• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

ಜುಲೈ 30-31ಕ್ಕೆ ಸಿಇಟಿ; ಕೋವಿಡ್ ಪಾಸಿಟೀವ್ ಇದ್ದವರಿಗೂ ಪರೀಕ್ಷೆ

cknewsnow desk by cknewsnow desk
July 22, 2020
in NEWS IN USE
Reading Time: 1 min read
0
ಜುಲೈ 30-31ಕ್ಕೆ ಸಿಇಟಿ; ಕೋವಿಡ್ ಪಾಸಿಟೀವ್ ಇದ್ದವರಿಗೂ ಪರೀಕ್ಷೆ
919
VIEWS
FacebookTwitterWhatsuplinkedinEmail

ಬೆಂಗಳೂರು: ಕೋವಿಡ್-19 ಆತಂಕದ ನಡುವೆಯೂ ದ್ವಿತೀಯ ಪಿಯುಸಿ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದ್ದ ರಾಜ್ಯ ಸರಕಾರವು ಇದೀಗ ಇದೇ ಜುಲೈ 30 ಮತ್ತು 31ರಂದು ರಾಜ್ಯಾದ್ಯಂತ ಸಿಇಟಿ ಪರೀಕ್ಷೆ ನಡೆಸಲಿದೆ. ಜತೆಗೆ, ಕೋವಿಡ್ ಪಾಸಿಟೀವ್ ಇರುವ ಅಭ್ಯರ್ಥಿಗಳಿಗೂ ಪರೀಕ್ಷೆ ಬರೆಯುವ ಅವಕಾಶ ನೀಡಿರುವುದು ಮಹತ್ವದ ಸಂಗತಿ.


ಬೆಂಗಳೂರಿನಲ್ಲಿ ಮಂಗಳವಾರ ಉನ್ನತ ಶಿಕ್ಷಣ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ಪ್ರಕಟಿಸಿದರಲ್ಲದೆ, ಕೋವಿಡ್-19 ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಾಗಿ ಕೈಗೊಂಡ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಈ ಪರೀಕ್ಷೆಗೂ ಕೈಗೊಳ್ಳಲಾಗುವುದು. ಗಡಿನಾಡು ವಿದ್ಯಾರ್ಥಿಗಳ ಕನ್ನಡ ಪರೀಕ್ಷೆಯನ್ನು ಅಗಸ್ಟ್ 1ರಂದು ನಡೆಸಲಾಗುವುದು.
ರಾಜ್ಯದಲ್ಲಿ ಒಟ್ಟು 1,94,356 ವಿದ್ಯಾರ್ಥಿಗಳು 120 ಸ್ಥಳಗಳ 497 ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ ಎಂದರು.

ಪರೀಕ್ಷೆಯ ವಿವರಗಳು ಹೀಗಿವೆ:

ಬೆಂಗಳೂರು ಮಹಾನಗರದಲ್ಲಿ 83 ಕೇಂದ್ರಗಳ ವ್ಯವಸ್ಥೆ ಮಾಡಲಾಗಿದ್ದು, 40,200 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಒಟ್ಟು ವಿದ್ಯಾರ್ಥಿಗಳಲ್ಲಿ 30 ಮಂದಿ ವಿದೇಶಿಯರೂ ಇದ್ದಾರೆ. ಪರೀಕ್ಷೆಯ ಸಮಯ ಬೆಳಗ್ಗೆ 10.30ರಿಂದ 11.50 ಗಂಟೆ ಹಾಗೂ ಮಧ್ಯಾಹ್ನ 2.30ರಿಂದ 3.30 ಗಂಟೆ ವರೆಗೆ ನೆಡಯಲಿದೆ.

ಸಕಲ ಸಿದ್ಧತೆ ಮತ್ತು ಮುನ್ನೆಚ್ಚರಿಕೆ:

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರಕಾರ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಉಸ್ತುವಾರಿಯಲ್ಲಿ ಎಲ್ಲ ಮುನ್ನೆಚ್ಚರಿಕೆಗಳನ್ನು ಕೈಗೊಂಡಿದೆ. ಈಗಾಗಲೇ ಎಸ್‌ಒಪಿ (Standard operating procedure) ರಚಿಸಲಾಗಿದೆ. ಥರ್ಮಲ್ ಸ್ಕ್ರೀನಿಂಗ್, ಮಾಸ್ಕ್, ದೈಹಿಕ ಅಂತರವನ್ನು ಸೇರಿದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು. ಎರಡು ದಿನಗಳ ಮುಂಚೆಯೇ ಕೇಂದ್ರಗಳನ್ನ ಸ್ಯಾನಿಟೈಸ್ ಮಾಡಲಾಗುತ್ತದೆ.

ಪಾಸಿಟಿವ್ ವಿದ್ಯಾರ್ಥಿಗಳಿಗೂ ಅವಕಾಶ:

ಕೋವಿಡ್-19 ಪಾಸಿಟಿವ್ ಬಂದಿರುವ ವಿದ್ಯಾರ್ಥಿಗಳಿಗೂ ಸಿಇಟಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಅವರಿಗೆ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಲಾಗುತ್ತದೆ. ಕೋವಿಡ್ ಲಕ್ಷಣಗಳಲ್ಲದೆ ನೆಗಡಿ, ಕೆಮ್ಮು, ಶೀತ ಇರುವ ವಿದ್ಯಾರ್ಥಿಗಳನ್ನೂ ಪ್ರತ್ಯೇಕ ಕೊಠಡಿಗಳಲ್ಲಿ ಕೂರಿಸಲಾಗುವುದು. ಎಲ್ಲ ಕೇಂದ್ರಗಳ ಬಳಿ ಆ್ಯಂಬುಲೆನ್ಸ್ ಸೇರಿ ಸಾರಿಗೆ ವ್ಯವಸ್ಥೆಯನ್ನೂ ಮಾಡಲಾಗಿದೆ. ಬೆಂಗಳೂರಿನಲ್ಲಿ ಬಿಎಂಟಿಸಿ ಹಾಗೂ ರಾಜ್ಯಾದ್ಯಂತ ಕೆಎಸ್ಸಾರ್ಟಿಸಿ ವತಿಯಿಂದ ಬಸ್’ಗಳ ವ್ಯವಸ್ಥೆ ಮಾಡಲಾಗಿದೆ.

ಕ್ವಾರಂಟೈನ್ ವಿನಾಯಿತಿ:

ಸಿಇಟಿ ಪರೀಕ್ಷೆ ಎದುರಿಸುತ್ತಿರುವ ವಿದೇಶಿ ಅಥವಾ ಹೊರಗಿನ ವಿದ್ಯಾರ್ಥಿಗಳಿಗೆ ಹಾಗೂ ಅವರ ಜತೆಯಲ್ಲಿ ಬಂದಿರುವ ಪೋಷಕರಿಗೆ 4 ದಿನಗಳ ಕಾಲ ಕ್ವಾರಂಟೈನ್’ನಿಂದ ವಿನಾಯಿತಿ ನೀಡಲಾಗಿದೆ. ಅವರೂ ಕೂಡ ಎಲ್ಲ ರೀತಿಯಲ್ಲೂ ಪರೀಕ್ಷೆಗೆ ಒಳಗಾಗಿದ್ದಾರೆ. ಹೀಗಾಗಿ ಆತಂಕಪಡುವ ಅಗತ್ಯವಿಲ್ಲ.

ಗಡಿನಾಡ ವಿದ್ಯಾರ್ಥಿಗಳು:

ಇನ್ನು ಗಡಿನಾಡ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಬೆಂಗಳೂರಿಗೇ ಬರಬೇಕಾಗಿಲ್ಲ. 188 ಮಂದಿ ಅಂತಹ ವಿದ್ಯಾರ್ಥಿಗಳಿದ್ದು, ಅವರು ಗಡಿ ಭಾಗದಲ್ಲಿರುವ ಬಳ್ಳಾರಿ, ಬೆಳಗಾವಿ, ಬೆಂಗಳೂರು, ಮಂಗಳೂರು, ಬೀದರ್,ಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಕೋವಿಡ್ ಕಾರಣಕ್ಕೆ ಈಗಾಗಲೇ ಅನೇಕ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರಗಳನ್ನು ಬದಲಾಯಿಸಿಕೊಂಡಿದ್ದಾರೆ. ಅಲ್ಲಿಯೂ ಎಲ್ಲ ರೀತಿಯ ವ್ಯವಸ್ಥೆಗಳನ್ನು ಮಾಡಲಾಗಿದೆ.

ಈಗಾಗಲೇ 1,30,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರವೇಶ ಪತ್ರಗಳನ್ನು ಡೌನ್’ಲೋಡ್ ಮಾಡಿಕೊಂಡಿದ್ದಾರೆ. ಎಲ್ಲ ಮಾಹಿತಿಯೂ ಆನ್’ಲೈನ್’ನಲ್ಲಿರುತ್ತದೆ.

ಪಿಜಿ-ಸಿಇಟಿ ಪರೀಕ್ಷೆ ಮುಂದಕ್ಕೆ:

ಅಂತಿಮ ವರ್ಷದ ಪರೀಕ್ಷೆಗಳು ನಡೆಯದ ಕಾರಣ ಪಿಜಿ-ಸಿಇಟಿ ಹಾಗೂ ಡಿಪ್ಲೋಮೋ-ಸಿಇಟಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ನಿಗದಿಯಂತೆ ಈ ಪರೀಕ್ಷೆಗಳು ಕ್ರಮವಾಗಿ ಅಗಸ್ಟ್ 8-9 ಮತ್ತು 9 ರಂದು ನಡೆಯಬೇಕಾಗಿತ್ತು. ಅಂತಿಮ ವರ್ಷದ ಪರೀಕ್ಷೆಯ ನಂತರ ಈ ಬಗ್ಗೆ ಸರಕಾರ ನಿರ್ಧಾರ ಕೈಗೊಳ್ಳಲಿದೆ.

ಕೌನ್ಸೆಲಿಂಗ್ ಕೂಡ ಅನ್’ಲೈನ್:

ಈ ವರ್ಷ ಸಿಇಟಿ ಕೌನ್ಸೆಲಿಂಗ್, ದಾಖಲೆಗಳ ಪರಿಶೀಲನೆ ಸೇರಿದಂತೆ ಎಲ್ಲವೂ ಆನ್’ಲೈನ್ ನಲ್ಲಿ ನಡೆಯಲಿದೆ. ಇದೆಲ್ಲವನ್ನೂ ವಿದ್ಯಾರ್ಥಿಗಳು ಮನೆಯಿಂದಲೇ ಪೂರೈಸಬಹುದು. ಅಂತಿಮವಾಗಿ ತಾವು ಆಯ್ಕೆ ಮಾಡಿಕೊಳ್ಳುವ ಕಾಲೇಜಿಗೆ ತೆರಳಿ ಪ್ರವೇಶಾತಿ ಪಡೆಯಬಹುದು ಎಂದ ಡಿಸಿಎಂ, ಈಗಾಗಲೇ ಎಲ್ಲ ವಿವಿಗಳಲ್ಲಿ ಪ್ರವೇಶಗಳು ಆರಂಭವಾಗಿವೆ. ಉನ್ನತ ಶಿಕ್ಷಣ ಇಲಾಖೆಯ ಎಲ್ಲ ಚಟುವಟಿಕೆಗಳು ಆರಂಭವಾಗಿವೆ ಎಂದು ಡಿಸಿಎಂ ತಿಳಿಸಿದರು.
ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿ, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್, ಕೆಇಎ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕ ವೆಂಕಟ್ ರಾಜಾ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ಹೆಚ್ಚಿನ ವಿವರಗಳಿಗೆ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ:
https://cetonline.karnataka.gov.in/kea/indexnew

Tags: -cet-karnatakacetCovid-Karnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕೇಂದ್ರ ಸಚಿವ HD ಕುಮಾರಸ್ವಾಮಿ ಪ್ರೆಸ್ ಮೀಟ್ #Live

HDK #preesmeet #Live

by cknewsnow desk
October 15, 2026
0

ಮುಖ್ಯಮಂತ್ರಿ ಡಿಕೆಶಿ ಮತ್ತು ಸ್ಟಿಂಗ್ ಪಿನ್ ಸಂಬಂಧದ ಬಗ್ಗೆ ಮಹತ್ವದ ಅಂಶಗಳನ್ನು ಬಹಿರಂಗಪಡಿಸಿದ ಕೇಂದ್ರ ಸಚಿವರು

ಕೇಂದ್ರ ಸಚಿವ HD ಕುಮಾರಸ್ವಾಮಿ ಪ್ರೆಸ್ ಮೀಟ್ #Live

ಕೇಂದ್ರ ಸಚಿವ HD ಕುಮಾರಸ್ವಾಮಿ ಪ್ರೆಸ್ ಮೀಟ್ #Live

by cknewsnow desk
October 13, 2026
0

ಬೆಂಗಳೂರು ಜೆ.ಪಿ. ಭವನದಿಂದ ನೇರ ಪ್ರಸಾರ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

ಮಾರ್ಚ್‌ 1ರಿಂದ ದ್ವಿತೀಯ ಪಿಯು, 20ರಿಂದ sslc ಪರೀಕ್ಷೆ

by cknewsnow desk
December 3, 2024
0

ಎಲ್ಲ ಪರೀಕ್ಷೆಗಳು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ

ಪೋಡಿ ತ್ವರಿತ ಇತ್ಯರ್ಥಕ್ಕೆ 1,786 ಹುದ್ದೆ ಭರ್ತಿ

ಪೋಡಿ ತ್ವರಿತ ಇತ್ಯರ್ಥಕ್ಕೆ 1,786 ಹುದ್ದೆ ಭರ್ತಿ

by cknewsnow desk
August 12, 2024
0

1,000 ಗ್ರಾಮ ಲೆಕ್ಕಿಗರು, 750 ಸರ್ವೇಯರ‍್ಸ್, 36 ಎಡಿಎಲ್‌ಆರ್‌ಗಳ ನೇಮಕ

kptclನಲ್ಲಿ 902 ಹುದ್ದೆಗೆ ನೇಮಕ

kptclನಲ್ಲಿ 902 ಹುದ್ದೆಗೆ ನೇಮಕ

by cknewsnow desk
May 24, 2024
0

ನೇಮಕಾತಿ ಆದೇಶ ನೀಡಿದ ಸರಕಾರ

ಕೆಸಿಇಟಿ-24 ಪರೀಕ್ಷೆ: ಜನವರಿ 10ರಿಂದ online ಅರ್ಜಿ ಸಲ್ಲಿಕೆಗೆ ಅವಕಾಶ

CET EXAM; ಔಟ್ ಆಫ್ ಸಿಲೆಬಸ್ ಪ್ರಶ್ನೆ ಕೈಬಿಟ್ಟು ಮೌಲ್ಯಮಾಪನ; ವಿದ್ಯಾರ್ಥಿಗಳಿಗೆ ನಿರಾಳ

by cknewsnow desk
April 28, 2024
0

ತಜ್ಞರ ಶಿಫಾರಸು ಒಪ್ಪಿಕೊಂಡ ರಾಜ್ಯ ಸರಕಾರ

Next Post
ಅಂಗೈನಲ್ಲೇ ಉದ್ಯೋಗ; ಸಿಗಲಿದೆ ಟ್ರೆಂಡ್’ಗೆ ತಕ್ಕ ಜಾಬ್

ಅಂಗೈನಲ್ಲೇ ಉದ್ಯೋಗ; ಸಿಗಲಿದೆ ಟ್ರೆಂಡ್’ಗೆ ತಕ್ಕ ಜಾಬ್

Leave a Reply Cancel reply

Your email address will not be published. Required fields are marked *

Recommended

ಕಮ್ಯುನಿಸ್ಟರು ಮತ್ತು ಕಾಂಗ್ರೆಸ್‌ 7 ದಶಕದ ಆಡಳಿತದಿಂದ  ಭ್ರಮನಿರಸನಗೊಂಡ ಕೇರಳದಲ್ಲಿ ಬಿಜೆಪಿಯತ್ತ ಒಲವು; ದೇವರ ನಾಡಿನಲ್ಲಿ ಬದಲಾವಣೆಯ ಗಾಳಿ ಎಂದ ಡಿಸಿಎಂ

ಬೆಂಗಳೂರಿನ ಎಲ್ಲ ಚಿತಾಗಾರಗಳಲ್ಲೂ ಕೋವಿಡ್‌ ಮೃತರ ಅಂತ್ಯಕ್ರಿಯೆ; ಕೋವಿಡ್‌ ಪರೀಕ್ಷೆ ಹೆಚ್ಚಿಸಲು ಸೂಚನೆ, 24 ಗಂಟೆಯೊಳಗೇ ರಿಸಲ್ಟ್‌ ಕೊಡಲು ತಾಕೀತು

6 years ago
ಮಾಲೂರಿನ ಕೆ.ಎಂ.ಕವಿತಾ ಅವರಿಗೆ ತುಮಕೂರು ವಿವಿಯಿಂದ ಪಿಎಚ್ ಡಿ ಪದವಿ

ಮಾಲೂರಿನ ಕೆ.ಎಂ.ಕವಿತಾ ಅವರಿಗೆ ತುಮಕೂರು ವಿವಿಯಿಂದ ಪಿಎಚ್ ಡಿ ಪದವಿ

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ