• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಜನವರಿ 1ರಿಂದಲೇ ವಿದ್ಯಾಗಮ ಪುನಾರಂಭ; ಸರ್ವ ಮುನ್ನೆಚ್ಚರಿಕೆಗಳೊಂದಿಗೆ ತಯಾರಿ ನಡೆಸಿದೆ ಸಾರ್ವಜನಿಕ ಶಿಕ್ಷಣ ಇಲಾಖೆ, ಸರಕಾರದಿಂದ ಆದೇಶ

cknewsnow desk by cknewsnow desk
December 16, 2020
in STATE
Reading Time: 1 min read
0
ಜನವರಿ 1ರಿಂದಲೇ ವಿದ್ಯಾಗಮ ಪುನಾರಂಭ; ಸರ್ವ ಮುನ್ನೆಚ್ಚರಿಕೆಗಳೊಂದಿಗೆ ತಯಾರಿ ನಡೆಸಿದೆ ಸಾರ್ವಜನಿಕ ಶಿಕ್ಷಣ ಇಲಾಖೆ, ಸರಕಾರದಿಂದ ಆದೇಶ
941
VIEWS
FacebookTwitterWhatsuplinkedinEmail

ಬೆಂಗಳೂರು: ಕೋವಿಡ್‌ ಕಾಲದಲ್ಲಿ ವಿದ್ಯಾರ್ಥಿಗಳ ಪಾಲಿಗೆ ಆಶಾಕಿರಣವಾಗಿದ್ದ ವಿದ್ಯಾಗಮ ಯೋಜನೆ ಜನವರಿ 1ರಿಂದಲೇ ಪುನಾರಂಭ ಆಗಲಿದೆ. ಈ ಬಗ್ಗೆ ಸಾರ್ವಜನಕ ಶಿಕ್ಷಣ ಇಲಾಖೆ ಅಧಿಕೃತವಾಗಿ ಆದೇಶ ಹೊರಡಿಸಿದೆ.

ಹೊಸ ವರ್ಷದ ದಿನದಿಂದಲೇ ವಿದ್ಯಾಗಮವನ್ನು ಸಕಲ ಮುನ್ನೆಚ್ಚರಿಕೆಗಳೊಂದೊಗೆ ಪುನಾರಂಭಿಸಲು ಇಲಾಖೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು, ಅಂದಿನಿಂದ ಕರ್ತವ್ಯಕ್ಕೆ ಹಾಜರಾಗುವಂತೆ ಶಿಕ್ಷಕರಿಗೆ ಸೂಚನೆ ನೀಡಿದೆ. ಈಗಾಗಲೇ ಈ ಆದೇಶವು ಎಲ್ಲ ಜಿಲ್ಲೆಗಳ ಇಲಾಖೆಯ ಉಪ ನಿರ್ದೇಶಕರಿಗೆ ತಲುಪಿದೆ.

ಎಲ್ಲ ಮುನ್ನೆಚ್ಚರಿಕೆ ವಹಿಸಲಾಗುವುದು ಎಂದ ಸಚಿವರು

ಈ ಆದೇಶ ಹೊರಬೀಳುವುದಕ್ಕೆ ಮುನ್ನ ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಕೈಗೊಂಡಿದ್ದ ವಿದ್ಯಾಗಮ ಯೋಜನೆಯನ್ನು ಪರಿಷ್ಕರಿಸಿ ಸುಧಾರಿತ ಮತ್ತು ಸುರಕ್ಷತಾ ಕ್ರಮಗಳೊಂದಿಗೆ ಹೊಸ ರೀತಿಯಲ್ಲಿ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ ಎಂದರು.

ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿಯೂ ವಿದ್ಯಾಗಮ ಕಾರ್ಯಕ್ರಮವನ್ನು ನಡೆಸಲಾಗುವುದು. ಪೋಷಕರ ಅನುಮತಿ ಪತ್ರ ಕಡ್ಡಾಯವಾಗಿದ್ದು, ಇದು ಶಾಲಾರಂಭವಲ್ಲ ಎಂದು ಸಚಿವರು ಹೇಳಿದರು. ವಿದ್ಯಾಗಮ ಗ್ರಾಮೀಣಪ್ರದೇಶದ ವಿದ್ಯಾರ್ಥಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ ಎಂದರು.

ಆಗಸ್ಟ್ 8ರಿಂದ ವಿದ್ಯಾಗಮ ಕಾರ್ಯಕ್ರಮವನ್ನು ಆರಂಭಿಸಲಾಗಿತ್ತು. ಆದರೆ, ಕೆಲವರಿಗೆ ಸೋಂಕು ತಗುಲಿದ ಪರಿಣಾಮ ಅಕ್ಟೋಬರ್10ರಂದು ಇದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಪುನಾ ವಿದ್ಯಾಗಮವನ್ನು ಪ್ರಾರಂಭ ಮಾಡುತ್ತಿರುವುದರಿಂದ ಮಕ್ಕಳು ಶಾಲೆಯಿಂದ ದೂರ ಉಳಿಯುವುದು ತಪ್ಪುತ್ತದೆ. ಅಷ್ಟೇ ಅಲ್ಲದೆ, ಹಳ್ಳಿಗಾಡು ಪ್ರದೇಶದಲ್ಲಿ ಮಕ್ಕಳಗ ಶಾಲೆಯ ಸಮಯದಲ್ಲೇ ತಂದೆ-ತಾಯಿ ಜತೆ ಕೆಲಸಗಳಿಗೆ ಹೋಗುವುದು ಕೂಡ ತಪ್ಪುತ್ತದೆ. ಎಲ್ಲಕ್ಕಿಂತ ಮಿಗಿಲಾಗಿ ಬಾಲ್ಯ ವಿವಾಹ, ಬಾಲ ಕಾರ್ಮಿಕ  ಪೀಡೆಗಳಿಗೆ ಕಡಿವಾಣ ಬೀಳಲಿದೆ ಎಂದಿದ್ದಾರೆ.

ಉಳಿದಂತೆ; ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಆವರಣದಲ್ಲಿಯೇ ವಿದ್ಯಾಗಮ ನಡೆಯಲಿದೆ. ಈಗಿನಂತೆಯೇ ಆನ್‌ʼಲೈನ್, ಚಂದನ ವಾಹಿನಿಯಲ್ಲಿ ನಡೆಯುತ್ತಿರುವ ಪಾಠಗಳು ಮುಂದುವರಿಯುತ್ತವೆ ಎಂದಿದ್ದಾರೆ ಸಚಿವರು.

ಉಳದಂತೆ; ಕೋವಿಡ್‌ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೂಗೊಂಡಿದೆ. ಮಕ್ಕಳು ಮಾಸ್ಕ್‌ ಧರಿಸುವುದು, ದೈಹಿಕ ಅಂತರ ಪಾಲನೆ. ಸ್ಯಾನಿಟೈಸಿಂಗ್‌ ಮುಂತಾದ ಕ್ರಮಗಳು ಕಡ್ಡಾಯ. ವಿದ್ಯಾಗಮಕ್ಕೆ ಬರಲಿಚ್ಛಿಸುವ ಮಕ್ಕಳು ಕಡ್ಡಾಯವಾಗಿ ಪೋಷಕರ ಒಪ್ಪಿಗೆ ಪತ್ರ ತರಬೇಕು ಹಾಗೂ ಆಯಾ ಶಾಲೆಯಲ್ಲಿ ಮಕ್ಕಳು ಕಡ್ಡಾಯವಾಗಿ ಥರ್ಮಲ್‌ ಸ್ಕ್ರೀನಿಂಗ್‌ಗೆ ಒಳಪಡಬೇಕು. ಜತೆಗೆ; ಜ್ವರ, ಕೆಮ್ಮು, ನೆಗಡಿ ಲಕ್ಷಣ ಹಾಗೂ ಕೋವಿಡ್ ಲಕ್ಷಣಗಳಿರುವ ವಿದ್ಯಾರ್ಥಿಗಳು ವಿದ್ಯಾಗಮಕ್ಕೆ ಬರುವಂತಿಲ್ಲ ಎಂದು ಸಚಿವರು ಹೇಳಿದ್ದಾರೆ.

Tags: karnataka educations suresh kumarvidyagama
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಆರ್.ಗುಂಡೂರಾಯರ ಸಂಪುಟದಲ್ಲಿ ರೇಷ್ಮೆ, ಸಣ್ಣ ಕೈಗಾರಿಕೆ ಮತ್ತು ಕ್ರೀಡೆ-ಯುವಜನ ಖಾತೆಗಳ ಸಚಿವೆಯಾಗಿದ್ದ ಚಿಕ್ಕಬಳ್ಳಾಪುರದ ರೇಣುಕಾ ರಾಜೇಂದ್ರನ್‌ ಇನ್ನಿಲ್ಲ

ಆರ್.ಗುಂಡೂರಾಯರ ಸಂಪುಟದಲ್ಲಿ ರೇಷ್ಮೆ, ಸಣ್ಣ ಕೈಗಾರಿಕೆ ಮತ್ತು ಕ್ರೀಡೆ-ಯುವಜನ ಖಾತೆಗಳ ಸಚಿವೆಯಾಗಿದ್ದ ಚಿಕ್ಕಬಳ್ಳಾಪುರದ ರೇಣುಕಾ ರಾಜೇಂದ್ರನ್‌ ಇನ್ನಿಲ್ಲ

Leave a Reply Cancel reply

Your email address will not be published. Required fields are marked *

Recommended

ರಿಪಬ್ಲಿಕ್‌ ಆಫ್‌ ಚಿಕ್ಕಬಳ್ಳಾಪುರದ ಕೇಂದ್ರಸ್ಥಾನದಲ್ಲಿ ಗುಡುಗಿದ ಮಣ್ಣಿನಮಗ

ರಿಪಬ್ಲಿಕ್‌ ಆಫ್‌ ಚಿಕ್ಕಬಳ್ಳಾಪುರದ ಕೇಂದ್ರಸ್ಥಾನದಲ್ಲಿ ಗುಡುಗಿದ ಮಣ್ಣಿನಮಗ

4 years ago
ಕೊಪ್ಪಳದ ಅಂಜನಾದ್ರಿಯೇ ಹನುಮನ ಜನ್ಮಸ್ಥಳ; ಪುರಾಣಗಳನ್ನುಕೆದಕಿದ ಟಿಟಿಡಿಗೆ ಸತ್ಯದ ಸಾಕ್ಷಾತ್ಕಾರ ಮಾಡಿಸುವ ಪುರಾವೆಗಳಿವೆ ತಾಯಿ ತುಂಗಭದ್ರೆ ದಂಡೆಯಲ್ಲಿ..

ಕೊಪ್ಪಳದ ಅಂಜನಾದ್ರಿಯೇ ಹನುಮನ ಜನ್ಮಸ್ಥಳ; ಪುರಾಣಗಳನ್ನುಕೆದಕಿದ ಟಿಟಿಡಿಗೆ ಸತ್ಯದ ಸಾಕ್ಷಾತ್ಕಾರ ಮಾಡಿಸುವ ಪುರಾವೆಗಳಿವೆ ತಾಯಿ ತುಂಗಭದ್ರೆ ದಂಡೆಯಲ್ಲಿ..

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ