• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ಸಂಗೊಳ್ಳಿ ರಾಯಣ್ಣ ಪ್ರತಿಮೆ; ಕಾನೂನಿನ ಮದ್ದರೆಯಲು ಮುಂದಾದ ಸರಕಾರ

cknewsnow desk by cknewsnow desk
August 29, 2020
in POLITICS, STATE
Reading Time: 1 min read
0
ಸಂಗೊಳ್ಳಿ ರಾಯಣ್ಣ ಪ್ರತಿಮೆ; ಕಾನೂನಿನ ಮದ್ದರೆಯಲು ಮುಂದಾದ ಸರಕಾರ
915
VIEWS
FacebookTwitterWhatsuplinkedinEmail
ಸಂಗೊಳ್ಳಿ ರಾಯಣ್ಣ ಅವರನ್ನು ಬ್ರಿಟೀಷರು ಗಲ್ಲಿಗೇರಿಸಿದ ಆಲದ ಮರವಿರುವ ಸ್ಥಳದಲ್ಲಿ ಅಮರ ಸೇನಾನಿಗೆ ನಮನ ಸಲ್ಲಿಸಿದ ಸಚಿವರು.

***

ಬೆಳಗಾವಿ: ಜಿಲ್ಲೆಯ ಪೀರನವಾಡಿ ಗ್ರಾಮದಲ್ಲಿ ಸ್ಥಾಪಿಸಿದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಕುರಿತು ಗೆಜೆಟ್ ನೋಟಿಫಿಕೇಶನ್ ಹೊರಡಿಸಲು ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು‌ ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಇದರೊಂದಿಗೆ ವಿವಾದಕ್ಕೆ ಶಾಶ್ವತ ಪರಿಹಾರ ಕಂಡುಹಿಡಿಯಲು ಕಾನೂನಿನ ಮದ್ದರೆಯಲು ಮುಂದಾಗಿರುವ ಸರಕಾರ, ಮುಂದಿನ ದಿನಗಳಲ್ಲಿ ಮರಾಠಿ ಪ್ರೇರಿತ ಪುಂಡರು ಮಿಸುಕಾಡದಂತೆ ಮಾಡಲು ಮುಂದಾಗಿದೆ.

ಪೀರನವಾಡಿಯಲ್ಲಿ ಸುದ್ದಿಗಾರರ ಜತೆ ರಮೇಶ್ ಜಾರಕಿಹೊಳಿ‌, ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿವಾದ ಶುಕ್ರವಾರವೇ ಸುಖಾಂತ್ಯವಾಗಿದೆ. ಸಂಗೊಳ್ಳಿ ರಾಯಣ್ಣ ಮತ್ತು‌ ಛತ್ರಪತಿ ಶಿವಾಜಿ, ಇಬ್ಬರೂ ದೇಶದ ಮಹಾಪುರುಷರು. ಅವರಿಬ್ಬರೂ ಯಾವುದೇ ಜಾತಿಗೆ ಸೀಮಿತವಲ್ಲ. ಇಬ್ಬರೂ ನಮ್ಮ ಸಮಾಜದ ಆಸ್ತಿ. ರಾಷ್ಟ್ರಭಕ್ತ ಮಹಾನ್​ ನಾಯಕರ ಪ್ರತಿಮೆಗಳಿಗೆ ಯಾವುದೇ ರೀತಿಯ ಅವಮಾನವಾಗದಂತೆ ಎಚ್ಚರಿಕೆ ವಹಿಸಲಾಗುವುದು. ಸರಕಾರ ಕೈಕಟ್ಟಿ ಕೂರುವುದಿಲ್ಲ ಎಂಬ ಎಚ್ಚರಿಕೆಯನ್ನೂ ನೀಡಿದರು.

ಕರ್ನಾಟಕ ಸರಕಾರಕ್ಕೆ ಶಿವಸೇನೆಯ ಸಚಿವರು  ಪತ್ರ ಬರೆದ ಕುರಿತು ಪ್ರತಿಕ್ರಿಯೆ ನೀಡಿದ ಸಚಿವ ಜಾರಕಿಹೊಳಿ‌, ಶಿವಸೇನೆ ಬರೆದ‌ ಪತ್ರ ದುರುದ್ದೇಶದಿಂದ ಕೂಡಿದೆ. ಅವರು ಯಾವ ಅಜೆಂಡಾ ಇಟ್ಟುಕೊಂಡು ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಏರಿದ್ದಾರೆ ಎಂಬುದು ದೇಶಕ್ಕೆಲ್ಲ ಗೊತ್ತಿದೆ. ಈ ಕುರಿತು ನಾನು ಬಹಳಷ್ಟು ಸಲ ‌ಹೇಳಿದ್ದೇನೆ. ನಾವು ಅದಕ್ಕೆ ಮಹತ್ವ ಕೊಡಬಾರದು ಎಂದು ಹೇಳಿದರು.

ಇವತ್ತು ಪೀರನವಾಡಿಯಲ್ಲಿನ ಸಂಗೊಳ್ಳಿ ರಾಯಣ್ಣ ಮತ್ತು ಶಿವಾಜಿ ಪುತ್ಥಳಿಗೆ ಸಚಿವ ಈಶ್ವರಪ್ಪ ಮತ್ತು ನಾನು ಹೂವಿನ ಹಾರ ಹಾಕಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ್ದೇವೆ ಮತ್ತು ನಾವು ಸದಾ ರಾಷ್ಟ್ರಭಕ್ತರನ್ನು ಗೌರವಿಸುತ್ತೇವೆ. ಇನ್ನು ಕನ್ನಡಪರ ಹೋರಾಟಗಾರರ ಮೇಲಿನ ಪ್ರಕರಣಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ. ಹಾಗೆಯೇ ಪ್ರಕರಣ ಹಿಂಪಡೆಯುವಂತೆ ಮನವಿ ಮಾಡುತ್ತೇನೆ ಎಂದು ಅವರು ತಿಳಿಸಿದರು.

ಮಾಲಾರ್ಪಣೆ ಮಾಡಿದ ಈಶ್ವರಪ್ಪ, ರಮೇಶ್ ಜಾರಕಿಹೊಳಿ.

ಸಂಗೊಳ್ಳಿ ರಾಯಣ್ಣ ಗಲ್ಲಿಗೇರಿಸಿದ ಸ್ಥಳ

ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ನಂದಗಡಕ್ಕೆ ಭೇಟಿ ನೀಡಿದ ಸಚಿವರಾದ ರಮೇಶ್ ಜಾರಕಿಹೊಳಿ‌ ಮತ್ತು ಕೆ.ಎಸ್.‌ ಈಶ್ವರಪ್ಪ, ಸಂಗೊಳ್ಳಿ ರಾಯಣ್ಣ ಅವರನ್ನು ಬ್ರಿಟೀಷರು ಗಲ್ಲಿಗೇರಿಸಿದ ಆಲದ ಮರವಿರುವ ಸ್ಥಳದಲ್ಲಿ ಅಮರ ಸೇನಾನಿಗೆ ನಮನ ಸಲ್ಲಿಸಿದರು. ಆ ಸ್ಥಳದಲ್ಲಿರುವ ಹನುಮಂತನ ಮೂರ್ತಿಗೆ ಮತ್ತು ನಂದಗಡ ಗ್ರಾಮದ ವೃತ್ತದಲ್ಲಿ‌ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಸಚಿವರಿಂದ ಮಾಲಾರ್ಪಣೆಯೂ ನಡೆಯಿತು. ಬಳಿಕ ಬಳಿಕ ಸಂಗೊಳ್ಳಿ ರಾಯಣ್ಣ ಸಮಾಧಿಗೂ ಭೇಟಿ ನೀಡಿ ನಮನ ಸಲ್ಲಿಸಿದರು. ಇದರೊಂದಿಗೆ ಸಂಗೊಳ್ಳಿ ರಾಯಣ್ಣ ವಿಚಾರದಲ್ಲಿ ಕರ್ನಾಟಕ ಸುಮ್ಮನಿರುವುದಿಲ್ಲ, ಮುಂದೆ ಕೆಣಕದಿರಿ ಎಂಬ ಸಂದೇಶವನ್ನು ಅವರಿಬ್ಬರು ಸಾರಿದರು.

ಪ್ರಕರಣ ವಾಪಸ್:

ಪೀರನವಾಡಿಯಲ್ಲಿ ಆದ ಗಲಾಟೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಕನ್ನಡಪರ ಹೋರಾಟಗಾರರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ರದ್ದು ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ ಎಂದು ಸಚಿ ಈಶ್ವರಪ್ಪ ಹೇಳಿದರು.

Tags: belagaviChatrapati-shivajikarnataka-maharashtrapeeranwadi-belgaumSangolli rayanna
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ವಂಶಪಾರಂಪರ್ಯದ ಸುಳಿಗೆ ಸಿಕ್ಕಿ ಕುಸಿಯುತ್ತಿರುವ ಕಾಂಗ್ರೆಸ್; ನೆನಪಾಗುತ್ತಿರುವ ಪಾಮುಲಪರ್ತಿ ವೆಂಕಟ ನರಸಿಂಹ ರಾವ್

ವಂಶಪಾರಂಪರ್ಯದ ಸುಳಿಗೆ ಸಿಕ್ಕಿ ಕುಸಿಯುತ್ತಿರುವ ಕಾಂಗ್ರೆಸ್; ನೆನಪಾಗುತ್ತಿರುವ ಪಾಮುಲಪರ್ತಿ ವೆಂಕಟ ನರಸಿಂಹ ರಾವ್

Leave a Reply Cancel reply

Your email address will not be published. Required fields are marked *

Recommended

ಮುಂದಿನ ಚುನಾವಣೆಗೆ ಜೆಡಿಎಸ್‌ ನೇತೃತ್ವದಲ್ಲಿ ʼಕನ್ನಡಗರ ಮಹಾಮೈತ್ರಿಕೂಟʼ

ಮುಂದಿನ ಚುನಾವಣೆಗೆ ಜೆಡಿಎಸ್‌ ನೇತೃತ್ವದಲ್ಲಿ ʼಕನ್ನಡಗರ ಮಹಾಮೈತ್ರಿಕೂಟʼ

4 years ago
ಯಾವ ಕನಸು ನಿಮ್ಮನ್ನು ನಿದ್ದೆ ಮಾಡಲು ಬಿಡುವುದಿಲ್ಲವೋ ಅದೇ ನಿಜವಾದ ಕನಸು

ಪೀಪಲ್ಸ್ ಪ್ರೆಸಿಡೆಂಟ್ ಮತ್ತು ಕನಸುಗಳ ಶಿಕಾರಿ

3 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ