• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಐಟಿ ನೀತಿ 2020-2025: ಬೆಂಗಳೂರು ನಂತರ 2ನೇ ಹಂತದ ನಗರಗಳಿಗೆ ಐಟಿ ಕ್ಷೇತ್ರ ವಿಸ್ತರಣೆ

cknewsnow desk by cknewsnow desk
November 12, 2020
in STATE
Reading Time: 2 mins read
0
ಮಹಾಮಾರಿ ಕೋವಿಡ್ ನಡುವೆ ಹೂಡಿಕೆಗೆ ಉತ್ತೇಜನ; ನ.19-21ರಂದು ಟೆಕ್ ಸಮ್ಮೇಳನ: ಇದು ಬೆಂಗಳೂರು BTS
930
VIEWS
FacebookTwitterWhatsuplinkedinEmail
Photo by Federico Orlandi from Pexels

ಬೆಂಗಳೂರು: ರಾಜಧಾನಿ ಬೆಂಗಳೂರು ನಗರವನ್ನು ಹೊರತುಪಡಿಸಿ ಎರಡನೇ ಹಂತದ ನಗರಗಳಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರವನ್ನು ಶಕ್ತಿಶಾಲಿಯಾಗಿ ವಿಸ್ತರಿಸುವ ನಿಟ್ಟಿನಲ್ಲಿ ಸರಕಾರ ಹೆಜ್ಜೆ ಇಟ್ಟಿದ್ದು, ಅದಕ್ಕೆ ಪೂರಕವಾದ ಹೊಸ ಐಟಿ ನೀತಿಯನ್ನು (2020-25) ಬಿಡುಗಡೆ ಮಾಡಿದೆ.

ಬೆಂಗಳೂರಿನಲ್ಲಿ ಗುರುವಾರ ಬೆಂಗಳೂರು ಟೆಕ್‌ ಸಮ್ಮಿಟ್‌ಗೆ ಪೂರ್ವಭಾವಿಯಾಗಿ ಐಟಿ ಕ್ಷೇತ್ರ ಅಭಿವೃದ್ಧಿಗೆ ಬೆಂಗಳೂರನ್ನು ಹೊರತುಪಡಿಸಿ ಎರಡನೇ ಹಂತದ ನಗರಗಳನ್ನು ಅಭಿವೃದ್ಧಿಪಡಿಸುವ ಉಪಕ್ರಮಗಳ ಬಗ್ಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಐಟಿಬಿಟಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ 2020-2025ರ ನೂತನ ಐಟಿ ನೀತಿಯನ್ನು ಬಿಡುಗಡೆ ಮಾಡಿದರು.

ರಾಜ್ಯ ವಿವಿಧ ನಗರಗಳಲ್ಲಿ ಐಟಿ ಕಂಪನಿಗಳ ಸ್ಥಾಪನೆ, ಅದಕ್ಕೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದು, ಮಾನವ ಸಂಪನ್ಮೂಲ ಹಾಗೂ ಉದ್ಯೋಗ ಸೃಷ್ಟಿ ಸೇರಿದಂತೆ ಹಲವಾರು ಅಂಶಗಳನ್ನು ಐಟಿ ನೀತಿ ಒಳಗೊಂಡಿದ್ದು, ಇದರಿಂದ ನಮ್ಮ ಮಾಹಿತಿ ತಂತ್ರಜ್ಞಾನ ಕ್ಷೇತ್ರವು ಇನ್ನಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಡಿಸಿಎಂ ಹೇಳಿದರು.

ಈಗಾಗಲೇ ಎರಡನೇ ಹಂತದ ನಗರಗಳಲ್ಲಿ ಐಟಿ ಕ್ಷೇತ್ರದ ಅಭಿವೃದ್ಧಿಗೆ ಅನೇಕ ಪ್ರಯತ್ನಗಳು ನಡೆದಿವೆ. ಮುಖ್ಯವಾಗಿ ಇನ್ಪೋಸಿಸ್‌ ಕಂಪನಿ ಮೈಸೂರು, ಹುಬ್ಬಳ್ಳಿ ಮತ್ತು ಮಂಗಳೂರು ನಗರಗಳಿಗೆ ತನ್ನ ಕಾರ್ಯಕ್ಷೇತ್ರವನ್ನು ವಿಸ್ತರಿಸುವ ದೊಡ್ಡ ಪ್ರಯತ್ನ ಮಾಡಿತು. ಇದೇ ರೀತಿಯ ಪ್ರಯತ್ನ ಗಳು ಮುಂದಿನ ದಿನಗಳಲ್ಲಿ ರಚನಾತ್ಮಕ ವೇಗ ಪಡೆಯಲಿವೆ ಎಂದರು.

Our cities beyond Namma Bengaluru are key to supercharge Karnataka's growth. The reform initiatives taken by our Govt to boost the development of our IT-BT ecosystem will enable this vision.

Spoke about this during 'Beyond Bengaluru' Virtual Event in the run-up to #BTS2020.

1/2 pic.twitter.com/KlKfubpabs

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) November 12, 2020
ಮೂಲಸೌಕರ್ಯಕ್ಕೆ ಒತ್ತು

ಸದ್ಯಕ್ಕೆ 5ಜಿ ಹೊಸ್ತಿಲಲ್ಲಿ ಇದ್ದೇವೆ. ಆದರೆ 4ಜಿ ಯನ್ನೇ ರಾಜ್ಯದ ಮೂಲೆ ಮೂಲೆಗೂ ತಲುಪಿಸುವ ಪ್ರಯತ್ನ ಇನ್ನೂ ಆಗಬೇಕಿದೆ. ಕನೆಕ್ಟಿವಿಟಿ ಎನ್ನುವುದು ಬಹಳ ಮುಖ್ಯ. ಆ ನಿಟ್ಟಿನಲ್ಲಿ ಟೆಲಿಕಾಂ ಸೇವೆಗಳ ಪರಧಿಯನ್ನು ವಿಸ್ತರಿಸಬೇಕು. ಈಗಷ್ಟೇ ರಾಷ್ಟ್ರೀಯ ಶಿಕ್ಷಣ ನೀತಿಯೂ ಜಾರಿಗೆ ಬರುತ್ತಿರುವುದರಿಂದ ನೆಟ್‌ವರ್ಕಿಂಗ್‌ ಅತ್ಯಗತ್ಯವಾಗಿದೆ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.

ಈಗ ಬಿಯಾಂಡ್‌ ಬೆಂಗಳೂರು ಉಪಕ್ರಮದಿಂದ ಮೈಸೂರು, ಮಂಗಳೂರು, ಹುಬ್ಬಳ್ಳಿ, ಧಾರವಾಡ ಮತ್ತು ಶಿವಮೊಗ್ಗ ನಗರಗಳತ್ತ ಟೆಲಿಕಾಂ, ಎಲೆಕ್ಟ್ರಾನಿಕ್‌ ಸಿಸ್ಟಮ್‌ ವಿನ್ಯಾಸ ಹಾಗೂ ಅಭಿವೃದ್ಧಿ (ಇಎಸ್‌ಡಿಎಂ) ಹಾಗೂ ಐಟಿ ಕಂಪನಿಗಳನ್ನು ಕಳಿಸಿ ಇಡೀ ರಾಜ್ಯದಲ್ಲಿ ಎಲ್ಲೆಡೆ ಇಂಥ ಸಂಸ್ಥೆಗಳ ಅಸ್ತಿತ್ವ ಇರುವಂತೆ ನೋಡಿಕೊಳ್ಳಲು ಸರಕಾರ ಬಲವಾಗಿ ಯತ್ನಿಸುತ್ತಿದೆ ಎಂದು ಉಪ ಮುಖ್ಯಮಂತ್ರಿ.

ವರ್ಕ್‌ ಫ್ರಂ ಎನಿವೇರ್‌

ಕೋವಿಡ್‌ ಬಂದ ಮೇಲೆ ನಮ್ಮೆಲ್ಲರ ಸಾಂಪ್ರದಾಯಿಕ ಪರಿಕಲ್ಪನೆಗಳೆಲ್ಲ ಬದಲಾಗಿಬಿಟ್ಟಿವೆ. ಸೋಂಕು ಬರುವುದಕ್ಕೂ ಮೊದಲು ವರ್ಕ್‌ ಫ್ರಂ ಹೋಮ್‌ ಎನ್ನುವುದು ವಿರಳವಾಗಿ ಬಳಸುವ ಪದವಾಗಿತ್ತು. ಕೋವಿಡ್‌ ನಂತರ ಇದು ಸರ್ವೇಸಾಮಾನ್ಯ ಎನಿಸಿತು. ಈಗ ಇನ್ನೂ ಮುಂದೆ ಹೋಗಿ ವರ್ಕ್‌ ಫ್ರಂ ಎನಿವೇರ್‌ ಆಗಿದೆ. ಇದಕ್ಕೆ ಅತ್ಯುತ್ತಮ ನೆಟ್‌ವರ್ಕಿಂಗ್‌, ಕನೆಕ್ಟಿವಿಟಿ ಮಾಡಿದರೆ ಹೆಚ್ಚಿನ ಫಲಶ್ರುತಿಯನ್ನು ಕಾಣಬಹುದು ಎಂದು ಡಿಸಿಎಂ ಹೇಳಿದರು.

ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹೊರಗೆ, ಅಂದರೆ; ರಾಜ್ಯದ ಉದ್ದಗಲಕ್ಕೂ ಹೂಡಿಕೆಗೆ ಅತ್ಯುತ್ತಮ ಅವಕಾಶಗಳಿವೆ. ಒಂದೆಡೆ ಶೈಕ್ಷಣಿಕ ಕ್ಷೇತ್ರಕ್ಕೆ ಶಕ್ತಿ ತುಂಬುತ್ತಾ ಮತ್ತೊಂದೆಡೆ ಐಟಿ ಕ್ಷೇತ್ರವನ್ನು ವಿಸ್ತರಿಸುತ್ತಾ ಹೋದರೆ ಅತ್ಯುತ್ತಮ ಸಾಧನೆ ಮಾಡಬಹುದು. ಈಗಾಗಲೇ ಐಟಿ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ರಾಜ್ಯವೂ ಮತ್ತಷ್ಟು ಮುಂದೆ ಸಾಗಲಿದೆ. ಈ ನಿಟ್ಟಿನಲ್ಲಿ ಜಾರಿಗೆ ಬರುತ್ತಿರುವ ನೂತನ ಐಟಿ ನೀತಿಯು ಈ ಕ್ಷೇತ್ರದ ವಿಕೇಂದ್ರೀಕರಣಕ್ಕೆ ಶಕ್ತಿ ತುಂಬುತ್ತದೆ ಎಂದು ತಿಳಿಸಿದರು.

ಕೋವಿಡ್‌ ಪಿಡುಗನ್ನು ಟೆಕ್ನಾಲಜಿಯಿಂದಲೇ ಪರಿಣಾಮಕಾರಿಯಾಗಿ ಎದುರಿಸಿದ್ದೇವೆ. ಹೀಗಾಗಿ ಮುಂದುವರಿದ ದಿನಗಳಲ್ಲಿ ಇಂಥ ಕಂಪನಿಗಳೆಲ್ಲವೂ ಬೆಂಗಳೂರಿನಲ್ಲೇ ಬೀಡುಬಿಡುವುದು ಸರಿಯಲ್ಲ. ವೈಜ್ಞಾನಿಕವಾಗಿ ಎಲ್ಲ ಕ್ಷೇತ್ರಗಳನ್ನು ಎರಡನೇ ಹಂತದ ನಗರಗಳಿಗೆ ವಿಕೇಂದ್ರೀಕರಿಸಬೇಕು ಎಂಬುದು ನೂತನ ಐಟಿ ನೀತಿಯ ಆಶಯ ಎಂದು ಅವರು ಹೇಳಿದರು.

ಹೊರಗೆ ಉತ್ತಮ ಅವಕಾಶಗಳಿವೆ

ಈ ಸಂದರ್ಭದಲ್ಲಿ ಮಾತನಾಡಿದ ಐಟಿ-ಬಿಟಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಇ.ವಿ.ರಮಣರೆಡ್ಡಿ, “ಬೆಂಗಳೂರಿನ ಹೊರಗೂ ಐಟಿ ಕ್ಷೇತ್ರಕ್ಕೆ ಅತ್ಯುತ್ತಮ ಅವಕಾಶಗಳಿವೆ. ಶ್ರೇಷ್ಠ ಮಾನವ ಸಂಪನ್ಮೂಲವೂ ಸಿಗುತ್ತಿದೆ. ಮೇಲಾಗಿ ಯಾವುದಾದರೂ ಸಮಸ್ಯೆ ಎದುರಾದರೂ ಸಕಾಲಕ್ಕೆ ಮಧ್ಯಪ್ರವೇಶಿಸಿ ಅದಕ್ಕೆ ಪರಿಹಾರೋಪಾಯ ಕಂಡುಕೊಳ್ಳಲು ಸರಕಾರ ಸದಾ ಸಿದ್ಧವಿದೆ” ಎಂದರು.

“ಈಗಾಗಲೇ ರಾಜ್ಯದ ಎಲ್ಲ ಭಾಗಗಳಲ್ಲೂ ಕೌಶಲ್ಯಪೂರ್ಣ ಮಾನವ ಸಂಪನ್ಮೂಲ ಸೃಷ್ಟಿಗೆ ಸರಕಾರ ಹೆಚ್ಚು ಒತ್ತು ನೀಡಿದೆ. ಈಗ ಹೊಸದಾಗಿ ಬಿಡುಗಡೆ ಆಗುತ್ತಿರುವ ಐಟಿ ನೀತಿಯಲ್ಲೂ ಅದಕ್ಕೆ ಪೂರಕವಾದ ಅಂಶಗಳನ್ನು ಅಡಕಗೊಳಿಸಲಾಗಿದೆ” ಎಂದು ರೆಡ್ಡಿ ಮಾಹಿತಿ ನೀಡಿದರು.

ಐಟಿ ನೀತಿಯಲ್ಲಿ ಏನಿದೆ?
  • ಆವಿಷ್ಕಾರ ಮತ್ತು ತಂತ್ರಜ್ಞಾನದಲ್ಲಿ ರಾಜ್ಯವೂ ಈಗ ಹೊಂದಿರುವ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುವುದು ಹಾಗೂ ಇನ್ನೂ ಮುಂದೆ ಸಾಗುವುದು. ಅದಕ್ಕೆ ಬೇಕಾದ ಎಲ್ಲ ಉಪಕ್ರಮಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳುವುದು.
  • ರಾಜ್ಯದ ಉದ್ದಗಲಕ್ಕೂ ಹೂಡಿಕೆಯನ್ನು ಉತ್ತೇಜಿಸಿ ಆರ್ಥಿಕ ಬೆಳವಣಿಗೆಯನ್ನು ಪ್ರೋತ್ಸಾಹಿಸುವುದು. ಅದಕ್ಕೆ ಅಗತ್ಯವಾದ ಕಾರ್ಯತಂತ್ರವನ್ನು ರೂಪಿಸುವುದು.
  • ಬೆಂಗಳೂರು ಹೊರತುಪಡಿಸಿ ಎರಡನೇ ಹಂತದ ನಗರಗಳಲ್ಲಿ ಹೂಡಿಕೆಯನ್ನು ಹೆಚ್ಚಿಸಿ ಐಟಿ, ಟೆಲಿಕಾಂ, ಎಲೆಕ್ಟ್ರಾನಿಕ್‌ ಸಿಸ್ಟಮ್‌ ವಿನ್ಯಾಸ ಹಾಗೂ ಅಭಿವೃದ್ಧಿ (ಇಎಸ್‌ಡಿಎಂ) ಕಂಪನಿಗಳನ್ನು ಸ್ಥಾಪನೆ ಮಾಡುವುದು.
  • ಈ ಮೂಲಕ ರಾಜ್ಯವ್ಯಾಪಿ ಉದ್ಯೋಗಾವಕಾಶ ಸೃಷ್ಟಿ ಮಾಡುವುದು. ಈ ನೀತಿಯಿಂದ ಮೂಲಸೌಕರ್ಯ ಅಭಿವೃದ್ಧಿ, ಮಾರುಕಟ್ಟೆ ಅಭಿವೃದ್ಧಿ, ಪರಿಸರ ರಕ್ಷಣೆ, ಕೌಶಲ್ಯಾಭಿವೃದ್ಧಿ, ವ್ಯಾಪಾರ-ವಾಣಿಜ್ಯಾಭಿವೃದ್ಧಿ ಸಾಧ್ಯವಾಗುತ್ತದೆ.
  • ಬೆಂಗಳೂರಿನ ಹೊರಗೆ ತಮ್ಮ ಚಟುವಟಿಕೆಗಳನ್ನು ವಿಸ್ತರಿಸುವ ಕಂಪನಿಗಳಿಗೆ ಸರಕಾರ ಎಲ್ಲ ರೀತಿಯ ಆರ್ಥಿಕ, ಮೂಲಭೂತ ಸೌಲಭ್ಯಗಳನ್ನು ಒದಗಿಸುವುದರ ಜತೆಗೆ, ಅನೇಕ ರಿಯಾಯಿತಿಗಳನ್ನು ನೀಡಲಿದೆ.
ಐಟಿ ನೀತಿಯ ಗುರಿಗಳು
  • ಟ್ರಿಲಿಯನ್ ಡಾಲರ್ʼಗೂ ಮೀರಿ ಡಿಜಿಟಲ್ ಆರ್ಥಿಕತೆಯಾಗಿ ಹೊರಹೊಮ್ಮುವ ಭಾರತದ ಗುರಿಗಾಗಿ ಶೇ.30ರಷ್ಟು ಕೊಡುಗೆ ನೀಡಲು ರಾಜ್ಯದ ಐಟಿ ಉದ್ಯಮವನ್ನು ಸಜ್ಜುಗೊಳಿಸುವುದು.
  • 2020-2025ರ ಅವಧಿಯಲ್ಲಿ ರಾಜ್ಯದಲ್ಲಿ 60 ಲಕ್ಷ ನೇರ ಮತ್ತು ಪರೋಕ್ಷ ಉದ್ಯೋಗದ ಅವಕಾಶ ಕಲ್ಪಿಸುವುದು.
  • ಐಟಿ ಕ್ಷೇತ್ರವನ್ನು ಆದ್ಯತೆಯ ಮೇರೆಗೆ ವಿಸ್ತರಿಸುವುದು ಹಾಗೂ ಆ ಮೂಲಕ ಎಲ್ಲ ಭಾಗಗಳ ಸಮಾನಾಂತರ ಅಭಿವೃದ್ಧಿಯನ್ನು ಸಾಧಿಸುವುದು.
  • ಐಟಿ ಉದ್ಯಮಕ್ಕೆ ಪೂರಕವಾಗಿ ಬೆಂಗಳೂರು ಹೊರಗೆ ಅತ್ಯುತ್ತಮ ಮಾನವ ಸಂಪನ್ಮೂಲವನ್ನು ಸಜ್ಜುಗೊಳಿಸುವುದು.
  • ಅಗತ್ಯ ದತ್ತಾಂಶ ಸಂರಕ್ಷಣೆಗೆ ಬೇಕಾದ ಸೈಬರ್ ಭದ್ರತಾ ನೀತಿಯನ್ನು ರೂಪಿಸುವುದು.
ಯಾರು ಯಾರು ಇದ್ದರು?

ವರ್ಚುವಲ್‌ ವೇದಿಕೆ ಮೂಲಕ ಐಟಿ ನೀತಿಯನ್ನು ಬಿಡುಗಡೆ ಮಾಡಿದ ಈ ಕಾರ್ಯಕ್ರಮದಲ್ಲಿ ರಾಜ್ಯ ಐಟಿ ವಿಷನ್‌ ಗ್ರೋಪ್‌ ಚೇರ್ಮನ್‌ ಕ್ರಿಸ್‌ ಗೋಪಾಲಕೃಷ್ಣನ್‌, ಐಟಿ ಮೂಲಸೌಕರ್ಯ ಕಾರ್ಯಪಡೆ ಮುಖ್ಯಸ್ಥ ಬಿ.ವಿ.ನಾಯ್ಡು, ಎಸ್‌ಟಿಪಿಐ ನಿರ್ದೇಶಕ ಶೈಲೇಂದ್ರ ತ್ಯಾಗಿ ಭಾಗವಹಿಸಿ ಮಾತನಾಡಿದರು. ಐಟಿ-ಬಿಟಿ ಇಲಾಖೆಯ ನಿರ್ದೇಶಕಿ ಮೀನಾ ನಾಗರಾಜ್‌ ಉಪಸ್ಥಿತರಿದ್ದರು.

Tags: bengalorekarnatakakarnataka it policy2020-2025
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಆಕಾಶ ಬೀದಿಯಲ್ಲಿ ಭಾವೋದ್ವೇಗದ ಮೆರವಣಿಗೆ

ಆಕಾಶ ಬೀದಿಯಲ್ಲಿ ಭಾವೋದ್ವೇಗದ ಮೆರವಣಿಗೆ

Leave a Reply Cancel reply

Your email address will not be published. Required fields are marked *

Recommended

ಕೋಲಾರದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ಮಾಡಿ ಆದಷ್ಟು ಬೇಗ ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸುವ ಘೋಷಣೆ ಮಾಡಿದ ನೂತನ ಸಚಿವ ಸಿ.ಪಿ.ಯೋಗೇಶ್ವರ್

ಸೈನಿಕನಿಗಿಲ್ಲ ರಾಮನಗರದ ಉಸಾಬರಿ, ಸಿಗಲಿದೆಯಾ ಕೋಲಾರ ಜಿಲ್ಲೆ ಉಸ್ತುವಾರಿ? ಸಿ.ಪಿ.ಯೋಗೀಶ್ವರ್‌ ಅವರನ್ನು ಮೆಲ್ಲಗೆ ರಾಮನಗರದಿಂದ ಹೊರಗಿಡಲಾಗುತ್ತಿದೆಯಾ?

6 years ago
ನಾನೇ ಒರಿಜಿನಲ್‌ ಎಂದಿದ್ದ ಸಿ.ಎಂ.ಇಬ್ರಾಹಿಂ ಅವರಿಗೆ ಅಡ್ರೆಸ್‌ ಇಲ್ಲದಂತೆ ಮಾಡಿದ ಜೆಡಿಎಸ್!

ನಾನೇ ಒರಿಜಿನಲ್‌ ಎಂದಿದ್ದ ಸಿ.ಎಂ.ಇಬ್ರಾಹಿಂ ಅವರಿಗೆ ಅಡ್ರೆಸ್‌ ಇಲ್ಲದಂತೆ ಮಾಡಿದ ಜೆಡಿಎಸ್!

3 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ