿಟೀವ್ ಇದ್ದವರಿಗೂ ಪರೀಕ್ಷೆ

ಜುಲೈ 30-31ಕ್ಕೆ ಸಿಇಟಿ; ಕೋವಿಡ್ ಪಾಸಿಟೀವ್ ಇದ್ದವರಿಗೂ ಪರೀಕ್ಷೆ

Leave a Reply Cancel reply

Your email address will not be published. Required fields are marked *

Recommended

ಎಂ.ಚಿದಾನಂದಮೂರ್ತಿ; ಕನ್ನಡದ ಆತ್ಮಬಂಧು, ಶರಣ ಚಿಂತನೆಯ ಪ್ರಖರತೆ,  ಸಂಶೋಧನೆಯ ಪ್ರಾಮಾಣಿಕತೆ, ದಿಟ್ಟ ಚೇತನ ನಿರ್ಗಮನಕ್ಕೆ ವರ್ಷ

ಎಂ.ಚಿದಾನಂದಮೂರ್ತಿ; ಕನ್ನಡದ ಆತ್ಮಬಂಧು, ಶರಣ ಚಿಂತನೆಯ ಪ್ರಖರತೆ, ಸಂಶೋಧನೆಯ ಪ್ರಾಮಾಣಿಕತೆ, ದಿಟ್ಟ ಚೇತನ ನಿರ್ಗಮನಕ್ಕೆ ವರ್ಷ

5 years ago
ಶಿರಾ ಗೆದ್ದು ರಾಜ್ಯವನ್ನು ಗೆಲ್ಲುತ್ತೇವೆ; ಆದರೆ, ಉಪ ಚುನಾವಣೆಯಿಂದ ಸರಕಾರ ಬೀಳಲ್ಲ ಎಂದ ಡಿಕೆಶಿ

ಲಸಿಕೆ ವಿರೋಧಿಸಿದ್ದರೆ ನಾವೇಕೆ ಅದನ್ನು ತೆಗೆದುಕೊಳ್ಳುತ್ತಿದ್ದೆವು? ಪ್ರಧಾನಿ ಮೊದಲು ತೆಗೆದುಕೊಳ್ಳದೆ ವಾರಿಯರ್ಸ್ ಮೇಲೆ ಪ್ರಯೋಗಿಸಿದ್ದು ಏಕೆ ಎಂದು ಪ್ರಶ್ನಿಸಿದ ಡಿಕೆಶಿ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ