• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಕೋವಿಡ್‌ ಎರಡನೇ ಅಲೆ ನಿರ್ಬಂಧಗಳ ಬಗ್ಗೆ ಶುಕ್ರವಾರ ಚರ್ಚೆ; ಹೊಸ ವರ್ಷ ಸಂಭ್ರಾಚರಣೆ ಅಗತ್ಯವಿಲ್ಲ ಎಂದ ಡಾಕ್ಟರ್

cknewsnow desk by cknewsnow desk
December 3, 2020
in COVID-19, STATE
Reading Time: 1 min read
0
ಚಿಕ್ಕಬಳ್ಳಾಪುರಕ್ಕೆ ಚೀಯರ್ಸ್ ;‌ ಡಾ.ಸುಧಾಕರ್ʼಗೆ ವೈದ್ಯಶಿಕ್ಷಣ ಜತೆಗೆ ಆರೋಗ್ಯ ಖಾತೆ
913
VIEWS
FacebookTwitterWhatsuplinkedinEmail

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ನ ಎರಡನೇ ಅಲೆ ಕಾಣಿಸಿಕೊಳ್ಳಲಿದೆ ಎಂಬ ವರದಿ ಕುರಿತಂತೆ ತಜ್ಞರು ಮತ್ತು ಅಧಿಕಾರಿಗಳ ಜತೆ ಸಭೆ ನಡೆಸಿ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ.

ತಜ್ಞರು ನೀಡಿರುವ ವರದಿ ಇನ್ನೂ ಕೈಸೇರಿಲ್ಲ, ಅದು ಅಧಿಕಾರಿಗಳ ಮಟ್ಟದಲ್ಲಿದೆ. ಆ ವರದಿ ಮತ್ತು ಮುಂದೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ತಾಂತ್ರಿಕ ಸಮಿತಿ ತಜ್ಞರು ಮತ್ತು ಹಿರಿಯ ಅಧಿಕಾರಿಗಳ ಜತೆ ಶುಕ್ರವಾರ ಸಭೆ ನಡೆಸಲಾಗುವುದು. ಸಭೆ ತೀರ್ಮಾನಗಳ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವ ಸಹೋದ್ಯೋಗಿಗಳ ಜತೆ ಸಮಾಲೋಚಿಸಿ ಅಂತಿಮ ನಿರ್ಧಾರವನ್ನು ಪ್ರಕಟಿಸಲಾಗುವುದು ಎಂದು ಸುದ್ದಿಗಾರರಿಗೆ ಗುರುವಾರ ತಿಳಿಸಿದರು.

ಕೋವಿಡ್‌ನ ಎರಡನೇ ಅಲೆ ಪರಿಣಾಮಕಾರಿಯಾಗಿರುತ್ತದೆ ಎಂದು ವೈಯಕ್ತಿಕವಾಗಿ ತಮಗೆ ಅನ್ನಿಸುತ್ತಿಲ್ಲ. ಆದರೂ ತಜ್ಞರು ನಡೆಸಿರುವ ಅಧ್ಯಯನ ವರದಿಯಲ್ಲಿ ಏನಿದೆ ಎಂಬುದನ್ನು ಪರಶೀಲಿಸಬೇಕಿದೆ. ಯಾವ ಮಟ್ಟದ ಪರಿಣಾಮ? ಯಾವ್ಯಾವ ಪ್ರದೇಶಗಳಲ್ಲಿ ಹೇಗಿರುತ್ತದೆ? ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕು? ಈ ಎಲ್ಲಾ ವಿಷಯಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಎಚ್ಚರಿಕೆಯ ಹೆಜ್ಜೆ ಇರಿಸಲಾಗುವುದು ಎಂದರು.

ಕೋವಿಡ್‌ ನಿಯಂತ್ರಣಕ್ಕೆ ಲಾಕ್‌ಡೌನ್‌ ಶಾಶ್ವತ ಪರಿಹಾರ ಅಲ್ಲ. ʼಸಾಮಾಜಿಕ ಲಸಿಕೆʼ ಎಂದೇ ಹೇಳಲಾಗಿರುವ ಮಾಸ್ಕ್‌, ಸಾಮಾಜಿಕ ಅಂತರ ಮತ್ತು ಶುಚಿತ್ವ ಲಸಿಕೆಗಿಂತಲೂ ಹೆಚ್ಚು ಪರಿಣಾಮಕಾರಿ ಎಂಬುದನ್ನು ತಜ್ಞರೇ ಹೇಳಿದ್ದಾರೆ. ಇತರೆ ರಾಷ್ಟ್ರಗಳ ಸ್ಥಿತಿಗತಿಗಳನ್ನೂ ಗಮನಿಸಲಾಗುತ್ತಿದೆ.

ಯೂರೋಪ್‌ನಲ್ಲಿ ಲಾಕ್‌ಡೌನ್‌ ಮಾಡಿದ್ದರೂ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ ಸರ್ಕಾರದ ಸೂಚನೆಗಳನ್ನು ಜನರು ದೈನಂದಿನ ಜೀವನದಲ್ಲಿ ಅಳವಡಿಸಿಕೊಂಡರೆ ಅದಕ್ಕಿಂತ ಬೇರೆ ಲಸಿಕೆ ಅಗತ್ಯವಿಲ್ಲ. ಇದನ್ನು ಜನರು ಅರ್ಥ ಮಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದು ವಿವರಿಸಿದರು.

ಸಂಭ್ರಮಾಚರಣೆ ಅಗತ್ಯ ಏನಿದೆ?

ಹೊಸ ವರ್ಷ ಮತ್ತು ಕ್ರಿಸ್ಮಸ್‌ ಹಿನ್ನೆಲೆಯಲ್ಲಿ ಬಿಗಿ ಕ್ರಮ ಜಾರಿಗೊಳಿಸುವ ಬಗ್ಗೆಯೂ ತಜ್ಞರ ಜತೆ ಚರ್ಚಿಸಲಾಗುವುದು. ಇದು ಭಾರತೀಯ ಕ್ಯಾಲೆಂಡರ್‌ನ ಹೊಸ ವರ್ಷ ಅಲ್ಲ. ಯುಗಾದಿ ನಮ್ಮ ಹೊಸ ವರ್ಷ. ಎಲ್ಲಕ್ಕಿಂತ ಮಿಗಿಲಾಗಿ ಕೋವಿಡ್‌ನ ಸಂಕಷ್ಟ ಸ್ಥಿತಿಯಲ್ಲಿ ಸಂಭ್ರಮಾಚರಣೆ ಅಗತ್ಯವಾದರೂ ಏನಿದೆ? ನೂರಾರು ಜನರನ್ನು ಕಳೆದುಕೊಂಡಿದ್ದೇವೆ. ಆರ್ಥಿಕ ಸ್ಥಿತಿ ಡೋಲಾಯಮಾನವಾಗಿದೆ, ನೂರಾರು ಜನ ಉದ್ಯೋಗಗಳನ್ನು ಕಳೆದುಕೊಂಡಿದ್ದಾರೆ, ಇನ್ನೂ ಪರಿಸ್ಥಿತಿ ಸುಧಾರಣೆ ಆಗಿಲ್ಲ, ಇಂಥ ಸನ್ನಿವೇಶದಲ್ಲಿ ಸಂಭ್ರಮದ ಅಗತ್ಯವಾದರು ಏಕೆ ಬೇಕು ಹೇಳಿ ಎಂದು ಪ್ರಶ್ನಿಸಿದರು.

ನಿರ್ಬಂಧಗಳ ಪ್ರಶ್ನೆಗೆ ಉತ್ತರಿಸಿ,ʼಸಣ್ಣ ಪ್ರದೇಶದಲ್ಲಿ ಹೆಚ್ಚು ಜನ ಸೇರುವುದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಆಗುವುದಿಲ್ಲ. ಜತೆಗೆ ಜನವರಿಯಲ್ಲಿ ಎರಡನೇ ಅಲೆ ಕಾಣಿಸಿಕೊಳ್ಳುವ ಬಗ್ಗೆ ತಜ್ಞರು ಏನು ಹೇಳುತ್ತಾರೋ ಗೊತ್ತಿಲ್ಲ. ಹೀಗಾಗಿ ಎಲ್ಲಾ ವಿಷಯಗಳನ್ನು ಅವಲೋಕಿಸಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹೊಸವರ್ಷ ಮತ್ತು ಕ್ರಿಸ್ಮಸ್‌ ಸಂದರ್ಭದಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚಿಸಲಾಗುತ್ತದೆ. ಕೆಲ ನಿರ್ಬಂಧಗಳ ಅವಶ್ಯಕತೆ ಇದೆ. ಆ ಬಗ್ಗೆ ಸಿಎಂ ಜತೆ ಚರ್ಚಿಸಿ ಪ್ರಕಟಿಸಲಾಗುವುದು. ಆದರೆ ಕರ್ಫ್ಯೂ ಜಾರಿ ಅಗತ್ಯ ಇದೆ ಅನ್ನಿಸುತ್ತಿಲ್ಲ. ಆದರೂ ತಜ್ಞರ ಜತೆ ಚರ್ಚಿಸಿದ ಬಳಿಕವಷ್ಟೇ ಈ ಕುರಿತು ನಿರ್ಧರಿಸಲಾಗುವುದು ಎಂದರು.

ವಾರದೊಳಗೆ ವೇತನ

ಇದೇ ಮೊದಲ ಸಲ ಕಡ್ಡಾಯ ಸೇವೆಗಾಗಿ ರಾಜ್ಯಾದ್ಯಂತ ರೆಸಿಡೆಂಟ್‌ ಡಾಕ್ಟರ್‌ಗಳನ್ನು ನಿಯೋಜಿಸಲಾಗಿದ್ದು ಅವರಿಗೆ ವೇತನ ಬಿಡುಗಡೆ ಆಗಿಲ್ಲ ಎಂಬ ಸಂಗತಿ ಗಮನಕ್ಕೆ ಬಂದಿದೆ. ತಾಂತ್ರಿಕ ಕಾರಣಗಳಿಂದ ತಡವಾಗಿದೆ. ವಾರದೊಳಗಾಗಿ ವೇತನ ಬಿಡುಗಡೆ ಆಗಲಿದೆ. ಅಲ್ಲಿಯವರೆಗೆ ಆಯಾ ಕಾಲೇಜುಗಳ ಆಡಳಿತ ಮಂಡಳಿ ಅವರಿಗೆ ವೇತನ ನೀಡಲು ಸೂಚಿಸಲಾಗಿದೆ. ಹಣಕಾಸು ಇಲಾಖೆ ಜತೆ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರು ಈ ವಿಷಯದ ಬಗ್ಗೆ ಚರ್ಚಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಸಿದ್ಧತೆ ಪೂರ್ಣ

ವ್ಯಾಕ್ಸಿನ್‌ ವಿತರಣೆ ಮತ್ತು ದಾಸ್ತಾನು ಸಂಬಂಧ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಶೈತ್ಯಾಗಾರ, ವಿತರಣಾ ಸಿಬ್ಬಂದಿ ಸಹಿತ ಎಲ್ಲಾ ವಿಷಯಗಳ ಬಗ್ಗೆ ಅನೇಕ ಸುತ್ತುಗಳ ಸಮಾಲೋಚನೆ ಪೂರ್ಣಗೊಳಿಸಿದ್ದೇವೆ. ಹಿಂದೆ ಅನೇಕ ಸಲ ವ್ಯಾಕ್ಸಿನ್‌ ಬಳಕೆ ಮಾಡಿರುವ ಅನುಭವ ಇದೆ. ಕೋವಿಡ್‌ ಬರುವ ಮೊದಲಿಗಿಂತ ಈಗ ಮೂಲಸೌಕರ್ಯದಲ್ಲಿ ಸಾಕಷ್ಟು ಸುಧಾರಣೆ ಮಾಡಿಕೊಳ್ಳಲಾಗಿದೆ. ಅಂತಿಮವಾಗಿ ಯಾವ ವ್ಯಾಕ್ಸಿನ್? ಎಷ್ಟು ಪ್ರಮಾಣದಲ್ಲಿ ನೀಡಬೇಕು? ಯಾರಿಗೆ ನೀಡಬೇಕು ಎಂಬ ವಿಷಯಗಳು ಇತ್ಯರ್ಥ ಆದ ಬೆನ್ನಲ್ಲೇ ವ್ಯಾಕ್ಸಿನ್‌ ವಿತರಣೆ ವ್ಯವಸ್ಥಿತವಾಗಿ ನಡೆಯಲಿದೆ ಎಂದರು.

Tags: christmascovid19karnatakanew year
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ದ್ರಾವಿಡ ಪಾಲಿಟಿಕ್ಸ್‌ಗೆ ಟ್ವಿಸ್ಟ್;‌ ಬಿಜೆಪಿ ಜತೆ ಸೇರುತ್ತಾರೆಂದು ಊಹಿಸಿದ ಹೊತ್ತಿನಲ್ಲಿಯೇ ಹೊಸಪಕ್ಷ ಎಂದ ಸೂಪರ್‌ಸ್ಟಾರ್!!

ದ್ರಾವಿಡ ಪಾಲಿಟಿಕ್ಸ್‌ಗೆ ಟ್ವಿಸ್ಟ್;‌ ಬಿಜೆಪಿ ಜತೆ ಸೇರುತ್ತಾರೆಂದು ಊಹಿಸಿದ ಹೊತ್ತಿನಲ್ಲಿಯೇ ಹೊಸಪಕ್ಷ ಎಂದ ಸೂಪರ್‌ಸ್ಟಾರ್!!

Leave a Reply Cancel reply

Your email address will not be published. Required fields are marked *

Recommended

ವೆಂಟಿಲೇಟರ್‌ ಮೇಲೆ ನಿಸ್ತೇಜವಾಗಿ ಮಲಗಿದ್ದ ಸಂಚಾರಿ ವಿಜಯ್‌ ತಲೆ ಸವರಿ ಬಿಕ್ಕಳಿಸಿದ ಜಗ್ಗೇಶ್‌ I ಬಿಕ್ಕಿಬಿಕ್ಕಿ ಅತ್ತ ನೀನಾಸಂ I   ಗದ್ಗದಿತರಾದ ಡಿಸಿಎಂ

ವೆಂಟಿಲೇಟರ್‌ ಮೇಲೆ ನಿಸ್ತೇಜವಾಗಿ ಮಲಗಿದ್ದ ಸಂಚಾರಿ ವಿಜಯ್‌ ತಲೆ ಸವರಿ ಬಿಕ್ಕಳಿಸಿದ ಜಗ್ಗೇಶ್‌ I ಬಿಕ್ಕಿಬಿಕ್ಕಿ ಅತ್ತ ನೀನಾಸಂ I ಗದ್ಗದಿತರಾದ ಡಿಸಿಎಂ

5 years ago
ಜಿಲ್ಲಾ ಉಸ್ತುವಾರಿ ಸಚಿವ ಡಾ.ಸುಧಾಕರ್‌ ಹುಟ್ಟೂರು ಪೆರೇಸಂದ್ರಕ್ಕೆ ಕೂಗಳತೆ ದೂರದ ಬಿಜೆಪಿ ಲೀಡರ್‌ ಮಾಲೀಕತ್ವದ ಕ್ರಷರ್‌ನಲ್ಲಿ ಭಾರೀ ಸ್ಫೋಟ; 6 ಜನ ಬಲಿ, ದೇಹಗಳು ಛಿದ್ರ

ಸ್ಫೋಟದ ಆರೋಪಿಗಳನ್ನು ರಕ್ಷಿಸುತ್ತಿಲ್ಲ, ಅನಾಹುತದಲ್ಲಿ ರಾಜಕಾರಣ ಸರಿಯಲ್ಲ; ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಕ್ರಮಕ್ಕೆ ಅವಕಾಶವೇ ಇಲ್ಲ: ಸಚಿವ ಡಾ.ಸುಧಾಕರ್‌

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ