• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಡಿಸೆಂಬರ್ 14ರಿಂದ ಪಂಚಲಿಂಗ ದರ್ಶನ; ದಸರಾದಂತೆಯೇ ಸರಳ, ಎಲ್ಲವೂ ವರ್ಚುವಲ್

cknewsnow desk by cknewsnow desk
November 4, 2020
in STATE
Reading Time: 1 min read
0
ಡಿಸೆಂಬರ್ 14ರಿಂದ ಪಂಚಲಿಂಗ ದರ್ಶನ; ದಸರಾದಂತೆಯೇ ಸರಳ, ಎಲ್ಲವೂ ವರ್ಚುವಲ್
913
VIEWS
FacebookTwitterWhatsuplinkedinEmail
lead photo courtesy: Wikipedia

ಮೈಸೂರು: ಕೋವಿಡ್-19 ಹಿನ್ನೆಲೆಯಲ್ಲಿ ದಸರಾವನ್ನು ಹೇಗೆ ಸರಳವಾಗಿ ಆಚರಣೆ ಮಾಡಲಾಯಿತೋ ಹಾಗೆಯೇ ಪಂಚಲಿಂಗ ದರ್ಶನ ಮಹೋತ್ಸವವನ್ನೂ ಮಾಡಲು ಸರಕಾರ ನಿರ್ಧರಿಸಿದೆ.

ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ನಡೆದ ಪಂಚಲಿಂಗ ದರ್ಶನ ಮಹೋತ್ಸವ ಕುರಿತ ಪೂರ್ವಭಾವಿ ಸಭೆಯಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಲಹೆ, ಮಾಹಿತಿಯನ್ನು ಪಡೆದು ಚರ್ಚೆ ನಡೆಸಿದ ನಂತರ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಈ ಮಾಹಿತಿ ನೀಡಿದರು.

ತಜ್ಞರ ಸಮಿತಿಯೊಂದನ್ನು ರಚಿಸಬೇಕಿದೆ. ಈ ತಂಡ ತಲಕಾಡಿಗೆ ಭೇಟಿ ನೀಡಿ ವರದಿ ಕೊಡಲಿ. ಅವರ ವರದಿ ಆಧಾರದ ಮೇಲೆ ಆಚರಣೆ ಮಾಡೋಣ. ಚಳಿಗಾಲ ಬರುತ್ತಿರುವುದರಿಂದ ಹೆಚ್ಚಿನ ನಿಗಾ ವಹಿಸುವುದು ಒಳ್ಳೆಯದು ಎಂದು ಸಚಿವರು ತಿಳಿಸಿದರು.

ತಲಕಾಡಿನಲ್ಲಿ ಅಭಿವೃದ್ಧಿ ಕಾರ್ಯಗಳೂ ಆಗಬೇಕು. ಡಿಸೆಂಬರ್ 14ರಿಂದ ಪಂಚಲಿಂಗ ದರ್ಶನ ಮಹೋತ್ಸವ ಆರಂಭ ಆಗುತ್ತಿರುವುದರಿಂದ ಎಲ್ಲವನ್ನೂ ಒಮ್ಮೆಲೆ ಮಾಡಲು ಸಾಧ್ಯವಾಗುವುದಿಲ್ಲ. ತುರ್ತು ಕೆಲಸಗಳನ್ನು ಈಗ ಮಾಡಿಕೊಳ್ಳಿ. ಹಂತಹಂತವಾಗಿ ಶಾಶ್ವತ ಅಭಿವೃದ್ಧಿ ಕಾರ್ಯಗಳನ್ನು ಮಾಡೋಣ ಎಂದು ಸಚಿವರು ಅಧಿಕಾರಿಗಳಿಗೆ ತಿಳಿಸಿದರು.

ತಜ್ಞರ ತಂಡದ ವರದಿ ಬಳಿಕ ನಿರ್ಧಾರ

ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ 5-6 ಮಂದಿಯ ತಂಡ ರಚಿಸಲಾಗುವುದು. ಈ ತಂಡ ತಲಕಾಡಿಗೆ ಭೇಟಿ ನೀಡಿ ವರದಿ ಸಿದ್ಧಪಡಿಸಲಿದೆ. ಇನ್ನು ತಜ್ಞರ ತಂಡ ನೀಡುವ ವರದಿ ಆಧಾರದಲ್ಲಿ ಎಷ್ಟು ಜನ ಇರಬೇಕು ಎಂಬುದನ್ನು ನಿರ್ಧರಿಸಲಾಗುತ್ತದೆ ಎಂದು ಸಚಿವರಾದ ಸೋಮಶೇಖರ್ ತಿಳಿಸಿದರು.

ಸರಕಾರಕ್ಕೆ ಪ್ರಸ್ತಾವನೆ

ಪಂಚಲಿಂಗದರ್ಶನ ಮಹೋತ್ಸವಕ್ಕೆ ಬೇಕಾದ ತಯಾರಿಗಳು ನಡೆಯಲಿ. ಸುಣ್ಣ ಬಣ್ಣ, ದೀಪಾಲಂಕಾರ, ರಸ್ತೆ, ಚರಂಡಿ ವ್ಯವಸ್ಥೆಗಳು ಸೇರಿದಂತೆ ಪ್ರತಿ ಬಾರಿ ನಡೆಯುವ ಕಾರ್ಯಕ್ರಮದಂತೆ ನಡೆಸುವ ಕಾಮಗಾರಿಗಳಿಗೆ ಎಷ್ಟು ಖರ್ಚು ಬೇಕಾಗುತ್ತದೆ ಎಂದು ಅಂದಾಜು ವೆಚ್ಚವನ್ನು ಪಟ್ಟಿ ಮಾಡಿ ಜಿಲ್ಲಾಡಳಿತ ಮುಖಾಂತರ ಪ್ರಸ್ತಾವನೆ ಸಲ್ಲಿಸಿ, ಸರ್ಕಾರದ ನಿರ್ಧಾರದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳೋಣ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಸಚಿವ ಎಸ್.ಟಿ.ಸೋಮಶೇಖರ್

ತಜ್ಞರ ತಂಡ

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮಾತನಾಡಿ, ಪಂಚಲಿಂಗ ದರ್ಶನವನ್ನು ದಸರಾ ಮಾದರಿಯಲ್ಲಿ ವರ್ಚುವಲ್ ಆಗಿ ಆಚರಿಸುವುದು ಒಳ್ಳೆಯದು. ಎಲ್ಲರೂ ಮನೆಯಲ್ಲಿಯೇ ಕುಳಿತು ಕಾರ್ಯಕ್ರಮ ವೀಕ್ಷಣೆ ಮಾಡಲಿ. ಅಲ್ಲದೆ, ತಜ್ಞರ ತಂಡವನ್ನು ಕರೆಸಿ ವರದಿ ಪಡೆದರೆ, ಅವರ ಸೂಚನೆಯಂತೆ ಆಚರಣೆ ಮಾಡುವುದು ಒಳ್ಳೆಯದು ಎಂದು ತಿಳಿಸಿದರು.

ತಲಕಾಡು ಪ್ರಸಿದ್ಧವಾದ ಸ್ಥಳವಾಗಿದ್ದು, ಪ್ರತಿ ಬಾರಿ ಕಾರ್ತಿಕ ಮಾಸ, ವೃಶ್ಚಿಕ ಅಮವಾಸ್ಯೆ, ಸೋಮವಾರ ಕುಹಯೋಗ, ವಿಶಾಖ ನಕ್ಷತ್ರದ ಶುಭ ಲಗ್ನದಲ್ಲಿ ನಡೆಯುವ ಪಂಚಲಿಂಗ ದರ್ಶನ ಮಹೋತ್ಸವಕ್ಕೆ ಲಕ್ಷಾಂತರ ಮಂದಿ ಸೇರುತ್ತಾರೆ. ಈ ಬಾರಿ ಕೋವಿಡ್ ಇರುವುದರಿಂದ ಸರಳವಾಗಿ ಆಚರಿಸುವುದು ಒಳ್ಳೆಯದು ಎಂಬ ಅಭಿಪ್ರಾಯಗಳು ವ್ಯಕ್ತವಾದವು.

ತಲಕಾಡು ಕ್ಷೇತ್ರದ ಶ್ರೀವೈದ್ಯೇಶ್ವರ, ಶ್ರೀ ಪಾತಾಳೇಶ್ವರ, ಶ್ರೀ ಮರುಳೇಶ್ವರ, ಶ್ರೀ ಅರ್ಕೇಶ್ವರ ಮತ್ತು ಶ್ರೀ ಮುಡುಕುತೊರೆ ಮಲ್ಲಿಕಾರ್ಜುನೇಶ್ವರದ ಐದು ದೇವಸ್ಥಾನಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದೆ. ಇವುಗಳಿಗೆ ಶಾಶ್ವತ ಪರಿಹಾರಗಳನ್ನು ಕಂಡುಕೊಳ್ಳಬೇಕು ಎಂದು ಸಭೆಯಲ್ಲಿ ಮನವಿಗಳು ವ್ಯಕ್ತವಾದವು.

ಕಳೆದ ಬಾರಿ 2013ರಲ್ಲಿ ಪಂಚಲಿಂಗ ದರ್ಶನ ಮಹೋತ್ಸವಕ್ಕೆ 12 ಕೋಟಿ ರೂ.ಅನುದಾನ ಮಂಜೂರಾಗಿತ್ತು. ಅದರಲ್ಲಿ 6,78,01,740 ರೂ. ಖರ್ಚಾಗಿದ್ದು, ಇದರಲ್ಲಿ 5,58,00,000 ರೂಪಾಯಿ ಉಳಿಕೆಯಾಗಿತ್ತು. ಇದನ್ನು ಸಮೂಹ ದೇವಸ್ಥಾನಗಳಲ್ಲೊಂದಾದ ಮುಡುಕುತೊರೆ ಶ್ರೀ ಮಲ್ಲಿಕಾರ್ಜುನಸ್ವಾಮಿ ದೇವಾಲಯದಲ್ಲಿ ಶಾಶ್ವತ ಕಾಮಗಾರಿಗಳಿಗೆ ಉಪಯೋಗಿಸಿಕೊಳ್ಳಲು ಸರ್ಕಾರದಿಂದ ಅನುಮತಿ ದೊರೆತಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಅಂದಾಜು ವೆಚ್ಚ ಪಟ್ಟಿ

ವರ್ಚುವಲ್ ವ್ಯವಸ್ಥೆ ಮಾಡಲು 9 ಲಕ್ಷ ರೂಪಾಯಿ, ಧಾರ್ಮಿಕ ಕಾರ್ಯಕ್ರಮಕ್ಕೆ 32 ಲಕ್ಷ ರೂಪಾಯಿಯನ್ನು ಅಂದಾಜು ಮಾಡಲಾಗಿದೆ. ಆದರೆ, ಇದರಲ್ಲಿ ಯಾವುದೇ ದೀಪಾಲಂಕಾರಗಳು ಯಾವುದೂ ಸೇರಿಲ್ಲ ಎಂಬ ಮಾಹಿತಿಯನ್ನು ಸಭೆಗೆ ಅಧಿಕಾರಿಗಳು ನೀಡಿದರು.

ಆರೋಗ್ಯ, ಪೊಲೀಸ್ ಇಲಾಖೆಗಳು ಸೇರಿದಂತೆ ವಿವಿಧ ಇಲಾಖೆಗಳ ಸಿದ್ಧತೆ ಹಾಗೂ ಕಾರ್ಯಕ್ರಮವನ್ನು ನಡೆಸಿದರೆ ಕೈಗೊಳ್ಳಬಹುದಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.

Tags: mysorepanchalinga darshana 2020talakadu
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಹೊಸ ವರ್ಷಕ್ಕೆ ಕೋವಿಡ್‌ ವ್ಯಾಕ್ಸಿನ್

ಸಮಾಧಾನದ ಸುದ್ದಿ!; ಸೇರೊ ಸಮೀಕ್ಷೆಯಲ್ಲಿ ರಾಜ್ಯದ 16% ಜನರಲ್ಲಿ ಕೋವಿಡ್ ಪ್ರತಿಕಾಯ: ಡಾ.ಕೆ.ಸುಧಾಕರ್‌

Leave a Reply Cancel reply

Your email address will not be published. Required fields are marked *

Recommended

ಗುಡಿಬಂಡೆಯ ಮನೆಮನೆಗೂ ಮುಟ್ಟಿದ ರಾಮಾಕ್ಷತೆ

ಗುಡಿಬಂಡೆಯ ಮನೆಮನೆಗೂ ಮುಟ್ಟಿದ ರಾಮಾಕ್ಷತೆ

2 years ago
ವಿಧಾನಸಭೆಯಲ್ಲಿ ಒಂದು ದೇಶ-ಒಂದು ಚುನಾವಣೆ ವಿರುದ್ಧ ಅಂಗಿ ಬಿಚ್ಚಿ ಪ್ರತಿಭಟಿಸಿದ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್‌ ಒಂದು ವಾರ ಕಲಾಪದಿಂದ ಅಮಾನತು

ವಿಧಾನಸಭೆಯಲ್ಲಿ ಒಂದು ದೇಶ-ಒಂದು ಚುನಾವಣೆ ವಿರುದ್ಧ ಅಂಗಿ ಬಿಚ್ಚಿ ಪ್ರತಿಭಟಿಸಿದ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್‌ ಒಂದು ವಾರ ಕಲಾಪದಿಂದ ಅಮಾನತು

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ