• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಬೆಂಗಳೂರು ಟ್ರಾಫಿಕ್‌ ಕಂಟ್ರೋಲ್‌ ಹೇಗೆ? ಬೆಂಗಳೂರು ರಸ್ತೆಗಳಿಯುತ್ತಾ ಟ್ರಿಣ್‌ ಟ್ರಿಣ್‌ ಬೈಸಿಕಲ್

cknewsnow desk by cknewsnow desk
September 20, 2020
in STATE
Reading Time: 1 min read
0
ಬೆಂಗಳೂರು ಟ್ರಾಫಿಕ್‌ ಕಂಟ್ರೋಲ್‌ ಹೇಗೆ? ಬೆಂಗಳೂರು ರಸ್ತೆಗಳಿಯುತ್ತಾ ಟ್ರಿಣ್‌ ಟ್ರಿಣ್‌ ಬೈಸಿಕಲ್
911
VIEWS
FacebookTwitterWhatsuplinkedinEmail
LEAD PHOTO: AS

ಬೆಂಗಳೂರು: ಸಂಚಾರಿ ಪೊಲೀಸರು ಅದೆಷ್ಟು ಹರಸಾಹಸ ಮಾಡಿದರೂ ಟ್ರಾಫಿಕ್‌ಜಾಮ್‌ ಕಂಟ್ರೋಲಿಗೇ ಬರುತ್ತಿಲ್ಲ. ಫುಟ್‌ಪಾತ್‌ ಮೇಲೆ ನಡೆಯುವ ಜನರಿಗೂ ಕಿರಿಕಿರಿ. ಯಾಕೆಂದರೆ, ಪಾದಾಚಾರಿ ಮಾರ್ಗಗಳನ್ನೂ ದ್ವಿಚಕ್ರ ವಾಹನ ಚಾಲಕರು ಬಿಡುತ್ತಿಲ್ಲ. ರಸ್ತೆಯಲ್ಲಿ ಜಾಗವಿಲ್ಲದಿದ್ದರೆ ನೇರ ಫುಟ್‌ಪಾತ್‌ಗೇ ನುಗ್ಗಿಬಿಡುತ್ತಾರೆ ಬೈಕರುಗಳು. ಅರ್ಧ ಗಂಟೆ ದಾರಿಯ ಕಚೇರಿಗೆ ಬಸ್‌ನಲ್ಲೋ, ಕಾರಿನಲ್ಲಿ ಹೊರಟರೆ ಗಂಟೆಗೂ ಹೆಚ್ಚು ಸಮಯ ಬೇಕಾಗುತ್ತದೆ. ಮೆಟ್ರೋ ಬಂದ ಮೇಲೂ ಎಲ್ಲೆಲ್ಲೂ ಜಾಮ್!‌ ಆ ಮೆಟ್ರೋ ಸಂಚರಿಸುವ ದಾರಿಗಳಲ್ಲೇ ಟ್ರಾಫಿಕ್‌ ಕಿರಿಕಿರಿ. ಹಾಗಾದರೆ, ಬೆಂಗಳೂರು ಟ್ರಾಫಿಕ್‌ ಕಂಟ್ರೋಲ್‌ ಹೇಗೆ? ಬೆಂಗಳೂರು ರಸ್ತೆಗಳಿಯುತ್ತಾ ಟ್ರಿಣ್‌ ಟ್ರಿಣ್‌ ಬೈಸಿಕಲ್.

ಇದಕ್ಕೆ ಪರಿಹಾರವೇನು? ಬೆಂಗಳೂರಿನ ಹಣೆಬರಹ ಇಷ್ಟೇನಾ? ಎಂದು ತಲೆ ಪರಚಿಕೊಳ್ಳುವ ಹೊತ್ತಿನಲ್ಲಿಯೇ ಕೆಲ ತಜ್ಞರು ಕೆಲ ಪರಿಹಾರಗಳನ್ನು ಸೂಚಿಸಿದ್ದಾರೆ. ಸರಕಾರಕ್ಕೆ ಕೆಲ ಶಿಫಾರಸುಗಳನ್ನೂ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಸಿದ್ಧಪಡಿಸಿರುವ ವೈಜ್ಞಾನಿಕ ವರದಿಯನ್ನು ಅವರು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥನಾರಾಯಣ ಅವರಿಗೆ ಸಲ್ಲಿಸಿದ್ದಾರೆ.

ಬೆಂಗಳೂರಿನ ವಾಹನ ದಟ್ಟಣಿಯನ್ನು ನಿವಾರಿಸುವುದು ಹಾಗೂ ವಾಯು ಮಾಲಿನ್ಯವನ್ನು ತಗ್ಗಿಸಲು ನಮ್ಮ ಮೆಟ್ರೋದಂಥ ಸಾರ್ವಜನಿಕ ಸಾರಿಗೆಯನ್ನು ಸರಕಾರ ಉತ್ತೇಜಿಸಬೇಕು ಎಂಬುದು ತಜ್ಞರು ಮಾಡಿರುವ ಬಹುಮುಖ್ಯ ಶಿಫಾರಸು.

ವರದಿಗೆ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. “ಇಡೀ ಜಗತ್ತಿನಲ್ಲಿಯೇ ಬೆಂಗಳೂರು ಅತ್ಯಂತ ವೇಗವಾಗಿ ಹಾಗೂ ವಿಸ್ತೃತವಾಗಿ ಬೆಳೆಯುತ್ತಿದೆ. ಕೈಗಾರಿಕೆ, ವಾಣಿಜ್ಯ, ಸೇವೆ, ಉದ್ಯೋಗ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಮುಂಚೂಣಿ ನಗರವಾಗಿ ಹೊರಹೊಮ್ಮಿದೆ. ಹೀಗಾಗಿ ದೇಶದ ಮೂಲೆ ಮೂಲೆಗಳಿಂದ ಕೆಲಸಕ್ಕಾಗಿ ಜನರು ನಗರಕ್ಕೆ ವಲಸೆ ಬರುತ್ತಿದ್ದಾರೆ. ಹೀಗಾಗಿ ವಾಹನ ದಟ್ಟಣಿ ಹೆಚ್ಚಾಗಿ ವಾಯುಮಾಲಿನ್ಯವೂ ಜಾಸ್ತಿಯಾಗುತ್ತಿದೆ. ಇದನ್ನು ಹತ್ತಿಕ್ಕಲು ಸಾರ್ವಜನಿಕ ಸಾರಿಗೆಯನ್ನು ಸರಕಾರ ಉತ್ತೇಜಿಸುತ್ತಿದೆ. ಮುಖ್ಯವಾಗಿ ಬಿಎಂಟಿಸಿ ಮತ್ತು ಮೆಟ್ರೋ ಈ ನಿಟ್ಟಿನಲ್ಲಿ ಪ್ರಮುಖ ಪಾತ್ರ ಪೋಷಿಸುತ್ತಿವೆ. ಮುಂದಿನ ದಿನಗಳಲ್ಲಿ ಸರಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಬೆಂಗಳೂರು ಸಾರ್ವಜನಿಕ ಸಾರಿಕೆ ಪ್ರಮಾಣವನ್ನು ಶೇ.41ರಿಂದ 73ರಷ್ಟಕ್ಕೆ ಹೆಚ್ಚಿಸುವ ಗುರಿಯನ್ನು ಸರಕಾರ ಹೊಂದಿದೆ” ಎಂದು ಡಿಸಿಎಂ ಹೇಳಿದ್ದಾರೆ.

ಬೆಂಗಳೂರು ಮೂವಿಂಗ್‌ ಕ್ಯಾಂಪೇನ್‌ (#BengaluruMovingCampaign) ಅಡಿಯಲ್ಲಿ ಈ ವರದಿ ಸಲ್ಲಿಸಿರುವ ಸಾರ್ವಜನಿಕ ಸಂಸ್ಥೆಗಳು ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿವೆ. ಬೆಂಗಳೂರು ನೀಡ್ಸ್‌ ಯು (ಬಿಎನ್‌ವೈ), ಎನ್ವಿರಾನ್‌ಮೆಂಟ್‌ ಸಪೋರ್ಟ್‌ ಗ್ರೂಪ್‌ (ಇಎಸ್‌ಜಿ), ಯಂಗ್‌ ಲೀಡರ್ಸ್‌ ಫಾರ್‌ ಆಕ್ಟೀವ್‌ ಸಿಟಿಜನ್‌ಶಿಪ್‌ (ವೈಎಲ್‌ಎಸಿ), ಬೆಂಗಳೂರು ಪೊಲಿಟಿಕಲ್‌ ಆಕ್ಷನ್‌ ಕಮಿಟಿ (ಬಿ.ಪಿಎಸಿ) ಸಂಸ್ಥೆಗಳು ಇದರ ಜತೆ ಕೈಜೋಡಿಸಿವೆ.

ನಗರದಲ್ಲಿ ಸುಲಭ ಸಂಚಾರಕ್ಕಾಗಿ ವೈಯಕ್ತಿಕ ನೆಲೆಗಟ್ಟಿನಲ್ಲಿ ಕೆಲಸ ಮಾಡುತ್ತಿದ್ದು, ಇದೀಗ ಆ ಎಲ್ಲ ಸಂಸ್ಥೆಗಳು ಒಟ್ಟಾಗಿ ಈ ವರದಿಯನ್ನು ಸಿದ್ಧಪಡಿಸಿ ಸರಕಾರಕ್ಕೆ ಕೆಲ ಮಹತ್ತ್ವದ ಶಿಫಾರಸುಗಳನ್ನು ಮಾಡಿವೆ. ಈ ಶಿಫಾರಸುಗಳನ್ನು ಸರಕಾರ ಗಂಭೀರವಾಗಿ ಪರಿಶೀಲನೆ ನಡೆಸಲಿದೆ. ಬ್ರ್ಯಾಂಡ್‌ ಬೆಂಗಳೂರನ್ನು ಮತ್ತಷ್ಟು ಉತ್ತಮಪಡಿಸುವುದು ಹಾಗೂ ಮುಂದಿನ ತಲೆಮಾರಿಗೆ ಶುದ್ಧ ಬೆಂಗಳೂರನ್ನು ನೀಡುವುದು ನಮ್ಮೆಲ್ಲರ ಆಶಯವಾಗಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಶಿಫಾರಸುಗಳು

ಮೆಟ್ರೋ ಸುಲಭವಾಗಿ ಸಂಚರಿಸುವಂತೆ ಬಿಎಂಟಿಸಿ ಬಸ್ಸುಗಳು ಕೂಡ ವಾಹನದಟ್ಟಣಿಗೆ ಸಿಲುಕದೆ ಸಂಚರಿಸಬೇಕು. ಅದಕ್ಕಾಗಿ ಪ್ರತ್ಯೇಕ ಬಸ್‌ ಲೇನುಗಳನ್ನು ಹಾಕುವುದು, ನಗರದ ಕಟ್ಟಕಡೆಯ ಬಡಾವಣೆವರೆಗೂ ನಗರ ಸಂಚಾರವನ್ನು ವ್ಯವಸ್ಥಿತವಾಗಿ ವಿಸ್ತರಿಸುವುದು, ಸುಸ್ಥಿರ ಹಾಗೂ ಖಾಸಗಿ ವಾಹನರಹಿತ ಸಾರಿಗೆ ವ್ಯವಸ್ಥೆ (non-motorised transport) ಪರಿಹಾರಗಳನ್ನು ಕಂಡುಕೊಳ್ಳುವುದು, ನಗರ ಸಾರಿಗೆ ಮೂಲಸೌಕರ್ಯಗಳ ಮೇಲೆ ಹೆಚ್ಚು ಹೂಡಿಕೆ ಮಾಡುವುದು ಸೇರಿದಂತೆ ಹತ್ತಾರು ಪ್ರಮುಖ ಶಿಫಾರಸುಗಳನ್ನು ಮಾಡಲಾಗಿದೆ.

ಟ್ರಿಣ್‌ ಟ್ರಿಣ್‌ ಬೈಸಿಕಲ್

ಸಭೆಯಲ್ಲಿ ಮಾತನಾಡುತ್ತಾ ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಂಜುಂ ಪರ್ವೇಜ್‌ ಹೇಳಿದ್ದಿಷ್ಟು.. “ನಗರದಲ್ಲಿ ಟ್ರಾಫಿಕ್‌ ಕಿರಿಕಿರಿ ತಪ್ಪಿಸಲು ಸರಕಾರ ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಂಡಿದೆ. ಮುಖ್ಯವಾಗಿ ವಿವಿಧ ಸಂಸ್ಥೆಗಳ ಜತೆಗೂಡಿ ಇದಕ್ಕೊಂದು ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಯತ್ನಿಸಲಾಗುತ್ತಿದೆ. ಮೈಸೂರಿನಲ್ಲಿ ಟ್ರಿಣ್‌ ಟ್ರಿಣ್‌ ಬೈಸಿಕಲ್‌ಳನ್ನು ಪ್ರೋತ್ಸಾಹಿಸಿದಂತೆ ಬೆಂಗಳೂರಿನಲ್ಲೂ ಅದನ್ನೇ ಮಾಡಲು ಯತ್ನಿಸಲಾಗುವುದು.”

ಸಾರ್ವಜನಿಕ ಸಾರಿಗೆ ಬೆಸ್ಟ್‌

“ಬೆಂಗಳೂರಿನಲ್ಲಿ ಸಾರ್ವಜನಿಕ ಸಾರಿಗೆಯನ್ನು ಉತ್ತೇಜಿಸಿ ಸಂಚಾರ ದಟ್ಟಣಿಯನ್ನು ಕಡಿಮೆ ಮಾಡುವುದು ಸರಕಾರದ ಉದ್ದೇಶವಾಗಿದ್ದು, ಅದನ್ನು ಪರಿಣಾಮಕಾರಿಯಾಗಿ ಜಾರಿ ಮಾಡಲು ನಗರ ಸಂಚಾರ ಪೊಲೀಸ್‌ ವ್ಯವಸ್ಥೆ ಬದ್ಧವಾಗಿದೆ. ಈಗಾಗಲೇ ನಗರಾದ್ಯಂತ 1500 ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಎಲ್ಲೆಲ್ಲಿ ಹೆಚ್ಚು ಟ್ರಾಫಿಕ್‌ ಇದೆ ಎಂಬುನ್ನು ಗುರುತಿಸಲಾಗಿದೆ. ಆ ಮಾಹಿತಿಯನ್ನು ಆಧರಿಸಿ ಸಮಸ್ಯೆ ನಿವಾರಣೆಗೆ ಕ್ರಮ ವಹಿಸಲಾಗುವುದು” ಸಂಚಾರ ವಿಭಾಗದ ಜಂಟಿ ಪೊಲೀಸ್‌ ಆಯುಕ್ತ ಡಾ. ರವಿಕಾಂತೇ ಗೌಡ ತಿಳಿಸಿದ್ದಾರೆ.

ಮಾಜಿ ಸಂಸದ ಪ್ರೊ. ರಾಜೀವ್‌ ಗೌಡ ಅವರ ನೇತೃತ್ವದ ಬೆಂಗಳೂರು ನೀಡ್ಸ್‌ ಯು (ಬಿಎನ್‌ವೈ) ಈ ವರ್ಚುಯಲ್‌ ಟೌನ್‌ಹಾಲ್‌ ಸಭೆಯನ್ನು ಆಯೋಜಿಸಿತ್ತು. ಇದರ ಜತೆ ಇನ್ನು ಹಲವಾರು ಸಂಸ್ಥೆಗಳು ಕೈಜೋಡಿಸಿವೆ. ಈ ಸಂಸ್ಥೆಗಳ ತಜ್ಞರ ಜತೆಗೆ, ಮಾಜಿ ಸಂಸದ ಪ್ರೊ. ರಾಜೀವ್‌ ಗೌಡ, ಶಾಸಕ ಎನ್.ಎ. ಹ್ಯಾರೀಸ್‌, ಬಿಎಂಟಿಸಿ ಅಧ್ಯಕ್ಷ ನಂದೀಶ್‌ ರೆಡ್ಡಿ, ಬೆಂಗಳೂರು ಪೊಲಿಟಿಕಲ್‌ ಆಕ್ಷನ್‌ ಕಮಿಟಿಯ ಸಿಇಒ ರೇವತಿ ಆಶೋಕ್‌ ಮುಂತಾದವರು ಟೌನ್‌ಹಾಲ್‌ ಸಭೆಯಲ್ಲಿ ಹಾಜರಿದ್ದರು.

BNMK PHOTOGRAPHS
Tags: bangalorebangalore city traffic policebangalore city traffic solutionsbangalore traffic
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
12,000 ವರ್ಷಗಳ ಭಾರತೀಯ ಇತಿಹಾಸದ ಅಧ್ಯಯನದಲ್ಲಿ ಮಿಸ್‌ ಆಗಲೇಬಾರದ ನಾಗಾ-ಆಂಗ್ಲರ ಸಂಗ್ರಾಮ

12,000 ವರ್ಷಗಳ ಭಾರತೀಯ ಇತಿಹಾಸದ ಅಧ್ಯಯನದಲ್ಲಿ ಮಿಸ್‌ ಆಗಲೇಬಾರದ ನಾಗಾ-ಆಂಗ್ಲರ ಸಂಗ್ರಾಮ

Leave a Reply Cancel reply

Your email address will not be published. Required fields are marked *

Recommended

ಬಲವಿದ್ದರೂ ಸೋತ ಕಾಂಗ್ರೆಸ್; ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷಗಿರಿ ಬಿಜೆಪಿ ಪಾಲು

ಹೋಮಿಯೋಪತಿ ಬಗ್ಗೆ ನಿರ್ಲಕ್ಷ್ಯ ಬೇಡ; ಹೆಚ್ಚು ಸಂಶೋಧನೆಗಳು ನಡೆಯಲಿ ಎಂದ ಡಾ.ಕೆ.ಸುಧಾಕರ್

5 years ago
ಮುಂದಿನ ತಿಂಗಳೇ 5 ಗ್ಯಾರಂಟಿ!

ಅಧಿಕಾರಿಗಳಿಗೆ Work from Home ಇಲ್ಲ

3 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ