• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಲೆಕ್ಕ ಕೈಕೊಟ್ಟಿದೆ; ಸೋಲೊಪ್ಪಿದ ಡಿಕೆಶಿಗೆ ಮುನಿರತ್ನ ಪಡೆದ ಮತಗಳದ್ದೇ ಚಿಂತೆ

cknewsnow desk by cknewsnow desk
November 10, 2020
in STATE
Reading Time: 1 min read
0
ಲೆಕ್ಕ ಕೈಕೊಟ್ಟಿದೆ; ಸೋಲೊಪ್ಪಿದ ಡಿಕೆಶಿಗೆ ಮುನಿರತ್ನ ಪಡೆದ ಮತಗಳದ್ದೇ ಚಿಂತೆ
918
VIEWS
FacebookTwitterWhatsuplinkedinEmail

Lead photo: BNMK Photographs

ಬೆಂಗಳೂರು: “ಎರಡು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮತದಾರ ಕೊಟ್ಟ ತೀರ್ಪನ್ನು ನಾವು ಗೌರವಯುತವಾಗಿ ಒಪ್ಪುತ್ತೇವೆ. ಪಕ್ಷದ ಅಧ್ಯಕ್ಷನಾಗಿ ಈ ಸೋಲಿನ ಹೊಣೆ ನಾನು ಹೊರುತ್ತೇನೆಯೇ ಹೊರತು, ಬೇರೆಯವರ ಮೇಲೆ ಹಾಕುವುದಿಲ್ಲ. ಮುಂದಿನ ದಿನಗಳಲ್ಲಿ ಪಕ್ಷವನ್ನು ಸಂಘಟಿಸಿ ಸರಕಾರದ ವೈಫಲ್ಯದ ವಿರುದ್ಧ ಹೋರಾಟ ಮುಂದುವರಿಸುತ್ತೇವೆ.”

ಇದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪ್ರತಿಕ್ರಿಯೆ. ಎರಡೂ ಕ್ಷೇತ್ರಗಳಲ್ಲಿ ಸೋಲು ಒಂದೆಡೆಯಾದರೆ, ಮುನಿರತ್ನಗೆ ಬಿದ್ದಿರುವ ಮತಗಳ ಪ್ರಮಾಣ ಅವರಿಗೆ ಆಘಾತ ಉಂಟು ಮಾಡಿರುವುದು ಅವರ ಮಾತುಗಳಲ್ಲೇ ವ್ಯಕ್ತವಾಗಿದೆ. ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾದ ಹಿನ್ನೆಲೆಯಲ್ಲಿ ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಡಿಕೆಶಿ ಹೇಳಿದ್ದಿಷ್ಟು:

“ರಾಜ್ಯದಲ್ಲಿ ನಡೆದ ಎರಡು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಬಂದಿದೆ. ಮತದಾರರು ಕೊಟ್ಟ ತೀರ್ಪನ್ನು ನಾವು ಬಹಳ ಗೌರವಯುತವಾಗಿ ಒಪ್ಪಿಕೊಂಡಿದ್ದೇವೆ. ಕಾಂಗ್ರೆಸ್ ಪಕ್ಷ ಮತದಾರರ ತೀರ್ಪು ಪ್ರಶ್ನೆ ಮಾಡುವುದಿಲ್ಲ. ಈ ಫಲಿತಾಂಶ ಹೇಗಾಯಿತು? ಯಾಕಾಯಿತು? ಎಂಬುದನ್ನು ಮುಂದಿನ ದಿನಗಳಲ್ಲಿ ಕೂತು ಚರ್ಚೆ ಮಾಡುತ್ತೇವೆ. ಎಲ್ಲಿ ಏನೇನು ಸರಿ ಮಾಡಿಕೊಳ್ಳಬೇಕೋ ಅದನ್ನು ಮಾಡುತ್ತೇವೆ.”

“ಈ ಚುನಾವಣೆಯಲ್ಲಿ ಸೋತಿದ್ದೇವೆ ಎಂದು ನಾನಾಗಲಿ, ಪಕ್ಷವಾಗಲಿ ಹಿಂಜರಿಯುವ ಅಗತ್ಯವಿಲ್ಲ. ಉಪ ಚುನಾವಣೆಯಲ್ಲಿ ಅಧಿಕಾರದಲ್ಲಿರುವ ಪಕ್ಷಕ್ಕೆ ಶೇ.15ರಷ್ಟು ಅನುಕೂಲವಾಗುವ ಅನುಭವ ನಮಗಿದೆ. ನಾವೂ ಹಿಂದೆ ಬಳ್ಳಾರಿ, ಗುಂಡ್ಲುಪೇಟೆ, ನಂಜನಗೂಡು ಉಪ ಚುನಾವಣೆಯಲ್ಲಿ ಗೆದ್ದರೂ ನಂತರ ಚುನಾವಣೆಯಲ್ಲಿ ಸೋತಿದ್ದೆವು. ಹೀಗಾಗಿ ಯಾರೂ ಬೇಸರವಾಗುವುದು ಬೇಡ. ಈ ಚುನಾವಣೆಯಲ್ಲಿ ನಮ್ಮ ಕ್ಷೇತ್ರದಲ್ಲಿರುವ ಕಾರ್ಯಕರ್ತರು ಹಾಗೂ ರಾಜ್ಯದ ಕಾರ್ಯಕರ್ತರು ತಮ್ಮ ಶಕ್ತಿ ಮೀರಿ ಪಕ್ಷದ ಅಭ್ಯರ್ಥಿ ಗೆಲುವಿಗಾಗಿ ಶ್ರಮಿಸಿದ್ದಾರೆ.”

“ನಮ್ಮ ರಾಜರಾಜೇಶ್ವರಿ ನಗರದಲ್ಲಿ ಇಷ್ಟು ಅಂತರ ನಿರೀಕ್ಷೆ ಮಾಡಿರಲಿಲ್ಲ. ಈ ಕ್ಷೇತ್ರದಲ್ಲಿ ತೀವ್ರ ಪೈಪೋಟಿಯಿಂದ ಕೆಲವು ಸಾವಿರ ಮತಗಳ ಅಂತರದಲ್ಲಿ ಫಲಿತಾಂಶ ಬರಬಹುದು ಎಂದು ಭಾವಿಸಿದ್ದೆ. ಭವಿಷ್ಯದ ಲೆಕ್ಕಾಚಾರದೊಂದಿಗೆ ನಾವು ನಮ್ಮ ಅಭ್ಯರ್ಥಿಯನ್ನು ಸೂಚಿಸಿದ್ದೆವು. ಒಳ್ಳೆಯ ಅಭ್ಯರ್ಥಿಗೆ ಜನ ಕೂಡ ಸಹಕಾರ ನೀಡಿದ್ದಾರೆ. ಕುಸುಮಾ ಅವರು ಉತ್ತಮ ಹೋರಾಟ ಮಾಡಿದ್ದಾರೆ. ನಮಗೆ ಸಿಕ್ಕಿರುವ ಮತ ಕೇವಲ ನಮ್ಮ ಪಕ್ಷದ ಮತ ಮಾತ್ರ ಅಲ್ಲ. ಬೇರೆ ಪಕ್ಷದ ಮತದಾರರು ಮತ ಹಾಕಿದ್ದಾರೆ. ಅವರು ಕೊಟ್ಟ ತೀರ್ಪನ್ನು ನಾವು ಒಪ್ಪುತ್ತೇವೆ.”

“ಶಿರಾದಲ್ಲಿ ನಮ್ಮ ಲೆಕ್ಕಾಚಾರ ತಪ್ಪಾಗಿದೆ. ಅಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ ಎಂದು ನಮ್ಮ ಪಕ್ಷದ ಎಲ್ಲ ಮುಖಂಡರು ನಿರೀಕ್ಷಿಸಿದ್ದೆವು. ಅಲ್ಲಿ ಬಿಜೆಪಿಗೆ ಹೊಸದಾಗಿ ಅಷ್ಟು ಮತ ಹೋಗಿರುವುದು ಅಚ್ಚರಿ ತಂದಿದೆ. ಮುಂದಿನ ದಿನಗಳಲ್ಲಿ ಜನರ ವಿಶ್ವಾಸ ಹೇಗೆ ಪಡೆಯುವುದು, ಕ್ಷೇತ್ರಕ್ಕಾಗಿ ಹೇಗೆ ದುಡಿಯಬೇಕು ಎಂಬುದನ್ನು ಚರ್ಚೆ ಮಾಡುತ್ತೇವೆ.”

“ನಿಮಗೆ ಮೊದಲ ಚುನಾವಣೆ ಇದು, ಸೋತಿದ್ದೀರಿ ಎಂದು ಅನೇಕರು ಹೇಳುತ್ತಿದ್ದಾರೆ. ನಾವು ಮೊದಲ ಚುನಾವಣೆಗಳನ್ನು ಸೋತು ಬಂದಿದ್ದೇನೆ. 1985ರಲ್ಲಿ ಮೊದಲು ಸ್ಪರ್ಧಿಸಿದಾಗ ಸೋತಿದ್ದೆ. ನಂತರ ಗೆದ್ದುಕೊಂಡು ಬಂದಿದ್ದೇನೆ. ಹೀಗಾಗಿ ಸೋಲೇ ಗೆಲುವಿನ ಮೆಟ್ಟಿಲು ಎಂಬುದರ ಮೇಲೆ ನಂಬಿಕೆ ಇಟ್ಟುಕೊಂಡಿದ್ದೇನೆ.”

“ಕಾರ್ಯಕರ್ತರ ಸಂಘಟನೆ ಮಾಡಬೇಕು, ಸರ್ಕಾರಕ್ಕೆ ಸಂದೇಶ ರವಾನಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದೆವು. ಮುಂದಿನ ದಿನಗಳಲ್ಲಿ ನಮ್ಮ ಸಿದ್ಧಾಂತ ಗಮನದಲ್ಲಿಟ್ಟುಕೊಂಡು ಸರಕಾರದ ವಿರುದ್ಧದ ಹೋರಾಟ ಮುಂದುವರಿಸುತ್ತೇವೆ. ಜನ ತೀರ್ಪು ಕೊಟ್ಟಿದ್ದರೂ ಸರಕಾರದಲ್ಲಿ ಬೇಕಾದಷ್ಟು ವೈಫಲ್ಯಗಳಿವೆ. ಹೀಗಾಗಿ ರಾಜ್ಯದ ಜನತೆ ಹಿತಕ್ಕಾಗಿ ನಮ್ಮ ಹೋರಾಟ ಮುಂದುವರಿಯುತ್ತದೆ.”

“ನಮ್ಮ ಪಕ್ಷದ ನಾಯಕರ ಹಾಗೂ ಕಾರ್ಯಕರ್ತರ ಹೊಂದಾಣಿಕೆ ಹಾಗೂ ಕಾರ್ಯದಲ್ಲಿ ಯಾವುದೇ ಕೊರತೆ ಇರಲಿಲ್ಲ. ಸರಕಾರ ಹೇಗೆ ಅಧಿಕಾರ ದುರುಪಯೋಗ ಮಾಡಿದೆ, ಹಣ ಹಂಚಿದೆ ಎಂಬುದನ್ನೂ ನೋಡಿದ್ದೇವೆ. ಈಗ ಆ ಚರ್ಚೆ ಬೇಡ. ನಾವು ಸೋತಿದ್ದೇವೆ. ನಮ್ಮ ನಿರೀಕ್ಷೆಗೆ ತಕ್ಕಂತೆ ಜನ ಮತ ಹಾಕಿಲ್ಲ.”

“ಅಧ್ಯಕ್ಷನಾಗಿ ಇದು ನನ್ನ ಜವಾಬ್ದಾರಿ ನಿಜ. ನಾನು ಸಾಮೂಹಿಕ ನಾಯಕತ್ವದಲ್ಲಿ ನಂಬಿಕೆ ಇಟ್ಟುಕೊಂಡಿದ್ದೇನೆ. ನಮ್ಮ ನಾಯಕರು, ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿದ್ದಾರೆ. ಈ ಸೋಲನ್ನು ನಾವು ಒಪ್ಪಿದ್ದೇವೆ. ಈ ಸೋಲಿನ ಜವಾಬ್ದಾರಿ ನಾನೇ ಹೊರುತ್ತೇನೆ. ಬೇರೆಯವರ ಮೇಲೆ ಸೋಲಿನ ಹೊಣೆ ಹೊರಿಸುವುದಿಲ್ಲ.”

ಕಾಂಗ್ರೆಸ್ʼನಲ್ಲಿ ಹೊಸಬರಿಗೂ ಆದ್ಯತೆ

“ಪಕ್ಷಕ್ಕೆ ಯುವಕರು, ಹಿರಿಯರು, ಹಳೆಯ ನಾಯಕರು, ಹೊಸಬರು ಎಲ್ಲರೂ ಬೇಕು. ಹೀಗಾಗಿ ಯುವ, ಸುಸಂಸ್ಕೃತ ಹಾಗೂ ವಿದ್ಯಾವಂತ ಅಭ್ಯರ್ಥಿ ಆಯ್ಕೆ ಮಾಡಿದೆವು. ನಮ್ಮ ಅಭ್ಯರ್ಥಿ ಬಗ್ಗೆ ಯಾರೂ ಮಾತನಾಡಲು ಸಾಧ್ಯವಾಗಲಿಲ್ಲ. ಮುಂದೆಯೂ ಬೇರೆ ಕ್ಷೇತ್ರಗಳಲ್ಲಿ ಹೊಸಬರನ್ನು ತಯಾರು ಮಾಡುತ್ತೇವೆ.”

ಬಿಹಾರದಲ್ಲಿ ಮಹಾಘಟಬಂಧನದ ಮೇಲೆ ನಿರೀಕ್ಷೆ ಇತ್ತು

“ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮಹಾಘಟಬಂಧನ ಮುನ್ನಡೆ ಪಡೆದರೂ ನಂತರ ಹಿನ್ನಡೆ ಅನುಭವಿಸಿದೆ. ಇಲ್ಲೂ ನಾವು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದೆವು. ಕಾಂಗ್ರೆಸ್ ಹಾಗೂ ಆರ್ʼಜೆಡಿ ಸೇರಿ ಹೋರಾಟ ಮಾಡಿದ್ದೆವು. ಈ ಬಾರಿ ಸರಕಾರ ಮಾಡಲು ಅಂಕಿ-ಅಂಶ ಸಿಗದಿದ್ದರೂ 100ಕ್ಕೂ ಹೆಚ್ಚು ಕ್ಷೇತ್ರ ಗೆಲ್ಲುತ್ತಿರುವುದು ತೃಪ್ತಿ ಇದೆ. ಉತ್ತರ ಭಾರತದ ರಾಜ್ಯಗಳಲ್ಲಿ ಬಿಜೆಪಿ ಹಾಗೂ ಎನ್ʼಡಿಎ ವಿರುದ್ಧದ ಅಲೆ ಪ್ರಾರಂಭವಾಗಿದೆ.

Tags: bjpCongressDK Shivakumarkarnataka by election 2020
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಬಿಹಾರ ಫೈನಲ್‌ ರಿಸಲ್ಟ್: 43ಕ್ಕೇ ನಿಂತ ನಿತೀಶ್‌, ಬಿಜೆಪಿಗಿಂತ 1 ಸೀಟು ಹೆಚ್ಚು ಗೆದ್ದ ತೇಜಸ್ವಿ

ಬಿಹಾರ ಫೈನಲ್‌ ರಿಸಲ್ಟ್: 43ಕ್ಕೇ ನಿಂತ ನಿತೀಶ್‌, ಬಿಜೆಪಿಗಿಂತ 1 ಸೀಟು ಹೆಚ್ಚು ಗೆದ್ದ ತೇಜಸ್ವಿ

Leave a Reply Cancel reply

Your email address will not be published. Required fields are marked *

Recommended

ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಕನ್ನಡ ಉದ್ಧಾರಕ್ಕೆ ಕ್ರಮ

ಮೋದಿ ಸಭೆಗೆ ಸಚಿವ ಡಾ.ಕೆ.ಸುಧಾಕರ್‌ ಹೋಗೋದು ಬೇಡ!!

4 years ago
ವಿಶ್ವದಾಭಿರಾಮ ವಿನುರವೇಮ; ಭವದ ಬೇಗೆ ನೀಗುವ ದಾರಿ ತೋರಿದ ಯೋಗಿ ವೇಮನ

ವಿಶ್ವದಾಭಿರಾಮ ವಿನುರವೇಮ; ಭವದ ಬೇಗೆ ನೀಗುವ ದಾರಿ ತೋರಿದ ಯೋಗಿ ವೇಮನ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ