• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಚಿಕ್ಕಬಳ್ಳಾಪುರ ನ್ಯಾಯ ವ್ಯವಸ್ಥೆಯಲ್ಲಿ ಹೊಸ ಇತಿಹಾಸ ಬರೆದ ಜಸ್ಟೀಸ್‌ ಅಭಯ್ ಶ್ರೀನಿವಾಸ ಒಕ; ಕೌಟುಂಬಿಕ ನ್ಯಾಯಾಲಯವನ್ನು ಸಿವಿಲ್ ಕೋರ್ಟ್ ಸಹಾಯಕರಿಬ್ಬರಿಂದ ಲೋಕಾರ್ಪಣೆ ಮಾಡಿಸಿದ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ

cknewsnow desk by cknewsnow desk
January 7, 2021
in CHIKKABALLAPUR, STATE
Reading Time: 1 min read
0
ಚಿಕ್ಕಬಳ್ಳಾಪುರ ನ್ಯಾಯ ವ್ಯವಸ್ಥೆಯಲ್ಲಿ ಹೊಸ ಇತಿಹಾಸ ಬರೆದ ಜಸ್ಟೀಸ್‌ ಅಭಯ್ ಶ್ರೀನಿವಾಸ ಒಕ; ಕೌಟುಂಬಿಕ ನ್ಯಾಯಾಲಯವನ್ನು ಸಿವಿಲ್ ಕೋರ್ಟ್ ಸಹಾಯಕರಿಬ್ಬರಿಂದ ಲೋಕಾರ್ಪಣೆ ಮಾಡಿಸಿದ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ
914
VIEWS
FacebookTwitterWhatsuplinkedinEmail

ಒಂದು ಪ್ರಕರಣ ಮೂರು ಕುಟುಂಬಗಳ ಮೇಲೆ ಪರಿಣಾಮ ಬೀರುತ್ತದೆ ಎಂದರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು

  • ಮೇಲಿನ ಚಿತ್ರ: ಮುಖ್ಯ ನ್ಯಾಯಮೂರ್ತಿಗಳಾದ ಅಭಯ್ ಶ್ರೀನಿವಾಸ ಒಕ ಅವರ ಸಮಕ್ಷಮದಲ್ಲಿ ಕೌಟುಂಬಿಕ ನ್ಯಾಯಾಲಯವನ್ನು ಉದ್ಘಾಟನೆ ಮಾಡಿದ ನಾರಾಯಣಸ್ವಾಮಿ ಹಾಗೂ ಲಕ್ಷ್ಮೀದೇವಮ್ಮ.

***

  • ಎಂ.ಕೃಷ್ಣಪ್ಪ ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ:  ನ್ಯಾಯಾಂಗದ ಇತಿಹಾಸದಲ್ಲೇ ಅತ್ಯಂತ ಅಪರೂಪದ ಹಾಗೂ ವಿಶೇಷ ಸನ್ನಿವೇಶ ಒಂದಕ್ಕೆ ಗುರುವಾರದಂದು ಚಿಕ್ಕಬಳ್ಳಾಪುರ ಜಿಲ್ಲೆಯು ಸಾಕ್ಷಿಯಾಯಿತು.

ನಗರದ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ನೂತನವಾಗಿ ನಿರ್ಮಿಸಲಾಗಿದ್ದ ಜಿಲ್ಲಾ ಕೌಟುಂಬಿಕ ನ್ಯಾಯಾಲಯವನ್ನು ಉದ್ಘಾಟಿಸಬೇಕಾಗಿದ್ದ ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಅಭಯ್ ಶ್ರೀನಿವಾಸ ಒಕ ಅವರು, ಜಿಲ್ಲೆಯ ನ್ಯಾಯಾಂಗ ವ್ಯವಸ್ಥೆಯಲ್ಲಿಯೇ ಕಾರ್ಯನಿರ್ವಹಿಸುತ್ತಿರುವ ಇಬ್ಬರು ಸಹಾಯಕರ ಹಸ್ತದಿಂದ ಉದ್ಘಾಟನೆ ಮಾಡಿಸುವ ಮೂಲಕ ಹೊಸ ಇತಿಹಾಸವನ್ನೇ ಬರೆದರು.

ಪೂರ್ವ ನಿಗದಿಯಂತೆ ಮುಖ್ಯ ನ್ಯಾಯಮೂರ್ತಿಗಳೇ ಈ ನ್ಯಾಯಾಲಯವನ್ನು ಉದ್ಘಾಟಿಸಬೇಕಾಗಿತ್ತು. ಆದರೆ, ಟೇಪ್‌ ಕತ್ತರಿಸುವ ಜಾಗಕ್ಕೆ ಬಂದ ಕೂಡಲೇ ಅವರು, ಜಿಲ್ಲೆಯ ಹಿರಿಯ ಶ್ರೇಣಿ ಸಿವಿಲ್‌ ನ್ಯಾಯಾಲಯದಲ್ಲಿ ಸಹಾಯಕರಾಗಿ ಕಾರ್ಯ ನಿರ್ವಹಿಸುತ್ತಿರುವ ನಾರಾಯಣಸ್ವಾಮಿ ಹಾಗೂ ಲಕ್ಷ್ಮೀದೇವಮ್ಮ ಅವರನ್ನು ಕರೆದು ಟೇಪ್‌ ಕತ್ತರಿಸಿ ಹೊಸ ನ್ಯಾಯಾಲಯವನ್ನು ಉದ್ಘಾಟಿಸುವಂತೆ ಸೂಚಿಸಿದರು. ಅನಿರೀಕ್ಷಿತವಾಗಿ ಎದುರಾದ ಈ ಸನ್ನಿವೇಶ ಅಲ್ಲಿದ್ದವರೆಲ್ಲರೂ ಚಕಿತರಾದರಲ್ಲದೆ, ಆ ಸಹಾಯಕರಿಬ್ಬರೂ ಮರು ಮಾತನಾಡದೇ ಮುಖ್ಯ ನ್ಯಾಯಮೂರ್ತಿಗಳ ನೀಡಿದ ಆದೇಶವನ್ನು ಶಿರಸಾ ವಹಿಸಿ ಪಾಲಿಸಿದರು.

ಮುಖ್ಯ ನ್ಯಾಯಮೂರ್ತಿಗಳ ಉದಾರತೆ, ಸರಳತೆಗೆ ಎಲ್ಲರೂ ಮಾರು ಹೋದರು. ಇಂಥ ಅತ್ಯಂತ ವಿರಳ ಸನ್ನಿವೇಶದಲ್ಲಿ, ಅದೂ ರಾಜ್ಯದ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳ ಸಮಕ್ಷಮದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಕೌಟುಂಬಿಕ ನ್ಯಾಯಾಲಯ ಸರಳವಾಗಿ ಲೋಕಾರ್ಪಣೆಗೊಂಡಿತು.

  • ಮುಖ್ಯ ನ್ಯಾಯಮೂರ್ತಿಗಳಾದ ಅಭಯ್ ಶ್ರೀನಿವಾಸ ಒಕ ಅವರ ಭಾಷಣ.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ನ್ಯಾಯಮೂರ್ತಿಗಳಾದ ಅಭಯ್ ಶ್ರೀನಿವಾಸ ಒಕ ಅವರು, ಒಂದು ಕೌಟುಂಬಿಕ ಪ್ರಕರಣ ಮೂರು ಕುಟುಂಬಗಳ ಮೇಲೆ ಪ್ರಭಾವ ಬೀರುತ್ತದೆ. ಮೂರು ಕುಟುಂಬಗಳ ಪ್ರತಿಯೊಬ್ಬ ಸದಸ್ಯರು ಇದರಿಂದಾಗಿ ಸಮಸ್ಯೆ ಎದುರಿಸಬೇಕಾಗುತ್ತದೆ. ವಿವಿಧ ಕಾರಣಗಳಿಂದ ಯಾವುದೇ ಕುಟುಂಬದಲ್ಲಿ ಎದುರಾಗುವ ಸಮಸ್ಯೆಗಳನ್ನು ಈ ನ್ಯಾಯಾಲಯದಲ್ಲಿ ಬಗೆಹರಿಸಲಾಗುವುದು. ಈ ನ್ಯಾಯಾಲಯ ಪೂರ್ಣ ಪ್ರಮಾಣದ ಸ್ವತಂತ್ರ ವ್ಯವಸ್ಥೆ ಹೊಂದಿದ್ದು, ಪ್ರಕರಣಗಳನ್ನೂ ಪರಿಹರಿಸುತ್ತದೆ ಎಂದರು.

ಜಿಲ್ಲೆಯಲ್ಲಿ ಕೌಟುಂಬಿಕ ನ್ಯಾಯಾಲಯ ಸ್ಥಾಪಿಸುವುದು  ಚಿಕ್ಕಬಳ್ಳಾಪುರ ಜಿಲ್ಲೆಯ ವಕೀಲರ ಬಹಳ ವರ್ಷಗಳ ಬೇಡಿಕೆಯಾಗಿತ್ತು. ಇಂದು ಈ ನ್ಯಾಯಾಲಯವನ್ನು ಸ್ಥಾಪಿಸುವ ಮೂಲಕ ವಕೀಲರ ಕನಸು ನನಸಾಗಿಸಿದಂತಾಗಿದೆ ಎಂದು ಮುಖ್ಯ ನ್ಯಾಯಮೂರ್ತಿಗಳು ಹೇಳಿದರು.

ಪ್ರತಿಯೊಬ್ಬ ವಕೀಲರು, ಕಕ್ಷಿದಾರರು ಹಾಗೂ ನ್ಯಾಯಾಲಯದ ಸಿಬ್ಬಂದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಕೋವಿಡ್ 19 ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ಇದೇ ವೇಳೆ ಅವರು ಸಲಹೆ ನೀಡಿದರು.

ಹಿಂದೆಯೂ ಹೀಗೆಯೇ ಆಗಿತ್ತು

ಮುಖ್ಯ ನ್ಯಾಯಮೂರ್ತಿ ಅವರ ಸರಳತೆ ಮತ್ತು ಉದಾರತೆಗೆಈ ಹಿಂದೆಯೂ ಜಿಲ್ಲೆ ಸಾಕ್ಷಿಯಾಗಿತ್ತು. ಕಳೆದ ಅಕ್ಟೋಬರ್‌ನಲ್ಲಿ ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡಿದ್ದ ನ್ಯಾ.ಅಭಯ್ ಶ್ರೀನಿವಾಸ ಒಕ ಅವರು, ತ್ವರಿತ ವಿಚಾರಣಾ ನ್ಯಾಯಾಲಯವನ್ನು ಉದ್ಘಾಟನೆ ನೆರೆವೇರಿಸಬೇಕಾಗಿತ್ತು. ಆದರೆ, ಆಗಲೂ ನ್ಯಾಯಾಲಯದ ಸಹಾಯಕರಿಬ್ಬರಿಂದ ನೂತನ ನ್ಯಾಯಾಲಯದ ಉದ್ಘಾಟನೆ ಕಾರ್ಯವನ್ನು ಮಾಡಿಸಿದ್ದರು.

ಅವಲಂಭಿತರನ್ನೂ ನೋಡೋಣ

ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಅಶೋಕ್ ಗೋಳಪ್ಪ ನಿಜಗುಣ್ಣನವರ್ ಅವರು ಮಾತನಾಡಿ, ಅನೇಕ ಕಾರಣಗಳಿಗೆ ಕೌಟುಂಬಿಕ ಕಲಹಗಳು ಉಂಟಾಗಬಹುದು. ಅದರಲ್ಲಿ ಕೆಲವೊಂದು ಸಣ್ಣ ಪುಟ್ಟ ವಿಚಾರಗಳಿಗೆ ವಿಚ್ಚೇದನವರೆಗೂ ಹೋಗುತ್ತಾರೆ. ಇದರಿಂದ ಆ ಕುಟುಂಬಗಳ ನೆಮ್ಮದಿ ಹಾಳಾಗುತ್ತದೆ. ಹಾಗಾಗಿ ಈ ಕೌಟುಂಬಿಕ ನ್ಯಾಯಾಲಯಕ್ಕೆ  ಬರುವ ಪ್ರಕರಣಗಳನ್ನು ಇತರೆ ಸಾಮಾನ್ಯ ಪ್ರಕರಣಗಳಂತೆ ನೋಡದೇ ಮಕ್ಕಳು, ಅವರ ಅವಲಂಭಿತರ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪ್ರಕರಣಕ್ಕೆ ನ್ಯಾಯ ಕೊಡಬೇಕಾಗುತ್ತದೆ ಎಂದು ತಿಳಿಸಿದರು.

ಸಾಮಾನ್ಯ ಕೌಟುಂಬಿಕ ಸಮಸ್ಯೆಗಳು ಮತ್ತು ಕೌಟುಂಬಿಕ ದೌರ್ಜನ್ಯ, ಶೋಷಣೆ ಮತ್ತಿತರ ಪ್ರಕರಣಗಳನ್ನು ದಾಖಲಿಸಿ, ಸೂಕ್ತ ನೆರವು ಪಡೆಯಬಹುದಾಗಿದೆ. ಸಾರ್ವಜನಿಕರು, ಅದರಲ್ಲೂ ವಿಶೇಷವಾಗಿ ಮಹಿಳೆಯರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬೈರಪ್ಪ ಶಿವಲಿಂಗ ನಾಯಿಕ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ರವರಾದ ಕೆ.ಎನ್.ರೂಪಾ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಕೆ.ಎಚ್.ತಮ್ಮೇಗೌಡ ಸೇರಿದಂತೆ ಇತರೆ ಗೌರವಾನ್ವಿತ ನ್ಯಾಯಾಧೀಶರು ಹಾಗೂ ಇತರೆ ವಕೀಲರು ಹಾಜರಿದ್ದರು.

Tags: chikkaballapurfamily courtjustice abhay oka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ರಾಜಧಾನಿ ಬೆಂಗಳೂರು ನಗರದ ಪಕ್ಕದ ಜಿಲ್ಲೆ  ಚಿಕ್ಕಬಳ್ಳಾಪುರಕ್ಕೂ ಬಂತಾ ಹಕ್ಕಿಜ್ವರ; ಗೋಪಾಲಕೃಷ್ಣ ಕೆರೆಯಲ್ಲಿ ನಿಗೂಢವಾಗಿ ಮೃತಪಟ್ಟ ವಿದೇಶಿ ಹಕ್ಕಿಗಳು, ಬೆಂಗಳೂರಿನಲ್ಲಿ ಪರೀಕ್ಷೆ, ಇನ್ನೆರಡು ಹಕ್ಕಿಗಳು ಅಸ್ವಸ್ಥ

ರಾಜಧಾನಿ ಬೆಂಗಳೂರು ನಗರದ ಪಕ್ಕದ ಜಿಲ್ಲೆ ಚಿಕ್ಕಬಳ್ಳಾಪುರಕ್ಕೂ ಬಂತಾ ಹಕ್ಕಿಜ್ವರ; ಗೋಪಾಲಕೃಷ್ಣ ಕೆರೆಯಲ್ಲಿ ನಿಗೂಢವಾಗಿ ಮೃತಪಟ್ಟ ವಿದೇಶಿ ಹಕ್ಕಿಗಳು, ಬೆಂಗಳೂರಿನಲ್ಲಿ ಪರೀಕ್ಷೆ, ಇನ್ನೆರಡು ಹಕ್ಕಿಗಳು ಅಸ್ವಸ್ಥ

Leave a Reply Cancel reply

Your email address will not be published. Required fields are marked *

Recommended

ಬಾಲುಗಾರು… ಅದ್ಭುತಃ!!

ಬಾಲುಗಾರು… ಅದ್ಭುತಃ!!

6 years ago
30,000 ಜನರಿಗೆ ಒಂದೇ ಪ್ರಾಥಮಿಕ ಆರೋಗ್ಯ ಕೇಂದ್ರ! ಉತ್ತಮ ಆರೋಗ್ಯ ಸೇವೆಗಾಗಿ ಪಿಎಚ್‌ಸಿಗಳಿಗೆ ಫುಲ್ ಟ್ರೀಟ್‌ಮೆಂಟ್ ಕೊಡಲಾಗುವುದು ಎಂದ ಡಾಕ್ಟರ್‌ ಸುಧಾಕರ್‌

30,000 ಜನರಿಗೆ ಒಂದೇ ಪ್ರಾಥಮಿಕ ಆರೋಗ್ಯ ಕೇಂದ್ರ! ಉತ್ತಮ ಆರೋಗ್ಯ ಸೇವೆಗಾಗಿ ಪಿಎಚ್‌ಸಿಗಳಿಗೆ ಫುಲ್ ಟ್ರೀಟ್‌ಮೆಂಟ್ ಕೊಡಲಾಗುವುದು ಎಂದ ಡಾಕ್ಟರ್‌ ಸುಧಾಕರ್‌

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ