• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ವಿಮಾ ಕಂಪನಿಯಿಂದ 36.59 ಲಕ್ಷ, ನಗದು ರೂಪದಲ್ಲಿ 9.80 ಲಕ್ಷ ಸೇರಿ 46.39 ಲಕ್ಷ ರೂ. ತೆತ್ತರೂ ಉಳಿಯಲಿಲ್ಲ ರೋಗಿ! ಮೃತದೇಹ ಕೊಡಲು ಇನ್ನೂ 10 ಲಕ್ಷ ಕಟ್ಟಿ ಎಂದ ಆಸ್ಪತ್ರೆ!!

cknewsnow desk by cknewsnow desk
December 25, 2020
in COVID-19, STATE
Reading Time: 1 min read
0
ವಿಮಾ ಕಂಪನಿಯಿಂದ 36.59 ಲಕ್ಷ, ನಗದು ರೂಪದಲ್ಲಿ 9.80 ಲಕ್ಷ ಸೇರಿ 46.39 ಲಕ್ಷ ರೂ. ತೆತ್ತರೂ ಉಳಿಯಲಿಲ್ಲ ರೋಗಿ! ಮೃತದೇಹ ಕೊಡಲು ಇನ್ನೂ 10 ಲಕ್ಷ ಕಟ್ಟಿ ಎಂದ ಆಸ್ಪತ್ರೆ!!
916
VIEWS
FacebookTwitterWhatsuplinkedinEmail

Photo by Anna Shvets from Pexels / ಸಾಂದರ್ಭಿಕ ಚಿತ್ರ

ರೋಗಿ ಕುಟುಂಬಸ್ಥರು ಮತ್ತು ಆಸ್ಪತ್ರೆ ನಡುವೆ ಹಗ್ಗಜಗ್ಗಾಟ; ಸಚಿವ ಸುಧಾಕರ್ ಮಧ್ಯ ಪ್ರವೇಶದ ಬಳಿಕ ಮೃತದೇಹ ಹಸ್ತಾಂತರ

ಬೆಂಗಳೂರು: ಖಾಸಗಿ ಆಸ್ಪತ್ರೆ ಹೇಗೆಲ್ಲ ಬಿಲ್‌ ಮಾಡುತ್ತಿವೆ ಎನ್ನುವುದಕ್ಕೆ ಇದೊಂದು ಉದಾಹರಣೆ. ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಯ ಮೃತದೇಹ ಹಸ್ತಾಂತರ ವಿಷಯದಲ್ಲಿ ಕಗ್ಗಂಟಾಗಿದ್ದ ಪ್ರಕರಣ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರ ಮಧ್ಯ ಪ್ರವೇಶದಿಂದ ಬಗೆಹರಿದ ಘಟನೆ ನಡೆದಿದೆ.

ರಾಜಸ್ಥಾನ ಮೂಲದ ಭೀಮರಾಮ್‌ ಪಟೇಲ್‌ ಎಂಬ ಅರವತ್ತೆರಡು ವರ್ಷದ ವ್ಯಕ್ತಿ ಮೃತಪಟ್ಟಿದ್ದು, ಹೆಚ್ಚುವರಿ ಬಿಲ್‌ ಪಾವತಿ ವಿಷಯದಲ್ಲಿ ಕುಟುಂಬ ಸದಸ್ಯರು ಮತ್ತು ಜಯನಗರದಲ್ಲಿರುವ ಮಣಿಪಾಲ್‌ ಆಸ್ಪತ್ರೆ ಆಡಳಿತದ ನಡುವೆ ಹಗ್ಗಜಗ್ಗಾಟ ನಡೆದಿತ್ತು. ಮಾತ್ರವಲ್ಲ, ನಲವತ್ತು ದಿನಗಳ ಚಿಕಿತ್ಸೆ ಪಡೆದರೂ ಕೊರೋನಾ ಸೋಂಕು ನಿವಾರಣೆ ಆಗಲಿಲ್ಲ, ಆದರೂ ದೊಡ್ಡ ಮೊತ್ತದ ಶುಲ್ಕ ಪಡೆದಿದ್ದಾರೆ ಮತ್ತು ಸೋಂಕು ನಿವಾರಣೆ ಬಗ್ಗೆ ಸುಳ್ಳು ಮಾಹಿತಿ ನೀಡಲಾಗಿತ್ತು. ಮರಣೋತ್ತರ ವರದಿಯಲ್ಲಿ ಸೋಂಕು ಇದೆ ಎಂದು ಉಲ್ಲೇಖಿಸಲಾಗಿದೆ, ನಲವತ್ತು ದಿನಗಳ ಚಿಕಿತ್ಸೆ ಬಳಿಕವೂ ಸೋಂಕು ಇದೆ ಎಂದರೆ ಹೇಗೆ? ಎಂಬುದು ಕುಟುಂಬಸ್ಥರ ಆರೋಪವಾಗಿತ್ತು.

ಈ ಕಾರಣಗಳಿಂದ ಡಿ.23 ರಂದು ರೋಗಿ ಬೆಳಗ್ಗೆ ಮೃತಪಟ್ಟಿದ್ದರೂ ಸಂಜೆ ಆದರೂ ಈ ವಿಷಯದಲ್ಲಿ ಪರ-ವಿರೋಧ ಚರ್ಚೆಗಳಿಂದ ಮೃತದೇಹ ಹಸ್ತಾಂತರ ಆಗಿರಲಿಲ್ಲ. ಈ ಸುದ್ದಿ ಅದೇ ದಿನ ಸಂಜೆ ವೇಳೆಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರಿಗೆ ತಲುಪಿದೆ. ವಿಷಯ ಗೊತ್ತಾಗುತ್ತಿದ್ದಂತೆ ಎಲ್ಲ ಮಾಹಿತಿ ತರಿಸಿಕೊಂಡು ಪರಿಶೀಲಿಸಿದ ಸಚಿವರು, ಆಡಳಿತ ಮಂಡಳಿಯವರನ್ನು ಸಂಪರ್ಕಿಸಿ ಪ್ರಕರಣದ ಬಗ್ಗೆ ವಿಚಾರಿಸಿದ್ದಾರೆ.

ಆಸ್ಪತ್ರೆ ಆಡಳಿತ, ತಮ್ಮದೇನೂ ತಪ್ಪಿಲ್ಲ, ರೋಗಿಗೆ ಕೋವಿಡ್‌ ಇರುವುದರಿಂದ ನಿಯಮಾವಳಿಗಳ ಅನ್ವಯ ಬಿಬಿಎಂಪಿ ಮೂಲಕ ದೇಹ ಹಸ್ತಾಂತರ ಮಾಡಬೇಕಿದೆ ಎಂಬ ಮಾಹಿತಿ ನೀಡಿದರಲ್ಲದೇ, ಬಾಕಿ ಇರುವ ಶುಲ್ಕ ಪಾವತಿ ಕುರಿತ ವಿವರ ನೀಡಿದರು. ಅಂತಿಮವಾಗಿ ಸಚಿವರು ನೀಡಿದ ಸೂಚನೆ ಹಿನ್ನೆಲೆಯಲ್ಲಿ ಇನ್ಷೂರೆನ್ಸ್‌ ಕಂಪನಿಯಿಂದ ಪಡೆದ ಹಣ ಮತ್ತು ರೋಗಿ ಪುತ್ರ ಪಟೇಲ್‌ ಮುಂಚಿತವಾಗಿ ಕಟ್ಟಿದ್ದ ಹಣಕ್ಕೆ ಬಿಲ್‌ ಮುಕ್ತಾಯಗೊಳಿಸಿ ದೇಹವನ್ನು ಮೃತರ ಕುಟುಂಬಸ್ಥರಿಗೆ ಡಿ.24ರಂದು ಕೋವಿಡಿ ವಿಧಿ ವಿಧಾನಗಳ ಅನ್ವಯ ಹಸ್ತಾಂತರಿಸಲಾಯಿತು. ಕಟ್ಟಬೇಕು ಎಂದು ತಿಳಿಸಿದ್ದ 10 ಲಕ್ಷದಷ್ಟು ಹಣವನ್ನು ಮನ್ನಾ ಮಾಡಲಾಯಿತು.

ಕುಟುಂಬಸ್ಥರ ಆರೋಪ

ನ.15ರಂದೇ ಭೀಮರಾವ್‌ ಪಟೇಲ್‌ ಅವರನ್ನು ಗ್ಯಾಸ್ಟ್ರಿಕ್‌ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮೂರು ದಿನಗಳ ಬಳಿಕ ಅವರಿಗೆ ಕೊರೋನಾ ಸೋಂಕು ಇದೆ ಎಂದು ತಿಳಿಸಲಾಯಿತು. ಅಂದಿನಿಂದ 20ನೇ ತಾರೀಖಿನವರೆಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರನ್ನು ನೋಡಲು ಬಿಟ್ಟಿರಲಿಲ್ಲ. ಆ ಮಧ್ಯೆ ವಿಮಾ ಕಂಪನಿಯಿಂದ 36.59 ಲಕ್ಷ ಮತ್ತು ನಗದು ರೂಪದಲ್ಲಿ 9,80 ಲಕ್ಷ ಪಾವತಿಸಲಾಗಿತ್ತು. ಸಾಯುವ ಹಿಂದಿನ ದಿನ ನೋಡಲೇ ಬೇಕು ಎಂದು ಒತ್ತಾಯಿಸಿದಾಗ ನಮ್ಮ ಕಡೆಯ 20 ಮಂದಿ ಭೇಟಿಗೆ ಅವಕಾಶ ನೀಡಲಾಗಿತ್ತು. ರೋಗಿ ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ. ಮರುದಿನ ಬೆಳಗ್ಗೆ ಮೃತಪಟ್ಟಿರುವುದಾಗಿ ಹೇಳಿ ಮತ್ತೆ 10 ಲಕ್ಷ ರೂ. ಬಾಕಿ ಕಟ್ಟುವಂತೆ ಒತ್ತಾಯಿಸಲಾಗಿತ್ತು. ಸಚಿವರ ಮಧ್ಯ ಪ್ರವೇಶದ ಬಳಿಕವಷ್ಟೇ ನಮಗೆ ದೇಹ ನೀಡಲಾಗಿದೆ ಎಂಬುದು ಕುಟುಂಬ ಸದಸ್ಯರ ದೂರು.

ಆರೋಪ ನಿರಾಕರಿಸಿದ ಆಸ್ಪತ್ರೆ

ಆದರೆ ಆರೋಪಗಳನ್ನು ನಿರಾಕರಿಸಿದ್ದ ಆಸ್ಪತ್ರೆ ಆಡಳಿತ ರೋಗಿಯನ್ನು ಉಳಿಸಿಕೊಳ್ಳಲು ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಮಾಡಲಾಗಿತ್ತು. ಹೆಚ್ಚುವರಿ ಶುಲ್ಕ ಕೇಳಿಲ್ಲ, ನಿಯಮಗಳ ಅನ್ವಯವೇ ದೇಹ ನೀಡಬೇಕಿದ್ದರಿಂದ ಆ ಪ್ರಕ್ರಿಯೆ ನಡೆಸಿ ಹಸ್ತಾಂತರಿಸಲಾಗಿದೆ ಎಂದು ತಿಳಿಸಿತ್ತು. ಒಟ್ಟಾರೆ ಪ್ರಕರಣ ಸಚಿವರ ಮಧ್ಯ ಪ್ರವೇಶದಿಂದ ತೆರೆ ಕಂಡಿದೆ. ಆದಾಗ್ಯೂ ವಿಮಾ ಕಂಪನಿಯಿಂದ 36.59 ಲಕ್ಷ ರೂ. ಹಾಗೂ ನಗದು ರೂಪದಲ್ಲಿ 9.80 ಸೇರಿ ಒಟ್ಟು 46.39 ಲಕ್ಷ ರೂ. ಬಿಲ್‌ ಅನ್ನು ಆಸ್ಪತ್ರೆ ಜಮೆ ಮಾಡಿಕೊಂಡಿದೆ!

ಈ ಬಗ್ಗೆ ಆರೋಗ್ಯ ಸಚಿವ ಮಾಧ್ಯಮ ಅಧಿಕಾರಿಯೇ ಈ ವರದಿಯನ್ನು ಬಿಡುಗಡೆ ಮಾಡಿದ್ದಾರೆ.

Tags: Covid-19dr k sudhakarhospital billkarnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಶಿರಾ ಗೆದ್ದು ರಾಜ್ಯವನ್ನು ಗೆಲ್ಲುತ್ತೇವೆ; ಆದರೆ, ಉಪ ಚುನಾವಣೆಯಿಂದ ಸರಕಾರ ಬೀಳಲ್ಲ ಎಂದ ಡಿಕೆಶಿ

ರಾತ್ರಿ ಕರ್ಫ್ಯೂ ನಿರ್ಧಾರ ಮುಖ್ಯಮಂತ್ರಿಯದ್ದಲ್ಲ; ಹೆಲ್ತ್‌ ಮಿನಿಸ್ಟರ್‌ ಡಾ.ಸುಧಾಕರ್‌ ಅವರದ್ದೇ ಐಡಿಯಾ ಎಂದು ದೂರಿದ ಡಿ.ಕೆ.ಶಿವಕುಮಾರ್‌

Leave a Reply Cancel reply

Your email address will not be published. Required fields are marked *

Recommended

ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳನ್ನು ಮಳೆ ವಿಪತ್ತು ಜಿಲ್ಲೆಗಳೆಂದು ಘೋಷಿಸಿ

ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳನ್ನು ಮಳೆ ವಿಪತ್ತು ಜಿಲ್ಲೆಗಳೆಂದು ಘೋಷಿಸಿ

5 years ago
ʼಧನಲಾಭʼ ಎಂಬ ನಕಲಿ ರಸಗೊಬ್ಬರ

ʼಧನಲಾಭʼ ಎಂಬ ನಕಲಿ ರಸಗೊಬ್ಬರ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ