• About
  • Advertise
  • Careers
  • Contact
Wednesday, October 28, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಒಂದು ಮಹಾನ್‌ ಉದ್ದೇಶ; 1,20,000 ಕಿ.ಮೀ ದೂರ ಬೆಂಗಳೂರು ದೇಶಪ್ರೇಮಿಯ ಭಾರತ ಯಾತ್ರೆ

cknewsnow desk by cknewsnow desk
November 4, 2020
in NATION, STATE
Reading Time: 1 min read
0
ಒಂದು ಮಹಾನ್‌ ಉದ್ದೇಶ; 1,20,000 ಕಿ.ಮೀ ದೂರ ಬೆಂಗಳೂರು ದೇಶಪ್ರೇಮಿಯ ಭಾರತ ಯಾತ್ರೆ
977
VIEWS
FacebookTwitterWhatsuplinkedinEmail
lead photo courtesy: Umesh Gopinath Jadhav@UmeshGopinathJ1

ಬೆಂಗಳೂರು: ಕಾರ್ಗಿಲ್ ಯುದ್ಧ, ಪುಲ್ವಾಮಾ ದಾಳಿ ಸೇರಿ ವಿವಿಧ ಯುದ್ಧಗಳು ಹಾಗೂ ಭಯೋತ್ಪಾದಕರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ಸಲ್ಲಿಸಲು ʼದೇಶಪ್ರೇಮ ಭಾರತಯಾತ್ರೆʼ ಕೈಗೊಂಡಿರುವ ಬೆಂಗಳೂರು ಮೂಲದ ಉಮೇಶ್ ಗೋಪಿನಾಥ್ ಜಾಧವ್ ಅವರು ಎರಡನೇ ಹಂತದ ಯಾತ್ರೆಯನ್ನು ಆರಂಭಿಸಿದ್ದಾರೆ.

ಮಂಗಳವಾರ ಸಂಜೆ ದ್ವಿತೀಯ ಹಂತದ ಯಾತ್ರೆಗೆ ಹೊರಟ ಜಾಧವ್ ಪ್ರಯಾಣಕ್ಕೆ ಡಿಸಿಎಂ ಡಾ.ಅಶ್ವತ್ಥನಾರಾಯಣ ಹಸಿರು ನಿಶಾನೆ ತೋರಿದ್ದಾರೆ. ಯಾವುದೇ ರಾಜಕೀಯ ಉದ್ದೇಶ ಇಲ್ಲದ, ಯಾರ ಪ್ರಾಯೋಜಕತ್ವವೂ ಇಲ್ಲದ, ದೇಶಪ್ರೇಮವನ್ನಷ್ಟೇ ಇಟ್ಟುಕೊಂಡು ಹುತಾತ್ಮ ಯೋಧರ ಗೌರವಾರ್ಥ ಜಾಧವ್ ಕೈಗೊಂಡಿರುವ ದೇಶಪ್ರೇಮ ಭಾರತಯಾತ್ರೆಯನ್ನು ಡಿಸಿಎಂ ಮನಸಾರೆ ಶ್ಲಾಘಿಸಿದರಲ್ಲದೆ, ನಿಮ್ಮ ಮುಂದಿನ ಯಾತ್ರೆ ಸುಖಕರವಾಗಿರಲಿ ಎಂದು ಶುಭ ಹಾರೈಸಿ ಬೀಳ್ಕೊಟ್ಟರು.

couresy: Umesh Jadhav fcebook

ಯಾರು ಈ ಜಾಧವ್?

ಮೂಲತಃ ಸಂಗೀತ ಕಲಾವಿದರಾದ ಉಮೇಶ ಗೋಪಿನಾಥ್ ಯಾದವ್ ಮೂಲತಃ ಬೆಂಗಳೂರಿನ ಸರ್ಜಾಪುರದ ನಿವಾಸಿ. ನಾಡು-ನುಡಿ ಆರಾಧಕರೂ, ಅಪರಿಮಿತ ದೇಶಭಕ್ತರಾಗಿರುವ ಅವರು, ಇದುವರೆಗೂ ದೇಶದ ಮೇಲೆ ನಡೆದ ಭಯೋತ್ಪಾದಕ ದಾಳಿಗಳು-ಯುದ್ಧಗಳಲ್ಲಿ ಹುತಾತ್ಮರಾದ ಯೋಧರ ಸ್ಮರಣಾರ್ಥ ಈ ಯಾತ್ರೆ ಕೈಗೊಂಡಿದ್ದಾರೆ.

ಹೇಗಿರುತ್ತದೆ ಭಾರತಯಾತ್ರೆ?

ಬೆಂಗಳೂರಿನಿಂದಲೇ 2019 ಏಪ್ರಿಲ್ 9ರಿಂದ 2020 ಏಪ್ರಿಲ್ 9ರವೆರಗೆ ಮೊದಲ ಸುತ್ತಿನ ಯಾತ್ರೆ ಪೂರೈಸಿರುವ ಜಾಧವ್, ಈಗಾಗಲೇ ಮೊದಲ ಸುತ್ತಿನ ಯಾತ್ರೆ ವೇಳೆ 98 ಹುತಾತ್ಮ ಯೋಧರ ಮನೆಗಳಿಗೆ ಭೇಟಿ ನೀಡಿ ಅವರ ಸಮಾಧಿಯ ಮಣ್ಣು ಸಂಗ್ರಹ ಮಾಡಿದ್ದರಲ್ಲದೆ ಅವರ ಪೋಷಕರ ಜತೆ ಮಾತನಾಡಿದ್ದಾರೆ. ಗುಜರಾತಿನ ಕಛ್ ಸೇರಿ ಅನೇಕ ಕಡೆಗಳಿಗೆ ಭೇಟಿ ನೀಡಿ ಹುತಾತ್ಮ ಯೋಧರ ಕುಟುಂಬಗಳು, ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾಗಿರುವ ಯೋಧರು, ಸೇನಾಧಿಕಾರಿಗಳು ಹಾಗೂ ಹಾಲಿ ಸೇನಾಧಿಕಾರಿಗಳನ್ನು ಭೇಟಿಯಾಗಿದ್ದಾರೆ. ದೇಶದ 28 ರಾಜ್ಯಗಳು, 9 ಕೇಂದ್ರಾಡಳಿತ ಪ್ರದೇಶಗಳಲ್ಲಿ ಅವರು ಯಾತ್ರೆ ನಡೆಸುತ್ತಿದ್ದಾರೆ.

ಆ ಮಣ್ಣಿನಿಂದ ಭಾರತ ಭೂಪಟ

ದೇಶದ ಉದ್ದಗಲಕ್ಕೂ ಹುತಾತ್ಮ ಯೋಧರ ಸಮಾಧಿಗಳಿಂದ ಸಂಗ್ರಹ ಮಾಡುತ್ತಿರುವ ಪವಿತ್ರ ಮಣ್ಣನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ನಿರ್ಮಾಣವಾಗಲಿರುವ ಸೇನಾ ಸ್ಮಾರಕದಲ್ಲಿ ಭಾರತದ ಭೂಪಟವನ್ನು ನಿರ್ಮಿಸುವುದು ಜಾಧವ್ ಅವರ ಉದ್ದೇಶ. ಈ ಉದ್ದೇಶದೊಂದಿಗೆ ಅವರು ದೇಶಪ್ರೇಮ ಭಾರತಯಾತ್ರೆಯನ್ನು ಕೈಗೊಂಡಿದ್ದಾರೆ.

65,000 ಕಿ.ಮೀ ಯಾತ್ರೆ ಪೂರ್ಣ

ಈಗಾಗಲೇ ಜಾಧವ್ ಅವರು ಭಾರತದ ಉದ್ದಗಲಕ್ಕೂ 65,000 ಕಿ.ಮೀ ಯಾತ್ರೆಯನ್ನು ಪೂರೈಸಿ ಅಷ್ಟೂ ಕಡೆಗಳಲ್ಲಿ ಹುತಾತ್ಮ ಯೋಧರ ಸಮಾಧಿ ಸ್ಥಳಗಳಿಗೆ ಭೇಟಿ ನಮನ ಸಲ್ಲಿಸಿದ್ದಾರೆ. ಮಣ್ಣು ಸಂಗ್ರಹಿಸಿದ್ದಾರೆ. ಕೋವಿಡ್-19 ಕಾರಣಕ್ಕೆ ಅವರು ಕಳೆದ ಮಾರ್ಚ್ʼನಲ್ಲಿ ಛತ್ತೀಸಗಢದ ಸುಕ್ಮಾದಲ್ಲಿ ಯಾತ್ರೆಯನ್ನು ಸ್ಥಗಿತಗೊಳಿಸಿದ್ದರು. ಇದೀಗ ಕೋವಿಡ್‌ ಅನ್ಲಾಕ್ ಆದಮೇಲೆ ಪುನಾ ಅವರು ಯಾತ್ರೆಯನ್ನು ಆರಂಭಿಸಿದ್ದಾರೆ. 2020ರ ಏಪ್ರಿಲ್ 21ಕ್ಕೆ ಪುನಾರಂಭ ಆಗಿರುವ ಯಾತ್ರೆಯು 2021 ಏಪ್ರಿಲ್ 21ರಂದು ಮುಕ್ತಾಯವಾಗಲಿದೆ. ಈ ಎರಡನೇ ಹಂತದಲ್ಲಿ ಒಟ್ಟು 50,000 ಕಿ.ಮೀ. ದೂರವನ್ನು ಜಾಧವ್ ಕ್ರಮಿಸಲಿದ್ದಾರೆ. 730 ದಿನಗಳ ಈ ಯಾತ್ರೆ ಒಟ್ಟು 1,20,000 ಕಿ.ಮೀ ದೂರ ಅವರು ಸಂಚರಿಸಲಿದ್ದಾರೆ.

ಜನ್ಮಭೂಮಿ ಕರ್ಮಭೂಮಿ

“ಹಗಲಿರುಳು ಗಡಿ ಕಾಯುತ್ತ ಭಾರತವನ್ನು ಸಂರಕ್ಷಿಸುತ್ತಿರುವ ನಮ್ಮ ಸೇನೆಯ ಬಗ್ಗೆ ಹೆಮ್ಮೆ ಮೂಡಿಸುವುದು ನನ್ನ ಯಾತ್ರೆಯ ಉದ್ದೇಶ. ಜನ್ಮಭೂಮಿ ಕರ್ಮಭೂಮಿ ಎಂಬ ಹೆಸರಿನಲ್ಲಿ ಈ ದೇಶಪ್ರೇಮ ಯಾತ್ರೆ ಕೈಗೊಂಡಿದ್ದೇನೆ. ಈ ಯಾತ್ರೆಗೆ ಯಾರೂ ಪ್ರಾಯೋಜಕತ್ವ ವಹಿಸಿಲ್ಲ. ಸಂಪೂರ್ಣ ರಾಜಕೀಯೇತರ ಯಾತ್ರೆ ಇದು. ಹುತಾತ್ಮ ಯೋಧರಿಗೆ ನಮನ ಸಲ್ಲಿಸುವ, ಅವರಿಗೆ ಸಮರ್ಪಿತವಾದ ಯಾತ್ರೆ ಇದಾಗಿದೆ” ಎಂದು ಜಾಧವ್ ಹೇಳುತ್ತಾರೆ.

ಮಾರುತಿ ಕಾರು, ಚಿಕ್ಕ ಟ್ರ್ಯಾಲಿ

ತಮ್ಮ ಯಾತ್ರೆಗೆ ಮಾರುತಿ-800 ಕಾರನ್ನು ಬಳಸಿಕೊಂಡಿದ್ದು, ಯಾತ್ರೆಗೆ ಅಗತ್ಯವಾಗಿ ಆ ಕಾರನ್ನು ರೂಪಾಂತರ ಮಾಡಿಕೊಂಡಿದ್ದಾರೆ. ಆ ಕಾರಿನ ಹಿಂದೆ ಹುತಾತ್ಮ ಯೋಧರ ಸಮಾಧಿ ಮಣ್ಣು ಸಂಗ್ರಹ ಮಾಡಿಟ್ಟುಕೊಳ್ಳಲು ಒಂದು ಟ್ರ್ಯಾಲಿಯನ್ನು ಜೋಡಿಸಿಕೊಂಡಿದ್ದಾರಲ್ಲದೆ, ಆ ಟ್ರ್ಯಾಲಿ ಹಿಂದೆ ಒಂದು ಬೈಕ್ ಮತ್ತು ಒಂದು ಸೈಕಲ್ ಅನ್ನು ಜೋಡಿಸಲಾಗಿದೆ. ಕಾರು ಸಂಚರಿಸಲು ಸಾಧ್ಯವಾಗದ ದಾರಿಯಲ್ಲಿ ಜಾಧವ್ ಈ ಸೈಕಲ್, ಬೈಕ್ ಬಳಸಲಿದ್ದಾರೆ.

“ನಿಮ್ಮ ದೇಶಪ್ರೇಮಕ್ಕೆ ನನ್ನ ಕೋಟಿ ವಂದನೆಗಳು. ಅನನ್ಯವಾದ ಈ ಯಾತ್ರೆ ದೇಶದ ಉದ್ದಗಲಕ್ಕೂ ನಿರ್ವಿಘ್ನವಾಗಿ ಸಾಗಲಿ. ನಿಮ್ಮ ಯಾತ್ರೆ ಅಖಂಡ ಭಾರತದಲ್ಲಿ ಹೊಸ ಅಲೆ ಎಬ್ಬಿಸಲಿ. ಮುಂದಿನ ತಲೆಮಾರಿಗೆ ನಿಮ್ಮ ದೇಶಪ್ರೇಮ ಯಾತ್ರೆ ಸ್ಫೂರ್ತಿಯಾಗಿ ನಿಲ್ಲಲಿ” ಎಂದು ಹಾರೈಸಿದ ಡಿಸಿಎಂ, ರಸ್ತೆಯ ಕೊನೆ ಅಂಚಿನವರೆಗೂ ಬಂದು ಜಾಧವ್ ಅವರನ್ನು ಬೀಳ್ಕೊಟ್ಟರು.

Shri Umesh Jadhav is going on a road trip to collect soil from all 28 states and 9 union territories in order to pay tribute to our fallen heroes in the Armed Forces & Paramilitary Services.

I wished him all the best for this unique effort on behalf of all Kannadigas. pic.twitter.com/pdg3Dukq6M

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) November 4, 2020
Tags: india firstJanmabhoomi karmabhoomiPatriotic travelumesh gopinath jadhav
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಡಿಸೆಂಬರ್ 14ರಿಂದ ಪಂಚಲಿಂಗ ದರ್ಶನ; ದಸರಾದಂತೆಯೇ ಸರಳ, ಎಲ್ಲವೂ ವರ್ಚುವಲ್

ಡಿಸೆಂಬರ್ 14ರಿಂದ ಪಂಚಲಿಂಗ ದರ್ಶನ; ದಸರಾದಂತೆಯೇ ಸರಳ, ಎಲ್ಲವೂ ವರ್ಚುವಲ್

Leave a Reply Cancel reply

Your email address will not be published. Required fields are marked *

Recommended

ಕೋವಿಡ್ ನಿರ್ವಹಣೆಗಾಗಿ ಎಲ್ಲ ಜಿಲ್ಲೆಗಳ ವೈದ್ಯರಿಗೆ ತರಬೇತಿ: ಸಚಿವ ಡಾ.ಕೆ.ಸುಧಾಕರ್

ಕೋವಿಡ್ ನಿರ್ವಹಣೆಗಾಗಿ ಎಲ್ಲ ಜಿಲ್ಲೆಗಳ ವೈದ್ಯರಿಗೆ ತರಬೇತಿ: ಸಚಿವ ಡಾ.ಕೆ.ಸುಧಾಕರ್

5 years ago
ಗುಡಿಬಂಡೆಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ ಗರಿ

ಗುಡಿಬಂಡೆಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ ಗರಿ

4 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ