• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್: ಮಾರ್ಕ್ಸ್‌ ಕಾರ್ಡ್‌, ಟಿ.ಸಿ., ಪದವಿ ಪ್ರಮಾಣ ಪತ್ರ ಸೇರಿ ಸಮಗ್ರ ಶೈಕ್ಷಣಿಕ ದಾಖಲೆಗಳ ಭದ್ರತೆಗೆ ರಾಜ್ಯಕ್ಕೂ ಬರಲಿದೆ ಡಿಜಿ ಲಾಕರ್‌

cknewsnow desk by cknewsnow desk
January 6, 2021
in NEWS IN USE, STATE
Reading Time: 2 mins read
0
ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್: ಮಾರ್ಕ್ಸ್‌ ಕಾರ್ಡ್‌, ಟಿ.ಸಿ., ಪದವಿ ಪ್ರಮಾಣ ಪತ್ರ ಸೇರಿ ಸಮಗ್ರ  ಶೈಕ್ಷಣಿಕ ದಾಖಲೆಗಳ ಭದ್ರತೆಗೆ ರಾಜ್ಯಕ್ಕೂ ಬರಲಿದೆ ಡಿಜಿ ಲಾಕರ್‌
917
VIEWS
FacebookTwitterWhatsuplinkedinEmail

ಡಿಜಿಟಲ್‌ ಇಂಡಿಯಾದತ್ತ ಮಹತ್ವದ ಹೆಜ್ಜೆ ಇಟ್ಟ ಡಿಸಿಎಂ

Lead photo courtesy: NAD

ಬೆಂಗಳೂರು: ಎಸ್‌ಎಸ್‌ಎಲ್‌ಸಿಯಿಂದ ಮೊದಲುಗೊಂಡು ಉನ್ನತ ಶಿಕ್ಷಣದ ಕೊನೆ ಹಂತದವರೆಗೂ ವಿದ್ಯಾರ್ಥಿಗಳ ಎಲ್ಲ ಸಮಗ್ರ ಶೈಕ್ಷಣಿಕ ದಾಖಲೆಗಳನ್ನು ಡಿಜಿ ಲಾಕರ್‌ನಲ್ಲಿ ಭದ್ರವಾಗಿರಿಸುವ ಮಹತ್ವದ ಕಾರ್ಯಕ್ರಮ ಜಾರಿಗೆ ಬರಲಿದೆ.

ಮುಂದಿನ ದಿನಗಳಲ್ಲಿ ಯಾರೂ ದಾಖಲೆಗಳು ಕಳೆದುಹೋಗುತ್ತವೆ ಎಂದು ಭಯಪಡಬೇಕಿಲ್ಲ ಹಾಗೂ ತಮ್ಮ ದಾಖಲೆಗಳು ನಕಲಿಯಾಗುತ್ತವೆ ಎಂಬ ಆತಂಕವೂ ಇರುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಮುಂದಾಗಿದ್ದಾರೆ.

ಉನ್ನತ ಅಧಿಕಾರಿಗಳ ಜತೆ ಉನ್ನತ ಮಟ್ಟದ ಸಭೆ ನಡೆಸಿದ ಡಾ.ಸಿ.ಎನ್.ಅಶ್ವತ್ಥನಾರಾಯಣ.

ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ʼಶೈಕ್ಷಣಿಕ ಡಿಜಿ ಲಾಕರ್‌ʼ ವ್ಯವಸ್ಥೆ ರಾಜ್ಯದಲ್ಲಿ ಜಾರಿಗೆ ಬರುತ್ತದೆ. ಈ ವ್ಯವಸ್ಥೆಯಿಂದ ವಿದ್ಯಾರ್ಥಿಗಳ ದಾಖಲೆಗಳು ಸುರಕ್ಷಿತವಾಗಿರುತ್ತವೆ ಹಾಗೂ ಉದ್ಯೋಗದಾತರಿಗೂ ಇವು ಸಿಗಲಿವೆ. ಇನ್ನು ಮುಂದೆ ಕಾಗದ ರೂಪದ ಯಾವುದೇ ಶೈಕ್ಷಣಿಕ ದಾಖಲೆಗಳಿಗೆ ಅವಕಾಶ ಇರುವುದಿಲ್ಲ ಎಂದು ಉಪ ಮುಖ್ಯಮಂತ್ರಿಗಳು ತಿಳಿಸಿದರು.

ರಾಜ್ಯದ ಶೈಕ್ಷಣಿಕ ಕ್ಷೇತ್ರವನ್ನು ಡಿಜಿಟಲ್‌ನತ್ತ ಕೊಂಡೊಯ್ಯುವ ಇನ್ನೊಂದು ಮಹತ್ವದ ಹೆಜ್ಜೆ ಎಂದಿರುವ ಅವರು, ಈ ಸಂಬಂಧ ಬೆಂಗಳೂರಿನಲ್ಲಿ ಬುಧವಾರ ರಾಷ್ಟ್ರೀಯ ಶೈಕ್ಷಣಿಕ ದಾಖಲೆಗಳ ಸಂಗ್ರಹಗಾರ (National Academic Depository-NAD)ದ ಕೇಂದ್ರ ಮಟ್ಟದ ಅಧಿಕಾರಿಗಳು ಹಾಗೂ ರಾಜ್ಯದ ಶಿಕ್ಷಣ ಇಲಾಖೆಯ ವಿವಿಧ ಹಂತದ ಉನ್ನತ ಅಧಿಕಾರಿಗಳ ಜತೆ ಉನ್ನತ ಮಟ್ಟದ ಸಭೆ ನಡೆಸಿದ ನಂತರ ಈ ವಿಷಯ ತಿಳಿಸಿದರು.

ಈಗಾಗಲೇ ಕೇಂದ್ರ ಸರಕಾರದ ಮಟ್ಟದಲ್ಲಿ ಜಾರಿಯಾಗಿರುವ ಶೈಕ್ಷಣಿಕ ಡಿಜಿ ಲಾಕರ್‌ ವ್ಯವಸ್ಥೆಯನ್ನು ರಾಜ್ಯದಲ್ಲೂ ಕೂಡಲೇ ಜಾರಿಗೆ ತರಲು ನಿರ್ಧರಿಸಲಾಗಿದೆ. ಈ ಸಂಬಂಧ ನನ್ನ ನೇತೃತ್ವದಲ್ಲಿಯೇ ಉನ್ನತಾಧಿಕಾರ ಸಮಿತಿಯೊಂದನ್ನು ರಚನೆ ಮಾಡಲಾಗಿದ್ದು, ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ಸೇರಿ ಕಾರ್ಯಕ್ರಮ ಅನುಷ್ಠಾನ ಪ್ರಗತಿಯನ್ನು ಪರಿಶೀಲನೆ ಮಾಡಲಾಗುವುದು. ಸರಕಾರಿ, ಖಾಸಗಿ ಸೇರಿದಂತೆ ಯಾವುದೇ ಪದವಿ ಪ್ರದಾನ ಮಾಡುವ ವಿಶ್ವವಿದ್ಯಾಲಯ, ಕಾಲೇಜು, ಡೀಮ್ಡ್‌ ಯುನಿವರ್ಸಿಟಿಗಳೂ ಸೇರಿದಂತೆ ಎಲ್ಲ ಶೈಕ್ಷಣಿಕ ಸಂಸ್ಥೆಗಳು ಈ ವ್ಯವಸ್ಥೆಗೆ ಕಡ್ಡಾಯವಾಗಿ ಸೇರಿಕೊಳ್ಳಬೇಕು ಎಂದು ಡಿಸಿಎಂ ಸೂಚಿಸಿದರು.

ಏನಿದು ಶೈಕ್ಷಣಿಕ ಡಿಜಿ ಲಾಕರ್‌?

ಇದು ವಿದ್ಯಾರ್ಥಿಗಳ ಎಲ್ಲ ಶೈಕ್ಷಣಿಕ ದಾಖಲೆಗಳನ್ನು ಸುರಕ್ಷಿತವಾಗಿ ಸಂಗ್ರಹ ಮಾಡುವ ವ್ಯವಸ್ಥೆ. ಇದಕ್ಕೆ ರಾಷ್ಟ್ರೀಯ ಶೈಕ್ಷಣಿಕ ದಾಖಲೆಗಳ ಸಂಗ್ರಹಗಾರ (National Academic Depository-NAD) ಎಂದು ಕರೆಯಲಾಗುತ್ತದೆ. ಕೇಂದ್ರ ಸರಕಾರದ ಉಸ್ತುವಾರಿಯಲ್ಲಿ ಇದು ಕೆಲಸ ಮಾಡುತ್ತದೆ. ಸಂಗ್ರಹಣಾ ಸ್ಥಳವನ್ನು ಈ ಸಂಸ್ಥೆಯೇ ಒದಗಿಸುತ್ತದೆ. ವಿದ್ಯಾರ್ಥಿಗಳ ಅಂಕಪಟ್ಟಿ, ಪದವಿ ಪ್ರಮಾಣ ಪತ್ರಗಳು, ವರ್ಗಾವಣೆ ಪತ್ರ ಸೇರಿದಂತೆ ಅವರ ಎಲ್ಲ ಶೈಕ್ಷಣಿಕ ದಾಖಲೆಗಳನ್ನು ಇಲ್ಲಿ ಭದ್ರವಾಗಿ ಸಂಗ್ರಹಿಸಿಡಲಾಗಿರುತ್ತದೆ. ಹತ್ತನೇ ತರಗತಿ, ಪಿಯುಸಿ, ಡಿಗ್ರಿ, ಡಿಪ್ಲೊಮೋ, ಎಂಜಿನೀಯರಿಂಗ್‌, ಪದವಿ, ಸ್ನಾತಕೋತ್ತರ, ಐಟಿಐ ಸೇರಿದಂತೆ ಇನ್ನೂ ಅನೇಕ ವಿಭಾಗಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ದಾಖಲೆಗಳು ಇಲ್ಲಿ ಸಂಗ್ರಹವಾಗುತ್ತವೆ. ತನ್ನ ದಾಖಲೆಗಳನ್ನು ಆಕ್ಸೆಸ್‌ ಮಾಡಲು ಪ್ರತಿ ವಿದ್ಯಾರ್ಥಿಗೂ ಅವಕಾಶ ಇರುತ್ತದೆ. ಯಾವಾಗ ಬೇಕಾದರೂ ಅವುಗಳನ್ನು ನೋಡಿಕೊಳ್ಳಬಹುದು. ಜತೆಗೆ, ಆ ವಿದ್ಯಾರ್ಥಿಯ ಉದ್ಯೋಗದಾತನೂ ಕೂಡ ಆ ಉದ್ಯೋಗ ನೀಡುವುದಕ್ಕೆ ಮುನ್ನ ಪರಿಶೀಲನೆ ಮಾಡಬಹುದು. ಇಲ್ಲಿ ಎಲ್ಲ ದಾಖಲೆಗಳು ಸುರಕ್ಷಿತವಾಗಿರುತ್ತವೆ ಹಾಗೂ ಕದಿಯುವ ಅಥವಾ ಕಳುವಾಗುವ ಅವಕಾಶ ಇರುವುದೇ ಇಲ್ಲ. ನಕಲು ಮಾಡುವ ಸಾಧ್ಯತೆಯೂ ಇರುವುದಿಲ್ಲ. ಮಳೆ, ಗಾಳಿಗೆ ಸಿಕ್ಕಿ ಹಾಳಾಗುತ್ತವೆ ಎನ್ನುವ ಭಯವೂ ಇರುವುದಿಲ್ಲ.

ರಾಜ್ಯದಲ್ಲಿ 2003ರಿಂದಲೇ ಎಸ್ಸೆಸ್ಸೆಲ್ಸಿ ಅಂಕಪಟ್ಟಿಯನ್ನು, 2008ರಿಂದ ದ್ವಿತೀಯ ಪಿಯುಸಿ ಅಂಕಪಟ್ಟಿಯನ್ನು ಡಿಜಿಟಲೀಕರಣ ಮಾಡಲಾಗಿದೆ. ಆಗಿನಿಂದ ಮುದ್ರಿತ ಅಂಕಪಟ್ಟಿಗಳನ್ನು ವಿದ್ಯಾರ್ಥಿಗಳಿಗೆ ನೀಡುತ್ತಿದ್ದರೂ ಆ ದತ್ತಾಂಶ ನಮ್ಮಲ್ಲಿ ಇದೆ. ಆ ದತ್ತಾಂಶವನ್ನು ಈಗ ರಾಷ್ಟ್ರೀಯ ಶೈಕ್ಷಣಿಕ ದಾಖಲೆಗಳ ಸಂಗ್ರಹಗಾರ (National Academic Depository-NAD) ಪೋರ್ಟಲ್‌ಗೆ ಅಪ್‌ಲೋಡ್‌ ಮಾಡಲಾಗುವುದು.

ಶೈಕ್ಷಣಿಕ ಡಿಜಿ ಲಾಕರ್‌ ಆಕ್ಸಸ್‌ ಹೇಗೆ?

ಅಂದಹಾಗೆ ಈ ಲಾಕರ್‌ನ ಪ್ರವೇಶ ಸುಲಭ. ಪ್ರತಿ ವಿದ್ಯಾರ್ಥಿಯೂ ತನ್ನ ಆಧಾರ್‌ ಸಂಖ್ಯೆ ಮೂಲಕ National Academic Depository-NAD ಪೋರ್ಟಲ್‌ಗೆ ನೋಂದಣಿ ಮಾಡಿಕೊಳ್ಳಬಹುದು. ಅದರಲ್ಲಿ ತನ್ನ ಇ-ಕೆವೈಸಿಯನ್ನು ತುಂಬಿ ಅಪ್‌ಲೋಡ್‌ ಮಾಡಿದ ನಂತರ ತನ್ನೆಲ್ಲ ದಾಖಲೆಗಳನ್ನು ಯಾವುದೇ ವಿದ್ಯಾರ್ಥಿಯೂ ಆಕ್ಸೆಸ್‌ ಮಾಡಬಹುದು. ಇನ್ನು ಎಲ್ಲ ವಿವಿಗಳು, ಶೈಕ್ಷಣಿಕ ಸಂಸ್ಥೆಗಳು ತಮ್ಮಲ್ಲಿ ವ್ಯಾಸಂಗ ಮಾಡಿ ಪದವಿ ಅಥವಾ ಯಾವುದೇ ಸರ್ಟಿಫಿಕೇಟ್‌ ಪಡೆದ ವಿದ್ಯಾರ್ಥಿಯ ಎಲ್ಲ ದಾಖಲೆಗಳನ್ನು ಡಿಜಿಟಲ್‌ ಸಹಿಯೊಂದಿಗೆ ಈ ಪೋರ್ಟಲ್‌ಗೆ ಅಪ್‌ಲೋಡ್‌ ಮಾಡಬೇಕು.

ಹಣಕಾಸು ಹೊರೆ ಇಲ್ಲ

ನಮ್ಮ ವಿದ್ಯಾರ್ಥಿಗಳ ದಾಖಲೆಗಳಿಗೆ ಬೇಕಾದ ಸ್ಪೇಸ್‌ ಅನ್ನು NAD ನೀಡುತ್ತದೆ. ನಿರ್ವಹಣೆ ಮತ್ತು ಭದ್ರತೆಯ ಹೊಣೆಗಾರಿಕೆಯೂ ಆ ಸಂಸ್ಥೆಯದ್ದೇ. ಹೀಗಾಗಿ ರಾಜ್ಯಕ್ಕೆ ಹಣಕಾಸು ಹೊರೆ ಬೀಳುವುದಿಲ್ಲ. ನಮ್ಮ ಕಡೆಯಿಂದ ವಿದ್ಯಾರ್ಥಿಗಳ ದಾಖಲೆಗಳನ್ನು ಅಪ್‌ಲೋಡ್‌ ಮಾಡಿದರೆ ಸಾಕು ಎಂದರು ಅವರು.

ರಾಜ್ಯ ಹಿಂದೆ ಬಿದ್ದಿದೆ

ಡಿಜಟಲ್‌ ಇಂಡಿಯಾ ಡ್ರೈವ್‌ ಮೂಲಕ ಶೈಕ್ಷಣಿಕ ಡಿಜಿ ಲಾಕರ್‌ ವ್ಯವಸ್ಥೆಯನ್ನು ಕೇಂದ್ರ ಸರಕಾರ ಬಹಳ ಹಿಂದೆಯೇ ಅನುಷ್ಠಾನಕ್ಕೆ ತಂದಿದೆ. ಆದರೆ, ಇಂಥ ಕ್ರಾಂತಿಕಾರಕ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ಹಿಂದಿನ ಸರಕಾರಗಳು ನಿರ್ಲಕ್ಷ್ಯ ತಾಳಿದ್ದವು. ಅಂಕಿ-ಅಂಶಗಳ ಪ್ರಕಾರ ಈ ವ್ಯವಸ್ಥೆಯನ್ನು ಅಳವಡಿಸಿಕೊಳ್ಳುವಲ್ಲಿ ಕರ್ನಾಟಕವು 22ನೇ ಸ್ಥಾನದಲ್ಲಿದೆ. ಐಟಿ, ತಂತ್ರಜ್ಞಾನ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿರುವ ನಮ್ಮ ರಾಜ್ಯ ಇಂಥ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ಹಿಂದೆಮುಂದೆ ನೋಡಿರುವುದನ್ನು ಕಂಡು ನನಗೆ ನೋವಾಯಿತು. ಕೂಡಲೇ ಈ ವ್ಯವಸ್ಥೆಯನ್ನು ಜಾರಿ ಮಾಡಲು ಎಲ್ಲ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಡಾ.ಅಶ್ವತ್ಥನಾರಾಯಣ ವಿವರಿಸಿದರು.

ಇಡೀ ಜಗತ್ತು ಡಿಜಿಟಲ್‌ ಜಗತ್ತಿನ ಹಿಂದೆ ಶರವೇಗದಲ್ಲಿ ಪ್ರಯಾಣ ಮಾಡುತ್ತಿದೆ. ಈ ವಿಷಯದಲ್ಲಿ ಕರ್ನಾಟಕ ಯಾವ ಕಾರಣಕ್ಕೂ ಹಿಂದೆ ಬೀಳಬಾರದು. ಈ ಹಿನ್ನೆಲೆಯಲ್ಲಿ ಶೈಕ್ಷಣಿಕ ಡಿಜಿ ಲಾಕರ್‌ ಸಿಸ್ಟಮ್‌ ಜಾರಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ನನ್ನ ನೇತೃತ್ವದಲ್ಲಿ ಉನ್ನತಾಧಿಕಾರಿ ಸಮಿತಿ ರಚನೆ ಜತೆಗೆ, ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಚಾಲನಾ ಸಮಿತಿ, ಇ-ಗವರ್ನೆನ್ಸ್‌ ಯೋಜನಾ ನಿರ್ದೇಶಕರ ನೇತೃತ್ವದಲ್ಲಿ ಯೋಜನಾ ನಿರ್ವಹಣಾ ಸಮಿತಿಯನ್ನು ರಚಿಸಲಾಗಿದೆ ಎಂದು ಡಿಸಿಎಂ ತಿಳಿಸಿದರು.

ಇ- ಆಡಳಿತ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೀವ್ ಚಾವ್ಲಾ, ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ್ ನಾಯಕ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್, ಪಿಯು ನಿರ್ದೇಶಕಿ ಸ್ನೇಹಲ್, ಪ್ರೌಢಶಿಕ್ಷಣ ಇಲಾಖೆಯ ನಿರ್ದೇಶಕಿ ಸುಮಂಗಲ ಹಾಜರಿದ್ದರು. ಎನ್ಎಡಿ ಪ್ರತಿನಿಧಿ ಅಮಿತ್ ಅವರು ದೆಹಲಿಯಿಂದಲೇ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು.

  • ಅಂದ ಹಾಗೆ ಈ ಡಿಜಿ ಲಾಕರ್‌ ಬಗ್ಗೆ ಇನ್ನಷ್ಟು ತಾಂತ್ರಿಕ ಮಾಹಿತಿ ಬೇಕಿದ್ದರೆ ಈ ವೆಬ್‌ತಾಣಕ್ಕೆ ಭೇಟಿ ನೀಡಿ..

https://www.nad.gov.in/

Tags: digilockerdr cn ashwath narayaneducational recordsNational Academic Depository
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಕೊನೆಗೂ ಎಕ್ಸಾಮ್‌ ಸುದ್ದಿ ಕೊಟ್ಟ ಸುರೇಶ್‌ ಕುಮಾರ್; ಸೆಕೆಂಡ್‌ ಪಿಯುಸಿ ವಿದ್ಯಾರ್ಥಿಗಳಿಗೆ ಮೇ ತಿಂಗಳಲ್ಲಿ, ಎಸ್ಎಸ್ಎಲ್ಸಿ ಮಕ್ಕಳಿಗೆ ಜೂನ್‌ನಲ್ಲಿ ಪರೀಕ್ಷೆ

ಕೊನೆಗೂ ಎಕ್ಸಾಮ್‌ ಸುದ್ದಿ ಕೊಟ್ಟ ಸುರೇಶ್‌ ಕುಮಾರ್; ಸೆಕೆಂಡ್‌ ಪಿಯುಸಿ ವಿದ್ಯಾರ್ಥಿಗಳಿಗೆ ಮೇ ತಿಂಗಳಲ್ಲಿ, ಎಸ್ಎಸ್ಎಲ್ಸಿ ಮಕ್ಕಳಿಗೆ ಜೂನ್‌ನಲ್ಲಿ ಪರೀಕ್ಷೆ

Leave a Reply Cancel reply

Your email address will not be published. Required fields are marked *

Recommended

#NoHijab : ಹಿಜಾಬ್‌ ಆದೆಶ ವಾಪಸ್">
#NoHijab : ಹಿಜಾಬ್‌ ಆದೆಶ ವಾಪಸ್

#NoHijab : ಹಿಜಾಬ್‌ ಆದೆಶ ವಾಪಸ್

3 years ago
ಕೊನೆಗೂ ಎಕ್ಸಾಮ್‌ ಸುದ್ದಿ ಕೊಟ್ಟ ಸುರೇಶ್‌ ಕುಮಾರ್; ಸೆಕೆಂಡ್‌ ಪಿಯುಸಿ ವಿದ್ಯಾರ್ಥಿಗಳಿಗೆ ಮೇ ತಿಂಗಳಲ್ಲಿ, ಎಸ್ಎಸ್ಎಲ್ಸಿ ಮಕ್ಕಳಿಗೆ ಜೂನ್‌ನಲ್ಲಿ ಪರೀಕ್ಷೆ

SSLC ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ: ಜೂನ್‌ 21ರಿಂದ ಜುಲೈ 5ರವರೆಗೆ ಪರೀಕ್ಷೆ; ಸಮಯವಿದೆ, ಚೆನ್ನಾಗಿ ಓದಿ ಎಂದು ಮಕ್ಕಳಿಗೆ ಧೈರ್ಯ ತುಂಬಿದ ಸಚಿವ ಸುರೇಶ್‌ ಕುಮಾರ್‌

6 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ