• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ವಿಸ್ತರಣೆ ಅಥವಾ ಪುನಾರಚನೆ; ಚಿಕ್ಕಬಳ್ಳಾಪುರ, ಕೋಲಾರದ ಮೇಲೆ ಇರುತ್ತಾ ಸಂಪುಟ ಪ್ರಭಾವ

cknewsnow desk by cknewsnow desk
September 10, 2021
in CHIKKABALLAPUR, KOLAR, STATE
Reading Time: 1 min read
0
ತೆರಿಗೆ ಸಂಗ್ರಹದ ಲೆಕ್ಕ ಪರಿಶೀಲನೆ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ: ಪೆಟ್ರೋಲ್,  ಡೀಸೆಲ್‌ನಿಂದ 15,861 ಕೋಟಿ ರೂ. ಟ್ಯಾಕ್ಸ್‌ ಕಲೆಕ್ಷನ್‌
927
VIEWS
FacebookTwitterWhatsuplinkedinEmail

ಬೆಂಗಳೂರು: ಸಂಪುಟ ವಿಸ್ತರಣೆ ಅಥವಾ ಪುನಾರಚನೆಯ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಲೆ ಕೆಡಿಸಿಕೊಂಡಿರುವುದು ಒಂದೆಡೆಯಾದರೆ, ಇನ್ನೊಂದೆಡೆ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಮೇಲೆ ಬೀರುವ ರಾಜಕೀಯ ಪ್ರಭಾವದ ಬಗ್ಗೆ ವ್ಯಾಪಕ ಚರ್ಚೆ ಆರಂಭವಾಗಿದೆ.

ಬಿಜೆಪಿಯಲ್ಲಿ ಮೂಲ ನಿವಾಸಿಗಳು ಹಾಗೂ ವಲಸಿಗರು ಎಂಬ ಎರಡು ಬಣಗಳಾಗಿರುವ ಬೆನ್ನಲ್ಲೇ ವಿಸ್ತರಣೆ ಅಥವಾ ಪುನಾರಚನೆಯಲ್ಲಿ ತಮಗೇನಾದರೂ ಹೊಡೆತ ಬೀಳಬಹುದಾ? ಬಿದ್ದರೆ ಬೆಂಗಳೂರು ಪಕ್ಕದಲ್ಲೇ ಇರುವ ಎರಡೂ ಜಿಲ್ಲೆಗಳಿಗೆ ಬಿಸಿ ತಟ್ಟಲಿದೆಯಾ ಎಂಬುದುದು ಕಾಂಗ್ರೆಸ್‌, ಜೆಡಿಎಸ್‌ನಲ್ಲಷ್ಟೇ ಅಲ್ಲ, ಬಿಜೆಪಿಯಲ್ಲೇ ಕಾವೇರುವಂತೆ ಚರ್ಚೆಯಾಗುತ್ತಿದೆ.

ಆಪರೇಷನ್‌ ಕಮಲದ ಸೆಳೆತಕ್ಕೆ ಸಿಕ್ಕಿ ಬಿಜೆಪಿ ಸೇರಿದ್ದ ಚಿಕ್ಕಬಳ್ಳಾಪುರದ ಡಾ.ಕೆ.ಸುಧಾಕರ್‌ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದು ಅಬಕಾರಿ ಮಂತ್ರಿಯಾಗಿರುವ ಮುಳಬಾಗಿಲಿನ ಎಚ್.ನಾಗೇಶ್‌ ಅವರಿಬ್ಬರೂ ಯಡಿಯೂರಪ್ಪ ಸಂಪುಟದಲ್ಲಿದ್ದು, ವಿಸ್ತರಣೆ ಅಥವಾ ಪುನಾರಚನೆ ವೇಳೆ ಇವರಿಗೇನಾದರೂ ಸಮಸ್ಯೆ ಆಗಬಹುದೇ ಎಂಬುದು ಈಗ ಹುಟ್ಟಿಕೊಂಡಿರುವ ದೊಡ್ಡ ಪ್ರಶ್ನೆ.

ನಾಗೇಶ್‌ ಅವರು, ಈ ಹಿಂದೆ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್‌ ಸಮ್ಮಿಶ್ರ ಸರಕಾರದಲ್ಲಿ ಸಣ್ಣ ಕೈಗಾರಿಕೆ ಮಂತ್ರಿಯಾಗಿದ್ದರು. ಆಮೇಲೆ ಬಿಜೆಪಿಗೆ ಬೆಂಬಲ ನೀಡಿ ಇದೀಗ ಯಡಿಯೂರಪ್ಪ ಸಂಪುಟದಲ್ಲೂ ಸಚಿವರಾಗಿದ್ದು, ಪ್ರಬಲವಾದ ಅಬಕಾರಿ ಖಾತೆ ಹೊಂದಿದ್ದಾರೆ. ಈ ಖಾತೆಯ ಮೇಲೆ ಬೆಳಗಾವಿ ನಾಯಕರೊಬ್ಬರು ಕಣ್ಣು ಹಾಕಿದ್ದಾರೆನ್ನಲಾಗಿದೆ.

ನಾಗೇಶ್‌ ವಿರುದ್ಧ ದೂರು

ಖಚಿತ ಮಾಹಿತಿಯ ಪ್ರಕಾರ ನಾಗೇಶ್‌ ವಿರುದ್ಧ ಕೋಲಾರ ಜಿಲ್ಲೆಯ ಬಿಜೆಪಿ ನಾಯಕರೇ ವರಿಷ್ಠರಿಗೆ ದೂರು ನೀಡಿದ್ದಾರೆ. ಅಲ್ಲದೆ, ರಾಜ್ಯ ನಾಯಕರಿಗೆ; ಅದರಲ್ಲೂ ಸಂಘ ಪರಿವಾರ ಮುಖಂಡರಿಗೆ ಆಪ್ತರಾಗಿರುವ ಕೋಲಾರದ ಸಂಸದ ಮುನಿಸ್ವಾಮಿ ಮತ್ತು ನಾಗೇಶ್‌ ನಡುವಿನ ತಿಕ್ಕಾಟ ಜಿಲ್ಲೆಯಲ್ಲಿ ಹಾದಿಬೀದಿ ರಂಪವಾಗಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಬಿಸಿ ಮುಟ್ಟಿಸಲು ಪಕ್ಷದ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ನಿರ್ಧರಿಸಿದ್ದಾರೆಂದು, ಹೀಗಾಗಿ ಅವರ ಅಬಕಾರಿ ಖಾತೆ ಬದಲಾಗಬಹುದು ಎಂಬ ಮಾಹಿತಿ ಸಿಕ್ಕಿದೆ. ಆದರೆ, ಸಂಪುಟದಿಂದ ಅವರನ್ನು ಕೈಬಿಡುವ ಸಾಧ್ಯತೆ ತೀರಾ ಕಡಿಮೆ. ಏಕೆಂದರೆ, ಬಿಜೆಪಿ ಸರಕಾರ ರಚನೆಗೆ ಅವರೂ ಕಾರಣರು.

ಡಾ.ಸುಧಾಕರ್‌ ಬಗ್ಗೆ ಮೆಚ್ಚುಗೆ

ಇನ್ನು ಚಿಕ್ಕಬಳ್ಳಾಪುರದ ಡಾ.ಸುಧಾಕರ್‌ ಕೂಡ ಸಂಪುಟದಲ್ಲಿ ಪ್ರಬಲ ಖಾತೆಗಳನ್ನೇ ಹೊಂದಿದ್ದಾರೆ. ಅವರಿಗೆ ಮೊದಲೇ ನೀಡಲಾಗಿದ್ದ ವೈದ್ಯಕೀಯ ಶಿಕ್ಷಣ ಖಾತೆಯ ಜತೆಗೆ ಶ್ರೀರಾಮುಲು ಅವರ ಬಳಿ ಇದ್ದ ಆರೋಗ್ಯ ಖಾತೆಯನ್ನು ಕಿತ್ತುಕೊಟ್ಟಿರುವುದರ ಹಿಂದೆ ಕೆಲಸ ಮಾಡಿರುವ ಕಾಣದ ಕೈಗಳ ಬಗ್ಗೆ ಈಗಾಗಲೇ ವರಿಷ್ಠರಿಗೆ ಮಾಹಿತಿ ಹೋಗಿದೆ. ಆದರೆ, ಕೋವಿಡ್‌ ನಿರ್ವಹಣೆಯಲ್ಲಿ ಕೇಂದ್ರ ಆರೋಗ್ಯ ಸಚಿವರೇ ಸುಧಾಕರ್‌ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅದರಲ್ಲೂ ರಾಜ್ಯದಲ್ಲಿ ಕೆಲವರು ಸುಧಾಕರ್‌ ಅತಿಯಾದ ಕ್ರಿಯಾಶೀಲತೆಯ ಬಗ್ಗೆ ಒಳಗೊಳಗೇ ಚಡಿಪಡಿಸುತ್ತಿದ್ದರೂ ಅವರ ಖಾತೆಗಳ ಮೇಲಾಗಲಿ ಅಥವಾ ಅವರ ಮೇಲಾಗಲಿ ವಿಸ್ತರಣೆ ಅಥವಾ ಪುನಾರಚನೆಯ ಪ್ರಭಾವ ಬೀರುವ ಸಾಧ್ಯತೆ ಇಲ್ಲ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಹೇಳುವ ಮಾತು.

ಆದಾಗ್ಯೂ, ಈಗಿರುವ ಸಂಪುಟದಲ್ಲಿ ಆಮೂಲಾಗ್ರ ಬದಲಾವಣೆ, ಇಲ್ಲವೇ ಪುನಾರಚನೆ ಮಾಡಬೇಕು ಎಂದು ಕೆಲ ಶಕ್ತಿಶಾʻಲಿ ಮೂಲ ನಿವಾಸಿಗಳು ಪಟ್ಟು ಹಿಡಿದಿದ್ದು, ಈ ಕೂಗಿಗೇನಾದರೂ ವರಿಷ್ಠರು ಸೊಪ್ಪು ಹಾಕಿದರೆ ಚಿಕ್ಕಬಳ್ಳಾಪುರ ಮತ್ತು ಕೋಲಾರದ ಮೇಲೆಯೂ ಕೊಂಚ ಪ್ರಭಾವ ಇರಬಹುದು ಎಂದು ಅವರು ಹೇಳಿದ್ದಾರೆ.

Tags: chikkaballapurdr k sudhakarkolar
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಶಬರಿಮಲೆ; ನಿರ್ಬಂಧದ ನಡುವೆಯೂ ಸ್ವಾಮಿ ಅಯ್ಯಪ್ಪರನ್ನು ಕಣ್ತುಂಬಿಕೊಂಡ ಭಕ್ತರು

ಶಬರಿಮಲೆ; ನಿರ್ಬಂಧದ ನಡುವೆಯೂ ಸ್ವಾಮಿ ಅಯ್ಯಪ್ಪರನ್ನು ಕಣ್ತುಂಬಿಕೊಂಡ ಭಕ್ತರು

Leave a Reply Cancel reply

Your email address will not be published. Required fields are marked *

Recommended

ನಾಯಿ ಬೊಗಳಿದರೆ ಆನೆ ತಲೆ ಕೆಡಿಸಿಕೊಳ್ಳಲ್ಲ; ಸಿದ್ದರಾಮಯ್ಯ ಅವರದ್ದು ಯಾವ ಪಕ್ಷ? ʼಎಸ್ಎಫ್ʼ ಪಕ್ಷವೇ?

“ಕಲ್ಲು ಬಂಡೆಗಳನ್ನೇ ನುಂಗಿ ಜೀರ್ಣ ಮಾಡಿಕೊಂಡವರಿಗೆ ನನ್ನ ಟೀಕೆಗಳನ್ನು ಜೀರ್ಣ ಮಾಡಿಕೊಳ್ಳುವುದು ಕಷ್ಟವೇ?”

4 years ago
ಸ್ವಿಮ್ಮಿಂಗ್‌ ಮಾಡಲು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇಗೆ ಬನ್ನಿ

ಸ್ವಿಮ್ಮಿಂಗ್‌ ಮಾಡಲು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇಗೆ ಬನ್ನಿ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ