• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಚಾಪೆ ಕೆಳಗೆ ಸರಕಾರ, ರಂಗೋಲಿ ಕೆಳಗೆ ಖಾಸಗಿ ಆಸ್ಪತ್ರೆಗಳು; ಬೀದಿಗೆ ಬಿದ್ದ ಜನ

cknewsnow desk by cknewsnow desk
August 3, 2020
in COVID-19, STATE
Reading Time: 1 min read
0
ಚಾಪೆ ಕೆಳಗೆ ಸರಕಾರ, ರಂಗೋಲಿ ಕೆಳಗೆ ಖಾಸಗಿ ಆಸ್ಪತ್ರೆಗಳು; ಬೀದಿಗೆ ಬಿದ್ದ ಜನ
914
VIEWS
FacebookTwitterWhatsuplinkedinEmail

ಬೆಂಗಳೂರು: ಸರಕಾರ ಚಾಪೆ ಕೆಳಗೆ ತೂರುತ್ತಿದ್ದರೆ, ಖಾಸಗಿ ಆಸ್ಪತ್ರೆಗಳು ರಂಗೋಲಿ ಕೆಳಗೆ ನುಸಳುತ್ತಿವೆ. ನಗರದ 19 ಆಸ್ಪತ್ರೆಗಳ ಪರವಾನಗಿಯನ್ನು ತಾತ್ಕಾಲಿಕವಾಗಿ ರದ್ದು ಮಾಡಿದ್ದರೂ ಖಾಸಗಿಯವರಿಗೆ ಇರುವೆ ಕಚ್ಚಿದ ಹಾಗೆಯೂ ಆಗಿಲ್ಲ. ದಿನವೂ ಜನ, ಇಂಥ ಆಸ್ಪತ್ರೆಗಳ ಮುಂದೆ ಕಣ್ಣೀರು ಹಾಕುತ್ತಿದ್ದಾರೆ.

ಕೆಲ ಆಸ್ಪತ್ರೆಗಳ ವಿರುದ್ಧ ವಾರಕ್ಕೆರಡು ದೂರುಗಳು ಬರುತ್ತಿವೆ. ನಟಿ ಸುಧಾರಾಣಿಯೇ ಪೊಲೀಸರ ನೆರವು ಪಡೆದು ತಮ್ಮ ಸಂಬಂಧಿಕರೊಬ್ಬರಿಗೆ ಚಿಕಿತ್ಸೆ ಪಡೆಯುವಂತಾಯಿತು. ಅದಾದ ಮೇಲೆ ಗರ್ಭಿಣಿ ಮಹಿಳೆಯೊಬ್ಬರು ಚಿಕಿತ್ಸೆ ನಿರಾಕರಿಸಿದ ಖಾಸಗಿ ಆಸ್ಪತ್ರೆಯೊಂದರ ಅಮಾನುಷತ್ವಕ್ಕೆ ಬಲಿಯಾದರು. ಮತ್ತೊಂದು ಆಸ್ಪತ್ರೆ ಕೋವಿಡ್ ಪೇಷಂಟ್ ಒಬ್ಬರಿಂದ 5 ಲಕ್ಷ ರೂ.ಗಳಿಗೂ ಹೆಚ್ಚು ಮೊತ್ತ ಸುಲಿಗೆ ಮಾಡಿತ್ತು. ಹೆಚ್ಚು ಸುಲಿಗೆ ಮಾಡಿದ್ದ ಖಾಸಗಿ ಆಸ್ಪತ್ರೆಗಳಿಂದ ಪೊಲೀಸರು ಹಣ ವಾಪಸ್ ಕೊಡಿಸಿದ್ದಾರೆ. ಡಾ. ರಾಜಕುಮಾರ್ ರಸ್ತೆಯ ಖಾಸಗಿ ಆಸ್ಪತ್ರೆಯೊಂದು ನಿಗದಿಗಿಂತ ಹೆಚ್ಚು ಹಣ ಪೀಕಿರುವ ವಿಷಯ ಸರಕಾರಕ್ಕೆ ಗೊತ್ತಾಗಿದೆ. ಆ ಹಣವನ್ನು ಆ ಆಸ್ಪತ್ರೆ ಹೊರಗೆ ಕಕ್ಕಬೇಕಿದೆ.

ವಿಧಾನಸೌಧಕ್ಕೆ ಹತ್ತು ಕಿ.ಮೀ ದೂರಳತೆಯಲ್ಲೇ ಇರುವ ಈ ಆಸ್ಪತ್ರೆಗಳ ಅಟ್ಟಹಾಸ ಮೇರೆ ಮೀರುತ್ತಿದೆ. ಸರಕಾರ ಸುಮ್ಮನೆ ಮಾತನಾಡುತ್ತಿದೆ, ಜನರು ಕಣ್ಣೀರು ಹಾಕುತ್ತಿದ್ದಾರೆ!! ಹೀಗೆಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ದೂರಿದ್ದಾರೆ.

ಯಾಮಾರಿಸುತ್ತಿರುವ ಖಾಸಗಿ ಆಸ್ಪತ್ರೆಗಳು:

ಶನಿವಾರ ಬೆಂಗಳೂರು ಪಶ್ಚಿಮ ವಲಯದ ಕೋವಿಡ್ ಪರಿಸ್ಥಿತಿಯನ್ನು ಅವಲೋಕಿಸಿದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರಿಗೆ ದೊಡ್ಡ ಆಘಾತ ಕಾದಿತ್ತು. ಸುಳ್ಳು ಹೇಳುತ್ತ, ಜನರನ್ನು ದಿಕ್ಕು ತಪ್ಪಿಸುತ್ತಾ ಅತ್ಯಂತ ’ವ್ಯವಸ್ಥಿತ’ವಾಗಿ ಡ್ರಾಮಾ ಆಡುತ್ತಿರುವ ಖಾಸಗಿ ಆಸ್ಪತ್ರೆಗಳ ಕಳ್ಳಕಥೆಯನ್ನು ಅಧಿಕಾರಿಗಳು ಬಿಚ್ಚಿಟ್ಟಾಗ ಅವಾಕ್ಕಾಗುವ ಸರದಿ ಅವರದ್ದು.

ಬಿಬಿಎಂಪಿ ವೆಬ್’ತಾಣದಲ್ಲಿ ಖಾಸಗಿ ಆಸ್ಪತ್ರೆಗಳು ನೇರ ಲಿಂಕ್ ಆಗಿ ತಮ್ಮಲ್ಲಿರುವ ಖಾಲಿ ಹಾಸಿಗೆಗಳ ಪ್ರಮಾಣ, ಕೋವಿಡ್ ರೋಗಿಗಳಿಗೆ ನೀಡುತ್ತಿರುವ ಚಿಕಿತ್ಸೆ ಮತ್ತಿತರೆ ವಿಷಯಗಳ ’ರಿಯಲ್ ಟೈಮ್’ ನಲ್ಲಿ ಅಪ್’ಲೋಡ್ ಮಾಡಬೇಕಾಗತ್ತದೆ. ಆಗ ಆ ಮಾಹಿತಿಯೂ ಪಾಲಿಕೆ ವೆಬ್’ನಲ್ಲಿಯೂ ಇರುತ್ತದೆ. ಸರಕಾರದ ಎಚ್ಚರಿಕೆಗೆ ಮಣೆ ಹಾಕುತ್ತಿರುವಂತೆ ಕಳ್ಳಾಟ ಆಡುತ್ತಿರುವ ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿ ಕೋವಿಡ್’ಗೆ ಮೀಸಲಾದ ಹಾಸಿಗೆಗಳು ಖಾಲಿ ಇವೆ ಎಂದು ಮಾಹಿತಿ ಅಪ್’ಲೋಡ್ ಮಾಡುತ್ತಿವೆ. ಆದರೆ, ಪಾಲಿಕೆ ವೈದ್ಯರು ಕೋವಿಡ್ ರೋಗಿಗಳನ್ನು ಆ ಆಸ್ಪತ್ರೆಗಳಿಗೆ ಕಳಿಸಿದರೆ, ಅವು ಹಾಸಿಗೆಗಳು ಖಾಲಿ ಇಲ್ಲ ಎಂದು ರೋಗಿಗಳನ್ನು ವಾಪಸ್ ಕಳಿಸುತ್ತಿವೆ. ರಿಯಲ್ ಟೈಮ್ ಅನ್ನು ಹಾಕದೇ ಅತ್ತ ಸರಕಾರವನ್ನೂ ಇತ್ತ ಜನರನ್ನು ಹಾದಿ ತಪ್ಪಿಸುತ್ತಿವೆ. ಸುಳ್ಳು ಮಾಹಿತಿ ನೀಡುತ್ತಿವೆ. ಇದೆಲ್ಲ ಕೇಳಿದ ಡಿಸಿಎಂ ಇಂಥ ಆಸ್ಪತ್ರೆಗಳ ವಿರುದ್ಧ ನೇರವಾಗಿ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಅಧಿಕಾರಿಗಳಿಗೆ ಖಡಕ್ಕಾಗಿ ಸೂಚಿಸಿದರು.

ಸುಮಾರು 400ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ತಲಾ ಒಬ್ಬರಂತೆ ’ಆಪ್ತಮಿತ್ರ’ ಸಿಬ್ಬಂದಿಯನ್ನು ನೇಮಿಸಲಾಗಿದೆ. ಅವರು ಏನು ಮಾಡುತ್ತಿದ್ದಾರೆ ಎಂದು ಗರಂ ಆದ ಡಿಸಿಎಂ, ಈ ಸಿಬ್ಬಂದಿ ಸೇರಿದಂತೆ ಹಿರಿಯ ಅಧಿಕಾರಿಗಳು ಇಂಥ ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡಿ. ತಪ್ಪು, ಸುಳ್ಳು ಕಂಡುಬಂದರೆ ಸ್ಥಳದಲ್ಲೇ ಕ್ರಮ ಜರುಗಿಸಿ. ನಿಮ್ಮ ಜತೆ ಸರಕಾರವಿದೆ ಎಂದು ಡಿಸಿಎಂ ಅಧಿಕಾರಿಗಳಿಗೆ ಧೈರ್ಯ ತುಂಬಿದ್ದಾರೆ.

BLOಗಳ ಕರಾಮತ್ತು:

ಪಶ್ಚಿಮ ವಿಭಾಗದಲ್ಲಿ ಕೋವಿಡ್-19 ಕರ್ತವ್ಯಕ್ಕೆ ಗೈರು ಹಾಜರಾಗುತ್ತಿರುವ ಬೂತ್ ಮಟ್ಟದ ಅಧಿಕಾರಿಗಳ (BLO) ವಿರುದ್ಧ ಅತ್ಯುಗ್ರ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಕೋವಿಡ್ ಕೇರ್ ಕೇಂದ್ರಗಳ ಉಸ್ತುವಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಆದೇಶಿಸಿದರಲ್ಲದೆ, ಗುತ್ತಿಗೆ ಆಧಾರಿತ ವೈದ್ಯರ ವೇತನ ಹೆಚ್ಚಿಸುವಂತೆ ಸೂಚಿಸಿದ್ದಾರೆ.
ಈ ವಿಭಾಗದಲ್ಲಿ ಒಟ್ಟು 7,000 ಬೂತ್ ಮಟ್ಟದ ಅಧಿಕಾರಿಗಳಿದ್ದಾರೆ. ಆ ಪೈಕಿ ಕೇವಲ 1,200 ಅಧಿಕಾರಿಗಳಷ್ಟೇ ಕರ್ತವ್ಯಕ್ಕೆ ಹಾಜರಾಗುತ್ತಿದ್ದು, ಉಳಿದವರು ಎಲ್ಲಿ? ಎಂದು ಹಿರಿಯ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಬೂತ್ ಮಟ್ಟದ ಅಧಿಕಾರಿಗಳ ಬಗ್ಗೆ ಸಿಕ್ಕಾಪಟ್ಟೆ ದೂರುಗಳು ಬರುತ್ತಿವೆ. ಅನೇಕರು ಹಿರಿಯ ಅಧಿಕಾರಿಗಳಿಗೆ ವರದಿ ಮಾಡಿಕೊಂಡು ಕೂಡ ಕರ್ತವ್ಯಕ್ಕೆ ಗೈರಾಗುತ್ತಿದ್ದಾರೆ. ಇದು ಅಕ್ಷಮ್ಯ. ಬೂತ್ ಮಟ್ಟದಲ್ಲಿ ಆಶಾ ಕಾರ್ಯಕರ್ತೆಯರು ಮತ್ತು ಎಎನ್ಎಂಗಳ ಜತೆ ಸೇರಿ ಕೋವಿಡ್ ಸೋಂಕಿತರನ್ನು ಸಂಪರ್ಕಿಸುವುದು, ಕೋವಿಡ್ ಪರೀಕ್ಷೆಗೆ ವ್ಯವಸ್ಥೆ ಮಾಡುವುದೂ, ಜಾಗೃತಿ ಮೂಡಿಸುವುದು ಬಿಎಲ್’ಓಗಳ ಕೆಲಸ. ಆದರೆ ಅವರು ಈ ವಿಭಾಗದ ಮಲ್ಲೇಶ್ವರ, ಗಾಂಧೀನಗರ, ರಾಜಾಜಿನಗರ, ಮಹಾಲಕ್ಷ್ಮೀ ಲೇಔಟ್, ವಿಜಯನಗರ, ಚಿಕ್ಕಪೇಟೆ ಕ್ಷೇತ್ರಗಳಲ್ಲಿ ಇವರು ಕರ್ತವ್ಯಲೋಪ ಎಸಗಿದ್ದಾರೆ. ಇವರ ವಿರುದ್ಧ ಅತ್ಯಂತ ಕಠಿಣ ಕ್ರಮ ಕೈಗೊಳ್ಳಿ ಹಾಗೂ ಅವರ ಸೇವಾ ದಾಖಲಾತಿಯಲ್ಲಿ ಈ ಲೋಪವೆಸಗಿರುವುದನ್ನು ದಾಖಲಿಸಿ ಎಂದು ಸಭೆಯಲ್ಲಿ ಹಾಜರಿದ್ದ ಪಶ್ಚಿಮ ವಿಭಾಗದ ಕೋವಿಡ್ ಉಸ್ತುವಾರಿ ಅಧಿಕಾರಿ ಉಜ್ವಲ್’ಕುಮಾರ್ ಘೋಷ್ ಹಾಗೂ ಬಿಬಿಎಂಪಿ ವಿಶೇಷ ಆಯುಕ್ತರಾದ ರಣದೀಪ್, ಡಾ. ಬಸವರಾಜು ಅವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಿಕೆನ್ಯೂಸ್ ನೌ ಜತೆ ಮಾತನಾಡುತ್ತಾ ಅಧಿಕಾರಿಯೊಬ್ಬರು ಹೇಳಿದ್ದು ಹೀಗೆ; “ಕೋವಿಡ್ ಹೆಸರನಲ್ಲಿ ಆಗುತ್ತಿರುವುದೆಲ್ಲ ಸರಿ ಇಲ್ಲ. ನಡೆಯುತ್ತಿರುವುದು ಒಂದು. ಕಾಣುತ್ತಿರುವುದು ಮತ್ತೊಂದು. ಅದೆಷ್ಟೋ ಅಕ್ರಮಗಳು ಖಾಸಗಿ ಆಸ್ಪತ್ರೆಗಳ ಒಳಗೆ ಮುಗಿದುಹೋಗುತ್ತಿದೆ” ಎನ್ನತ್ತಾರೆ. 

ಮುಂದುವರೆದು ಮಾತನಾಡಿದ ಅವರು, ಕೋವಿಡ್’ನಿಂದ ಕೆಲವರಿಗೆ ರಸ್ತೆಯಲ್ಲಿ ಚಿನ್ನದ ಪೆಟ್ಟಿಗೆ ತೆಗೆದ ಹಾಗೆ ಆಗಿದೆ. ಇನ್ನು ಕೆಲವರ ಜೀವ ಕಸಿದಿದೆ. ಇನ್ನು ಕೆಲವರ ಕನಸು ಕಸಿದಿದೆ. ಇದರ ನಡುವೆ ಕೆಲವರು ಸೂತಕದ ಮನೆಯಲ್ಲಿ ಮಸ್ತಿ ಮಾಡುತ್ತಿದ್ದಾರೆ” ಎನ್ನುತ್ತಾರೆ. 

ವೈದ್ಯರಿಗೆ ಸಿಹಿ:

ಕೋವಿಡ್ ಹಿನ್ನೆಲೆಯಲ್ಲಿ ಹೊಸದಾಗಿ ನೇಮಕವಾಗುತ್ತಿರುವ ಗುತ್ತಿಗೆ ವೈದ್ಯರಿಗೆ 80,000 ರೂ. ಮಾಸಿಕ ವೇತನ ನಿಗದಿ ಮಾಡಲಾಗಿದೆ. ಇದೇ ರೀತಿ ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ಹಾಲಿ ಗುತ್ತಿಗೆ ವೈದ್ಯರಿಗೆ 60,000 ರೂ. ವೇತನ ನೀಡಲಾಗುತ್ತಿದ್ದು, 20,000 ರೂ. ಕೋವಿಡ್ ಭತ್ಯೆ ಸೇರಿಸಿ ಒಟ್ಟು 80,000 ರೂ. ವೇತನ ನೀಡಿ. ಇದನ್ನು ಕೂಡಲೇ ಮಾಡಿ. ಹೀಗೆಂದು ಉಪ ಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹಾಗೆಯೇ ಎಎನ್’ಎಂಗಳಿಗೂ ವೇತನದ ಜತೆಗೆ 5,000 ರೂ. ಕೋವಿಡ್ ಭತ್ಯೆ ನೀಡಲು ಸೂಚಿಸಿದರಲ್ಲದೆ, ಹಾಗೆಯೇ ಕೋವಿಡ್ ವಾರಿಯರ್’ಗಳಾಗಿ ಕೆಲಸ ಮಾಡುತ್ತಿರುವ ಸ್ವಯಂ ಸೇವಕರಿಗೂ ಹಾಗೂ ಗಂಟಲು ದ್ರವ ಸಂಗ್ರಹ ಮಾಡುವ ಲ್ಯಾಬ್ ಟೆಕ್ನಿಷಿಯನ್ನುಗಳಿಗೂ ಕೋವಿಡ್ ಭತ್ಯೆ ನೀಡುವ ಬಗ್ಗೆ ಸರಕಾರಕ್ಕೆ ಪ್ರಸ್ತಾವನೆ ಕಳಿಸುವಂತೆ ಡಿಸಿಎಂ ಅಧಿಕಾರಿಗಳಿಗೆ ಸೂಚಿಸಿದರು.

ಸಾವುಗಳ ಬಗ್ಗೆ ವರದಿ:

ಇತ್ತೀಚೆಗೆ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಸಾವುಗಳು ಕೋವಿಡ್’ನಿಂದ ಆಗುತ್ತಿವೆಯೇ ಅಥವಾ ಸೋಂಕು ತಗುಲಿದ ಮೇಲೆ ತಡವಾಗಿ ಬಂದು ಚಿಕಿತ್ಸೆ ಪಡೆದಿದ್ದರಿಂದ ಆಗುತ್ತಿವೆಯೇ ಇಲ್ಲವೇ ಬೇರೆ ಯಾವುದಾದರೂ ಕಾಯಿಲೆಯಿಂದ ಮೃತಪಟ್ಟರೆ ಎಂಬ ಬಗ್ಗೆ ವಿಶ್ಲೇಷಣೆ ನಡೆಸಿ ವರದಿ ನೀಡುವಂತೆ ಅವರು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.

Lead Photo: CK Photography

Tags: Bengalurucovid-19 karnatakakarnataka private hospitals
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post

ವಿದ್ಯಾರ್ಥಿಗಳೇ, ಅಂತಿಮ ಸೆಮಿಸ್ಟರ್ ಪರೀಕ್ಷೆಗೆ ಸಿದ್ಧರಾಗಿ; ಬ್ಯಾಕ್ಲಾಗ್ ವಿಷಯಗಳಿಗೂ ಎಕ್ಸಾಮ್

Leave a Reply Cancel reply

Your email address will not be published. Required fields are marked *

Recommended

ಜೆಡಿಎಸ್‌ ಬಗ್ಗೆ ಕಾಂಗ್ರೆಸ್ ನಡೆಸಿದ ಅಪಪ್ರಚಾರಕ್ಕೆ ಫಲಿತಾಂಶವೇ ಉತ್ತರ ನೀಡಿದೆ: ಹೆಚ್‌ಡಿಕೆ

ಜೆಡಿಎಸ್‌ ಬಗ್ಗೆ ಕಾಂಗ್ರೆಸ್ ನಡೆಸಿದ ಅಪಪ್ರಚಾರಕ್ಕೆ ಫಲಿತಾಂಶವೇ ಉತ್ತರ ನೀಡಿದೆ: ಹೆಚ್‌ಡಿಕೆ

4 years ago
ಐಟಿಐ ಪಾಸಾದವರಿಗೆ ಒಳ್ಳೆಯ ಸುದ್ದಿ

ಐಟಿಐ ಪಾಸಾದವರಿಗೆ ಒಳ್ಳೆಯ ಸುದ್ದಿ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ