• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

ಜನವರಿ 1ರಿಂದ ಎಸ್ಸೆಸೆಲ್ಸಿ, ದ್ವಿತೀಯ ಪಿಯುಸಿ ತರಗತಿಗಳು ಆರಂಭ; ಒಂದು ಕೊಠಡಿಯಲ್ಲಿ 15 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಎಂದ ಮುಖ್ಯಮಂತ್ರಿ

cknewsnow desk by cknewsnow desk
December 19, 2020
in NEWS IN USE, STATE
Reading Time: 1 min read
0
ಜನವರಿ 1ರಿಂದ ಎಸ್ಸೆಸೆಲ್ಸಿ, ದ್ವಿತೀಯ ಪಿಯುಸಿ ತರಗತಿಗಳು ಆರಂಭ; ಒಂದು ಕೊಠಡಿಯಲ್ಲಿ 15 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಎಂದ ಮುಖ್ಯಮಂತ್ರಿ
912
VIEWS
FacebookTwitterWhatsuplinkedinEmail

ಬೆಂಗಳೂರು: ಕೋವಿಡ್‌ನಿಂದ ಬಸವಳಿದು ಹೋಗಿದ್ದ ರಾಜ್ಯದ ಶೈಕ್ಷಣಿಕ ವ್ಯವಸ್ಥೆ ನಿಧಾನವಾಗಿ ಹಳಿಗೆ ಬರುತ್ತಿದ್ದು, ಅದರ ಅಂಗವಾಗಿ ಹತ್ತನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಕ್ಲಾಸ್‌ಗಳು ಆರಂಭವಾಗುತ್ತಿವೆ.

2021ರ ಜನವರಿ 1ನೇ ತಾರೀಖಿನಿಂದಲೇ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ನೇರ ತರಗತಿಗಳು ಶುರುವಾಗಲಿವೆ. ಹಾಗೆಯೇ; 6ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ವಿದ್ಯಾಗಮವು ಆರಂಭವಾಗಲಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.

ಇನ್ನೊಂದೆಡೆ ವಿದ್ಯಾಗಮ ತರಗತಿಗಳ ಆರಂಭಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಇದರ ಜತೆಯಲ್ಲೇ ಪದವಿಪೂರ್ವ ಕಾಲೇಜುಗಳ ಆರಂಭಕ್ಕೂ ಸಂಬಂಧಿತ ಇಲಾಖೆ ಸಿದ್ಧತೆಗಳನ್ನು ಶುರು ಮಾಡಿಕೊಂಡಿದೆ.

2021ರ ಜನವರಿ 1 ರಿಂದ, 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿ ಹಾಗೂ 6 ರಿಂದ 9ನೇ ತರಗತಿಗೆ ವಿದ್ಯಾಗಮ ಪ್ರಾರಂಭ; ಹದಿನೈದು ದಿನಗಳ ಕಾಲ ಪರಿಸ್ಥಿತಿ ಅವಲೋಕಿಸಿ ಇತರ ತರಗತಿ ಪ್ರಾರಂಭಿಸುವ ಕುರಿತು ನಿರ್ಧಾರ. ಮುಖ್ಯಮಂತ್ರಿ @BSYBJP ಅಧ್ಯಕ್ಷತೆಯ ಇಂದಿನ ಸಭೆಯಲ್ಲಿ ತೀರ್ಮಾನ.

— CM of Karnataka (@CMofKarnataka) December 19, 2020

ಕೋವಿಡ್‌ ಮಾರ್ಗಸೂಚಿಯಂತೆ ತರಗತಿ

ಕೋವಿಡ್‌ ಮಾರ್ಗಸೂಚಿ ಪ್ರಕಾರವೇ ತರಗತಿಗಳನ್ನು ನಡೆಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಕಟ್ಟುನಿಟ್ಟಾಗಿ ಸೂಚನೆ ನೀಡಿದ್ದಾರೆ.

ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ನೀಡಿರುವ ವರದಿಯಂತೆ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು. ಇದರ ಪ್ರಕಾರ ಮಕ್ಕಳು ಶಾಲೆ, ಕಾಲೇಜು ಹಾಗೂ ವಿದ್ಯಾಗಮಕ್ಕೆ ಹಾಜರಾಗುವಾಗ ಪೋಷಕರ ಅನುಮತಿ ಪತ್ರವನ್ನು ಕಡ್ಡಾಯವಾಗಿ ನೀಡಬೇಕು ಹಾಗೂ ಆ ಅನುಮತಿ ಪತ್ರದಲ್ಲಿ ಆಯಾ ವಿದ್ಯಾರ್ಥಿಗೆ ಕೋವಿಡ್-19 ಸೋಂಕಿನ ಲಕ್ಷಣಗಳು ಇಲ್ಲವೆಂದು ದೃಢೀಕರಿಸಬೇಕು ಎಂದು ಸಿಎಂ ಹೇಳಿದ್ದಾರೆ.

ಜನವರಿ 1ರಿಂದ ಶಾಲೆಗಳು ಆರಂಭವಾದರೂ ಮಕ್ಕಳು ಶಾಲೆಗೆ ಬರಲೇಬೇಕೆಂದು ಕಡ್ಡಾಯವಿಲ್ಲ. ಆದರೆ, ದಾಖಲಾತಿ ಮಾಡಿಸಿಕೊಳ್ಳುವುದು ಕಡ್ಡಾಯ. ಮೊದಲಿಗೆ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಲಿವೆ. ಇದರ ಪರಿಣಾಮಗಳನ್ನು ನೋಡಿಕೊಂಡು ಒಂಭತ್ತು ಹಾಗೂ ಪ್ರಥಮ ಪಿಯುಸಿ ತರಗತಿಗಳನ್ನು ಆರಂಭಿಸಲಾಗುವುದು ಎಂದ ಯಡಿಯೂರಪ್ಪ ಅವರು, ತರಗತಿಗಳು ನಡೆಯುವ ಕೊಠಡಿಗಳನ್ನು ಸ್ಯಾನಿಟೈಸ್‌ ಮಾಡಬೇಕು. ಮಾಸ್ಕ್‌ ಧರಿಸುವುದು, ದೈಹಿಕ ಅಂತರ, ಸ್ಯಾನಿಟೈಸ್‌ ಮಾಡಿಕೊಳ್ಲೂವುದು ಕಡ್ಡಾಯ. ಒಂದು ತರಗತಿಯಲ್ಲಿ ಹದವೈದು ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಇರುತ್ತದೆ ಎಂದಿದ್ದಾರೆ.

ಈ ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್‌ ಕುಮಾರ್, ಆರೋಗ್ಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಉಮಾಶಂಕರ್ ಮುಂತಾದವರು ಉಪಸ್ಥಿತರಿದ್ದರು.

Tags: educationkarnatakasecond pucsslc
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಆಪಲ್‌ ಐಫೋನ್-‌12 ತಯಾರಿಸುತ್ತಿದ್ದ ಕೋಲಾರದ ವಿಸ್ಟ್ರಾನ್‌ ಕಂಪನಿಯಲ್ಲಿ ದಂಗೆ ಎದ್ದ 8,000 ಕಾರ್ಮಿಕರು; ವಾಹನಗಳಿಗೆ ಬೆಂಕಿ, ಕಾರ್ಖಾನೆ ಧ್ವಂಸ

ಕಾರ್ಮಿಕರಿಗೆ ತೊಂದರೆಯಾಗಿದ್ದು ನಿಜ ಎಂದು ಒಪ್ಪಿಕೊಂಡ ಕೋಲಾರದ ವಿಸ್ಟ್ರಾನ್;‌ ‌ಕಷ್ಟ ಹೇಳಿಕೊಳ್ಳಲು ಕಾರ್ಮಿಕರಿಗೆ ಹೆಲ್ಪ್‌ಲೈನ್‌, ಕಂಪನಿಯ ಭಾರತೀಯ ಉಪಾಧ್ಯಕ್ಷರ ತಲೆದಂಡ

Leave a Reply Cancel reply

Your email address will not be published. Required fields are marked *

Recommended

ಸರಳ ಜಂಬೂ ಸವಾರಿ; ಅಭಿಮನ್ಯು ಹೊತ್ತ ಅಂಬಾರಿಯಲ್ಲಿ ವಿರಾಜಮಾನರಾಗಿದ್ದ ಚಾಮುಂಡೇಶ್ವರಿ ಅಮ್ಮನವರಿಗೆ ನಮಿಸಿದ ನಾಡಜನ

ಸರಳ ಜಂಬೂ ಸವಾರಿ; ಅಭಿಮನ್ಯು ಹೊತ್ತ ಅಂಬಾರಿಯಲ್ಲಿ ವಿರಾಜಮಾನರಾಗಿದ್ದ ಚಾಮುಂಡೇಶ್ವರಿ ಅಮ್ಮನವರಿಗೆ ನಮಿಸಿದ ನಾಡಜನ

6 years ago
ಡೈನಾಮೈಟ್ ಇಟ್ಟ ಬಿಟಿಎಸ್ ! ಅವಾಕ್ಕಾಯಿತು ಜಗತ್ತು!!

ಡೈನಾಮೈಟ್ ಇಟ್ಟ ಬಿಟಿಎಸ್ ! ಅವಾಕ್ಕಾಯಿತು ಜಗತ್ತು!!

6 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ