• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

ಡಿಪ್ಲೊಮೋ ಪಠ್ಯಕ್ಕೆ ಟ್ರೀಟ್‌ಮೆಂಟ್; 40,000 ವಿದ್ಯಾರ್ಥಿಗಳು ಪಾಸಾದರೆ, ಕೇವಲ 20% ಅಭ್ಯರ್ಥಿಗಳಿಗೂ ಕೆಲಸ ಸಿಗುತ್ತಿಲ್ಲ!

cknewsnow desk by cknewsnow desk
December 4, 2020
in NEWS IN USE, STATE
Reading Time: 1 min read
0
ಡಿಪ್ಲೊಮೋ ಪಠ್ಯಕ್ಕೆ ಟ್ರೀಟ್‌ಮೆಂಟ್; 40,000 ವಿದ್ಯಾರ್ಥಿಗಳು ಪಾಸಾದರೆ, ಕೇವಲ 20% ಅಭ್ಯರ್ಥಿಗಳಿಗೂ ಕೆಲಸ ಸಿಗುತ್ತಿಲ್ಲ!
914
VIEWS
FacebookTwitterWhatsuplinkedinEmail

ಇನ್ನು ಮುಂದೆ ಉದ್ಯೋಗ ಮಾರುಕಟ್ಟೆ ಡಿಮಾಂಡ್‌ಗೆ ತಕ್ಕಂತೆ ಇರಲಿದೆ ಡಿಪ್ಲೊಮೋ ಪಠ್ಯ

ಬೆಂಗಳೂರು: ಉದ್ಯೋಗ ಮಾರುಕಟ್ಟೆಗೆ ಅನುಗುಣವಾಗಿ ಡಿಪ್ಲೊಮೋ ಪಠ್ಯವನ್ನು ಆಮೂಲಾಗ್ರವಾಗಿ ಬದಲಾವಣೆ ಆಗಲಿದೆ. ಹಲವು ವರ್ಷಗಳಿಂದ ನಿಂತ ನೀರಿನಂತಾಗಿದ್ದ ಈ ಸಿಲೆಬಸ್‌ಗೆ ಆಮೂಲಾಗ್ರ ಟ್ರೀಟ್‌ಮೆಂಟ್‌ ನೀಡಲು ಮುಂದಾಗಿರುವ ಸರಕಾರ, ವಿದ್ಯಾರ್ಥಿಗಳಿಗೆ ಉದ್ಯೋಗ ಭದ್ರತೆ ಸಿಗುವ ನಿಟ್ಟಿನಲ್ಲಿ ಹೆಜ್ಜೆ ಇರಿಸಿದೆ.

ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಈ ವಿಷಯವನ್ನು ತಿಳಿಸಿದ್ದು, ಬೆಂಗಳೂರಿನಲ್ಲಿ ಶುಕ್ರವಾರ ಶಿಕ್ಷಕ ಹಾಗೂ ಪದವೀಧರ ಕ್ಷೇತ್ರಗಳಿಗೆ ಸಂಬಂಧಿಸಿದ ವಿಧಾನಪರಿಷತ್‌ ಸದಸ್ಯರ ಜತೆ ಮಾತುಕತೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಸದ್ಯಕ್ಕೆ ಇರುವ ಡಿಪ್ಲೊಮೋ ಕೋರ್ಸುಗಳಿಂದ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶಗಳು ಸಿಗುತ್ತಿಲ್ಲ. ಪ್ರತೀ ವರ್ಷಕ್ಕೆ ರಾಜ್ಯದಲ್ಲಿ 40,000 ಅಂತಿಮ ವರ್ಷದ ವಿದ್ಯಾರ್ಥಿಗಳು ತೇರ್ಗಡೆಯಾಗುತ್ತಿದ್ದು, ಈ ಪೈಕಿ ಕೊನೆಪಕ್ಷ ಶೇ.20ರಷ್ಟು ವಿದ್ಯಾರ್ಥಿಗಳಿಗೂ ಉದ್ಯೋಗ ಸಿಗುತ್ತಿಲ್ಲ ಎಂದರು.

ಅದಕ್ಕೆ ಕಾರಣವಿಷ್ಟೇ; ಈಗಿರುವ ಡಿಪ್ಲೊಮೋ ಪಠ್ಯವೂ ಸಕಾಲಿಕವಾಗಿಲ್ಲ, ಇವತ್ತಿನ ಕೈಗಾರಿಕೆ ಅಗತ್ಯಗಳಿಗೆ ಅದು ಅಪ್ರಸ್ತುತವಾಗಿದೆ. ಈ ನಿಟ್ಟಿನಲ್ಲಿ ಕೈಗಾರಿಕೆಗಳಿಗೆ ಅಗತ್ಯ ಇರುವ, ಉದ್ಯೋಗ ಮಾರುಕಟ್ಟೆಯಲ್ಲಿ ಬೇಡಿಕೆ ಇರುವ ಹಾಗೂ ಸದಾಕಾಲ ಕೆಲಸಕ್ಕೆ ಅರ್ಹತೆ ಕಲ್ಪಿಸಬಲ್ಲ ಪಠ್ಯವನ್ನು ಸಂಬಂಧಪಟ್ಟ ಎಲ್ಲರ ಜತೆ ಚರ್ಚಿಸಿ ರೂಪಿಸಲಾಗುತ್ತಿದೆ ಎಂದು ಡಿಸಿಎಂ ಹೇಳಿದರು.

ಡಿಪ್ಲೊಮಾ ಕೋರ್ಸ್ʼನ ಪಠ್ಯವನ್ನು ಮರುಪರಿಷ್ಕಣೆ ಮಾಡುವ ಮೂಲಕ ನ್ಯಾಷನಲ್ ಕ್ವಾಲಿಫಿಕೇಶ್ ಬಗ್ಗೆ ಬದಲಾವಣೆ ಮಾಡಲಾಗಿದೆ. ಜತೆಗೆ, ರಾಷ್ಟ್ರೀಯ ಶಿಕ್ಷಣ ನೀತಿಯ ಆಶಯಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಪಠ್ಯವನ್ನು ಮರುರೂಪಿಸಲಾಗುತ್ತಿದೆ. ಇದಕ್ಕಾಗಿ ಹೆಚ್ಚುವರಿಯಾಗಿ ಯಾವುದೇ ರೀತಿಯ ಹಣಕಾಸಿನ ಹೊರೆ ಸರಕಾರದ ಮೇಲೆ ಬೀಳುತ್ತಿಲ್ಲ ಎಂದರು ಉಪ ಮುಖ್ಯಮಂತ್ರಿ.

ಪರಿಷತ್‌ ಸದಸ್ಯರಿಂದ ಸಲಹೆ

ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಈಗಾಗಲೇ ಅನೇಕ ಕ್ರಾಂತಿಕಾರಿ ಸುಧಾರಣೆಗಳನ್ನು ತರಲಾಗಿದೆ. ಆ ಬಗ್ಗೆ ಶಿಕ್ಷಕ ಮತ್ತು ಪದವೀಧರ ಕ್ಷೇತ್ರಗಳನ್ನು ಪ್ರತಿನಿಧಿಸುತ್ತಿರುವ ಕ್ಷೇತ್ರಗಳ ವಿಧಾನ ಪರಿಷತ್‌ ಸದಸ್ಯರಿಗೆ ಎಲ್ಲ ಮಾಹಿತಿ ನೀಡಲಾಗಿದೆ. ಮುಂದೆ ಕೈಗೊಳ್ಳಬಹುದಾದ ಸುಧಾರಣೆಗಳು, ನೂತನವಾಗಿ ಜಾರಿಗೆ ಬಂದಿರುವ ಕಲಿಕಾ ನಿರ್ವಹಣಾ ವ್ಯವಸ್ಥೆ (ಎಲ್‌ಎಂಎಸ್)‌ ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡುವ ನಿಟ್ಟಿನಲ್ಲಿ ಆಗುತ್ತಿರುವ ಪ್ರಗತಿಯ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಪರಿಷತ್‌ ಸದಸ್ಯರು ಅನೇಕ ಉಪಯುಕ್ತ ಸಲಹೆಗಳನ್ನು ನೀಡಿದ್ದಾರೆ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.

ಶಿಕ್ಷಣ ನೀತಿಗೆ ಪಕ್ಷಬೇಧವಿಲ್ಲದೆ ಬೆಂಬಲ

ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಸಭೆಯಲ್ಲಿದ್ದ ಎಲ್ಲ ಸದಸ್ಯರು ಪಕ್ಷಬೇಧವಿಲ್ಲದೆ ಬೆಂಬಲ ಸೂಚಿಸಿದ್ದಾರೆ. ಮೂರು ದಶಕಗಳಿಗೂ ಮಿಕ್ಕಿ ಹಳೆಯದಾದ, ಪ್ರಸಕ್ತ ಸಂದರ್ಭಕ್ಕೆ ಸೂಕ್ತವಲ್ಲದ ಶಿಕ್ಷಣ ನೀತಿಯಿಂದ ಯಾವುದೇ ಪ್ರಯೋಜವಿಲ್ಲ. ಹೊಸ ನೀತಿಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಶಕ್ತಿ ತುಂಬಬಲ್ಲ ಅಂಶಗಳಿವೆ ಎಂದು ಎಲ್ಲರೂ ಅಭಿಪ್ರಾಯಪಟ್ಟರು. ಇನ್ನು, ರಾಜ್ಯದಲ್ಲಿ ಈಗಾಗಲೇ ಉನ್ನತ ಶಿಕ್ಷಣ ಪರಿಷತ್ ಇದೆ. ಅದರ ಜತೆಗೆ, ಪ್ರಾಥಮಿಕ ಶಿಕ್ಷಣ ಪರಿಷತ್ ಸ್ಥಾಪನೆ ಮಾಡುವ ಸರಕಾರದ ಪ್ರಯತ್ನಕ್ಕೆ ಒಕ್ಕೊರಲ ಬೆಂಬಲ ಸೂಚಿಸಿದರು. ಶಿಕ್ಷಣ ಕ್ಷೇತ್ರಕ್ಕೆ ಪೂರಕವಾದ ಮೂರು ಹೊಸ ಕಾನೂನುಗಳನ್ನು ಜಾರಿಗೆ ತರಬೇಕಿದೆ ಹಾಗೂ ಶಿಕ್ಷಣ ನೀತಿ ಜಾರಿಗೊಳಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಆದಷ್ಟು ಬೇಗ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಡಿಸಿಎಂ ಮಾಹಿತಿ ನೀಡಿದರು.

ಎಲ್ಎಂಎಸ್ ವ್ಯವಸ್ಥೆ ಜಾರಿಗೆ

ಈಗಾಗಲೇ ನೂತನ ಕಲಿಕಾ ನಿರ್ವಹಣಾ ಪದ್ಧತಿಯನ್ನು ಜಾರಿ ಮಾಡಲಾಗಿದೆ. ತಂತ್ರಜ್ಞಾನದ ಮೂಲಕ ಸರಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುವ ಐದು ಲಕ್ಷ ವಿದ್ಯಾರ್ಥಿಗಳಿಗೆ ಈ ಯೋಜನೆಯಿಂದ ಅನುಕೂಲವಾಗುತ್ತದೆ. ಈಗಾಗಲೇ ರಾಜ್ಯದಲ್ಲಿರುವ ಒಟ್ಟು 8 ಸಾವಿರ ತರಗತಿ ಕೊಠಡಿಗಳನ್ನು ಸ್ಮಾರ್ಟ್‌ಕ್ಲಾಸ್‌ ರೂಮುಗಳನ್ನಾಗಿ ಪರಿವರ್ತಿಸಲಾಗುತ್ತಿದೆ. ಮೊದಲ ಹಂತದಲ್ಲಿ 2,500 ರೂಮುಗನ್ನು ಸ್ಮಾರ್ಟ್‌ಕ್ಲಾಸ್‌ಗಳನ್ನಾಗಿ ಪರಿವರ್ತಿಸಲಾಗುತ್ತಿದೆ. ಹೈಸ್ಪೀಡ್‌ ಇಂಟರ್‌ನೆಟ್, ಪವರ್ ಪಾಯಿಂಟ್ಸ್ ಪ್ರಜಂಟೇಶನ್, 2 ಕೆವಿ ಬ್ಯಾಕ್ ಅಪ್ ಬ್ಯಾಟರಿ ಸೌಲಭ್ಯಗಳನ್ನು ತರಗತಿಗಳಿಗೆ ಕಲ್ಪಸಿಲಾಗುವುದು. ಈ ಪರಿಕಲ್ಪನೆ ಬಗ್ಗೆ ಪರಿಷತ್‌ ಅತೀವ ಸಂತಸ ವ್ತಕ್ತಪಡಿಸಿದರು ಎಂದರು ಉಪ ಮುಖ್ಯಮಂತ್ರಿ.

ಸಭೆಯಲ್ಲಿ ಪರಿಷತ್‌ ಸದಸ್ಯರಾದ ಪುಟ್ಟಣ್ಣ, ಮರಿತಿಬ್ಬೇಗೌಡ, ವೈ.ಎ.ನಾರಾಯಣ ಸ್ವಾಮಿ, ಅ.ದೇವೇಗೌಡ, ಬೋಜೇಗೌಡ, ಚಿದಾನಂದ ಗೌಡ, ಅರುಣ್‌ ಶಹಾಪೂರ, ಸುಶೀಲ್‌ ನಮೋಶಿ, ತಾಂತ್ರಿಕ ಮತ್ತು ಉನ್ನತ ಶಿಕ್ಷಣ ಇಲಾಖೆಯ ಆಯುಕ್ತ ಪ್ರದೀಪ್‌, ಉನ್ನತ ಶಿಕ್ಷಣ ಪರಿಷತ್‌ ಉಪಾಧ್ಯಕ್ಷ ಪ್ರೊ.ತಿಮ್ಮೇಗೌಡ ಮುಂತಾದವರು ಪಾಲ್ಗೊಂಡಿದ್ದರು.

Lead Photo by Miguel Á. Padriñán from Pexels

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಚಿಕ್ಕಬಳ್ಳಾಪುರ, ಕೋಲಾರವನ್ನು ಭೂ ರಣಹದ್ದುಗಳಿಗಿಟ್ಟ ಬಿಜೆಪಿಯಿಂದ ಈಗ ಗ್ರಾಮ ಸ್ವರಾಜ್ಯದ ಭಜನೆ!

ಗ್ರೇಟರ್‌ ಹೈದರಾಬಾದ್ ಚುನಾವಣೆಯಲ್ಲಿ‌ ಐವತ್ತರ ಹತ್ತಿರಕ್ಕೆ ಬಂದು ನಿಂತ ಬಿಜೆಪಿಗೆ ಇದು ಜಸ್ಟ್‌ ಬಿಗಿನಿಂಗ್‌ ಮಾತ್ರವೇ!

Leave a Reply Cancel reply

Your email address will not be published. Required fields are marked *

Recommended

ಕುಮಾರಸ್ವಾಮಿ ಕೇಂದ್ರ ಮಂತ್ರಿ ಆಗುವ ವಿಚಾರ; ಮೋದಿ ಮನಸಿನಲ್ಲಿ ಏನಿದೆಯೋ ನನಗೆ ಗೊತ್ತಿಲ್ಲ ಎಂದರು ಹೆಚ್.ಡಿ.ದೇವೇಗೌಡರು

ಕುಮಾರಸ್ವಾಮಿ ಕೇಂದ್ರ ಮಂತ್ರಿ ಆಗುವ ವಿಚಾರ; ಮೋದಿ ಮನಸಿನಲ್ಲಿ ಏನಿದೆಯೋ ನನಗೆ ಗೊತ್ತಿಲ್ಲ ಎಂದರು ಹೆಚ್.ಡಿ.ದೇವೇಗೌಡರು

2 years ago
ಚಿಕ್ಕಬಳ್ಳಾಪುರದಲ್ಲಿ ಶನಿವಾರ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಸತ್ಸಂಗ ಮತ್ತು ಸದ್ವಿಚಾರಗಳ ಶ್ರಾವಣ

ಒಕ್ಕಲಿಗರಿಗೆ ಹೆಚ್ಚಬೇಕು ಮೀಸಲು; ಅಭಿವೃದ್ದಿ ಪ್ರಾಧಿಕಾರ ರಚನೆ ತ್ವರಿತವಾಗಿ ಆಗಬೇಕು ಎಂದು ಪ್ರತಿಪಾದಿಸಿದರು ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳು

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ