• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಗುಣಮಟ್ಟ ಪರೀಕ್ಷಿಸಲು 170 ಕೆಜಿ ತೂಕದ ವ್ಯಕ್ತಿಯನ್ನು ಮಂಚದ ಮೇಲೆ ಮಲಗಿಸಿದ ಡಿಸಿಎಂ

cknewsnow desk by cknewsnow desk
July 27, 2020
in COVID-19, STATE
Reading Time: 1 min read
0
dr cn ashwath narayan

ಬೆಂಗಳೂರು ವಸ್ತು ಪ್ರದರ್ಶನ ಕೇಂದ್ರದಲ್ಲಿ ಡಿಸಿಎಂ ಡಾ. ಅಶ್ವತ್ಥನಾರಾಯಣ ಇತರರು.

915
VIEWS
FacebookTwitterWhatsuplinkedinEmail

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕಿತರು ಹೆಚ್ಚುತ್ತಿರುವ ಬೆನ್ನಲ್ಲಿಯೇ ಭವಿಷ್ಯದಲ್ಲಿ ಎದುರಾಗಬಹುದಾದ ಯಾವುದೇ ಪರಿಸ್ಥಿತಿಯನ್ನು ನಿಭಾಯಿಸಲು ಸರಕಾರ ಸರ್ವ ಸಜ್ಜಾಗಿದೆ. ಇದರ ಬೆನ್ನಲ್ಲಿಯೇ, ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ದೇಶದ ಅತಿದೊಡ್ಡ ಕೋವಿಡ್ ಆರೈಕೆ ಕೇಂದ್ರವನ್ನು ಲೋಕಾರ್ಪಣೆ ಮಾಡಿದ್ದಾರೆ. ಇದೇ ವೇಳೆ ಕೋವಿಡ್ ಉಪಕರಣಗಳ ಗುಣಮಟ್ಟವನ್ನು ಪರೀಕ್ಷಿಸಲು ಅವರು 170 ಕೆಜಿ ತೂಕದ ವ್ಯಕ್ತಿಯನ್ನು ಮಂಚದ ಮೇಲೆ ಮಲಗಿಸಿದ ಪ್ರಸಂಗವೂ ಅಲ್ಲಿ ನಡೆಯಿತು.

ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ (ಬಿಐಇಎಸ್) ದಲ್ಲಿ ಸ್ಥಾಪಿಸಲಾಗಿರುವ 10,100 ಹಾಸಿಗೆಗಳ ಸಾಮರ್ಥ್ಯದ ಆರೈಕೆ ಕೇಂದ್ರವು ನಾಳೆಯಿಂದಲೇ ಬಳಕೆಗೆ ಲಭ್ಯವಾಗಲಿದೆ. ಮೊದಲ ಹಂತದಲ್ಲಿ 1,536 ಹಾಸಿಗೆಗಳು ಬಳಕೆಗೆ ಲಭ್ಯವಾಗಲಿವೆ. ಕೂಡಲೇ ಈ ಕೇಂದ್ರಕ್ಕೆ ಸೋಂಕಿತರನ್ನು ಸ್ಥಳಾಂತರಿಸಿ ಚಿಕಿತ್ಸೆ ನೀಡಬಹುದಾಗಿದೆ.

ಏನೇನಿದೆ ಇಲ್ಲಿ?

ಅತ್ಯಂತ ಸುಸಜ್ಜಿತ ಹಾಗೂ ಅತ್ಯಾಧುನಿಕವಾಗಿ ಯಾವುದೇ ಬೃಹತ್ ಖಾಸಗಿ ಆಸ್ಪತ್ರೆಯನ್ನು ಸರಿಗಟ್ಟುವಂತೆ ನಿರ್ಮಾಣವಾಗಿರುವ ಈ ಆರೈಕೆ ಕೇಂದ್ರದಲ್ಲಿ ಸೋಂಕಿತರಿಗೆ ಅಗತ್ಯವಾದ ಎಲ್ಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಒಟ್ಟು 5,000 ಹಾಸಿಗೆಗಳು ಸಿದ್ಧವಾಗಿದ್ದು, ಈ ಪೈಕಿ 1,536 ಹಾಸಿಗೆಗಳು ಕೂಡಲೇ ಬಳಕೆಗೆ ಲಭ್ಯ ಇವೆ.

5ನೇ ಸಂಖ್ಯೆಯ ಹಾಲ್’ನಲ್ಲಿ 24 ವಾರ್ಡುಗಳ ವ್ಯವಸ್ಥೆ ಮಾಡಲಾಗಿದ್ದು, ಒಮ್ಮೆಲೆ 350 ಜನರು ಒಟ್ಟಿಗೆ ಊಟ ಮಾಡಬಹುದು. ಇದರ ಜತೆಗೆ, ಮನರಂಜನಾ ಕೊಠಡಿ ಮಾಡಲಾಗಿದ್ದು ಟಿವಿ, ಕುಳಿತುಕೊಳ್ಳಲು ಆಸನದ ವ್ಯವಸ್ಥೆ, ಸೋಫಾ, ಕುರ್ಚಿಗಳು ಹಾಗೂ ಫ್ಯಾನ್ ಸೌಕರ್ಯವನ್ನು ಮಾಡಲಾಗಿದೆ. ಹಾಗೆಯೇ ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಇದೆ. ಸ್ನಾನಕ್ಕೆ, ಮೂತ್ರ ವಿಸರ್ಜನೆಗೆ, ಕೈ ತೊಳೆದುಕೊಳ್ಳಲು ಪ್ರತ್ಯೇಕ ವ್ಯವಸ್ಥೆ ಇದೆ.

ಇವುಗಳೊಂದಿಗೆ ಇಡೀ ಕೇಂದ್ರದಲ್ಲಿ ಯಾವುದೇ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಲು ನಿಯಂತ್ರಣ ಕೊಠಡಿಯನ್ನೂ ತೆರೆಯಲಾಗಿದೆ. ಕೋವಿಡ್ ಪಾಸಿಟೀವ್ ಬಂದಿರುವ ರೋಗಿಗಳು ನೋಂದಣಿ ಅಥವಾ ದಾಖಲು ಮಾಡಿಕೊಳ್ಳಲು ಪ್ರತ್ಯೇಕ ಕೊಠಡಿ ಮಾಡಲಾಗಿದೆ. ಜತೆಗೆ, ಇಡೀ ಕೇಂದ್ರವನ್ನು ನಿರ್ವಹಣೆ ಮಾಡಲು ಪ್ರತ್ಯೇಕ ಸಿಬ್ಬಂದಿಯನ್ನು ನೇಮಿಸಲಾಗಿದೆ. ಹೌಸ್ ಕೀಪಿಂಗ್ ಮತ್ತು ಬಟ್ಟೆ ಒಗೆಯಲು ಪ್ರತ್ಯೇಕ ಸಿಬ್ಬಂದಿಯನ್ನು ಇಡಲಾಗಿದೆ. ಇನ್ನು ಸುರಕ್ಷತೆ ಕಾರಣಕ್ಕೆ ಮಾರ್ಷಲ್’ಗಳು ಹಾಗೂ ಕೆ.ಎಸ್.ಆರ್.ಪಿ ಯ ಒಂದು ತುಕಡಿಯನ್ನು ಮತ್ತು ಅಗ್ನಿಶಾಮಕ ದಳದ ತುಕಡಿಯನ್ನು ಇಲ್ಲಿ ನಿಯೋಜನೆ ಮಾಡಲಾಗಿದೆ.

ದಿನದ 24 ಗಂಟೆ ವಿದ್ಯುತ್ ಸಮಸ್ಯೆ ಆಗದಂತೆ ಈ ಕೋವಿಡ್ ಕೇಂದ್ರಕ್ಕೆ ಪ್ರತ್ಯೇಕ ವಿದ್ಯುತ್ ಲೈನ್ ಅನ್ನು ಎಳೆಯಲಾಗಿದೆ. ಇನ್ನು ಸರಕಾರ ಈಗಾಗಲೇ ನಿಗದಿ ಮಾಡಿರುವ ಫುಡ್ ಮೆನು ಪ್ರಕಾರ ಸೋಂಕಿತರಿಗೆ ನಿತ್ಯವೂ ಆಹಾರ ಪೂರೈಕೆ ಮಾಡಲಾಗುವುದು. 

ಮಂಚದ ಗುಣಮಟ್ಟ ಪರಿಶೀಲನೆ:

ಕೋವಿಡ್ ಪರಿಕರಗಳ ಗುಣಮಟ್ಟದ ಬಗ್ಗೆ ಕೆಲವರು ತಕರಾರು ತೆಗೆದಿರುವ ಹಿನ್ನೆಲೆಯಲ್ಲಿ ಡಿಸಿಎಂ ಅವರು, 170 ಕೆಜಿ ತೂಕದ ವ್ಯಕ್ತಿಯೊಬ್ಬರನ್ನು ಹಾಸಿಗೆಯ ಮೇಲೆ ಮಲಗಿಸಿ ಮಂಚದ ಸಾಮರ್ಥ್ಯವನ್ನು ಪರಿಶೀಲನೆ ನಡೆಸಿದರು. ಇದರ ಜತೆಗೆ, ಎಲ್ಲ ಸಚಿವರು, ಅಧಿಕಾರಿಗಳ ಜತೆ ಇಡೀ ಕೇಂದ್ರವನ್ನು ಕೂಲಂಕಷವಾಗಿ ಪರಿಶೀಲನೆ ಮಾಡಿದರಲ್ಲದೆ, ಗುಣಮಟ್ಟದ ವಿಚಾರದಲ್ಲಿ ರಾಜಿ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಈ ಕೇಂದ್ರದಲ್ಲಿ ರೋಗಿಗಳು ದಾಖಲಾದಂತೆ ಹಾಸಿಗೆಗಳ ಪ್ರಮಾಣವನ್ನು ಹೆಚ್ಚಿಸಲಾಗುವುದು. ಎ ಸಿಂಪ್ಟೆಮಿಕ್ ರೋಗಿಗಳು ಇಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಮತ್ತಷ್ಟು ಕಡೆ ಕೋವಿಡ್ ಕೇಂದ್ರಗಳು:

ಒಟ್ಟಾರೆ ನಗರದಲ್ಲಿ 20ರಿಂದ 30,000 ಕೋವಿಡ್ ಹಾಸಿಗೆಗಳನ್ನು ಮಾಡುವ ಉದ್ದೇಶವಿದೆ. ಈಗ ಬೆಂಗಳೂರು ನಗರದಲ್ಲಿ 9 ಕಡೆ ಕೋವಿಡ್ ಆರೈಕೆ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. ಈಗಾಗಲೇ 9 ಕಡೆ ಕೇರ್ ಕೇಂದ್ರ ಗಳು ಇವೆ. 3,000 ಬೆಡ್’ಗಳು ಸಿದ್ಧ ಇವೆ. ಇದರಲ್ಲಿ 1,500 ರೋಗ ಲಕ್ಷಣ ಇಲ್ಲದ ರೋಗಿಗಳಿಗೆ ಸೌಲಭ್ಯ ಇದೆ. ಇಲ್ಲಿ 10,100 ರೋಗಿಗಳಿಗೆ ಅವಕಾಶ. ಉಳಿದಂತೆ ಇತರ ಕೂಡ ಯೂ ಸೌಲಭ್ಯ ಕಲ್ಪಿಸುತ್ತವೆ. ಜತೆಗೆ ಅರಮನೆ ಮೈದಾನ, ಅಂತಾರಾಷ್ಟ್ರೀಯ ಕನ್ವೆಂಷನ್ ಸೆಂಟರ್, ಪೊಲೀಸ್ ಕ್ವಾಟ್ರಸ್ ಮುಂತದ ಕಡೆ ಕೋವಿಡ್ ಆರೈಕೆ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಹಾಗೆಯೇ  ಕೆಲ ಖಾಸಗಿ ಅಪಾರ್ಟ್ಮೆಂಟುಗಳಲ್ಲಿ ಕೂಡ ಇಂತಹ ಕೇಂದ್ರಗಳನ್ನು ಆರಂಭಿಸಲಾಗುವುದು. ಅಗತ್ಯಕ್ಕೆ ತಕ್ಕಂತೆ ಸರಕಾರ ವ್ಯವಸ್ಥೆ ಮಾಡುತ್ತ ಹೋಗಲಿದೆ. ಇದರ ಜತೆಯಲ್ಲಿಯೇ ಹೋಂ ಕೇರ್ ಬಗ್ಗೆಯೂ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಡಿಸಿಎಂ ಹೇಳಿದರು.

ರಿಸಲ್ಟ್ ತಡವಾಗಲ್ಲ:

ಇನ್ನು ಮೇಲೆ ಸೋಂಕಿತರ ಅಥವಾ ಸ್ಯಾಂಪಲ್ ಪರೀಕ್ಷೆ ನಂತರ ರಿಸಲ್ಟ್ ತಡವಾಗಲ್ಲ. ಸ್ಯಾಂಪಲ್ ಕೊಟ್ಟ ನಂತರ ಅರ್ಧ ಗಂಟೆಯಲ್ಲೇ ರಿಸಲ್ಟ್ ಸಿಗಲಿದೆ. ಇದಕ್ಕೆ ಬೇಕಾದ ಎಲ್ಲ ವ್ಯವಸ್ಥೆಯನ್ನು ಮಾಡಲಾಗಿದೆ. ರಾಪಿಡ್ ಟೆಸ್ಟಿಂಗ್ ಕಿಟ್’ಗಳನ್ನೂ ಅಗತ್ಯವಿದ್ದಷ್ಟು ಒದಗಿಸಲಾಗಿದೆ. ಜನರು ಈ ಬಗ್ಗೆ ಆತಂಕಪಡುವುದು ಬೇಡ ಎಂದು ಡಿಸಿಎಂ ಮನವಿ ಮಾಡಿದರು.

ಅತ್ಯಂತ ಪ್ರತಿಷ್ಟಿತವಾಗಿ, ಪಂಚತಾರಾ ಹೋಟೆಲಿನಂಥ ಸೌಲಭ್ಯಗಳನ್ನು ಒಳಗೊಂಡಿರುವ ಈ ಕೋವಿಡ್ ಆರೈಕೆ ಕೇಂದ್ರವನ್ನು ಸೋಮವಾರ ಸೋಂಕಿತರ ಸೇವೆಗೆ ಮುಕ್ತಗೊಳಿಸಿದ ಸಂದರ್ಭದಲ್ಲಿ ಡಿಸಿಎಂ ಅವರ ಜತೆಗೆ, ಕಂದಾಯ ಸಚಿವ ಆರ್. ಅಶೋಕ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್. ವಿಶ್ವನಾಥ್, ಮೇಯರ್ ಗೌತಮ್ ಕುಮಾರ್, ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಸೇರಿದಂತೆ ಅನೇಕ ಹಿರಿಯ ಅಧಿಕಾರಿಗಳು ಹಾಜರಿದ್ದರು.

Tags: covid-19 karnatakacovid-19-care-karnatakadr cn ashwath narayanr ashoka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಕೊರೋನಾ ನಡುವೆ ಶಾಸಕರಿಗೆ ಭರ್ಜರಿ ಶ್ರಾವಣ!!

ಕೊರೋನಾ ನಡುವೆ ಶಾಸಕರಿಗೆ ಭರ್ಜರಿ ಶ್ರಾವಣ!!

Leave a Reply Cancel reply

Your email address will not be published. Required fields are marked *

Recommended

ಕಮ್ಯುನಿಸ್ಟರು ಮತ್ತು ಕಾಂಗ್ರೆಸ್‌ 7 ದಶಕದ ಆಡಳಿತದಿಂದ  ಭ್ರಮನಿರಸನಗೊಂಡ ಕೇರಳದಲ್ಲಿ ಬಿಜೆಪಿಯತ್ತ ಒಲವು; ದೇವರ ನಾಡಿನಲ್ಲಿ ಬದಲಾವಣೆಯ ಗಾಳಿ ಎಂದ ಡಿಸಿಎಂ

1912 ಹೆಲ್ಪ್‌ಲೈನ್‌ ಸರಿಯಾಗಲು ಉನ್ನತ ಅಧಿಕಾರಿಗಳಿಗೆ 2 ದಿನ ಡೆಡ್ಲೈನ್‌ ಕೊಟ್ಟ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ

5 years ago
ಐದು ವರ್ಷಗಳಲ್ಲಿ 300 ಶತಕೋಟಿ ಡಾಲರ್ ಡಿಜಿಟಲ್ ಉದ್ಯಮ

ಐದು ವರ್ಷಗಳಲ್ಲಿ 300 ಶತಕೋಟಿ ಡಾಲರ್ ಡಿಜಿಟಲ್ ಉದ್ಯಮ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ