Lead Photo by Polina Tankilevitch from Pexels
ಬೆಳಗಾವಿ: ಕೊರೊನಾ ಲಸಿಕೆ ಇನ್ನೂ ಬಿಡುಗಡೆ ಆಗಿಲ್ಲ, ಅಧಿಕೃತ ಆದ ಮೇಲೆ ಎಲ್ಲರಿಗೂ ಮಾಹಿತಿ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.
ಶನಿವಾರ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಕ್ಲಿನಿಕಲ್ ಟ್ರಯಲ್ ನಡೆಸಿರುವ ಕಂಪನಿಗಳ ಜತೆ ಸಮಾಲೋಚನೆ ನಡೆಸಿದ್ದಾರೆ. ಅಡ್ವಾನ್ಸ್ ಆಗಿ ಮೂರನೇ ಹಂತ ತಲುಪಿದ ಕಂಪನಿ ಜತೆ ಕೇಂದ್ರವು ಸಮಾಲೋಚನೆ ನಡೆಸಿದ್ದು, ಅದೇ ರೀತಿಯ ಕಂಪನಿಗಳ ಜತೆ ಕೇಂದ್ರವು ಒಡಂಬಡಿಕೆ ಮಾಡಿಕೊಂಡಿದೆ. ಯಾವ ಕಂಪನಿಗೆ ವಿಶ್ವ ಆರೋಗ್ಯ ಸಂಸ್ಥೆಯ ಲಸಿಕೆ ʼಅಧಿಕೃತʼ ಎಂದು ಘೋಷಣೆ ಮಾಡುತ್ತದೆಯೋ ಆ ಲಸಿಕೆ ಬೇಗ ದೊರೆಯುವ ಸಾಧ್ಯತೆ ಇದೆ ಇದೆ ಎಂದರು.
ಇನ್ನು ಕಾಲೇಜು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ತಗುಲಿದೆ ಎಂದು ಹೇಳಲಾಗುತ್ತಿದೆ. ಈವರೆಗೆ ಎಷ್ಟು ವಿದ್ಯಾರ್ಥಿಗಳಿಗೆ ಕೊರೊನಾ ಬಂದಿದೆ ನಿಖರ ಮಾಹಿತಿ ಇಲ್ಲ, ಉನ್ನತ ಶಿಕ್ಷಣ ಸಚಿವರ ಜತೆ ಮಾತನಾಡಿ ಮಾಹಿತಿ ಪಡೆಯುತ್ತೇನೆ. ಲಸಿಕೆ ಬಂದರೆ ಅದರ ಸಂಗ್ರಹಕ್ಕೆ ಎಲ್ಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಕೇಂದ್ರ ಆರೋಗ್ಯ ಸಚಿವರ ಜೊತೆ ವಿಡಿಯೋ ಸಂವಾದವೂ ಆಗಿದೆ, ಕೊರೊನಾ ಲಸಿಕೆ ಬಂದ್ಮೇಲೆ ವಿತರಣೆ ನಿಧಾನ ಆಗಬಾರದಂತೆ ಸಕಲ ವ್ಯವಸ್ಥೆ ಮಾಡಿಕಡಿದ್ದೇವೆ. ಎಲ್ಲಾ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಲಸಿಕೆ ವಿತರಿಸುವ ವ್ಯವಸ್ಥೆ ಆಗಿದೆ. ಭಾರತದಲ್ಲಿ ದೊಡ್ಡ ಮಟ್ಟಿಗೆ ಲಸಿಕೆ ಸಿಗುವ ನಿರೀಕ್ಷೆ ಇದೆ. ಪ್ರತಿಯೊಬ್ಬರಿಗೂ ಲಸಿಕೆಯನ್ನು ತಲುಪಿಸುವ ಕೆಲಸವನ್ನು ಮಾಡಲಾಗುವುದು ಎಂದು ಡಾ.ಸುಧಾಕರ್ ಮಾಹಿತಿ ನೀಡಿದರು.
ಇನ್ನು ಆರೋಗ್ಯ ಇಲಾಖೆಯಲ್ಲಿ ಅನೇಕ ಸುಧಾರಣೆ ನಡೆಯುತ್ತಿವೆ. ಅಂತಾರಾಷ್ಟ್ರೀಯ ಗುಣಮಟ್ಟದ 108 ಆ್ಯಂಬುಲೆನ್ಸ್ ಸರ್ವೀಸ್‌ಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.