• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

20ರಂದೇ ಸಿಇಟಿ ಫಲಿತಾಂಶ; ಶುಲ್ಕ, ಸೀಟು ಹಂಚಿಕೆಯಲ್ಲಿ ಬದಲಿಲ್ಲ

cknewsnow desk by cknewsnow desk
August 17, 2020
in NEWS IN USE, STATE
Reading Time: 1 min read
0
20ರಂದೇ ಸಿಇಟಿ ಫಲಿತಾಂಶ; ಶುಲ್ಕ, ಸೀಟು ಹಂಚಿಕೆಯಲ್ಲಿ ಬದಲಿಲ್ಲ
915
VIEWS
FacebookTwitterWhatsuplinkedinEmail

ಬೆಂಗಳೂರು: ಇದೇ ತಿಂಗಳ 20ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದ್ದು, ಕಳೆದ ವರ್ಷವಿದ್ದಷ್ಟೇ ಶುಲ್ಕ ಪ್ರಮಾಣ ಮತ್ತು ಸೀಟು ಹಂಚಿಕೆ ಅನುಪಾತವನ್ನು ಮುಂದುವರಿಸಲು ಸರಕಾರ ನಿರ್ಧರಿಸಿದೆ.

ಎಂಜಿನಿಯರಿಂಗ್‌ ಸೀಟುಗಳ ಹಂಚಿಕೆ ಮತ್ತು ಶುಲ್ಕ ನಿಗದಿ ಸಂಬಂಧ ಕಾಮೆಡ್‌-ಕೆ, ಕರ್ನಾಟಕ ಅನುದಾನರಹಿತ ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳ ಸಂಘ ಹಾಗೂ ರಾಜ್ಯ ಮತೀಯ ಅಲ್ಪಸಂಖ್ಯಾತ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಸಂಘದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ನಂತರ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಸೋಮವಾರ ಇಲ್ಲಿ ತಿಳಿಸಿದರು.

ʼಕೋವಿಡ್‌ ಮತ್ತು ನೆರೆ ಕಾರಣಕ್ಕೆ ಶುಲ್ಕ ಹೆಚ್ಚಳ ಮಾಡುತ್ತಿಲ್ಲ. ಜತೆಗೆ ಕಳೆದ ವರ್ಷದ ಸೀಟು ಹಂಚಿಕೆ ಪ್ರಮಾಣದಲ್ಲಿಯೇ ಈ ವರ್ಷ ಕೂಡ ಸೀಟು ಹಂಚಿಕೆ ಮಾಡುತ್ತಿದ್ದು, ಇದಕ್ಕೆ ಎಲ್ಲ ಸಂಘಗಳ ಪ್ರತಿನಿಧಿಗಳೂ ಒಪ್ಪಿಗೆ ಸೂಚಿಸಿದರು ಎಂದು ಅವರು ತಿಳಿಸಿದರು.

ಜುಲೈ 30-31 ಮತ್ತು ಆಗಸ್ಟ್‌ 1ರಂದು ಸಿಇಟಿ ಪರೀಕ್ಷೆ ನಡೆದಿತ್ತು. ರಾಜ್ಯದ ಇತಿಹಾಸದಲ್ಲಿಯೇ ಮೊತ್ತ ಮೊದಲ ಬಾರಿಗೆ ಪರೀಕ್ಷೆ ನಡೆದ ಕೇವಲ 19 ದಿನಗಳಲ್ಲಿ ಸಿಇಟಿ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ. ವಿದ್ಯಾರ್ಥಿಗಳ ಹಿತವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಸರಕಾರ ಈ ಕ್ರಮ ಕೈಗೊಂಡಿದೆ. ಈ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು.

ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ

45:30:25 ಅನುಪಾತ:

ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳು ಈ ವರ್ಷ ಯಾವುದೇ ಬೇಡಿಕೆಯನ್ನು ಮುಂದಿಟ್ಟಿಲ್ಲ. ಸರಕಾರದ ಪ್ರಸ್ತಾವನೆಯನ್ನೇ ಒಪ್ಪಿಕೊಂಡಿವೆ. ಶೇಕಡಾ 45:30:25ರ ಅನುಪಾತದ ಸೀಟು ಹಂಚಿಕೆಗೆ ಒಪ್ಪಿಗೆ ಸೂಚಿಸಲಾಗಿದೆ. ಇದರಲ್ಲಿ ಶೇ 45 ರಷ್ಟು ಸೀಟುಗಳನ್ನು ಸರ್ಕಾರಕ್ಕೆ ನೀಡಿದರೆ ಶೇ.30ರಷ್ಟು ಸೀಟುಗಳನ್ನು ಕಾಮೆಡ್‌-ಕೆಗೆ ಹಂಚಿಕೆ ಮಾಡಲಾಗುತ್ತಿದೆ. ಶೇ 25ರಷ್ಟು ಸೀಟುಗಳನ್ನು ಅನಿವಾಸಿ ಭಾರತೀಯರು/ ಮ್ಯಾನೇಜ್‌ಮೆಂಟ್‌ ಕೋಟಾಗೆ ಮೀಸಲಿಡಲಾಗಿದೆ. ಇನ್ನು ಅಲ್ಪಸಂಖ್ಯಾತರು ಮತ್ತು ಭಾಷಾ ಅಲ್ಪಸಂಖ್ಯಾತರಿಗೆ ಕ್ರಮವಾಗಿ ಶೇಕಡಾ 40:30:30ರ ಅನುಪಾತದಲ್ಲಿ ಸೀಟು ಹಂಚಿಕೆ ಮಾಡಲಾಗಿದೆ. ಇದರಲ್ಲಿ ಶೇ 40ರಷ್ಟು ಸೀಟುಗಳನ್ನು ಸರ್ಕಾರಕ್ಕೆ ಕೊಟ್ಟರೆ ಶೇ 30ರಷ್ಟು ಸೀಟುಗಳನ್ನು ಅಲ್ಪಸಂಖ್ಯಾತರು ಮತ್ತು ಭಾಷಾ ಅಲ್ಪಸಂಖ್ಯಾತರಿಗೆ ನೀಡಲಾಗುತ್ತದೆ. ಉಳಿದ ಶೇ 30ರಷ್ಟು ಸೀಟುಗಳನ್ನು ಅನಿವಾಸಿ ಭಾರತೀಯರು/ ಮ್ಯಾನೇಜ್‌ಮೆಂಟ್‌ ಕೋಟಾಗೆ ನೀಡಲಾಗುತ್ತದೆ.

ಶುಲ್ಕದಲ್ಲೂ ಬದಲಾವಣೆ ಇಲ್ಲ:

ಇನ್ನು ಶುಲ್ಕಕ್ಕೆ ಬಂದರೆ, ಒಂದು ಸಂರಚನೆಯಲ್ಲಿ; ಸಿಇಟಿ ವಿದ್ಯಾರ್ಥಿಗಳಿಗೆ ತಲಾ 65,360 ರೂ. ಹಾಗೂ ಕಾಮೆಡ್-ಕೆ ವಿದ್ಯಾರ್ಥಿಗಳಿಗೆ 1,43,748 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ. ಇನ್ನೊಂದರಲ್ಲಿ ಸಿಇಟಿ ವಿದ್ಯಾರ್ಥಿಗಳಿಗೆ 58,806 ರೂ. ಹಾಗೂ ಕಾಮೆಡ್‌-ಕೆ ವಿದ್ಯಾರ್ಥಿಗಳಿಗೆ 2,01,960 ರೂ. ನಿಗದಿ ಮಾಡಲಾಗಿದೆ.

ಆನ್‌ಲೈನ್‌ ಕೌನ್ಸೆಲಿಂಗ್:‌

ಕೋವಿಡ್‌ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಈ ವರ್ಷ ಅಕ್ಟೋಬರ್ ತಿಂಗಳ ಒಳಗೆ ಆನ್‌ಲೈನ್‌ ಕೌನ್ಸೆಲಿಂಗ್‌ ಮಾಡಲಾಗುವುದು. ವಿದ್ಯಾರ್ಥಿಗಳು ತಾವು ಇದ್ದ ಜಾಗದಿಂದಲೇ ಕೌನ್ಸೆಲಿಂಗ್‌ ಎದುರಿಸಬಹುದು. ಯಾರೂ ಬೆಂಗಳೂರಿನ ತನಕ ಬರುವ ಅಗತ್ಯವಿಲ್ಲ. ಕಾಲೇಜು ಆಯ್ಕೆ ಮಾಡಿಕೊಂಡ ಮೇಲೆ ಆಯಾ ಕಾಲೇಜಿಗೆ ತೆರಳಿ ನಿಗದಿತ ಅವಧಿಯೊಳಗೆ ಪ್ರವೇಶಾತಿ ಪಡೆಯಬೇಕು. ಎರಡು ರೌಂಡ್‌ ಕೌನ್ಸೆಲಿಂಗ್‌ ಮತ್ತು ಒಂದು ಬಾರಿ ವಿಸ್ತರಿತ ಕೌನ್ಸೆಲಿಂಗ್‌ ಇರುತ್ತದೆ. ಇದು ಬಿಟ್ಟು ಹೆಚ್ಚುವರಿ ಸುತ್ತಿನ ಕೌನ್ಸೆಲಿಂಗ್‌ ಈ ಬಾರಿ ನಡೆಸುವುದಿಲ್ಲ.

ಕಾಲೇಜು ಆಡಳಿತ ಮಂಡಳಿಗಳು ಕೂಡ ಭರ್ತಿಯಾಗದ ಸೀಟುಗಳನ್ನು ನಿಗದಿತ ಅವಧಿಯೊಳಗೆ ಸಿಇಟಿಗೆ ವಾಪಸ್‌ ಮಾಡಬೇಕು. ಹಾಗೆ ಮಾಡಿದ 24 ಗಂಟೆಗಳಲ್ಲೇ ಪುನಃ ಸೀಟುಗಳನ್ನು ಕಾಲೇಜುಗಳಿಗೇ ನೀಡಲಾಗುತ್ತದೆ. ಈ ವಿಷಯದಲ್ಲಿ ಯಾರೂ ವಿಳಂಬ ಮಾಡಬಾರದು ಎನ್ನುವ ಸೂಚನೆಯನ್ನು ಕೂಡ ಸಂಘಗಳ ಪ್ರತಿನಿಧಿಗಳಿಗೆ ಸೂಚಿಸಲಾಗಿದೆ. ಸೀಟ್‌ ಬ್ಲಾಕಿಂಗ್‌ ಗೆ ಅವಕಾಶ ಇಲ್ಲ. ಎಲ್ಲವೂ ಪಾರದರ್ಶಕವಾಗಿ ನಡೆಸಲಾಗುವುದು ಎಂದು ಹೇಳಿದ ಅವರು ಈ ಬಾರಿಯ ಸಿಇಟಿ ಕೌನ್ಸೆಲಿಂಗ್‌ ನೀಟ್‌ ಮತ್ತು ಜೆಇಇ ಕೌನ್ಸೆಲಿಂಗ್‌ ನಂತರ ನಡೆಯಲಿದೆ.

ಖಾಸಗಿ ಶಿಕ್ಷಣ ಸಂಸ್ಥೆಗಳ ಪರವಾಗಿ ಪಾಂಡುರಂಗ ಶೆಟ್ಟಿ, ಡಾ.ಹೇಮಚಂದ್ರ ಸಾಗರ್‌, ಸಿ.ಎಂ.ಲಿಂಗಪ್ಪ, ಶಫೀ ಅಹಮದ್‌ ಹಾಜರಿದ್ದರು. ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ರಮಣರೆಡ್ಡಿ, ವಿಟಿಯು ಕುಲಪತಿ ಕರಿಸಿದ್ದಪ್ಪ ಅವರು ಆನ್‌ಲೈನ್‌ ಮೂಲಕ ಸಭೆಗೆ ಹಾಜರಾಗಿದ್ದರು. ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ವೆಂಕಟ ರಾಜಾ, ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್‌ ಸಭೆಯಲ್ಲಿದ್ದರು.

Lead Photo: BNMK Photographs

Tags: cetcet resultdr cn ashwath narayankarnataka higher educationkcet
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಬಿಬಿಎಂಪಿಗೆ ಅಡ್ಮಿನಿಸ್ಟ್ರೇಟರ್?

ಬಿಬಿಎಂಪಿಗೆ ಅಡ್ಮಿನಿಸ್ಟ್ರೇಟರ್?

Leave a Reply Cancel reply

Your email address will not be published. Required fields are marked *

Recommended

ಇಂದಿನಿಂದ ಎಲ್ಲಾ ಸರಕಾರಿ ಶಾಲೆಗಳಿಗೆ ಉಚಿತ ವಿದ್ಯುತ್, ನೀರು

ಇಂದಿನಿಂದ ಎಲ್ಲಾ ಸರಕಾರಿ ಶಾಲೆಗಳಿಗೆ ಉಚಿತ ವಿದ್ಯುತ್, ನೀರು

3 years ago
ಮನೆ ಬಾಗಿಲಲ್ಲೇ ಪಾಲಿಟೆಕ್ನಿಕ್ʼಗೆ ದಾಖಲಾದ ಬಡ ವಿದ್ಯಾರ್ಥಿಗೆ ಪೂರ್ಣ ಉಚಿತ ಶಿಕ್ಷಣ

ಮನೆ ಬಾಗಿಲಲ್ಲೇ ಪಾಲಿಟೆಕ್ನಿಕ್ʼಗೆ ದಾಖಲಾದ ಬಡ ವಿದ್ಯಾರ್ಥಿಗೆ ಪೂರ್ಣ ಉಚಿತ ಶಿಕ್ಷಣ

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ