• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

30,000 ಜನರಿಗೆ ಒಂದೇ ಪ್ರಾಥಮಿಕ ಆರೋಗ್ಯ ಕೇಂದ್ರ! ಉತ್ತಮ ಆರೋಗ್ಯ ಸೇವೆಗಾಗಿ ಪಿಎಚ್‌ಸಿಗಳಿಗೆ ಫುಲ್ ಟ್ರೀಟ್‌ಮೆಂಟ್ ಕೊಡಲಾಗುವುದು ಎಂದ ಡಾಕ್ಟರ್‌ ಸುಧಾಕರ್‌

cknewsnow desk by cknewsnow desk
December 24, 2020
in NEWS IN USE, STATE
Reading Time: 1 min read
0
30,000 ಜನರಿಗೆ ಒಂದೇ ಪ್ರಾಥಮಿಕ ಆರೋಗ್ಯ ಕೇಂದ್ರ! ಉತ್ತಮ ಆರೋಗ್ಯ ಸೇವೆಗಾಗಿ ಪಿಎಚ್‌ಸಿಗಳಿಗೆ ಫುಲ್ ಟ್ರೀಟ್‌ಮೆಂಟ್ ಕೊಡಲಾಗುವುದು ಎಂದ ಡಾಕ್ಟರ್‌ ಸುಧಾಕರ್‌
920
VIEWS
FacebookTwitterWhatsuplinkedinEmail

ಬೆಂಗಳೂರು: ಪ್ರತಿ ಕನ್ನಡಿಗನಿಗೆ ಉಚಿತ ಹಾಗೂ ಗುಣಮಟ್ಟದ ಆರೋಗ್ಯ ಸೇವೆ ಸಿಗಬೇಕು ಎನ್ನುವ ಗುರಿಯೊಂದಿಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉನ್ನತೀಕರಣ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಿತು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಸಮುದಾಯ ಆರೋಗ್ಯ ಸೇವೆ ಉತ್ತಮವಾಗಿದೆ ಎಂದು ಜನರು ಮಾತನಾಡುತ್ತಾರೆ. ಆದರೆ ಇಡೀ ದೇಶದಲ್ಲಿ ಕರ್ನಾಟಕದ ಆರೋಗ್ಯ ಸೇವೆ ಉತ್ತಮ ಹಾಗೂ ಮಾದರಿಯಾಗಿರಬೇಕು ಎಂದು ಮುಖ್ಯಮಂತ್ರಿಗಳು ಕನಸು ಕಂಡಿದ್ದಾರೆ. ಈ ಕನಸಿಗೆ ಪೂರಕವಾಗಿ ಯೋಜನೆ ರೂಪಿಸಲಾಗಿದೆ ಎಂದರು.

ರಾಜ್ಯದಲ್ಲಿ 2,380 ಪ್ರಾಥಮಿಕ ಆರೋಗ್ಯ ಕೇಂದ್ರಗಳಿವೆ. 30 ಸಾವಿರ ಜನಸಂಖ್ಯೆಗೆ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರ ಇದೆ. ಇದರಲ್ಲಿ ಅಸಮತೋಲನವಿದ್ದರೆ ಹೊಸ ಕೇಂದ್ರ ನಿರ್ಮಾಣ ಹಾಗೂ ಅಸ್ವಿತ್ವದಲ್ಲಿರುವ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವುದು ಹೊಸ ಯೋಜನೆಯ ಉದ್ದೇಶ. ಪಿಎಚ್ ಸಿಯಲ್ಲಿ 6 ಹಾಸಿಗೆ ಇದ್ದು, ಅದನ್ನು 12ರಿಂದ 20 ಹಾಸಿಗೆಗೆ ಹೆಚ್ಚಿಸಲಾಗುವುದು. ಪಿಎಚ್‌ʼಸಿಯಲ್ಲಿ ಒಬ್ಬ ವೈದ್ಯ ಇದ್ದು, ಈ ಸಂಖ್ಯೆಯನ್ನು ಕನಿಷ್ಠ 3-4 ಕ್ಕೆ ಹೆಚ್ಚಿಸಲಾಗುವುದು. ಈ ಪೈಕಿ ಓರ್ವ ಮಹಿಳಾ ವೈದ್ಯೆ ಹಾಗೂ ಮತ್ತೊಬ್ಬರು ಆಯುಷ್ ವೈದ್ಯರಿರುತ್ತಾರೆ ಎಂದು ವಿವರಿಸಿದರು ಡಾ.ಸುಧಾಕರ್.

ಉತ್ತಮ ವಸತಿ ಕಲ್ಪಿಸದ ಕಾರಣಕ್ಕೆ ಅನೇಕ ವೈದ್ಯರು ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸಲು ಹಿಂದೇಟು ಹಾಕುತ್ತಿದ್ದರು. ಒಂದೇ ಸಮುಚ್ಛಯದಲ್ಲಿ ನರ್ಸ್, ವೈದ್ಯರಿಗೆ ವಸತಿ, ಇತರೆ ಆರೋಗ್ಯ ಸಿಬ್ಬಂದಿಗೆ ವಸತಿ ಕಲ್ಪಿಸಲಾಗುತ್ತದೆ. 2 ಎಕರೆ ಪ್ರದೇಶದಲ್ಲಿ 6-8 ಕೋಟಿ ರೂ. ಖರ್ಚು ಮಾಡಿ ಹೊಸ ಪಿಎಚ್‌ʼಸಿ ನಿರ್ಮಿಸಲಾಗುತ್ತದೆ. 20 ಸಾವಿರ ಚದರ ಮೀಟರ್ ಆಡಳಿತ ಕಟ್ಟಡ, 12 ಹಾಸಿಗೆಯ ವಿಭಾಗ, ತಾಯಿ ಮತ್ತು ಶಿಶು ಕಾಳಜಿ ಕೇಂದ್ರ, ಪ್ರಯೋಗಾಲಯ ಇರಲಿದೆ. ಮಧುಮೇಹ ಪರೀಕ್ಷೆ, ರಕ್ತ ಪರೀಕ್ಷೆ ಸೇರಿದಂತೆ ನಾನಾ ಪರೀಕ್ಷೆಗಳನ್ನು ಉಚಿತವಾಗಿ ಮಾಡುವ ವ್ಯವಸ್ಥೆ ಇರಲಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದ ಅನುದಾನ ಬಳಸಿ ಉಚಿತ ಸೇವೆ ನೀಡಲಾಗುವುದು ಎಂದು ಅವರು ವಿವರಿಸಿದರು.

ಇ-ಆಸ್ಪತ್ರೆ

ಸಣ್ಣ ಆಸ್ಪತ್ರೆಗಳಿಂದ ಆರಂಭವಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆವರೆಗೂ ಅಂತರ್ಜಾಲ ಬಳಸಿ ಸಂಪರ್ಕ ಕಲ್ಪಿಸುವ ಇ-ಆಸ್ಪತ್ರೆ ಸೌಲಭ್ಯವಿರಲಿದೆ. ಪಿಎಚ್ʼಸಿಯಲ್ಲಿ ಎಕ್ಸ್ ರೇ ತೆಗೆದರೂ ಅದಕ್ಕೆ ಬೇಕಾದ ಸಲಹೆಯನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ತಜ್ಞರು ನೀಡುವಂತಹ ವ್ಯವಸ್ಥೆ ಇರಲಿದೆ ಎಂದು ಸಚಿವರು ತಿಳಿಸಿದರು.

ತಜ್ಞ ವೈದ್ಯರ ತಪಾಸಣೆಗೆ ಅನುಕೂಲವಾಗಲು ಉತ್ತಮ ಗುಣಮಟ್ಟದ ಕ್ಯಾಮರಾ ಮತ್ತು ಟಿವಿಯೊಂದಿಗೆ ಟೆಲಿ-ಮೆಡಿಸಿನ್ ವ್ಯವಸ್ಥೆ ಇರಲಿದೆ ಎಂದು ತಿಳಿಸಿದರು.

80 ಸಾವಿರ ಜನಸಂಖ್ಯೆಗೆ ಒಂದರಂತೆ ಇರುವ ಸಮುದಾಯ ಆರೋಗ್ಯ ಕೇಂದ್ರವನ್ನು ಕೂಡ ಮೇಲ್ದರ್ಜೆಗೇರಿಸಲಾಗುವುದು. ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳನ್ನು ಅಭಿವೃದ್ಧಿಪಡಿಸಲಾಗುವುದು. 200 ಹಾಸಿಗೆಗಳ ಜಿಲ್ಲಾಸ್ಪತ್ರೆಗಳು ಮುಂದಿನ ದಿನಗಳಲ್ಲಿ 500-700 ಹಾಸಿಗೆಯ ಆಸ್ಪತ್ರೆಯಾಗಿ ಅಭಿವೃದ್ಧಿಯಾಗಲಿವೆ. ಬೆಂಗಳೂರು, ಹುಬ್ಬಳ್ಳಿಗೆ ಆರೋಗ್ಯ ಕೇಂದ್ರಗಳು ಕೇಂದ್ರೀಕೃತವಾಗದೆ ಎಲ್ಲ ಕಡೆಗೂ ವಿಸ್ತರಿಸಲಾಗುವುದು. ಆಯಾ ಜಿಲ್ಲೆಗಳಲ್ಲಿ ಆರೋಗ್ಯ ಸೇವೆ ಸಿಗುವಂತೆ ಮಾಡಲಾಗುವುದು ಎಂದರು.

ಉತ್ತಮವಾದ ಆರೋಗ್ಯ ಸೇವೆಗಳು ಪ್ರತಿಯೊಬ್ಬರಿಗೂ ಸಿಗುವಂತೆ ಮಾಡುವ ಪ್ರಧಾನಿ ಶ್ರೀ @narendramodi ಅವರ ಆಶಯದಂತೆ ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಮಹತ್ವದ ಹೆಜ್ಜೆ ಇಡಲಾಗಿದ್ದು, ಈ ನಿಟ್ಟಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಮಾದರಿ ಪಿಎಚ್ ಸಿ ಕುರಿತು ಮುಖ್ಯಮಂತ್ರಿ ಶ್ರೀ @BSYBJP ಅವರಿಗೆ ವಿವರಿಸಲಾಯಿತು. pic.twitter.com/HXuq3cbxyt

— Dr Sudhakar K (Modi ka Parivar) (@DrSudhakar_) December 24, 2020

ಆಂಬ್ಯುಲೆನ್ಸ್ ಸೇವೆ

ಈ ಹಿಂದೆ 1 ಲಕ್ಷ ಜನಸಂಖ್ಯೆಗೆ ಒಂದು ಆಂಬ್ಯುಲೆನ್ಸ್ ನೀಡಲಾಗುತ್ತಿತ್ತು. ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಒಂದು ಆಂಬ್ಯುಲೆನ್ಸ್ ನೀಡಲಾಗುವುದು. ಅಂದರೆ, 30 ಸಾವಿರ ಜನಸಂಖ್ಯೆಗೆ ಒಂದು ಆಂಬ್ಯುಲೆನ್ಸ್ ಸೇವೆ ಲಭ್ಯವಾಗಲಿದೆ ಎಂದು ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದರು.

ಶಾಲೆ ಆರಂಭ ಹಾಗೂ ವಿದ್ಯಾಗಮ ಕಾರ್ಯಕ್ರಮ ಆರಂಭಕ್ಕೆ ಸಂಬಂಧಿಸಿದಂತೆ ಸುದೀರ್ಘ ಚರ್ಚೆ ನಡೆಸಲಾಗಿತ್ತು. ಅದರಂತೆಯೇ ನಿರ್ಧಾರ ಕೈಗೊಳ್ಳಲಾಗಿದೆ. ರಾತ್ರಿ 11 ಗಂಟೆಗೆ ಮೀರಿ ಯುವಜನರು ಕ್ಲಬ್, ಪಬ್ ನಲ್ಲಿ ಸೇರಿ ಸಂಭ್ರಮಿಸುತ್ತಾರೆ. ಇಂತಹ ಚಟುವಟಿಕೆ ನಿಯಂತ್ರಣವಾಗಲಿ ಎಂಬ ಉದ್ದೇಶಕ್ಕೆ ನೈಟ್ ಕರ್ಫ್ಯೂ ತರಲಾಗಿದೆ. ಹೊಸ ಪ್ರಭೇದದ ವೈರಸ್ ಸೃಷ್ಟಿಯಾಗಿರುವ ಸಮಯದಲ್ಲಿ ಎಚ್ಚರದ ನಡವಳಿಕೆ ಅಗತ್ಯ ಎಂದು ಅವರು ಹೇಳಿದರು.

Tags: Healthkarnatakaprimary health centre
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಜನರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಕೊನೆಗೂ ನೈಟ್‌ ಕರ್ಫ್ಯೂ ವಾಪಸ್‌; ಆ ವೈಕುಂಠಾಧಿಪತಿಗೆ ಮಣಿಯಿತಾ ಯಡಿಯೂರಪ್ಪ ಸರಕಾರ

ಜನರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಕೊನೆಗೂ ನೈಟ್‌ ಕರ್ಫ್ಯೂ ವಾಪಸ್‌; ಆ ವೈಕುಂಠಾಧಿಪತಿಗೆ ಮಣಿಯಿತಾ ಯಡಿಯೂರಪ್ಪ ಸರಕಾರ

Leave a Reply Cancel reply

Your email address will not be published. Required fields are marked *

Recommended

ಕಸಾಪ ಚುನಾವಣೆ: ಚಿಕ್ಕಬಳ್ಳಾಪುರದಲ್ಲಿ ಅಂಬರ ಮುಟ್ಟಿದ ಪ್ರಚಾರ

ಕಸಾಪ ಚುನಾವಣೆ: ಚಿಕ್ಕಬಳ್ಳಾಪುರದಲ್ಲಿ ಅಂಬರ ಮುಟ್ಟಿದ ಪ್ರಚಾರ

5 years ago
ELECTION 2021: ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ I ತಮಿಳುನಾಡಿಲ್ಲಿ ಡಿಎಂಕೆ I ಕೇರಳದಲ್ಲಿ ಎಡರಂಗ I ಅಸೋಮ್‌ನಲ್ಲಿ ಬಿಜೆಪಿ I ಪುದುಚೆರಿಯಲ್ಲಿ ಎನ್.ಆರ್.‌ಕಾಂಗ್ರೆಸ್

ಚುನಾವಣೆ ರಣಕಣ; ನಾಮಪತ್ರ ಸಲ್ಲಿಕೆಗೆ ಇಂದಿನಿಂದಲೇ ನಾಮಪತ್ರ ಸಲ್ಲಿಕೆ ಶುರು

3 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ