- ಗುವಾಹಟಿ: ಹೊಸ ಕ್ಯಾಲೆಂಡರ್ ವರ್ಷದ ಪ್ರಾರಂಭಿಕ ದಿನವಾದ ಇಂದು, ಅಸ್ಸಾಂ ರಾಜ್ಯದ ಗುವಾಹಟಿ ನಗರದ ಪಶ್ಚಿಮ ಭಾಗದಲ್ಲಿರುವ ನೀಲಾಚಲ ಬೆಟ್ಟದ ಮೇಲೆ ನೆಲಸಿರುವ ಶಕ್ತಿಪೀಠ ಶ್ರೀ ಕಾಮಾಕ್ಯ ದೇವಾಲಯ ಕ್ಕೆ ಭೇಟಿ ನೀಡಿದ ಕರ್ನಾಟಕ ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ, ಕಾಮಾಕ್ಯ ದೇವಾಲಯ ದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
- ಭುವನೇಶ್ವರಿ, ಬಾಗಲಮುಖಿ, ಚಿನ್ನಮಸ್ತ, ತ್ರಿಪುರ ಸುಂದರಿ ಮತ್ತು ತಾರ ಅವರನ್ನು ಒಳಗೊಂಡಂತೆ ವಿವಿಧ ರೂಪಗಳಲ್ಲಿ ಕಂಗೊಳಿಸುವ ಜಗನ್ಮಾತೆ ತಾಯಿ ಗೆ ಪೂಜೆ ಸಲ್ಲಿಸಿದ ಸಚಿವ ರಮೇಶ್ ಜಾರಕಿಹೊಳಿ, ಮಾರಕ ಕೊರೋನಾ ಸೋಂಕು ಬೇಗ ನಾಶವಾಗಲಿ, ಸಮಾಜ ಸೋಂಕುಮುಕ್ತವಾಗಲಿ ಎಂದು ಬೇಡಿಕೊಂಡರು.
- ಶಾಸಕ ಮಹಶ್ ಕುಮಟಳ್ಳಿ ಹಾಗೂ ಮಾಜಿ ಸಚಿವ ಶಂಕರ್ ಮುಂತಾದವರು ಸಚಿವರ ಜತೆಯಲ್ಲಿದ್ದರು.
ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು
ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು


















