• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

ಗೆದ್ದ ಸಿಇಟಿ; ಗೌರಿ-ಗಣೇಶ ಸಂಭ್ರಮದ ನಡುವೆ ರಿಸಲ್ಟೋಲ್ಲಾಸ

cknewsnow desk by cknewsnow desk
August 22, 2020
in NEWS IN USE, STATE
Reading Time: 3 mins read
0
ಗೆದ್ದ ಸಿಇಟಿ; ಗೌರಿ-ಗಣೇಶ ಸಂಭ್ರಮದ ನಡುವೆ ರಿಸಲ್ಟೋಲ್ಲಾಸ
936
VIEWS
FacebookTwitterWhatsuplinkedinEmail

KCET Result 2020: ಎಂಜಿನಿಯರಿಂಗ್: ರಕ್ಷಿತ್ ನಂ.1; ಬಿಎಸ್ಸಿ ಅಗ್ರಿ: ವರುಣ್ ಗೌಡ, ವೆಟರ್ನರಿ: ಸಾಯಿ ವಿವೇಕ್, ನ್ಯಾಚುರೋಪತಿ-ಯೋಗ ವಿಜ್ಞಾನದಲ್ಲಿ ಅರನವ್ ಅಯ್ಯಪ್ಪ

ಬೆಂಗಳೂರು: ಸಿಇಟಿ ಕಾರಣಕ್ಕೆ ರಾಜ್ಯವು ಇಡೀ ದೇಶದಲ್ಲಿಯೇ ಹೊಸ ಮೈಲುಗಲ್ಲು ಸ್ಥಾಪಿಸಿದೆ. ಕೋವಿಡ್ ಮಾರಿಗೆ ಹೆದರಿ ಇಂಥ ಪರೀಕ್ಷೆಗಳನ್ನು ನಡೆಸಲಾಗದೇ ಕೈಚೆಲ್ಲಿದ್ದ ಹಲವು ರಾಜ್ಯಗಳ ಮುಂದೆ ಕರ್ನಾಟಕ ಮಾದರಿ ರಾಜ್ಯವಾಗಿ ಹೊರಹೊಮ್ಮಿದೆ. ಪರೀಕ್ಷೆ ನಡೆಸಿದ ಕೇವಲ ಇಪ್ಪತ್ತೇ ದಿನಗಳಲ್ಲಿ ಫಲಿತಾಂಶವೂ ಹೊರವಿದ್ದು ಶೈಕ್ಷಣಿಕ ವಲಯದಲ್ಲಿ ಗೌರಿ-ಗಣೇಶ ಹಬ್ಬದ ಸಂಭ್ರಮ ಇಮ್ಮಿಡಿಸುವಂತೆ ಮಾಡಿದೆ.

ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಬೆಂಗಳೂರಿನಲ್ಲಿ ಶುಕ್ರವಾರ ಪ್ರಕಟಿಸಿದರು.

ಎಂಜಿನಿಯರಿಂಗ್, ಪಶುವೈದ್ಯಕೀಯ, ಬಿಎಸ್ಸಿ (ಕೃಷಿ), ಬಿ- ಫಾರ್ಮಾ, ಡಿ-ಪಾರ್ಮಾ, ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಕೋರ್ಸುಗಳ ಪ್ರವೇಶಕ್ಕಾಗಿ ಸಿಇಟಿ ನಡೆಸಲಾಗಿತ್ತು. ವರಮಹಾಲಕ್ಷ್ಮಿ ಹಬ್ಬದಂದು ಪರೀಕ್ಷೆ ನಡೆಸಿದ್ದ ಕೆಇಎ, ಗೌರಿ ಹಬ್ಬದಂದು ಫಲಿತಾಂಶ ಪ್ರಕಟಿಸಿದೆ. ದಾಖಲೆಯ ಅವಧಿಯಲ್ಲೇ ಫಲಿತಾಂಶ ಕೊಟ್ಟಿರುವುದು ಕೆಇಎನ ಹೆಗ್ಗಳಿಕೆ ಎಂದು ಉಪ ಮುಖ್ಯಮಂತ್ರಿ ಮೆಚ್ಚುಗೆ ವ್ಯಕ್ತಪಡಿಸಿದರು.

ಇಡೀ ದೇಶಕ್ಕೆ ಸಿಇಟಿಯನ್ನು ಕೊಟ್ಟು ಉನ್ನತ ಶಿಕ್ಷಣಕ್ಕೆ ಹೊಸ ಆಯಾಮ ನೀಡಿದ ಕರ್ನಾಟಕದಲ್ಲಿ ಈ ವರ್ಷ ಕೋವಿಡ್ ಕಾರಣಕ್ಕೆ ಪರೀಕ್ಷೆ ನಡೆಸುವುದೇ ಕಷ್ಟವೆನ್ನುವ ಪರಿಸ್ಥಿತಿ ತಲೆದೋರಿತ್ತು. ಆದರೆ, ವಿದ್ಯಾರ್ಥಿಗಳು ಹಾಗೂ ಪೋಷಕರ ಹಿತದೃಷ್ಟಿಯಿಂದ ಪರೀಕ್ಷೆಯನ್ನು ನಡೆಸಲಾಯಿತಲ್ಲದೆ, ಕೋವಿಡ್ ಪಾಸಿಟೀವ್ ಇದ್ದ 63 ವಿದ್ಯಾರ್ಥಿಗಳಿಗೂ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ಅವಕಾಶ ನೀಡಿದ್ದು, ಸಿಇಟಿ ಇತಿಹಾಸದಲ್ಲಿ ಮೈಲುಗಲ್ಲಾಗಿ ಉಳಿಯಲಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ರಾಜ್ಯದ ಸಮಸ್ತ ಜನರಿಗೆ ಗೌರಿ-ಗಣೇಶ ಚತುರ್ಥಿಯ ಶುಭಾಶಯಗಳು.

ಇಡೀ ಜಗತ್ತೇ ಕೋವಿಡ್‌ ಬಿಕ್ಕಟ್ಟಿನಲ್ಲಿದ್ದಾಗ, ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಲು ಸಾಧ್ಯವೇ ಇಲ್ಲ ಎನ್ನುತ್ತಿದ್ದ ಅತ್ಯಂತ ಕಠಿಣ ಪರಿಸ್ಥಿತಿಯಲ್ಲಿ ನಾವು #KCET ಪರೀಕ್ಷೆಯನ್ನು ನಡೆಸಿದ್ದೇವೆ.

1/7 pic.twitter.com/mrVRtL11Mx

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) August 21, 2020

ಟಾಪ್ 10 ರಾಂಕ್ ಪಡೆದ ವಿದ್ಯಾರ್ಥಿಗಳ ವಿವರ ಹೀಗಿದೆ

ಪೋಷಕರ ಜತೆ ಎಂ. ರಕ್ಷಿತ್.

ಎಂಜಿನಿಯರಿಂಗ್:

1.ಎಂ. ರಕ್ಷಿತ್: ಆರ್.ವಿ. ಪಿಯು ಕಾಲೇಜು, ಬೆಂಗಳೂರು
2.ಆರ್. ಶುಭನ್: ಶ್ರೀ ಚೈತನ್ಯ ಇ ಟೆಕ್ನೋ ಕಾಲೇಜು, ಬೆಂಗಳೂರು
3.ಎಂ.ಶಶಾಂಕ್ ಬಾಲಾಜಿ: ಬೇಸ್ ಪಿಯು ಕಾಲೇಜು, ಹುಬ್ಬಳ್ಳಿ
4.ಪಿ. ಶಶಾಂಕ್: ಎಕ್ಸ್’ಪರ್ಟ್ ಕಾಲೇಜು, ಮಂಗಳೂರು
5.ಸಂದೀಪನ್ ನಸ್ಕರ್: ಹೊರನಾಡ ಕನ್ನಡಿಗ ವಿದ್ಯಾರ್ಥಿ

ಬಿಎಸ್ಸಿ ಅಗ್ರಿ:

ವರುಣ್ ಗೌಡ ಎ.ಬಿ.

1.ವರುಣ್ ಗೌಡ ಎ.ಬಿ.: ಎಕ್ಸ್’ಪರ್ಟ್ ಕಾಲೇಜು, ಮಂಗಳೂರು
2.ಕೆ. ಸಂಜನಾ: ಬೇಸ್ ಕಾಲೇಜು, ಮೈಸೂರು
3.ಲೋಕೇಶ್ ಬಿ. ಜೋಗಿ: ಶ್ರೀ ರಾಮಕೃಷ್ಣ ವಿದ್ಯಾಶಾಲ ಪಿಯು ಕಾಲೇಜು, ಮೈಸೂರು
4.ಪಿ.ಪಿ. ಅರನವ್ ಅಯ್ಯಪ್ಪ: ಆಳ್ವಾಸ್ ಕಾಲೇಜು, ಮೂಡಬಿದಿರೆ
5.ಪ್ರಜ್ವಲ್ ಕಶ್ಯಪ್: ವಿದ್ಯಾಮಂದಿರ ಪಿಯು ಕಾಲೇಜು, ಬೆಂಗಳೂರು

ಪಶುವೈದ್ಯ ವಿಜ್ಞಾನ:

1.ಪಿ. ಸಾಯಿ ವಿವೇಕ್: ನಾರಾಯಣ ಇ- ಟೆಕ್ನೋ ಶಾಲೆ, ಬೆಂಗಳೂರು
2.ಆರ್ಯನ್ ಮಹಾಲಿಂಗಪ್ಪ ಚನ್ನಲ್: ಪ್ರಗತಿ ಪಬ್ಲಿಕ್ ಶಾಲೆ, ಕೋಟ
3.ಕೆ. ಸಂಜನಾ: ಬೇಸ್ ಕಾಲೇಜು, ಮೈಸೂರು
4.ಪವನ್ ಎಸ್. ಗೌಡ: ನಾರಾಯಣ ಪಿಯು ಕಾಲೇಜು, ಬೆಂಗಳೂರು
5.ಪಿ.ಪಿ. ಅರ್ನವ್ ಅಯ್ಯಪ್ಪ: ಆಳ್ವಾಸ್ ಕಾಲೇಜು, ಮೂಡಬಿದಿರೆ

ಬಿ ಫಾರ್ಮಾ ಮತ್ತು ಡಿ ಫಾರ್ಮಾ:

1.ಪಿ. ಸಾಯಿ ವಿವೇಕ್: ನಾರಾಯಣ ಇ- ಟೆಕ್ನೋ ಶಾಲೆ, ಬೆಂಗಳೂರು
2.ಸಂದೀಪನ್ ನಸ್ಕರ್: ಹೊರನಾಡ ಕನ್ನಡಿಗ ವಿದ್ಯಾರ್ಥಿ
3.ಪವನ್ ಎಸ್. ಗೌಡ : ನಾರಾಯಣ ಪಿಯು ಕಾಲೇಜು, ಬೆಂಗಳೂರು
4.ಆರ್ಯನ್ ಮಹಾಲಿಂಗಪ್ಪ ಚನ್ನಲ್: ಪ್ರಗತಿ ಪಬ್ಲಿಕ್ ಶಾಲೆ, ಕೋಟ
5.ಕೆ. ಸಂಜನಾ: ಬೇಸ್ ಕಾಲೇಜು, ಮೈಸೂರು

ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ:

ಪಿ.ಪಿ. ಅರನವ್ ಅಯ್ಯಪ್ಪ

1.ಪಿ.ಪಿ. ಅರನವ್ ಅಯ್ಯಪ್ಪ: ಆಳ್ವಾಸ್ ಕಾಲೇಜು, ಮೂಡಬಿದಿರೆ
2.ಕೆ. ಸಂಜನಾ: ಬೇಸ್ ಕಾಲೇಜು, ಮೈಸೂರು
3.ಪಿ. ಸಾಯಿ ವಿವೇಕ್: ನಾರಾಯಣ ಇ- ಟೆಕ್ನೋ ಶಾಲೆ, ಬೆಂಗಳೂರು
4.ಕಾರ್ತಿಕ್ ರೆಡ್ಡಿ: ಶಾಹಿನ್ ಐಎನ್’ಡಿಪಿ ಕಾಲೇಜು, ಬೀದರ್
5.ವರುಣ್ ಗೌಡ ಎ.ಬಿ.: ಎಕ್ಸ್’ಪರ್ಟ್ ಕಾಲೇಜು, ಮಂಗಳೂರು

ವೆಬ್’ಸೈಟಿನಲ್ಲಿ ಫಲಿತಾಂಶ:

ಸಾಮಾನ್ಯ ಪ್ರವೇಶ ಪರೀಕ್ಷೆ (KCET)ಯ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಅಧಿಕೃತ ವೆಬ್​ಸೈಟ್​ cetonline.karnataka.gov.in/kea ದಲ್ಲಿ ನೋಡಿ, ಡೌನ್’ಲೋಡ್ ಮಾಡಿಕೊಳ್ಳಬಹುದಾಗಿದೆ.
ಫಲಿತಾಂಶ ನೋಡಲು ಕೆಳಗಿನ ಲಿಂಕ್’ಗಳನ್ನು ಕ್ಲಿಕ್​ ಮಾಡಬಹುದು.
http://karresults.nic.in/indexCET2020.asp
http://karresults.nic.in/indexCET2020.asp
http://karresults.nic.in/

ಇದನ್ನೂ ಓದಿ…

ಸಿಇಟಿ ರಿಸಲ್ಟ್ ಬೇಕೆ? ಇಲ್ಲಿ ನೋಡಿ, ಕ್ಲಿಕ್ ಮಾಡಿ

ಉತ್ತಮ ಪ್ರತಿಕ್ರಿಯೆ:

ಕೋವಿಡ್’ನಿಂದ ಎಷ್ಟೇ ಸಮಸ್ಯೆ ಎದುರಾದರೂ ಸರಕಾರ ಪರೀಕ್ಷೆ ನಡೆಸಿತು. ಯಾವುದೇ ಕಾರಣಕ್ಕೂ ಶೈಕ್ಷಣಿಕ ಚಟುವಟಿಕೆಗಳಿಗೆ ಧಕ್ಕೆ ಆಗಬಾರದು ಎಂಬುದು ಸರಕಾರದ ಅಚಲ ನಂಬಿಕೆಯಾಗಿತ್ತು. ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಎಲ್ಲ ಇಲಾಖೆಗಳ ಸಹಕಾರದಿಂದ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ಎಂಜಿನಿಯರಿಂಗ್ ಕೋರ್ಸ್’ಗೆ 1,94,419 ವಿದ್ಯಾರ್ಥಿಗಳು, ಅರ್ಜಿ ಸಲ್ಲಿಸಿದ್ದರೆ, ಆ ಪೈಕಿ 1,75,349 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಇವರಲ್ಲಿ 1,53,470 ವಿದ್ಯಾರ್ಥಿಗಳಿಗೆ ರಾಂಕ್‌ ನೀಡಲಾಗಿದೆ.

ಬಿಎಸ್ಸಿ ಅಗ್ರಿ ವಿಭಾಗದಲ್ಲೂ 1,27,627, ಪಶುವೈದ್ಯ ವಿಜ್ಞಾನ ವಿಭಾಗದಲ್ಲಿ 1,29,666, ಬಿ-ಫಾರ್ಮಾ, ಡಿ-ಫಾರ್ಮಾ ವಿಭಾಗದಲ್ಲಿ 1,55,552 ವಿದ್ಯಾರ್ಥಿಗಳು ರಾಂಕ್ ಪಡೆದಿದ್ದಾರೆ.

ಕೋವಿಡ್ ವಿದ್ಯಾರ್ಥಿಗಳಿಗೂ ರಾಂಕ್:

ಕೋವಿಡ್ ಪಾಸಿಟೀವ್ ಇದ್ದ ಒಟ್ಟು 63 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ ಒಬ್ಬ ವಿದ್ಯಾರ್ಥಿ 214ನೇ ರಾಂಕ್ ಹಾಗೂ ಇನ್ನೊಬ್ಬ ವಿದ್ಯಾರ್ಥಿ 615 ರಾಂಕ್ ಗಳಿಸಿದ್ದಾರೆ. ಇದರಿಂದ ನಮಗೆ ಹೆಚ್ಚೆ ಎನಿಸುತ್ತದೆ ಎಂದು ಡಾ. ಅಶ್ವತ್ಥನಾರಾಯಣ ಹೇಳಿದರು.

ಅಕ್ಟೋಬರ್‌ನಲ್ಲಿ ಕೌನ್ಸೆಲಿಂಗ್:

ಜೆಇಇ, ನೀಟ್ ಮುಂತಾದ ಪರೀಕ್ಷೆಗಳ ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ನೋಡಿಕೊಂಡು ಸಿಇಟಿ ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು. ಬಹುತೇಕ ಅಕ್ಟೋಬರ್‌ನಲ್ಲಿ ನಡೆಸುವುದು ಖಚಿತ. ಎಐಸಿಟಿ ಸೂಚನೆಯಂತೆ ನಡೆಯಲಿದೆ. ಆನ್‌ಲೈನ್‌ ಕೌನ್ಸೆಲಿಂಗ್‌ಗೆ ತಯಾರಿ ಮಾಡಿಕೊಂಡಿದ್ದೇವೆ. ಒಟ್ಟು ಎರಡು ಸುತ್ತಿನ ಕೌನ್ಸೆಲಿಂಗ್ ಮತ್ತು ಅಂತಿಮವಾಗಿ ಒಂದು ವಿಸ್ತರಣಾ ಸುತ್ತು ಇರುತ್ತದೆ. ಇದು ಕೇವಲ ಬದಲಾವಣೆ ಇತ್ಯಾದಿಗಳಿಗೆ ಸಂಬಂಧಿಸಿದ ಮಾಪಪ್ ರೌಂಡ್ ಆಗಿರುತ್ತದೆ ಎಂದು ಡಿಸಿಎಂ ಮಾಹಿತಿ ನೀಡಿದರು.

ಕೋವಿಡ್ ಸಂಕಷ್ಟ ಕಾಲದಲ್ಲಿ ಸಿಇಟಿ ಪರೀಕ್ಷೆಯನ್ನು ನಡೆಸಿದ ಕರ್ನಾಟಕ ಇತರೆ ರಾಜ್ಯಗಳಿಗೆ ಮಾದರಿಯಾಗಿದೆ. ಕೋವಿಡ್ ಸೋಂಕಿಗೆ ಒಳಗಾಗಿದ್ದ ವಿದ್ಯಾರ್ಥಿಗಳು ಕೂಡ ಉತ್ತಮ ಫಲಿತಾಂಶ ಸಾಧಿಸಿದ್ದಾರೆ. ಒಟ್ಟಾರೆಯಾಗಿ ಇಡೀ ಪರೀಕ್ಷೆಯ ಯಶಸ್ಸಿನಿಂದ ರಾಜ್ಯದ ಉನ್ನತ ಶಿಕ್ಷಣ ವ್ಯವಸ್ಥೆಗೆ ದೊಡ್ಡ ಬಲ ಬಂದಂತೆ ಆಗಿದೆ. ಇದಕ್ಕಾಗಿ ಶ್ರಮಿಸಿದ ಪ್ರತಿಯೊಬ್ಬರಿಗೂ ನನ್ನ ಕೃತಜ್ಞತೆಗಳು.

ಡಾ. ಸಿ.ಎನ್. ಅಶ್ವತ್ಥನಾರಾಯಣ, ಉಪ ಮುಖ್ಯಮಂತ್ರಿ

ದಾಖಲೆ ಸಲ್ಲಿಸಿ ಜಾಯಿನ್ ಆಗಿ:

2ನೇ ಸುತ್ತಿನ ಕೌನ್ಸೆಲಿಂಗ್ ಮುಗಿಯುತ್ತಿದ್ದಂತೆ ತಮ್ಮ ಕಾಲೇಜುಗಳನ್ನು ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳು ಕೊಂಚವೂ ತಡ ಮಾಡದೇ ತಮ್ಮ ಮೂಲ ದಾಖಲೆಗಳನ್ನು ಸಲ್ಲಿಸಿ ಕಾಲೇಜುಗಳಲ್ಲಿ ಪ್ರವೇಶಾತಿ ಪಡೆಯಬೇಕು. ಒಂದು ವೇಳೆ ಶುಲ್ಕ ಪಾವತಿ ಮಾಡಿ ದಾಖಲೆಗಳನ್ನು ಸಲ್ಲಿಸದಿದ್ದರೆ ಆ ಪ್ರವೇಶಾತಿ ತಾನಾಗಿಯೇ ರದ್ದಾಗುತ್ತದೆ. ಈ ಅಂಶವನ್ನು ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಗಮನದಲ್ಲಿ ಇಟ್ಟುಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಹೇಳಿದರು.


Photos: BNMK Photographs

Tags: counselling to be held onlinedocument verificationdr cn ashwath narayaneducationkcet results-2020KEA
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಹೊಸ ಬ್ಯಾಂಕೂ, ಹೊಸ ಕೆರನ್ಸಿ.. ಚೆನ್ನಾ…ಗಿದೆ!! ಆಹಾ! ನಿತ್ಯಾನಂದ!!

ಹೊಸ ಬ್ಯಾಂಕೂ, ಹೊಸ ಕೆರನ್ಸಿ.. ಚೆನ್ನಾ...ಗಿದೆ!! ಆಹಾ! ನಿತ್ಯಾನಂದ!!

Leave a Reply Cancel reply

Your email address will not be published. Required fields are marked *

Recommended

ಮುಂದಿನ ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ? ಗುಟ್ಟುಬಿಟ್ಟುಕೊಟ್ಟ ಬಂಗಾರಪೇಟೆ ಶಾಸಕ ಎಸ್.ಎನ್‌.ನಾರಾಯಣಸ್ವಾಮಿ

ಕೇಂದ್ರದ ಕೈಗೆ IAS, IPSಗಳ ಜುಟ್ಟು

5 years ago
ಆರೋಗ್ಯ ಕ್ಷೇತ್ರದಲ್ಲಿ ವಿಜಯನಗರದ ವೈಭವದ ಕನಸು ಕಂಡ ಆರೋಗ್ಯ ಸಚಿವ ಡಾ.ಕೆ.ಸುಧಾಕರ್! ಎಲ್ಲ ಆಸ್ಪತ್ರೆಗಳಲ್ಲೂ ಅತ್ಯುತ್ತಮ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು

ಆರೋಗ್ಯ ಕ್ಷೇತ್ರದಲ್ಲಿ ವಿಜಯನಗರದ ವೈಭವದ ಕನಸು ಕಂಡ ಆರೋಗ್ಯ ಸಚಿವ ಡಾ.ಕೆ.ಸುಧಾಕರ್! ಎಲ್ಲ ಆಸ್ಪತ್ರೆಗಳಲ್ಲೂ ಅತ್ಯುತ್ತಮ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು

6 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ