• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home ET CINEMA

ಅಧಿಕ ರಕ್ತದೊತ್ತಡದ ಕಾರಣಕ್ಕೆ ಹೈದರಾಬಾದ್‌ನ ಅಪೊಲೋ ಆಸ್ಪತ್ರೆಗೆ ಸೇರಿದ ಸೂಪರ್‌ಸ್ಟಾರ್‌ ರಜನೀಕಾಂತ್‌; ಡಿ. 31ರಂದು ಪಕ್ಷದ ಹೆಸರು ಘೋಷಣೆ ಅನುಮಾನ

cknewsnow desk by cknewsnow desk
December 25, 2020
in ET CINEMA, NATION, STATE
Reading Time: 1 min read
0
ಕೊನೆಗೂ ಸೂಪರ್‌ಸ್ಟಾರ್‌ ರಜನೀಕಾತ್‌ ಪೊಲಿಟಿಕಲ್‌ ಎಂಟ್ರಿ; ಈ ತಿಂಗಳ 31ರಂದೇ ಹೊಸಪಕ್ಷ, 2021 ಎಲೆಕ್ಷನ್‌ಗೆ ತಯಾರಿ
917
VIEWS
FacebookTwitterWhatsuplinkedinEmail

ಹೈದರಾಬಾದ್:‌ ಅಧಿಕ ರಕ್ತದೊತ್ತಡದ ಕಾರಣಕ್ಕೆ ಸೂಪರ್‌ಸ್ಟಾರ್‌ ರಜನೀಕಾಂತ್‌ ಹೈದರಾಬಾದ್‌ನ ಜೂಬ್ಲಿಹಿಲ್ಸ್‌ನಲ್ಲಿರುವ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ.

ರಜನೀಕಾಂತ್‌ ದಾಖಲಾದ ಕೂಡಲೇ ಎಲ್ಲ ರೀತಿಯ ಪರೀಕ್ಷೆಗಳನ್ನು ಮಾಡಿ ಚಿಕಿತ್ಸೆ ನೀಡಿರುವ ವೈದ್ಯರು ಗಾಬರಿ ಪಡುವಂಥದ್ದು ಏನೂ ಇಲ್ಲ ಎಂದಿದ್ದಾರೆ. ಜತೆಗೆ, ಅಪೊಲೋ ಆಸ್ಪತ್ರೆ ಕೂಡ ಒಂದು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿ, ಸೂಪರ್‌ಸ್ಟಾರ್‌ ಆರಾಮಾಗಿದ್ದಾರೆ ಎಂದು ತಿಳಿಸಿದೆ.

ʼಅನ್ನಾತ್ತೆʼ ಚಿತ್ರದ ಶೂಟಿಂಗ್‌ಗಾಗಿ ಕಳೆದ ಹತ್ತು ದಿನಗಳಿಂದ ರಜನಿ ಅವರು ಹೈದರಾಬಾದ್‌ನಲ್ಲೇ ಇದ್ದಾರೆ. ಆದರೆ, ಚಿತ್ರತಂಡದ ಎಂಟಕ್ಕೂ ಹೆಚ್ಚು ಜನರಿಗೆ ಕೋವಿಡ್‌ ಪಾಸಿಟೀವ್‌ ಬಂದ ಕಾರಣಕ್ಕೆ ಶೂಟಿಂಗ್‌ ನಿಲ್ಲಿಸಲಾಗಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ಮೂರು ದಿನಗಳಿಂದ ರಜನಿ ಅವರು ಕ್ವಾರಂಟೈನ್‌ನಲ್ಲಿದ್ದರು. ಮಂಗಳವಾರವೇ ಅವರು ಕೋವಿಡ್‌ ಪರೀಕ್ಷೆ ಮಾಡಿಸಿಕೊಂಡಿದ್ದರಲ್ಲದೆ, ಅವರಿಗೆ ನೆಗೆಟೀವ್‌ ಬಂದಿತ್ತು.

ಆದಾಗ್ಯೂ ಹೈ-ಬೀಪಿಯಿಂದ ಆಸ್ಪತ್ರೆ ಸೇರಿರುವ ರಜನೀಕಾಂತ್‌ ಅವರ ಆರೋಗ್ಯ ಚೆನ್ನಾಗಿದೆ. ಅವರಿಗೆ ಕೋವಿಡ್‌ ಸೋಂಕಿನ ಲಕ್ಷಣಗಳು ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಇನ್ನೊಂದೆಡೆ, ಅಭಿಮಾನಿಗಳು ಗಾಬರಿಪಡಬೇಕಾದ ಅಗತ್ಯವಿಲ್ಲ ಎಂದು ಅವರ ಕುಟುಂಬದವರು ಮನವಿ ಮಾಡಿದ್ದಾರೆ. ಅವರ ಪುತ್ರಿ ಐಶ್ವರ್ಯಾ ಈಗಾಗಲೇ ಆಸ್ಪತ್ರೆಗೆ ಧಾವಿಸಿದ್ದಾರೆ.

ಇನ್ನೊಂದೆಡೆ ಟಾಲಿವುಡ್‌ನ ಅನೇಕ ಸ್ಟಾರ್‌ಗಳು ರಜನಿ ಆಸ್ಪತ್ರೆಗೆ ದಾಖಲಾದ ಸುದ್ದಿ ಕೇಳಿ ಶಾಕ್‌ ಆಗಿದ್ದರೂ, ಅವರು ಆದಷ್ಟು ಬೇಗ ಆಸ್ಪತ್ರೆಯಿಂದ ಹೊರಬರುತ್ತಾರೆಂದು ಹೇಳಿದ್ದಾರೆ. ಸ್ಟಾರ್‌ ನಟ ಪವನ್‌ ಕಲ್ಯಾಣ್‌ ಹೇಳಿಕೆ, ರಜನಿ ಅವರು ಆಸ್ಪತ್ರೆಗೆ ಸೇರಿದ್ದಾರೆಂಬ ಸುದ್ದಿ ಕೇಳಿ ನೋವಾಯಿತು. ಅಧ್ಯಾತ್ಮದಲ್ಲಿ ತೊಡಗಿರುವ ಅವರಿಗೆ ಮಾನಸಿಕ ಸದೃಢತೆ ಹೆಚ್ಚು. ಅವರು ನಂಬುವ ಮಹಾವತಾರ್‌ ಬಾಬಾ ಅವರ ಆಶೀರ್ವಾದದಿಂದ ಆದಷ್ಟು ಬೇಗ ಗುಣಮುಖರಾಗಿ ಬರುತ್ತಾರೆ ಎಂದಿದ್ದಾರೆ ಪವನ್.

ಇದೇ ವೇಳೆ ಅವರ ಬೀಪಿ ಕಂಟ್ರೋಲಿಗೆ ಬಂದರೆ ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ಅವರನ್ನು ಡಿಸ್ಚಾರ್ಜ್‌ ಮಾಡಬಹುದು. ಇಲ್ಲವಾದರೆ ಇನ್ನೂ ಕೆಲ ದಿನ ಅವರು ಚಿಕಿತ್ಸೆ ಪಡೆಯಬೇಕಾಗುತ್ತದೆ ಎಂದು ವೈದ್ಯರು ಈಗಾಗಲೇ ತಿಳಿಸಿದ್ದಾರೆ.

ಇನ್ನೊಂದೆಡೆ ಅಭಿಮಾನಿಗಳು ರಜನಿ ಆರೋಗ್ಯಕ್ಕಾಗಿ ಎಲ್ಲಡೆ ಪ್ರಾರ್ಥನೆ ಮಾಡುತ್ತಿದ್ದಾರೆ. ತಮಿಳುನಾಡು, ಆಂಧ್ರ, ತೆಲಂಗಾಣ ಮುಂತಾದ ಕಡೆಗಳಲ್ಲಿ ಅಭಿಮಾನಿಗಳು ದೇವಾಲಯಗಳಲ್ಲಿ ಪೂಜೆ ಮಾಡುತ್ತಿದ್ದಾರೆ.

ಮತ್ತೊಂದೆಡೆ ಇದೇ ಡಿಸೆಂಬರ್‌ 31ರಂದು ರಜನೀಕಾಂತ್‌ ಅವರು ತಮ್ಮ ರಾಜಕೀಯ ಪಕ್ಷ ಹೆಸರಿನ ಬಗ್ಗೆ ಮಹತ್ವದ ಪ್ರಕಟಣೆ ಹೊರಡಿಸಬೇಕಾಗಿದೆ. ಈಗ ನೋಡಿದರೆ ಅವರು ಆಸ್ಪತ್ರೆಗೆ ದಾಖಲಾದ ಕಾರಣಕ್ಕೆ ಪಕ್ಷದ ಕುರಿತ ಘೋಷಣೆ ಇರುತ್ತಾ? ಇಲ್ಲವಾ? ಎನ್ನುವ ಬಗ್ಗೆ ಪ್ರಶ್ನೆ ಮೂಡಿದೆ.

lead photo courtesy: Wikipedia

  • ಈ ಸುದ್ದಿಯನ್ನು ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ..
ದ್ರಾವಿಡ ಪಾಲಿಟಿಕ್ಸ್‌ಗೆ ಟ್ವಿಸ್ಟ್;‌ ಬಿಜೆಪಿ ಜತೆ ಸೇರುತ್ತಾರೆಂದು ಊಹಿಸಿದ ಹೊತ್ತಿನಲ್ಲಿಯೇ ಹೊಸಪಕ್ಷ ಎಂದ ಸೂಪರ್‌ಸ್ಟಾರ್!!
Tags: Apollo hospitalhigh bpsuperstar rajinikanth
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ವಿಮಾ ಕಂಪನಿಯಿಂದ 36.59 ಲಕ್ಷ, ನಗದು ರೂಪದಲ್ಲಿ 9.80 ಲಕ್ಷ ಸೇರಿ 46.39 ಲಕ್ಷ ರೂ. ತೆತ್ತರೂ ಉಳಿಯಲಿಲ್ಲ ರೋಗಿ! ಮೃತದೇಹ ಕೊಡಲು ಇನ್ನೂ 10 ಲಕ್ಷ ಕಟ್ಟಿ ಎಂದ ಆಸ್ಪತ್ರೆ!!

ವಿಮಾ ಕಂಪನಿಯಿಂದ 36.59 ಲಕ್ಷ, ನಗದು ರೂಪದಲ್ಲಿ 9.80 ಲಕ್ಷ ಸೇರಿ 46.39 ಲಕ್ಷ ರೂ. ತೆತ್ತರೂ ಉಳಿಯಲಿಲ್ಲ ರೋಗಿ! ಮೃತದೇಹ ಕೊಡಲು ಇನ್ನೂ 10 ಲಕ್ಷ ಕಟ್ಟಿ ಎಂದ ಆಸ್ಪತ್ರೆ!!

Leave a Reply Cancel reply

Your email address will not be published. Required fields are marked *

Recommended

ಕೋಲಾರದಲ್ಲಿ ನಿಂತು ಕೋಡಿಹಳ್ಳಿ ಚಳಿಬಿಡಿಸಿದ ಕುಮಾರಸ್ವಾಮಿ; ಡೋಂಗಿಗಳಿಂದ ಪಾಠ ಕಲಿಯಬೇಕಿಲ್ಲ ಎಂದ ದಳಪತಿ

55 ಲಕ್ಷ ಬಡ ಕುಟುಂಬಗಳಿಗೆ ತಲಾ 25,000 ರೂ. ಧನ ಸಹಾಯಕ್ಕೆ ಎಚ್‌ಡಿಕೆ ಆಗ್ರಹ

5 years ago
ಬದುಕಿನ ಕೊನೆ ಉಸಿರು ಇರುವ ತನಕ ಕಾವೇರಿ ನೀರಿಗಾಗಿ ಹೊರಾಡುತ್ತೇನೆ; ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು

ಬದುಕಿನ ಕೊನೆ ಉಸಿರು ಇರುವ ತನಕ ಕಾವೇರಿ ನೀರಿಗಾಗಿ ಹೊರಾಡುತ್ತೇನೆ; ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು

2 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ