ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಬೇಕೆಂಬ ಬೇಡಿಕೆಯನ್ನು ಈಡೇರಿಸಲು ಸಾಧ್ಯವೇ ಇಲ್ಲ ಎಂದು ಸಾರಿಗೆ ಸಚಿವರೂ ಆದ ುಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸ್ಪಷ್ಟವಾಗಿ ಹೇಳಿದ್ದಾರೆ.
ಸಾರಿಗೆ ನೌಕರರ ಮುಷ್ಕರ ತೀವ್ರವಾಗುತ್ತಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಮಾತುಕತೆ ಪ್ರಯತ್ನಗಳು ನಡೆದಿವೆ. ಈ ನಡುವೆ ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು;
ಸಾರಿಗೆ ನೌಕರರನ್ನು ಸರಕಾರಿ ನೌಕರರನ್ನಾಗಿ ಮಾಡಬೇಕು ಅನ್ನುವ ಬೇಡಿಕೆ ಈಡೇರಿಕೆ ಮಾಡಲು ಸಾಧ್ಯವೇ ಇಲ್ಲ. ಅದು ಕಷ್ಟವಿದೆ ಎಂದು ಸವದಿ ಹೇಳಿದರು.
ಒಂದು ನಿಗಮಕ್ಕೆ ಆ ರೀತಿ ಮಾಡಿದರೆ ಉಳಿದ ನಿಗಮಗಳ ಕಥೆ ಏನು? ನಾಳೆ ಅವರೂ ಬೇಡಿಕೆ ಇಡುತ್ತಾರೆ. ಹೀಗಾಗಿ ಆ ಬೇಡಿಕೆ ಈಡೇರಿಕೆ ಅಸಾಧ್ಯ ಎಂದು ಅವರು, ಉಳಿದ ಎಲ್ಲ ಬೇಡಿಕೆಗಳನ್ನು ಆರ್ಥಿಕ ಇತಿಮಿತಿಗಳಲ್ಲಿ ಈಡೇರಿಸುತ್ತೇವೆ. ಇಂದಿನ ಸಂಧಾನ ಸಭೆ ಯಶಸ್ವಿಯಾಗುತ್ತದೆ ಎಂಬ ವಿಶ್ವಾಸ ನನಗಿದೆ ಎಂದರು.
ಇಂದಿನ ಸಭೆಯಲ್ಲಿ ಅವರು ಬೇಡಿಕೆ ಮಂಡನೆ ಮಾಡಿದ ನಂತರ ಸಿಎಂ ಜತೆ ಚರ್ಚಿಸಿ ಅಂತಿಮ ನಿರ್ಧಾರ ಮಾಡಿ, ಆ ನಂತರ ಆ ಬಗ್ಗೆ ಘೋಷಣೆ ಮಾಡುತ್ತೇವೆ ಎಂದು ಲಕ್ಷ್ಮಣ ಸವದಿ ಹೇಳಿದರು.
ಎಸ್ಮಾ ಅನ್ನೋದು ಬ್ರಹ್ಮಾಸ್ತ್ರ. ಅದನ್ನು ಸದ್ಯಕ್ಕೆ ಜಾರಿ ಮಾಡುವುದಿಲ್ಲ. ಸಾರಿಗೆ ನೌಕರರೆಲ್ಲರೂ ನಮ್ಮ ಕುಟುಂಬವರು. ಕಷ್ಟದ ಪರಿಸ್ಥಿತಿಯಲ್ಲಿ ಅರ್ಥ ಮಾಡಿಕೊಳ್ಳುತ್ತಾರೆ ಎಂಬುದು ನನ್ನ ಭಾವನೆ ಎಂದು ಸಚಿವ ಸವದಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
Lead photo from Laxman Savadi Facebook page