• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಮಹಾಮಾರಿ ಕೋವಿಡ್ ನಡುವೆ ಹೂಡಿಕೆಗೆ ಉತ್ತೇಜನ; ನ.19-21ರಂದು ಟೆಕ್ ಸಮ್ಮೇಳನ: ಇದು ಬೆಂಗಳೂರು BTS

cknewsnow desk by cknewsnow desk
November 6, 2020
in COVID-19, STATE
Reading Time: 2 mins read
0
ಮಹಾಮಾರಿ ಕೋವಿಡ್ ನಡುವೆ ಹೂಡಿಕೆಗೆ ಉತ್ತೇಜನ; ನ.19-21ರಂದು ಟೆಕ್ ಸಮ್ಮೇಳನ: ಇದು ಬೆಂಗಳೂರು BTS
912
VIEWS
FacebookTwitterWhatsuplinkedinEmail
Photo by Federico Orlandi from Pexels

ಬೆಂಗಳೂರು: ಕೋವಿಡ್-19 ಸಂಕಷ್ಟದ ನಡುವೆಯೂ ವಿದೇಶಿ ಹೂಡಿಕೆಯನ್ನು ಸೆಳೆಯಲು ಸರಕಾರ ಸಾಕಷ್ಟು ಪ್ರಯತ್ನ ನಡೆಸುತ್ತಿದೆ. ಇದೇ ಮೊದಲಿಗೆ ವರ್ಚ್ಯುಯಲ್ (ಆನ್ʼಲೈನ್) ವೇದಿಕೆಯಲ್ಲಿ ನಡೆಯಲಿರುವ “ಬೆಂಗಳೂರು ತಂತ್ರಜ್ಞಾನ ಶೃಂಗ-2020’ (ಬಿಟಿಎಸ್) ವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಇದೇ 19ರಂದು ಉದ್ಘಾಟಿಸಲಿದ್ದಾರೆ ಎಂದು ಐಟಿ-ಬಿಟಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ನ.19ರಿಂದ 21ರವರೆಗೆ ನಡೆಯಲಿರುವ ಈ ಶೃಂಗವು ಕೊರೋನ ಭೀತಿಯನ್ನು ಹಿಮ್ಮೆಟ್ಟಿಸಿದೆ.  ಜಗತ್ತಿನೆಲ್ಲೆಡೆಯ ಉದ್ಯಮ ವಲಯದಿಂದ ಹಿಂದೆಂದಿಗಿಂತ ಹೆಚ್ಚಿನ ಸ್ಪಂದನೆ ವ್ಯಕ್ತವಾಗಿದೆ ಎಂದು ಅವರು ಹೇಳಿದರು.

ಜಗತ್ತಿನೆಲ್ಲೆಡೆ ಗಮನ ಸೆಳೆದಿರುವ “ಬೆಂಗಳೂರು ತಂತ್ರಜ್ಞಾನ ಮೇಳ”ದ 23ನೇ ಆವೃತ್ತಿ ಇದಾಗಿದೆ. 2019ರ ನವೆಂಬರ್ ನಲ್ಲಿ ನಡೆದ ಮೇಳದ 22ನೇ ಆವೃತ್ತಿಯು 21 ದೇಶಗಳು, 253 ಅಂತಾರಾಷ್ಟ್ರೀಯ ನಿಯೋಗಗಳು, 44 ವಿಚಾರ ಗೋಷ್ಠಿಗಳು ಮತ್ತು 262 ವಿಚಾರ ಪ್ರತಿಪಾದಕರಿಗೆ ಹಾಗೂ 12,350 ಸಂದರ್ಶಕರಿಗೆ ಸಾಕ್ಷಿಯಾಗಿತ್ತು. ಇದೀಗ ವರ್ಚ್ಯುಯಲ್ ಆಗಿ ನಡೆಯಲಿರುವ ಈ ಮೇಳಕ್ಕೆ ಅದಕ್ಕೂ ಹೆಚ್ಚಿನ ಸ್ಪಂದನೆ ವ್ಯಕ್ತವಾಗಿದೆ ಎಂದು ಅವರು ತಿಳಿಸಿದರು.

  • ಡಾ.ಸಿ.ಎನ್. ಅಶ್ವತ್ಥನಾರಾಯಣ

ರಾಜ್ಯ ಸರಕಾರವು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ ಸಹಭಾಗಿತ್ವದಲ್ಲಿ “ಕೃತಕ ಬುದ್ಧಿಮತ್ತೆ ಸಂಶೋಧನಾ ಕೇಂದ್ರ”ವನ್ನು ಸ್ಥಾಪಿಸಲಿದೆ ಎಂದು ಅವರು ಇದೇ ಸಂದರ್ಭದಲ್ಲಿ ಪ್ರಕಟಿಸಿದರಲ್ಲದೆ, ಮುಂಬರುವ ಸವಾಲುಗಳಿಗೆ ಪರಿಹಾರ ಕಂಡುಹಿಡಿಯುವಲ್ಲಿ ಕೃತಕ ಬುದ್ಧಿಮತ್ತೆ ತಾಂತ್ರಿಕತೆಯು ಮುಖ್ಯ ಪಾತ್ರ ವಹಿಸಲಿರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಿದರು.

ವ್ಯವಸಾಯ ಕ್ಷೇತ್ರದ ಸುಧಾರಣೆಗೆ ತಾಂತ್ರಿಕತೆಯನ್ನು ಪರಿಣಾಮಕಾರಿಯಾಗಿ ಬಳಸಲು ಒತ್ತು ನೀಡಲೇಬೇಕು. ರಾಜ್ಯದ ಸುಮಾರು 60ರಷ್ಟು ಜನ ಬದುಕಿಗಾಗಿ ಕೃಷಿಯನ್ನು ಅವಲಂಬಿಸಿದ್ದಾರೆ. ಒಂದೆಡೆ ಆರ್ಥಿಕತೆ ಬೆಳೆಯುತ್ತಿದ್ದರೆ, ಮತ್ತೊಂದೆಡೆ ಕೃಷಿ ಕ್ಷೇತ್ರದ ಕೊಡುಗೆ ಕಡಿಮೆಯಾಗುತ್ತಿರುವುದು ಆಲೋಚನೆಗೀಡು ಮಾಡುವ ಅಂಶವಾಗಿದೆ. ರಾಜ್ಯದ ಜಿಡಿಪಿಗೆ ಕೃಷಿ ವಲಯದ ಕೊಡುಗೆ ಈಗ ಕೇವಲ 16ರಷ್ಟಿದೆ. ಇದು ಇನ್ನು ಐದು ವರ್ಷಗಳಲ್ಲಿ ಕನಿಷ್ಠ ಶೇ 30ರಷ್ಟವರೆಗಾದರೂ ಬೆಳೆಯಲೇಬೇಕು. ಆಗ ಮಾತ್ರ ಹಳ್ಳಿಗರ ವಲಸೆ ತಪ್ಪುವ ಜೊತೆಗೆ ಬೆಂಗಳೂರಿಗೆ ಹೊರತಾದ ಪ್ರದೇಶಗಳೂ ಬೆಳವಣಿಗೆ ಕಾಣುತ್ತವೆ ಎಂದು ಅಶ್ವತ್ಥ ನಾರಾಯಣ ವಿವರಿಸಿದರು.

ಜೈವಿಕ ತಂತ್ರಜ್ಞಾನದ ಬೆಳವಣಿಗೆಯು ಕೃಷಿ ಹಾಗೂ ಆರೋಗ್ಯ ಸೇವೆಗಳಲ್ಲಿ ಹೆಚ್ಚಿನ ಬದಲಾವಣೆಗಳನ್ನು ಉಂಟು ಮಾಡಲಿದೆ. ಇದನ್ನು ಬಳಸಿಕೊಂಡು ಆಹಾರೋತ್ಪನ್ನಗಳ ಮೌಲ್ಯವರ್ಧನೆ, ಸಂಸ್ಕರಣೆ ಮತ್ತಿತರ ವಿಧಾನಗಳ ಮೂಲಕ ವ್ಯವಸಾಯ ಕ್ಷೇತ್ರ ಅವಲಂಬಿಸಿರುವವರಿಗೆ ಬಲ ತುಂಬುವ ಅಗತ್ಯವಿದೆ. ಹಾಗೆಯೇ ವೈದ್ಯಕೀಯ ತಂತ್ರಜ್ಞಾನ ಬಳಸಿಕೊಂಡು ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಬೇಕಾಗಿದೆ.

ಇದೇ ವೇಳೆ ಅವರು ಶಿಕ್ಷಣ ಕ್ಷೇತ್ರದ ಮಹತ್ವದ ಬಗ್ಗೆ ಹೇಳಿದರು. ಶಿಕ್ಷಣದಿಂದ ಮಾತ್ರ ಸುಸ್ಥಿರ ಬೆಳವಣಿಗೆ ಸಾಧ್ಯ. ಪೌಷ್ಟಿಕತೆ, ಪರಿಸರ, ನೈರ್ಮಲ್ಯ ಸೇರಿದಂತೆ ಯಾವುದೇ ವಿಷಯದ ಬಗ್ಗೆ ಶಿಕ್ಷಣದ ಹಂತದಿಂದಲೇ ಅರಿವು ಮೂಡಿಸಬೇಕು. ಹಾಗೆಯೇ, ಉದ್ಯಮಕ್ಕೆ ಬೇಕಾದ ಮಾನವ ಸಂಪನ್ಮೂಲವನ್ನು ಶಿಕ್ಷಣದ ಹಂತದಲ್ಲೇ ಸಜ್ಜು ಮಾಡಬೇಕು. ಇದಕ್ಕಾಗಿ ಶಿಕ್ಷಣ ಸಂಸ್ಥೆಗಳು ಹಾಗೂ ಉದ್ಯಮದ ನಡುವೆ ಹೆಚ್ಚಿನ ಸಹಭಾಗಿತ್ವ ಬೆಳೆಯಲೇಬೇಕು. ಈಗ ನಮ್ಮದು ಉದ್ಯಮ ಆಧಾರಿತ ಆರ್ಥಿಕತೆಯಾಗಿದೆ. ಮುಂಬರುವ ದಿನಗಳಲ್ಲಿ ಇದು ಸಾಂಸ್ಥಿಕ ಆಧಾರಿತ ಆರ್ಥಿಕತೆಯಾಗಿ ಬದಲಾಗಬೇಕಿದೆ ಎಂದು ಉಪ ಮುಖ್ಯಮಂತ್ರಿ ವಿವರಿಸಿದರು.

ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣ ರೆಡ್ಡಿ ಸ್ವಾಗತಿಸಿದರು. ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ನಿರ್ದೇಶಕಿ ಮೀನಾ ನಾಗರಾಜ್ ಸಿ.ಎನ್. ವಂದಿಸಿದರು.

ಉದ್ಯಮಿಗಳ ನಿರೀಕ್ಷೆಗಳೇನು?‌

ಮೂರು ದಿನಗಳ ಕಾಲ ನಡೆಯಲಿರುವ “ಬೆಂಗಳೂರು ತಂತ್ರಜ್ಞಾನ ಶೃಂಗ-2020”ದಲ್ಲಿ ಯಾವ ವಿಷಯಗಳ ಕುರಿತು ಹೆಚ್ಚಿನ ಚರ್ಚೆ ನಡೆಯಬಹದು ಎಂಬುದರ ಬಗ್ಗೆ ಹೆಸರಾಂತ ಮೂವರು ಉದ್ಯಮಿಗಳು ಹಂಚಿಕೊಂಡ ಅಭಿಪ್ರಾಯಗಳು ಹೀಗಿವೆ:

PHOTO COURTESY: WIKIPEDIA

ಕ್ರಿಸ್ ಗೋಪಾಲಕೃಷ್ಣ: ಸಹ-ಸಂಸ್ಥಾಪಕ, ಇನ್ಫೋಸಿಸ್/ಚೇರ್ಮನ್, ಮಾಹಿತಿ ತಂತ್ರಜ್ಞಾನ ವಿಷನ್‌ ಗ್ರೂಪ್

•ಕೋವಿಡ್-19 ಸಂಕಷ್ಟದ ಸಂದರ್ಭದಲ್ಲಿ ತಂತ್ರಜ್ಞಾನ ಬಳಸಿ ದೂರದಲ್ಲಿದ್ದುಕೊಂಡೇ ಹೇಗೆ ಕೆಲಸ ಮಾಡಬಹುದು ಎಂಬುದನ್ನು ಭಾರತವು ಇಡೀ ಜಗತ್ತಿಗೇ ತೋರಿಸಿದೆ. ಹೀಗಾಗಿ ಭವಿಷ್ಯದಲ್ಲಿ ಯಾವೆಲ್ಲಾ ಕೆಲಸಗಳನ್ನು ದೂರದಲ್ಲಿದ್ದುಕೊಂಡೇ ಕೆಲಸ ಮಾಡಬಹುದು ಎಂಬುದು ಮುಖ್ಯವಾಗಿ ಚರ್ಚೆಯಾಗಬಹುದು. ಅಂದರೆ, ಇದು ಶ್ರೇಣಿ 2 ಮತ್ತು ಶ್ರೇಣಿ 3 ಗೆ ಸೇರಿದ ಪ್ರದೇಶಗಳಲ್ಲಿ ಮಾಹಿತಿ ತಂತಜ್ಞಾನ ಉದ್ಯಮದ ಬೆಳವಣಿಗೆ ಕುರಿತೇ ಆಗಿರುತ್ತದೆ.

•ಮೈಸೂರು, ಮಂಗಳೂರು, ಧಾರವಾಡ-ಹುಬ್ಬಳ್ಳಿಯಂತಹ ನಗರಗಳಿಗೆ ಮಾಹಿತಿ ತಂತ್ರಜ್ಞಾನ ಉದ್ಯಮ ಈಗಾಗಲೇ ಇದೆ. ಇದು ಇನ್ನಷ್ಟು ವಿಸ್ತರಣೆಗೊಳ್ಳಬಹುದೇ ಎಂಬ ನೆಲೆಯಲ್ಲಿ ಹೆಚ್ಚಿನ ಚರ್ಚೆಯಾಗಬಹುದು. ಈಗ ದತ್ತಾಂಶ ಎರಡು ವರ್ಷಗಳಿಗೊಮ್ಮೆ ದುಪ್ಪಟ್ಟಾಗುತ್ತಿದ್ದು ಬೃಹತ್ತಾಗಿ ಬೆಳೆಯುತ್ತಿದೆ. ಇದನ್ನು ಆರ್ಥಿಕ ಲಾಭವಾಗಿ ಪರಿವರ್ತಿಸಿಕೊಳ್ಳುವುದು ಹೇಗೆ? ಇದಕ್ಕೆ ಬೇಕಾದ ನಿಯಂತ್ರಣ ಕ್ರಮಗಳೇನು? ಖಾಸಗಿತನದ ರಕ್ಷಣೆ- ಸುರಕ್ಷತೆ ಖಾತ್ರಿ ಪಡಿಸುವುದು ಹೇಗೆ?- ಇವುಗಳ ಬಗ್ಗೆ ಹೆಚ್ಚಿನ ಚಿಂತನ-ಮಂಥನ ನಡೆಯುವ ಸಾಧ್ಯತೆ ಇದೆ.

•ಆತ್ಮನಿರ್ಭರ ಭಾರತ”ಕ್ಕೆ ಪೂರಕವಾಗಿ ನಮ್ಮದೇ ಉತ್ಪನ್ನಗಳನ್ನು ರೂಪಿಸಲು ಹೇಗೆ ಮುಂದುವರಿಯಬೇಕು? ಇದಕ್ಕಾಗಿ ವಿವಿಧ ಉದ್ಯಮಗಳ ಸಂಯೋಜನೆಯ ಮಹತ್ವ ಎಷ್ಟು?- ಈ ಕುರಿತು ಚರ್ಚೆಗಳಲ್ಲಿ ಒತ್ತು ಕಂಡುಬರಬಹುದು. ಬಾಹ್ಯಾಕಾಶ, ರಕ್ಷಣೆ, ವಿದ್ಯುತ್, ಆರೋಗ್ಯಸೇವೆ ಉದ್ಯಮಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿವೆ. ಹೀಗಾಗಿ ಇವುಗಳ ಬಗ್ಗೆ ಸಹಜವಾಗಿಯೇ ಹೆಚ್ಚಿನ ಚರ್ಚೆ ನಡೆಯಲಿದೆ.

PHOTO COURTESY: WIKIPEDIA

ಕಿರಣ್ ಮಜುಂದಾರ್ ಷಾ: ಕಾರ್ಯನಿರ್ವಾಹಕ ಅಧ್ಯಕ್ಷೆ, ಬಯೋಕಾನ್/ಅಧ್ಯಕ್ಷರು, ಜೈವಿಕ ತಂತ್ರಜ್ಞಾನ ವಿಷನ್‌ ಗ್ರೂಪ್

•ಜೈವಿಕ ವಿಜ್ಞಾನಗಳ ದತ್ತಾಂಶ, ಕೃಷಿ ಜೈವಿಕ ತಾಂತ್ರಿಕತೆ, ಟೆಲಿ ಹೆಲ್ತ್, ಟೆಲಿ ಮೆಡಿಸಿನ್, ಲಸಿಕೆಗಳು, ಔಷಧ ಉತ್ಪಾದನೆ. ಬಿಗ್ ಡ್ಯಾಟಾ ಅನಲಿಟಿಕ್ಸ್, ಕೋವಿಡ್-19 ದಿಂದಾಗಿ ಸೃಷ್ಟಿಯಾಗಿರುವ “ನ್ಯೂ ನಾರ್ಮಲ್”, ಭವಿಷ್ಯದಲ್ಲಿ ಹೆಬ್ರಿಡ್ ಗೋಷ್ಠಿಗಳ ಪ್ರಾಮುಖ್ಯ ಇವುಗಳ ಬಗ್ಗೆ ಆಲೋಚಿಸುವ ಅಗತ್ಯವಿದೆ.

ಪ್ರಶಾಂತ್ ಪ್ರಕಾಶ್: ಪಾಲುದಾರರು, ಆಕ್ಸೆಲ್ ಪಾರ್ಟ್ನರ್ಸ್/ಚೇರ್ಮನ್, ಕರ್ನಾಟಕ ಸ್ಟಾರ್ಪಪ್‌ ವಿಷನ್‌ ಗ್ರೂಪ್‌

•ಡಿಜಿಟಲ್ ಆರ್ಥಿಕತೆಯನ್ನು ಇನ್ನಷ್ಟು ತ್ವರಿತಗೊಳಿಸುವ ಬಗ್ಗೆ ಆಲೋಚಿಸಬೇಕಾಗಿದೆ.
•ಆರೋಗ್ಯ ಸೇವೆ, ಶಿಕ್ಷಣ, ಸಂಚಾರ, ಕೃಷಿ ತಾಂತ್ರಿಕತೆಯಲ್ಲಿ ಉಂಟಾಗಲಿರುವ ಹೊಸ ವಿಧಾನಗಳ ಕುರಿತು ಕೂಡ ಹೆಚ್ಚಿನ ಸಮಾಲೋಚನೆ ನಡೆಯಬಹುದು.
•ಭಾರತದಲ್ಲಿನ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವ ಜತೆಗೆ ಬೇರೆ ದೇಶಗಳ ಸಮಸ್ಯೆಗಳನ್ನು ಪರಿಹರಿಸುವಲ್ಲಿ ನಾವೇನು ಕೊಡುಗೆ ನೀಡಬಹುದು ಎಂಬುದು ಗಮನಿಸಬೇಕಾದ ಮತ್ತೊಂದು ಮುಖ್ಯ ಅಂಶ.

Tags: bangalore tech summit 2020Bengalurubtsdr cn ashwath narayan
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಚಿಕ್ಕಬಳ್ಳಾಪುರದಲ್ಲಿ ಚಿದಾನಂದಗೌಡ ಪರ ಡಾ.ಸುಧಾಕರ್‌ ಮತಬೇಟೆ

ಕೋವಿಡ್‌ ಕಂಟ್ರೋಲ್;‌ ಡಾಕ್ಟರ್ ಕೆಲಸಕ್ಕೆ ಡಾಕ್ಟರ್ ಮೆಚ್ಚುಗೆ, ಚಳಿಗಾಲ-ಹಬ್ಬಗಳ ವೇಳೆ ನಿರ್ಬಂಧ ಸಡಿಲಿಕೆ ಇಲ್ಲ

Leave a Reply Cancel reply

Your email address will not be published. Required fields are marked *

Recommended

4 ಶೋಗಳಿಗೆ 154 ಪ್ರೇಕ್ಷಕರು! ಟೋಟಲ್‌ ಕಲೆಕ್ಷನ್‌ 5ರಿಂದ  6 ಸಾವಿರ ಮಾತ್ರ!!

ಚಿತ್ರಮಂದಿರಗಳು 100% ಓಪೆನ್

4 years ago
ಸರಕಾರಿ ಶಾಲೆ ಮಕ್ಕಳಿಗೆ ಬೆಳಕು; ವಿದ್ಯಾರ್ಥಿನಿಯರಿಗೆ ಸೋಲಾರ್‌ ದೀಪಗಳನ್ನು ನೀಡಿದ ದಾನಿ ಸಂದೀಪ್ ಬಿ.ರೆಡ್ಡಿ

ಸರಕಾರಿ ಶಾಲೆ ಮಕ್ಕಳಿಗೆ ಬೆಳಕು; ವಿದ್ಯಾರ್ಥಿನಿಯರಿಗೆ ಸೋಲಾರ್‌ ದೀಪಗಳನ್ನು ನೀಡಿದ ದಾನಿ ಸಂದೀಪ್ ಬಿ.ರೆಡ್ಡಿ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ