• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಕೈಗಾರಿಕೆಗಳಲ್ಲಿ ಹೂಡಿಕೆ; ಕೋಲಾರ, ಚಿಕ್ಕಬಳ್ಳಾಪುರಕ್ಕೆ ಜಾಕ್’ಪಾಟ್

cknewsnow desk by cknewsnow desk
August 19, 2020
in STATE
Reading Time: 1 min read
1
ಕೈಗಾರಿಕೆಗಳಲ್ಲಿ ಹೂಡಿಕೆ; ಕೋಲಾರ, ಚಿಕ್ಕಬಳ್ಳಾಪುರಕ್ಕೆ ಜಾಕ್’ಪಾಟ್

ಕೋಲಾರ ಮತ್ತು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ.

921
VIEWS
FacebookTwitterWhatsuplinkedinEmail

ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ಕ್ಷೇತ್ರಕ್ಕೆ ಸೌಲಭ್ಯಗಳ ಸುರಿಮಳೆ; ರಿಯಾಯ್ತಿಗಳ ಮಹಾಪೂರ; ಖರೀದಿಸುವ ಭೂಮಿಗೆ ಶೇ25ರಷ್ಟು ಡಿಸ್ಕೌಂಟ್

ಬೆಂಗಳೂರು: ಕೋವಿಡ್-‌19 ನಂತರ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ವಿನ್ಯಾಸ ಮತ್ತು ಉತ್ಪಾದನಾ (ಇಎಸ್‌ಡಿಎಂ) ಕ್ಷೇತ್ರಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮಹತ್ವದ ಕ್ರಮಗಳನ್ನು ಕೈಗೊಂಡಿರುವ ರಾಜ್ಯ ಸರ್ಕಾರ, ಈ ಕ್ಷೇತ್ರದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಖರೀದಿಸಲಾಗುವ ಭೂಮಿಗೆ ಶೇ 25ರಷ್ಟು ನೇರ ಸಬ್ಸಿಡಿ ನೀಡುವುದೂ ಸೇರಿದಂತೆ ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಂಡಿದೆ. ಈ ಪೈಕಿ ಬಯಲುಸೀಮೆ ಜಿಲ್ಲೆಗಳಾದ ಚಿಕ್ಕಬಳ್ಳಾಪುರ ಮತ್ತು ಚಿತ್ರದುರ್ಗಕ್ಕೆ ಹೆಚ್ಚು ಮಹತ್ವ ನೀಡಲಾಗುತ್ತಿದೆ. ಈ ಪೈಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅತಿ ಹತ್ತಿರದಲ್ಲಿರುವ ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಗಳಿಗೆ ಜಾಕ್’ಪಾಟ್ ಹೊಡೆಯುವ ನಿರೀಕ್ಷೆ ಇದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮೊಬೈಲ್‌ ಮತ್ತು ಎಲೆಕ್ಟ್ರಾನಿಕ್ಸ್‌ ಕ್ಷೇತ್ರಕ್ಕೆ ಸಂಬಂಧಿಸಿದ ಕ್ಷೇತ್ರಗಳು ನೆಲೆಯೂರುವಂತೆ ಮಾಡಲು ಸರಕಾರ ಪ್ರಯತ್ನ ಮಾಡುತ್ತಿದೆ. ಕೈಗಾರಿಕೆಗಳು ಈ ಜಿಲ್ಲೆಯತ್ತಲೇ ಹೆಚ್ಚು ಆಸಕ್ತಿ ತೋರುತ್ತಿವೆ. ಜತೆಗೆ, ಕೋಲಾರದ ನರಸಾಪುರದಲ್ಲಿ ಈಗಾಗಲೇ ವಿಶ್ವದರ್ಜೆಯ ಕೈಗಾರಿಕಾ ಪ್ರದೇಶ ಇರುವುದರಿಂದ ಇವೆರಡೂ ಜಿಲ್ಲೆಗಳತ್ತ ಹೂಡಿಕೆದಾರರು ಹೆಚ್ಚು ಒಲವು ತೋರುತ್ತಿದ್ದಾರೆ.

ಭಾರತೀಯ ಎಲೆಕ್ಟ್ರಾನಿಕ್ಸ್‌ ಮತ್ತು ಸೆಮಿಕಂಡಕ್ಟರ್ ಸಂಘ (ಐಇಎಸ್‌ಎ) ಬುಧವಾರ ಹಮ್ಮಿಕೊಂಡಿದ್ದ ʼವಿಷನ್‌ ಶೃಂಗಸಭೆ- 2020 ಅನ್ನು ಉದ್ದೇಶಿಸಿ ಆನ್‌ಲೈನ್‌ನಲ್ಲಿ ಮುಖ್ಯ ಭಾಷಣ ಮಾಡಿದ ಎಲೆಕ್ಟ್ರಾನಿಕ್ಸ್, ಐಟಿ- ಬಿಟಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥನಾರಾಯಣ, ಇಡೀ ದೇಶದಲ್ಲಿ ಇಂಥ ಕ್ರಮ ಕೈಗೊಂಡಿರುವ ಏಕೈಕ ಹಾಗೂ ಮೊದಲ ರಾಜ್ಯ ಕರ್ನಾಟಕವಾಗಿದೆ. ಈ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆ ಹಾಗೂ ಹೆಚ್ಚೆಚ್ಚು ಉದ್ಯೋಗಾವಕಾಶ ಸೃಷ್ಟಿ ಮಾಡಲು ಇಂಥ ದಿಟ್ಟಹೆಜ್ಜೆ ಇಡಲಾಗಿದೆ ಎಂದರು. ಇದೇ ವೇಳೆ ಹೂಡಿಕೆದಾರರು ಕೂಡ ಈ ಜಿಲ್ಲೆಗಳತ್ತ ಚಿತ್ತ ಹರಿಸಿದ್ದಾರೆ.

Happy to see @Apple moving iPhone 12 production to Wistron's Kolar unit.

The Government of Karnataka is focussed on attracting manufacturers to invest and create jobs in the state, especially under the PLI schemes of the Central Government.@CMofKarnataka pic.twitter.com/0vqZPqXSxF

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) August 19, 2020

ಇದೇ ವೇಳೆ ಅಮೆರಿಕದ ದೈತ್ಯ ಮೊಬೈಲ್ ಕಂಪನಿ ಆಪಲ್ ತನ್ನ ಕೋಲಾರದ ಘಟಕದಲ್ಲಿ ಐಫೋನ್ 12 ಅನ್ನು ತಯಾರಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ ಮತ್ತಷ್ಟು ಬಂಡವಾಳ ಆಕರ್ಷಿಸಲು ಈ ಕ್ರಮ ಪೂರಕವಾಗಿದೆ ಎಂದು ಡಾ. ಅಶ್ವತ್ಥನಾರಾಯಣ ಟ್ವೀಟ್ ಮಾಡಿದ್ದಾರೆ. ಜತೆಗೆ, ’ಬಿಸಿನೆಸ್ ಸ್ಟ್ಯಾಂಡರ್ಡ್’ ಪತ್ರಿಕೆಯಲ್ಲಿ ಬಂದ ವರದಿಯನ್ನು ಟ್ಯಾಗ್ ಮಾಡಿದ್ದಾರೆ.

ಶೇ.25ರಷ್ಟು ಡಿಸ್ಕೌಂಟ್:

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಖರೀದಿಸುವ ಜಮೀನುಗಳಿಗೆ ಈ ರಿಯಾಯಿತಿ ಅನ್ವಯ ಆಗುವುದಿಲ್ಲ. ಉಳಿದ ಯಾವುದೇ ಜಿಲ್ಲೆಗಳಲ್ಲಿ 50 ಎಕರೆವರೆಗೆ ಭೂಮಿ ಖರೀದಿ ಮಾಡಿ ಕೈಗಾರಿಕೆ ಸ್ಥಾಪಿಸಿದರೂ ಈ ಸೌಲಭ್ಯ ದೊರೆಯಲಿದೆ. ಕೆಐಎಡಿಬಿ/ಕೆಎಸ್‌ಎಸ್‌ಐಡಿಸಿ ಯಿಂದ ಖರೀದಿಸಿದ ಭೂಮಿಯ ಮಾರ್ಗದರ್ಶಿ ದರ ಅಥವಾ ಭೂಮಿಯ ಖರೀದಿ ದರದ ಶೇ 25ರಷ್ಟು ರಿಯಾಯಿತಿ ಸಿಗಲಿದೆ ಎಂದು ವಿವರಿಸಿದರು. ಇದಲ್ಲದೆ, ಕೈಗಾರಿಕಾ ಘಟಕ ಸ್ಥಾಪನೆ ಮತ್ತು ಯಂತ್ರಗಳ ಖರೀದಿಗೆ ಹೂಡಿಕೆ ಮಾಡುವ ಒಟ್ಟು ಹಣದಲ್ಲಿ ಶೇ 20ರಷ್ಟು ರಿಯಾಯಿತಿ ನೀಡುವುದಾಗಿಯೂ ಅವರು ಘೋಷಿಸಿದರು.

ಖರೀದಿ ಮಾಡಲಾದ ಭೂಮಿಯ ನೋಂದಣಿಗೆ ಖರ್ಚು ಮಾಡಿದ ಮುದ್ರಾಂಕ ಮತ್ತು ನೋಂದಣಿ ಶುಲ್ಕವನ್ನೂ ಸರ್ಕಾರವೇ ಪೂರ್ಣ ಮರುಪಾವತಿಸಲಿದೆ. ಭೂ ಪರಿವರ್ತನೆಗೆ ಖರ್ಚು ಮಾಡಿದ ಶುಲ್ಕವನ್ನೂ ಮರುಪಾವತಿ ಮಾಡಲಾಗುವುದು. ಐದು ವರ್ಷಗಳ ಕಾಲ ಪ್ರತಿ ಯೂನಿಟ್‌ಗೆ ಒಂದು ರೂಪಾಯಿ ಸಬ್ಸಿಡಿ ನೀಡಲಾಗುವುದು. ಜತೆಗೆ ಬಳಕೆ ಮಾಡುವ ವಿದ್ಯುತ್‌ ಮೇಲಿನ ತೆರಿಗೆಯನ್ನು ಐದು ವರ್ಷಗಳವರೆಗೆ ಸಂಪೂರ್ಣ ರಿಯಾಯಿತಿ ಕೊಡಲಾಗುವುದು ಹಾಗೂ ಒಟ್ಟಾರೆ ವಹಿವಾಟಿನ ಮೇಲೆ ಶೇ 1ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಡಾ. ಅಶ್ವತ್ಥನಾರಾಯಣ ಹೇಳಿದರು.

ಹೀಗೆ ವಿನಾಯಿತಿಗಳನ್ನು ಉಪ ಮುಖ್ಯಮಂತ್ರಿ ಪ್ರಕಟಿಸುತ್ತಿದ್ದ ಹಾಗೆಯೇ ವೆಬಿನಾರ್‌ನಲ್ಲಿ ಭಾಗವಹಿಸಿದ್ದ ಉದ್ಯಮಿಗಳು ಸಂತಸ ವ್ಯಕ್ತಪಡಿಸಿದರು. ಕರ್ನಾಟಕದಲ್ಲಿ ಹೆಚ್ಚೆಚ್ಚು ಬಂಡವಾಳ ಹೂಡುವ ಭರವಸೆ ನೀಡಿದರು. ಈಗಾಗಲೇ ಈ ಎಲ್ಲ ಪ್ರಸ್ತಾವನೆಗಳಿಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಗುರುವಾರ ಸಂಪುಟ ಸಭೆ ನಡೆಯಲಿದ್ದು ಇವೆಲ್ಲಕ್ಕೂ ಅನುಮೋದನೆ ಪಡೆಯಲಾಗುವುದು ಎಂದು ಹೇಳಿದರು.

ಯಾವ ಕ್ಷೇತ್ರಕ್ಕೆ ಅನುಕೂಲ?:

ಎಲೆಕ್ಟ್ರಾನಿಕ್‌ ಉತ್ಪನ್ನಗಳ ಉತ್ಪಾದನೆ ಮತ್ತು ವಿನ್ಯಾಸ, ಸೆಮಿಕಂಡಕ್ಟರ್‌ಗಳ ವಿನ್ಯಾಸ ಮತ್ತು ತಯಾರಿ, ಎಲೆಕ್ಟ್ರಾನಿಕ್ ಉತ್ಪಾದನಾ ಸೇವೆ, ಸೋಲಾರ್‌ ಸೆಲ್‌ಗಳ ಉತ್ಪಾದನೆ, ಎಲ್‌ಇಡಿಗಳ ತಯಾರಿ, ಜತೆಗೆ ರಾಷ್ಟ್ರೀಯ ಎಲೆಕ್ಟ್ರಾನಿಕ್ಸ್‌ ನೀತಿಯ ಅಡಿಯಲ್ಲಿ ಯಾವುದೇ ಉತ್ಪನ್ನವನ್ನು ತಯಾರಿಸಿದರೆ ಅಥವಾ ವಿನ್ಯಾಸ ಮಾಡಿದರೆ ಮೇಲೆ ತಿಳಿಸಿದ ಎಲ್ಲ ಸೌಲಭ್ಯಗಳು ಸಿಗಲಿವೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಕೋಲಾರದ ನರಸಾಪುರ ಕೈಗಾರಿಕೆ ಪ್ರದೇಶಗಳ ನೋಟ. /Photos: A.C. Babu

ಎಲೆಕ್ಟ್ರಾನಿಕ್‌ ಉತ್ಪನ್ನಗಳ ಉತ್ಪಾದನೆ ಮತ್ತು ವಿನ್ಯಾಸಕ್ಕೆ ಮೂರು ಜಿಲ್ಲೆಗಳಲ್ಲಿ ಕ್ಲಸ್ಟರ್‌ಗಳನ್ನು ಸ್ಥಾಪಿಸಲಾಗಿದೆ. ಅದರಲ್ಲಿ ಚಿಕ್ಕಬಳ್ಳಾಪುರದಲ್ಲಿ ಮೊಬೈಲ್‌ ಮತ್ತು ಎಲೆಕ್ಟ್ರಾನಿಕ್ಸ್‌, ಮೈಸೂರು ಜಿಲ್ಲೆಯಲ್ಲಿ ಪಿಸಿಬಿಎ ಮತ್ತು ಐಸಿಬಿ ಹಾಗೂ ಚಿತ್ರದುರ್ಗ ಜಿಲ್ಲೆಯಲ್ಲಿ ಎಲ್‌ಇಡಿ ದೀಪಗಳನ್ನು ತಯಾರಿ ಮಾಡಲಾಗುತ್ತಿದೆ. ಪ್ರತಿ ಜಿಲ್ಲೆಯಲ್ಲೂ 10 ಸಾವಿರ ಉದ್ಯೋಗ ಸೃಷ್ಟಿ ಹಾಗೂ 725 ದಶಲಕ್ಷ ಡಾಲರ್‌ನಷ್ಟು ಬಂಡವಾಳ ಆಕರ್ಷಿಸಲಾಗುತ್ತಿದೆ, 20 ಸಾವಿರಕ್ಕೂ ಹೆಚ್ಚು ಯುವಕರಿಗೆ ಕೌಶಲ ತರಬೇತಿ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು

ಡಿಜಿಟಲ್‌ ಎಕಾನಮಿ ಮಿಷನ್:‌

ರಾಜ್ಯದಲ್ಲಿ ಡಿಜಿಟಲ್‌ ಆರ್ಥಿಕತೆಯನ್ನು ಉತ್ತೇಜಿಸಲು ಹಾಗೂ ಹೂಡಿಕೆಯನ್ನು ಆಕರ್ಷಿಸುವ ಉದ್ದೇಶದಿಂದ ಕರ್ನಾಟಕ ಡಿಜಿಟಲ್‌ ಎಕಾನಮಿ ಮಿಷನ್‌ ಅನ್ನು ಸ್ಥಾಪನೆ ಮಾಡಲಾಗುತ್ತಿದೆ. ಈ ಕ್ಷೇತ್ರದಲ್ಲಿ ಹೊಸದಾಗಿ ಬರುವ ಕಂಪನಿಗಳಿಗೆ ಸೇವೆಯನ್ನು ಒದಗಿಸುವ ಹಾಗೂ ನೀತಿನಿರೂಪಣೆ ಮಾಡುವ ಕೆಲಸವನ್ನು ಈ ಸಂಸ್ಥೆ ಮಾಡಲಿದೆ ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ಒಟ್ಟು 13 ಜಿಲ್ಲೆಗಳಲ್ಲಿ 25 ಕೈಗಾರಿಕಾ ಪ್ರದೇಶಗಳಿದ್ದು, ಇದುವರೆಗೂ 7 ಸಾವಿರ ಎಕರೆಯಷ್ಟು ಭೂಮಿಯನ್ನು ನೀಡಲಾಗಿದೆ. ಈ ಪೈಕಿ ಎಲೆಕ್ಟ್ರಾನಿಕ್‌ ಉತ್ಪನ್ನಗಳ ಉತ್ಪಾದನೆ ಮತ್ತು ವಿನ್ಯಾಸ ಕ್ಷೇತ್ರಕ್ಕೆ 7 ಎಸ್‌ಇಝೆಡ್‌ಗಳಿದ್ದು, ಒಟ್ಟು 800 ಎಕರೆ ಭೂಮಿ ಇದೆ ಎಂದು ಡಿಸಿಎಂ ವಿವರ ನೀಡಿದರು.

Tags: chikkaballapurdr cn ashwath narayankarnataka industrieskolarnarasapura industrial area
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಶಾಪಿಂಗ್ ಮಾಡಲ್ಲ; ಹಬ್ಬ ಏನಿದ್ರೂ ಸಿಂಪಲ್ ಎಂದ ಸಿಟಿಜನ

ಶಾಪಿಂಗ್ ಮಾಡಲ್ಲ; ಹಬ್ಬ ಏನಿದ್ರೂ ಸಿಂಪಲ್ ಎಂದ ಸಿಟಿಜನ

Comments 1

  1. Pingback: ಚಿನ್ನದ ನಾಡಿಗೆ ಆಪಲ್‌ ಗರಿ; ಜಿಲ್ಲೆಯಲ್ಲಿ ಐಫೋನ್‌ ಹವಾ! ಯುವಜನರಿಗೆ ಸ್ಟೀವ್‌ ಜಾಬ್ಸ್‌ ಕನವರಿಕೆ!! - CK News Now

Leave a Reply Cancel reply

Your email address will not be published. Required fields are marked *

Recommended

ಮೈಸೂರು ಮುಕ್ತ ವಿವಿ ಬಿಟ್ಟರೆ ಬೇರೆಡೆ ಸಿಗಲ್ಲ  ದೂರಶಿಕ್ಷಣ; ಬೆಂಗಳೂರು ಕೇಂದ್ರ ಯುನಿವರ್ಸಿಟಿಗೆ ಹೊಸ ಹೆಸರು

ಮೈಸೂರು ಮುಕ್ತ ವಿವಿ ಬಿಟ್ಟರೆ ಬೇರೆಡೆ ಸಿಗಲ್ಲ ದೂರಶಿಕ್ಷಣ; ಬೆಂಗಳೂರು ಕೇಂದ್ರ ಯುನಿವರ್ಸಿಟಿಗೆ ಹೊಸ ಹೆಸರು

5 years ago
ನಾನು ಸುಳ್ಳು ಹೇಳುತ್ತಿಲ್ಲ ಎಂದ ಡಿಕೆಶಿ

ಮುಖ್ಯಮಂತ್ರಿಗಳದ್ದು ನಾಟಕದ ಕಂಪನಿ ಇದೆ!!

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ