• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

ಕೊನೆಗೂ ಕೋವಿಡ್-19 ಲಸಿಕೆ; 6 ತಿಂಗಳಲ್ಲಿ ತಾತ್ಕಾಲಿಕ ಲೈಸೆನ್ಸ್

cknewsnow desk by cknewsnow desk
August 10, 2020
in NEWS IN USE, STATE
Reading Time: 1 min read
0
man looking through a microscope

Photo by Edward Jenner on Pexels.com

912
VIEWS
FacebookTwitterWhatsuplinkedinEmail

ಬೆಂಗಳೂರು: ಕೋವಿಡ್-19 ಲಸಿಕೆಗೆ ಸಂಬಂಧಿಸಿದಂತೆ ಅಮೆರಿಕದಲ್ಲಿ ಸದ್ಯಕ್ಕೆ ಮೂರು ಲಸಿಕೆಗಳ ಕ್ಲಿನಿಕಲ್ ಟ್ರಯಲ್ ಗಳು ಮುಂಚೂಣಿಯಲ್ಲಿದ್ದು, ಅವು ಫಲಪ್ರದ ಎಂಬುದು ದೃಢಪಟ್ಟರೆ ಮುಂದಿನ 6ರಿಂದ 8 ತಿಂಗಳ ಅವಧಿಯಲ್ಲಿ ತಾತ್ಕಾಲಿಕ ಪರವಾನಗಿ ಲಭ್ಯವಾಗಬಹುದು ಎಂದು ಅಟ್ಲಾಂಟಾದ ಎಮೊರಿ ವಿಶ್ವವಿದ್ಯಾಲಯದ ಲಸಿಕಾ ಕೇಂದ್ರದ ನಿರ್ದೇಶಕ ಡಾ.ರಫಿ ಅಹಮ್ಮದ್ ಸ್ಪಷ್ಟಪಡಿಸಿದರು.

ಕೋವಿಡ್-19 ಲಸಿಕಾ ಸಂಶೋಧನೆಯಲ್ಲಿ ಮುಂಚೂಣಿಯಲ್ಲಿರುವ ಅಮೆರಿಕದ ಅಟ್ಲಾಂಟಾದ ಎಮೊರಿ ವಿಶ್ವವಿದ್ಯಾಲಯದ ಲಸಿಕಾ ಕೇಂದ್ರದ ನಿರ್ದೇಶಕ ಡಾ.ರಫಿ ಅಹಮ್ಮದ್ ಅವರೊಂದಿಗೆ ವೆಬಿನಾರ್ ಮೂಲಕ ಸೋಮವಾರ ನಡೆಸಿದ ವಿಚಾರ ವಿನಿಮಯ ಸಭೆಯಲ್ಲಿ ಅವರು ಮಾತನಾಡಿದರು. ಜತೆಗೆ ಕೋವಿಡ್-19 ಲಸಿಕೆಗಳ ಕ್ಲಿನಿಕಲ್ ಟ್ರಯಲ್ ನ ಸದ್ಯದ ಸನ್ನಿವೇಶದ ಬಗ್ಗೆ ಡಾ.ಅಶ್ವತ್ಥ ನಾರಾಯಣ ಕೇಳಿದ ವಿವರಣೆಗೆ ಅವರು ಹೀಗೆ ತಿಳಿಸಿದರು.

ಇವುಗಳಲ್ಲಿ ಎರಡು ಲಸಿಕೆಗಳು ಆರ್ ಎನ್ಎ ಆಧಾರಿತ ಲಸಿಕೆಗಳಾಗಿವೆ. ಒಂದೊಂದೂ ಲಸಿಕೆಗೆ 30,000 ಜನರನ್ನು ಕ್ಲಿನಿಕಲ್ ಟ್ರಯಲ್ ಗೆ ಒಳಪಡಿಸಲಾಗಿದ್ದು, ಇದು ಮೂರನೆ ಹಂತದಲ್ಲಿದೆ. ಟ್ರಯಲ್ ಗೆ ಒಳಪಟ್ಟವರನ್ನು ಸತತವಾಗಿ ಮೌಲ್ಯಮಾಪನ ಮಾಡಲಾಗುತ್ತಿದೆ. 30,000 ಜನರ ಮೌಲ್ಯಮಾಪನ ಹಾಗೂ ಅಂಕಿಅಂಶಗಳ ಅಧ್ಯಯನಕ್ಕೆ ಇಷ್ಟು ಸಮಯ ಹಿಡಿಯುತ್ತದೆ. ಕನಿಷ್ಠ ಶೇ 50ರಷ್ಟು ಜನರಿಗಾದರೂ ಇದು ಪರಿಣಾಮಕಾರಿ ಎಂಬುದು ದೃಢಪಟ್ಟರೆ 6ರಿಂದ 8 ತಿಂಗಳ ಅವಧಿಯಲ್ಲಿ ತಾತ್ಕಾಲಿಕ ಪರವಾನಗಿ ಸಿಗಬಹುದು ಎಂದು ಅವರು ಹೇಳಿದ್ದಾರೆ.

ಇಮ್ಯುನಾಲಜಿ, ಲಸಿಕಾ ಸಂಶೋಧನಾ ಕೇಂದ್ರ:

ಭವಿಷ್ಯದ ದಿನಗಳಲ್ಲಿ ಇಮ್ಯುನಾಲಜಿ ಅಧ್ಯಯನವು ಅತ್ಯಂತ ಪ್ರಮುಖವಾಗಲಿದ್ದು, ಇದನ್ನು ದೃಷ್ಟಿಯಲ್ಲಿರಿಸಿಕೊಂಡು ರಾಜ್ಯದಲ್ಲಿ ಅಮೆರಿಕದ ಅಟ್ಲಾಂಟಾದ ಎಮೊರಿ ಲಸಿಕಾ ಕೇಂದ್ರದ ಸಹಯೋಗದೊಂದಿಗೆ ಇಮ್ಯುನಾಲಜಿ ಮತ್ತು ಲಸಿಕಾ ಸಂಶೋಧನಾ ಕೇಂದ್ರವನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಉತ್ಸುಕವಾಗಿದೆ ಎಂದು ಇದೇ ವೇಳೆ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಲಸಿಕೆಗಳು, ಸಾಂಕ್ರಾಮಿಕ ರೋಗಗಳು, ಕ್ಯಾನ್ಸರ್ ಸಂಶೋಧನೆ ಇವೆಲ್ಲವೂ ಅಂತಿಮವಾಗಿ ‘ಇಮ್ಯುನಾಲಜಿ’ ವ್ಯಾಪ್ತಿಗೇ ಬರುತ್ತವೆ. ‘ಇಮ್ಯುನಾಲಜಿ’ ಕ್ಷೇತ್ರದಲ್ಲಿ ನಡೆಯುವ ಸಂಶೋಧನೆಗಳು ಭವಿಷ್ಯದಲ್ಲಿ ಎದುರಾಗಲಿರುವ ಸಮಸ್ಯೆಗಳಿಗೆ ಉತ್ತರ ಒದಗಿಸಬಲ್ಲವು. ಹಾಗಾಗಿ ಭವಿಷ್ಯದ ದೃಷ್ಟಿಯಿಂದ ಈಗ ಈ ಕ್ಷೇತ್ರದ ಮೇಲಿನ ಹೂಡಿಕೆಯು ಫಲಪ್ರದ ಫಲಿತಾಂಶಗಳನ್ನು ನೀಡಲಿದೆ ಎಂದು ಅವರು ಹೇಳಿದ್ದಾರೆ.

ಈಗ ಇಡೀ ಜಗತ್ತೇ ‘ಇಮ್ಯುನಾಲಜಿ’ ಬಗ್ಗೆ ಆಲೋಚಿಸುತ್ತಿರುವ ಹಾಗೂ ಪರಿಣಾಮಕಾರಿ ‘ಲಸಿಕೆ’ ಗೆ ಎದುರು ನೋಡುತ್ತಿರುವ ಸಂದರ್ಭ ಇದಾಗಿದೆ. ಇಂತಹ ಸಮಯದಲ್ಲಿ ‘ಇಮ್ಯೂನಾಲಜಿ ಮತ್ತು ಲಸಿಕಾ ಸಂಶೋಧನಾ ಕೇಂದ್ರ’ದ ಸ್ಥಾಪನೆ ಅತ್ಯಂತ ಸಂದರ್ಭೋಚಿತ. ಇದೇ ವೇಳೆ ಅವರು, ಕೋವಿಡ್-19 ರೋಗ ದೃಢೀಕರಣದ ಆಧುನಿಕ ವಿಧಾನಗಳ ಅಭಿವೃದ್ಧಿ ಬಗ್ಗೆಯೂ ರಾಜ್ಯ ಸರ್ಕಾರ ಗಂಭೀರವಾಗಿ ಆಲೋಚಿಸುತ್ತಿದೆ. ಇದು ಈಗಿನ ಸನ್ನಿವೇಶದಲ್ಲಿ ಸೂಕ್ಷ್ಮ ಸಂಗತಿಯೂ ಆಗಿದ್ದು, ಈ ದಿಸೆಯಲ್ಲಿ ಕೂಡ ಸಹಭಾಗಿತ್ವದಿಂದ ಹೆಚ್ಚಿನ ಪ್ರಯೋಜನವನ್ನು ನಿರೀಕ್ಷಿಸುತ್ತಿದೆ ಎಂದಿದ್ದಾರೆ ಡಿಸಿಎಂ.

ರಾಜ್ಯದಲ್ಲಿ ಸಂಶೋಧನೆ ಮತ್ತು ಆವಿಷ್ಕಾರಕ್ಕೆ ಪೂರಕವಾದ ವಾತಾವರಣ ಇದೆ. ಇದನ್ನು ಬಳಸಿಕೊಂಡು ಲಸಿಕೆಗಳಿಗೆ ಸಂಬಂಧಿಸಿದಂತೆ ಸಂಶೋಧನೆ, ಕ್ಲಿನಿಕಲ್ ಟ್ರಯಲ್ ಗಳು, ಸಂಶೋಧನೆಗಳ ಫಲವನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವುದು ಇತ್ಯಾದಿ ಚಟುವಟಿಕೆಗಳ ಬಗ್ಗೆ ಗಮನ ಹರಿಸುವುದು ಸದ್ಯದ ಅಗತ್ಯವಾಗಿದೆ ಎಂದಿದ್ದಾರೆ.

ರಾಷ್ಟ್ರೀಯ ಮಟ್ಟದಲ್ಲಿ ಲಸಿಕೆಗೆ ಸಂಬಂಧಿಸಿದಂತೆ ಏನಿಲ್ಲವೆಂದರೂ ಸುಮಾರು 20 ಉತ್ಕೃಷ್ಠ ಸಂಸ್ಥೆಗಳು ಕಾರ್ಯನಿರತವಾಗಿವೆ. ಇವೆಲ್ಲವನ್ನೂ ಒಂದೆಡೆ ಕೇಂದ್ರೀಕರಿಸಿ ಲಸಿಕಾ ಸಂಬಂಧಿ ಚಟುವಟಿಕೆಗಳಿಗೆ ಒತ್ತು ನೀಡಬೇಕಾಗಿದೆ. ಇದಕ್ಕೆ ಪೂರಕವಾದ ನೀತಿಯನ್ನು ಸರ್ಕಾರ ರೂಪಿಸಲಿದೆ, ಕ್ಲಿನಿಕಲ್ ಟ್ರಯಲ್ ಗೆ ಸಂಬಂಧಿಸಿದಂತೆ ದೇಶದಲ್ಲಿ ಮುಂಚೆ ಹಲವಾರು ಕಟ್ಟುಪಾಡುಗಳಿದ್ದವು. ಆದರೆ ಅನಗತ್ಯ ಕಟ್ಟುಪಾಡುಗಳನ್ನು ಈಗ ಸಡಿಲಿಸಲಾಗಿದೆ ಎಂದು ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಡಾ.ಅಶ್ವತ್ಥ ನಾರಾಯಣ ಹಾಗೂ ಕ್ಯಾನ್ಸರ್ ತಜ್ಞ ಡಾ.ವಿಶಾಲ್ ರಾವ್

ಕ್ಷಿಪ್ರ ಪರೀಕ್ಷಾ ವಿಧಾನ:

ಡಾ.ರಫಿ ಅವರು ಮಾತನಾಡಿ, ಎಮೊರಿ ಲಸಿಕಾ ಕೇಂದ್ರವು ಸದ್ಯ ಅತ್ಯಂತ ನಿಖರತೆಯಿಂದ ಕೂಡಿದ ಅತ್ಯಾಧುನಿಕ ಕ್ಷಿಪ್ರ ಪರೀಕ್ಷಾ ವಿಧಾನವನ್ನು ಅಭಿವೃದ್ಧಿಪಡಿಸಿದೆ. ಇದನ್ನು ಅಟ್ಲಾಂಟಾದ ಆಸ್ಪತ್ರೆಗಳಲ್ಲಿ ಯಶಸ್ವಿಯಾಗಿ ಬಳಸಲಾಗುತ್ತಿದೆ. ಪ್ಲಾಸ್ಮಾ ಥೆರಪಿ, ಹ್ಯೂಮನ್ ಮಾಲಿಕ್ಯುಲಾರ್ ಆಂಟಿಬಾಡೀಸ್ ಇವು ಎಮೊರಿ ಕೇಂದ್ರವು ಸಂಶೋಧನಾ ಕಾರ್ಯನಿರತವಾಗಿರುವ ಇನ್ನಿತರ ಪ್ರಮುಖ ಕ್ಷೇತ್ರಗಳಾಗಿವೆ ಎಂದು ವಿವರಿಸಿದ್ದಾರೆ.

ಕರ್ನಾಟಕ ಮತ್ತು ಎಮೊರಿ ಲಸಿಕಾ ಕೇಂದ್ರದ ನಡುವೆ ಶೈಕ್ಷಣಿಕ ಸಹಭಾಗಿತ್ವ ಸಾಧಿಸಲು ಅವಕಾಶವಿದೆ. ಸದ್ಯಕ್ಕೆ ಆನ್ ಲೈನ್ ಮೂಲಕವೇ ಇದನ್ನು ಆರಂಭಿಸಬಹುದು. ಅಲ್ಲಿನ ವಿದ್ಯಾರ್ಥಿಗಳು, ಇಲ್ಲಿನ ವಿದ್ಯಾರ್ಥಿಗಳು, ಸಂಶೋಧಕರ ನಡುವೆ ಪರಸ್ಪರ ವಿಚಾರ ವಿನಿಮಯಕ್ಕೆ ಇದರಿಂದ ಅವಕಾಶವಾಗಲಿದೆ. ವಿಶೇಷವಾಗಿ ಪಿಎಚ್.ಡಿ.ವಿದ್ಯಾರ್ಥಿಗಳು ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದರೆ ಅಧಿಕ ಪ್ರಯೋಜನವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪ್ರತಿರೋಧ ಅಧ್ಯಯನ ಕ್ಷೇತ್ರವು ಎಮೊರಿ ಲಸಿಕಾ ಕೇಂದ್ರದ ಪ್ರಮುಖ ಕಾರ್ಯಕ್ಷೇತ್ರವಾಗಿದೆ. ವಿಶೇಷವಾಗಿ ಕ್ಯಾನ್ಸರ್ ಇಮ್ಯೂನೋ ಥೆರಪಿಗೆ ಸಂಬಂಧಿಸಿದ ಸಂಶೋಧನೆಗಳಿಗೆ ಒತ್ತು ನೀಡಲಾಗಿದೆ ಎಂದಿದ್ದಾರೆ. ಕರ್ನಾಟಕ ಸರ್ಕಾರದೊಂದಿಗೆ ಸಹಭಾಗಿತ್ವ ಸಾಧಿಸುವುದಕ್ಕೆ ಸಂಬಂಧಿಸಿದಂತೆ ಸದ್ಯವೇ ಪ್ರಸ್ತಾವ ಸಲ್ಲಿಸುವುದಾಗಿ ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ. ಕ್ಯಾನ್ಸರ್ ತಜ್ಞ ಡಾ.ವಿಶಾಲ್ ರಾವ್ ಹಾಜರಿದ್ದರು.

Lead Photo by Polina Tankilevitch from Pexels

Tags: covid vaccinecovid-19 karnatakadr cn ashwath narayan
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಆರೋಗ್ಯ ಸ್ಥಿತಿ ಗಂಭೀರ; ವೆಂಟಿಲೇಟರ್ ಮೇಲೆ ಸಿಟಿಜನ್ ಮುಖರ್ಜಿ, Get well soon Sir..

ಆರೋಗ್ಯ ಸ್ಥಿತಿ ಗಂಭೀರ; ವೆಂಟಿಲೇಟರ್ ಮೇಲೆ ಸಿಟಿಜನ್ ಮುಖರ್ಜಿ, Get well soon Sir..

Leave a Reply Cancel reply

Your email address will not be published. Required fields are marked *

Recommended

3‌ ಲಕ್ಷದವರೆಗಿನ ಆದಾಯಕ್ಕೆ ತೆರಿಗೆ ವಿನಾಯಿತಿ

3‌ ಲಕ್ಷದವರೆಗಿನ ಆದಾಯಕ್ಕೆ ತೆರಿಗೆ ವಿನಾಯಿತಿ

2 years ago
ಚಿಕ್ಕಬಳ್ಳಾಪುರ ಬಳಿ ಭೀಕರ ಅಪಘಾತ; ಆಂಧ್ರದ ಗೊರಂಟ್ಲದ 13 ಜನರ ದುರ್ಮರಣ

ಚಿಕ್ಕಬಳ್ಳಾಪುರ ಬಳಿ ಭೀಕರ ಅಪಘಾತ; ಆಂಧ್ರದ ಗೊರಂಟ್ಲದ 13 ಜನರ ದುರ್ಮರಣ

3 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ