• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಎಸ್‌ಎಸ್‌ಎಲ್‌ಸಿ ರಿಸಲ್ಟ್‌, ನರೇಗಾ ಸಾಧನೆ ನಂತರ ಆಡಳಿತ-ಕಾರ್ಯಕ್ಷಮತೆಯಲ್ಲೂ ಚಿಕ್ಕಬಳ್ಳಾಪುರ ಜಿಲ್ಲೆ ಮುಂದೆ, ಸಕಾಲ ಸೇವೆಯಲ್ಲೂ ನಂ.1

cknewsnow desk by cknewsnow desk
January 9, 2021
in CHIKKABALLAPUR, STATE
Reading Time: 1 min read
0
ಎಸ್‌ಎಸ್‌ಎಲ್‌ಸಿ ರಿಸಲ್ಟ್‌, ನರೇಗಾ ಸಾಧನೆ ನಂತರ ಆಡಳಿತ-ಕಾರ್ಯಕ್ಷಮತೆಯಲ್ಲೂ ಚಿಕ್ಕಬಳ್ಳಾಪುರ ಜಿಲ್ಲೆ ಮುಂದೆ, ಸಕಾಲ ಸೇವೆಯಲ್ಲೂ ನಂ.1

ಆರ್.ಲತಾ

1.1k
VIEWS
FacebookTwitterWhatsuplinkedinEmail
  • ಎಂ.ಕೃಷ್ಣಪ್ಪ ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ: ಸಕಾಲ ಸೇವೆಯಲ್ಲಿ ಜಿಲ್ಲಾಡಳಿತ ಮತ್ತೆ ಉತ್ತಮ ಸಾಧನೆ ಮಾಡಿದೆ. ಜಿಲ್ಲೆಯಲ್ಲಿ ವಿಳಂಬ ರಹಿತವಾಗಿ ಸಾರ್ವಜನಿಕ ಅರ್ಜಿಗಳ ವಿಲೇವಾರಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಗಳಿಸಿದೆ.

ಈಗಾಗಲೇ ಹತ್ತನೇ ತರಗತಿ ಫಲಿತಾಂಶ ಹಾಗೂ ನರೇಗಾ ಕಾಮಗಾರಿಗಳ ಗುರಿ ಸಾಧನೆಯಲ್ಲೂ ರಾಜ್ಯದ ಮೂವತ್ತೂ ಜಿಲ್ಲೆಗಳನ್ನು ಮೀರಿಸಿ ಸಾಧನೆ ಮಾಡಿದ್ದ ಚಿಕ್ಕಬಳ್ಳಾಪುರ ಇದೀಗ ಸಕಾಲ ಸೇವೆಯಲ್ಲೂ ನಂಬರ್‌ ಒನ್‌ ಸ್ಥಾನಕ್ಕೇರಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಜೀಡಿದ ಮತ್ತಷ್ಟು ಮಾಹಿತಿ ಹೀಗಿದೆ;

ಡಿಸೆಂಬರ್ ತಿಂಗಳಲ್ಲಿ ಪ್ರಥಮ ಸ್ಥಾನ ಗಳಿಸಿದ್ದು, ಸಕಾಲ ಅಧಿನಿಯಮದಡಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಳೆದ ಡಿಸೆಂಬರ್ ತಿಂಗಳಲ್ಲಿ ಒಟ್ಟು ೫೨,೨೧೭ ಅರ್ಜಿ ಸ್ವೀಕರಿಸಲಾಗಿತ್ತು. ಈ ಪೈಕಿ ೫೨,೬೬೦ ಅರ್ಜಿ (ಬಾಕಿ ಅರ್ಜಿಗಳು ಸೇರಿ)ಗಳನ್ನು ಸಕಾಲದಲ್ಲಿ ವಿಲೇವಾರಿ ಮಾಡಲಾಗಿದೆ. ಸೂಕ್ತ ದಾಖಲೆ ಸಲ್ಲಿಸದ ಮತ್ತು ಇನ್ನಿತರೇ ಕಾರಣಗಳಿಂದಾಗಿ ೧೮೮೩ ಅರ್ಜಿಗಳು ತಿರಸ್ಕೃತಗೊಂಡಿವೆ.

ಜಿಲ್ಲೆಯಲ್ಲಿ ಅಕ್ಟೋಬರ್‌ನಲ್ಲಿ ಒಟ್ಟು ೫೩,೦೨೫ ಅರ್ಜಿಗಳು ಸ್ವೀಕೃತಗೊಂಡಿದ್ದವು. ಈ ಪೈಕಿ ೫೩,೧೫೩ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿತ್ತು. ಅದೇ ರೀತಿಯಲ್ಲಿ ನವೆಂಬರ್‌ನಲ್ಲಿ ಒಟ್ಟು ೫೯,೬೮೭ ಅರ್ಜಿಗಳನ್ನು ಸ್ವೀಕೃತಗೊಂಡಿದ್ದವು. ಇದರಲ್ಲಿ ೫೮,೦೦೬ ಅರ್ಜಿಗಳು ವಿಲೇವಾರಿ ಮಾಡಲಾಗಿದೆ.

ಸಕಾಲ ಸೇವೆಗಳನ್ನು ಪರಿಣಾಮಕಾರಿಯಾಗಿ ವಿಲೇವಾರಿ ಮಾಡುವ ಮೂಲಕ ೨೦೨೦ರ ಅಕ್ಟೋಬರ್ ತಿಂಗಳಲ್ಲಿ ರಾಜ್ಯದಲ್ಲಿಯೇ ೩ನೇ ಸ್ಥಾನ ಪಡೆದಿತ್ತು. ಇದೀಗ ಡಿಸೆಂಬರ್‌ನಲ್ಲಿ ಮತ್ತೆ ಪ್ರಥಮ ಸ್ಥಾನ ಕಾಯ್ದುಕೊಳ್ಳುವ ಮೂಲಕ ಜಿಲ್ಲಾಧಿಕಾರಿಗಳಾದ ಆರ್.ಲತಾ ಅವರು ಜಿಲ್ಲಾ ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಜನಸ್ನೇಹಿಯಾಗಿ ಮಾಡಿದ್ದಾರೆ.

ಸಕಾಲ ಯೋಜನೆಗಳು: ರಾಜ್ಯ ಸರಕಾರ ನಿಗದಿಪಡಿಸಿರುವ ಸಕಾಲ ಸೇವೆಗಳು ಸೂಕ್ತ ಸಮಯಕ್ಕೆ ಸರಿಯಾಗಿ ಸಾರ್ವಜನಿಕರಿಗೆ ವಿಲೇವಾರಿ ಮಾಡಲಾಗುತ್ತದೆ. ಇದರಲ್ಲಿ ೭ ಕೆಲಸದ ದಿನಗಳಲ್ಲಿ ಜನನ ಮತ್ತು ಮರಣ ಪ್ರಮಾಣ ಪತ್ರಗಳ ವಿತರಿಸಲಾಗುತ್ತದೆ. ೧೫ ದಿನಗಳಲ್ಲಿ ವಾಣಿಜ್ಯ ಪರವಾನಗಿ ನೀಡುವಿಕೆ, ೭ ದಿನಗಳಲ್ಲಿ ಖಾತಾ ನಕಲು ನೀಡುವುದು, ೩೦ ದಿನಗಳಲ್ಲಿ ೨೪೦೦ ಚದರ ಅಡಿಗಳವರೆಗಿನ ವಸತಿ ನಿರ್ಮಾಣ ಮಾದರಿಯ ಕಟ್ಟಡ ಯೋಜನೆಯನ್ನು ಅನುಮೋದಿಸುವುದು, ೧೫ ದಿನಗಳಲ್ಲಿ ವಸತಿ ಕಟ್ಟಡಗಳಿಗೆ ನೀರು ಸರಬರಾಜು ಮತ್ತು ಒಳ ಚರಂಡಿಯ ಹೊಸ ಸಂಪರ್ಕಕ್ಕಾಗಿ ಅನುಮತಿ ನೀಡುವುದು ಹಾಗೂ ೭ ದಿನಗಳಲ್ಲಿ ವಾಸ ದೃಢೀಕರಣ ಪ್ರಮಾಣ ಪತ್ರ ನೀಡಿಕೆ ಸೇರಿದಂತೆ ೧೦೨೫ ಸೇವೆಗಳನ್ನು ಕಡ್ಡಾಯವಾಗಿ ಕಾಲ ಮಿತಿಯೊಳಗೆ ವಿಲೇವಾರಿ ಮಾಡಲಾಗುತ್ತದೆ.

ಸೇವೆಯಲ್ಲಿರುವ ಇಲಾಖೆಗಳು: ಪೊಲೀಸ್ ಇಲಾಖೆ ಸೇರಿದಂತೆ ಕಂದಾಯ, ಸ್ಥಳೀಯ ಪ್ರಾಧಿಕಾರದ ಪುರಸಭೆ, ನಗರಸಭೆ ಹಾಗೂ ಪಟ್ಟಣ ಪಂಚಾಯತಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಆಹಾರ ಮತ್ತು ನಾಗರೀಕ ಸರಬರಾಜು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ, ಅಂಗವಿಕಲರ ಕಲ್ಯಾಣಾಭಿವೃದ್ಧಿ ಇಲಾಖೆ, ಸಾರಿಗೆ ಇಲಾಖೆ ಸೇರಿದಂತೆ ೯೮ ಇಲಾಖೆಗಳು ಸಕಾಲದ ವ್ಯಾಪ್ತಿಗೆ ಬರುತ್ತವೆ.

“ಇಂದು ನಾಳೆ ಇನ್ನಿಲ್ಲ, ಹೇಳಿದ ಸಮಯಕ್ಕೆ ತಪ್ಪೊಲ್ಲ” ಎಂಬ ಘೋಷ ವಾಕ್ಯದಡಿ ಜಾರಿಗೆ ಬಂದಿರುವ ಸಕಾಲ ಸೇವೆಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ನಿಯಂತ್ರಿಸಲಾಗುತ್ತದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಯಿಂದ ಹಿಡಿದು ಅರ್ಜಿ ವಿಲೇವಾರಿ ಆಗುವ ತನಕ ಎಲ್ಲ ಪ್ರಕ್ರಿಯೆಯು ಆನ್‌ಲೈನ್ ಮೂಲಕವೇ ನಡೆಯುತ್ತದೆ. ಸಕಾಲದಡಿ ಸಾರ್ವಜನಿಕರು ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸುವುದರಿಂದ ತಮ್ಮ ಅಮೂಲ್ಯವಾದ ಸಮಯವನ್ನು ಸರ್ಕಾರಿ ಕಚೇರಿಗಳ ಸುತ್ತಮುತ್ತ ಕಳೆಯು ಅವಶ್ಯಕತೆ ಇಲ್ಲವಾಗಿದೆ. ಇಂತಹ ಸಕಾಲ ಸೇವೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯು ಮೊದಲನೇ ಸ್ಥಾನದಲ್ಲಿರುವುದು ಅತ್ಯಂತ ಹೆಮ್ಮೆಯ ವಿಷಯ.

ಸಕಾಲ ಸೇವೆ ಅತಿ ಸುಲಭ: ಸಕಾಲ ಸೇವೆ ಸಂಪೂರ್ಣ ಗಣಕೀಕೃತಗೊಂಡಿದ್ದು, ಸಾರ್ವಜನಿಕರಿಗೆ ಅರ್ಜಿಗಳನ್ನು ಅತಿ ಸುಲಭವಾಗಿ ಸಲ್ಲಿಸಬಹುದು. ನಾಗರೀಕರು ಅರ್ಜಿ ಸಲ್ಲಿಸಿದೊಡನೆ ಜಿಎಸ್ಟಿ ರಸೀದಿ ನೀಡಲಾಗುತ್ತದೆ. ರಸೀದಿಯಲ್ಲಿ ಸೇವೆ ನೀಡಬೇಕಾಗಿರುವ ಅವಧಿಯನ್ನೂ ನಮೂದಿಸಲಾಗುತ್ತದೆ. ಇದರಿಂದ ನಾಗರೀಕರು ಅವಧಿಯು ಉಳಿತಾಯವಾಗುತ್ತದೆ. 

ಜಿಲ್ಲಾಧಿಕಾರಿಗಳ ಸಂತಸ

ಸಕಾಲ ಸೇವೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಮೊದಲನೇ ಸ್ಥಾನ ಗಳಿಸಿರುವುದು ಅತ್ಯಂತ ಸಂತಸದ ವಿಷಯ. ಜಿಲ್ಲೆಯ ಸಕಾಲ ತಂಡ ಉತ್ತಮವಾದ ಕಾರ್ಯನಿರ್ವಹಣೆ ಮಾಡಿದೆ. ಜಿಲ್ಲೆಯಲ್ಲಿ ೨೦೨೦ರ ಡಿಸೆಂಬರ್ ತಿಂಗಳಲ್ಲಿ ಸಕಾಲ ಅಧಿನಿಯಮದಡಿ ಒಟ್ಟು ೫೨,೨೧೭ ಅರ್ಜಿಗಳು ಸ್ವೀಕೃತವಾಗಿದ್ದು, ಆ ಪೈಕಿ ೫೨,೬೬೦ ಅರ್ಜಿಗಳನ್ನು ಸಕಾಲದಲ್ಲಿ ವಿಲೇವಾರಿ ಮಾಡಲಾಗಿದೆ. ಈ ಸಾಧನೆಗೆ ಎಲ್ಲಾ ಇಲಾಖೆ ಅಧಿಕಾರಿ, ಸಿಬ್ಬಂದಿಗಳ ಪರಿಶ್ರಮವೇ ಕಾರಣ. ಇದೇ ಗುಣಮಟ್ಟವನ್ನು ಕಾಯ್ದುಕೊಳ್ಳಲು ಶ್ರಮಿಸಲಾಗುವುದು.


-ಆರ್.ಲತಾ, ಜಿಲ್ಲಾಧಿಕಾರಿ

Tags: karnatakar latha iassakala chikkaballapur
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಚಿಕ್ಕಬಳ್ಳಾಪುರಕ್ಕೆ ಚೀಯರ್ಸ್ ;‌ ಡಾ.ಸುಧಾಕರ್ʼಗೆ ವೈದ್ಯಶಿಕ್ಷಣ ಜತೆಗೆ ಆರೋಗ್ಯ ಖಾತೆ

ಚಿಕ್ಕಬಳ್ಳಾಪುರ, ಕೋಲಾರ ಸೇರಿ ರಾಜ್ಯದ 263 ಕಡೆ ಇಂದಿನಿಂದಲೇ ಲಸಿಕೆ ತಾಲೀಮು: ಹಕ್ಕಿಜ್ವರದ ಬಗ್ಗೆ ಭಯ ಬೇಡ, ಎಚ್ಚರವಿರಲಿ ಎಂದ ಸಚಿವ ಡಾ.ಕೆ.ಸುಧಾಕರ್

Leave a Reply Cancel reply

Your email address will not be published. Required fields are marked *

Recommended

ಮಾರ್ಚ್‌ 31ರ ಒಳಗಾಗಿ ಬಾಗೇಪಲ್ಲಿ ಕ್ಷೇತ್ರದ  24 ಕೆರೆಗಳಿಗೆ ಸಂಸ್ಕರಿತ ತ್ಯಾಜ್ಯ ನೀರು

ಮಾರ್ಚ್‌ 31ರ ಒಳಗಾಗಿ ಬಾಗೇಪಲ್ಲಿ ಕ್ಷೇತ್ರದ 24 ಕೆರೆಗಳಿಗೆ ಸಂಸ್ಕರಿತ ತ್ಯಾಜ್ಯ ನೀರು

3 years ago
ತೇಜಸ್ವಿ ಸ್ಮರಿಸುತ್ತಲೇ ಪ್ರಕೃತಿ ಉದ್ಧಾರದ ಪಾಠ ಮಾಡಿದ ಡಾ.ಕೆ.ಸುಧಾಕರ್‌

ತೇಜಸ್ವಿ ಸ್ಮರಿಸುತ್ತಲೇ ಪ್ರಕೃತಿ ಉದ್ಧಾರದ ಪಾಠ ಮಾಡಿದ ಡಾ.ಕೆ.ಸುಧಾಕರ್‌

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ