• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ರಾಜಧಾನಿ ಬೆಂಗಳೂರು ನಗರದ ಪಕ್ಕದ ಜಿಲ್ಲೆ ಚಿಕ್ಕಬಳ್ಳಾಪುರಕ್ಕೂ ಬಂತಾ ಹಕ್ಕಿಜ್ವರ; ಗೋಪಾಲಕೃಷ್ಣ ಕೆರೆಯಲ್ಲಿ ನಿಗೂಢವಾಗಿ ಮೃತಪಟ್ಟ ವಿದೇಶಿ ಹಕ್ಕಿಗಳು, ಬೆಂಗಳೂರಿನಲ್ಲಿ ಪರೀಕ್ಷೆ, ಇನ್ನೆರಡು ಹಕ್ಕಿಗಳು ಅಸ್ವಸ್ಥ

cknewsnow desk by cknewsnow desk
January 7, 2021
in CHIKKABALLAPUR, STATE
Reading Time: 1 min read
0
ರಾಜಧಾನಿ ಬೆಂಗಳೂರು ನಗರದ ಪಕ್ಕದ ಜಿಲ್ಲೆ  ಚಿಕ್ಕಬಳ್ಳಾಪುರಕ್ಕೂ ಬಂತಾ ಹಕ್ಕಿಜ್ವರ; ಗೋಪಾಲಕೃಷ್ಣ ಕೆರೆಯಲ್ಲಿ ನಿಗೂಢವಾಗಿ ಮೃತಪಟ್ಟ ವಿದೇಶಿ ಹಕ್ಕಿಗಳು, ಬೆಂಗಳೂರಿನಲ್ಲಿ ಪರೀಕ್ಷೆ, ಇನ್ನೆರಡು ಹಕ್ಕಿಗಳು ಅಸ್ವಸ್ಥ
920
VIEWS
FacebookTwitterWhatsuplinkedinEmail
  • ಎಂ.ಕೃಷ್ಣಪ್ಪ ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ: ನೆರೆಯ ಕೇರಳ ಮತ್ತಿತರೆ ರಾಜ್ಯಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಎಲ್ಲಾ ಜಿಲ್ಲೆಗಳಲ್ಲೂ ಹೈ ಅಲರ್ಟ್ ಘೋಷಿಸಿದೆ ಈ ನಡುವೆ ಗುರುವಾರದಂದು ಚಿಕ್ಕಬಳ್ಳಾಪುರ ನಗರಕ್ಕೆ ತಾಗಿಕೊಂಡಿರುವ ಗೋಪಾಲಕೃಷ್ಣ ಕೆರೆಯಲ್ಲಿ ಎರಡು ಹಕ್ಕಿಗಳು ನಿಗೂಢವಾಗಿ ಮೃತಪಟ್ಟು, ಮತ್ತೆರಡು ಹಕ್ಕಿಗಳು ತೀವ್ರ  ನಿತ್ರಾಣಗೊಂಡಿವೆ. ಇದರಿಂದಾಗಿ ಈ ಭಾಗದ ಜನರಲ್ಲಿ  ಇದೀಗ ಹಕ್ಕಿಜ್ವರದ ಭೀತಿ ಆವರಿಸಿದೆ.

ಇದೇ ವೇಳೆ ಜನರ ಆತಂಕವನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಹೇಳಿಕೆ ನೀಡಿರುವ ಜಿಲ್ಲಾಧಿಕಾರಿ ಆರ್.ಲತಾ ಅವರು, ಸತ್ತಿರುವ ಹಕ್ಕಿಗಳಿಗೆ ಹಕ್ಕಿಜ್ವರದ ಲಕ್ಷಣಗಳು ಇಲ್ಲ. ಹೀಗಾಗಿ ಆತಂಕ ಬೇಡ ಎಂದಿದ್ದಾರೆ.

ಬಹುದಿನಗಳಿಂದ ಈ ಗೋಪಾಲಕೃಷ್ಣ ಅಮಾನಿಕೆರೆಗೆ ಹೆಚ್.ಎನ್.ವ್ಯಾಲಿ ನೀರು ಹರಿದು ಬರುತ್ತಿದ್ದು, ಕೆರೆ ತುಂಬುವ ಹಂತದಲ್ಲಿದೆ. ಈ ಹಕ್ಕಿಗಳು  ಇತರೆಡೆಯಿಂದ ವಲಸೆ ಬಂದು ಹೋಗುವ ಪರಿಪಾಠವನ್ನು ರೂಢಿಸಿಕೊಂಡಿವೆ. ಈ ಮಧ್ಯೆ ಗುರುವಾರ ಬ್ಲಾಕ್ ವಿಂಗ್ಡ್ ಸ್ಟಿಲ್ಟ್ ಹೆಸರಿನ ಎರಡು ಹಕ್ಕಿಗಳು ನಿಗೂಢವಾಗಿ ಮೃತಪಟ್ಟಿದ್ದು,  ರೆಡ್ ವಾಟ್ಲೆಡ್ ಲ್ಯಾಪ್‍ವಿಂಗ್ ಮತ್ತು ಗ್ರೀನ್ ವಿಂಗ್ಡ್ ಟೀಲ್ ಹೆಸರಿನ  ಇನ್ನೆರಡು ಹಕ್ಕಿಗಳು ತೀವ್ರ ಅಸ್ವಸ್ಥಗೊಂಡಿವೆ. ಹಕ್ಕಿಗಳು ನಿಗೂಢವಾಗಿ ಮೃತಪಟ್ಟಿರುವ ಮಾಹಿತಿಯನ್ನು ತಿಳಿದ ಕೂಡಲೇ ಅರಣ್ಯ ಇಲಾಖೆಯ ಎಸಿಎಫ್ ಚಂದ್ರಶೇಖರ್, ತನ್ವೀರ್ ಅಹಮದ್, ಆರ್‍ಎಫ್‍ಒ ಶ್ರೀಲಕ್ಷ್ಮೀ, ಅವಿನಾಶ್ ಹಾಗೂ ಪಶು ಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀನಾಥರೆಡ್ಡಿ ಮತ್ತಿತರರು ಭೇಟಿ ನೀಡಿ ಮೃತಪಟ್ಟ ಹಕ್ಕಿಗಳನ್ನು ಬೆಂಗಳೂರಿನ ಪಶು ಆರೋಗ್ಯ ಮತ್ತು ಜೈವಿಕಾ ಸಂಶೋಧನಾ ಸಂಸ್ಥೆಯ ಪರೀಕ್ಷಾ ಕೇಂದ್ರಕ್ಕೆ ಕಳುಹಿಸಿದ್ದಾರೆ.

ಜೈವಿಕಾ ಸಂಸ್ಥೆಯಿಂದ ವರದಿ ಬಂದ ಬಳಿಕವೇ ಪಕ್ಷಿಗಳು ಯಾವ ಕಾರಣಕ್ಕೆ ಮೃತಪಟ್ಟಿವೆ ಎಂಬುದು ಖಾತ್ರಿಯಾಗಲಿದೆ ಎಂದು ಅರಣ್ಯ ಅಧಿಕಾರಿಗಳು ಹಾಗೂ ಪಶುಸಂಗೋಪನಾ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಜಿಲ್ಲೆಯ ಜಿಲ್ಲಾ ಕೇಂದ್ರ ಸನಿಹದ ಅಮಾನಿ ಗೋಪಾಲಕೃಷ್ಣ ಕೆರೆ ಅಂಗಳವು  ವಲಸೆ ಬರುವ ಹಕ್ಕಿಗಳ ಪಾಲಿಗೆ ಸ್ವರ್ಗವಾಗಿದೆ. ಈ ವಲಸೆ ಹಕ್ಕಿಗಳು ಇಲ್ಲಿ ಸಂತತಿ ಬೆಳೆಸಿ ಇತರೆಡೆಯ ಪ್ರದೇಶಗಳಿಗೆ ತೆರಳುತ್ತವೆ. ಪ್ರಸ್ತುತ ಈ ಕೆರೆಯ ಅಂಗಳದಲ್ಲಿ ಗ್ರೀನ್ ಸ್ಯಾಂಡ್‍ಪೈಪರ್, ವುಡ್‍ಸ್ಯಾಂಡ್‍ಪೈಪರ್, ಪೇಟೆಂಡ್ ಸ್ಟೋರ್ಕ್, ಕಾಮನ್ ಸ್ಯಾಂಡ್‍ಪೈಪರ್, ರಿವರ್ ಟರ್ಮ್, ಕ್ರಸ್ಟರ್ಡ್ ಲಾರ್ಕ್, ಕೆಂಟಿಸ್ಟ್ ಪ್ಲವರ್, ಬ್ಲಾಕ್ ಹೆಡೆಡ್ ಎಲ್ಬೀಸ್, ಸ್ಮಾಲ್ ಪ್ರಾಟಿನ್ ಕೋಲ್ ಎಂಬ ಹೆಸರಿನ ಪಕ್ಷಿಗಳು ಈ ಕೆರೆಗೆ ವಲಸೆ ಬಂದು ನೆಲೆಸಿವೆ  ಚಿಕ್ಕಬಳ್ಳಾಪುರ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಹರ್ಸಲನ್  ಸಿಕೆನ್ಯೂಸ್‌ ನೌಗೆ ಮಾಹಿತಿ ನೀಡಿದ್ದಾರೆ.

ಜನರಲ್ಲಿ ಹೆಚ್ಚಿದ ಆತಂಕ

ಈಗಾಗಲೇ ಬೇರೆ ಬೇರೆ ದೇಶಗಳಲ್ಲಿ ಹಕ್ಕಿಜ್ವರ ವೇಗವಾಗಿ ಹಬ್ಬುತಿದ್ದು, ನಮ್ಮ ದೇಶಕ್ಕೂ ಕಾಲಿಟ್ಟಿದೆ.  ಸದ್ಯ ಕೇರಳದ ಆಲಪ್ಪುಳ್ಳ (ಅಲೆಪ್ಪಿ) ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಬಾತು ಕೋಳಿಗಳಲ್ಲಿ ಹಕ್ಕಿಜ್ವರ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲೂ ಇದು ಕಾಣಿಸಿಕೊಳ್ಳುವ ಸಾಧ್ಯತೆಗಳಿರುವುದರಿಂದ ಎಲ್ಲಾ ಜಿಲ್ಲೆಗಳಲ್ಲೂ ಹೈ ಅಲರ್ಟ್ ಘೋಷಿಸಲಾಗಿದೆ. ಇದರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಅಮಾನಿ ಗೋಪಾಲಕೃಷ್ಣ  ಕೆರೆಯಲ್ಲಿ ಪಕ್ಷಿಗಳು ಸತ್ತಿರುವುದು  ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಆತಂಕ ಬೇಡ ಎಂದ ಜಿಲ್ಲಾಧಿಕಾರಿ

ಇದೇ ವೇಳೆ, ಜಿಲ್ಲೆಯಲ್ಲಿ ಸಾರ್ವಜನಿಕರು ಹಕ್ಕಿ ಜ್ವರದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಈವರೆಗೆ ಜಿಲ್ಲೆಯಲ್ಲಿ ಹಕ್ಕಿಜ್ವರದ ಬಗ್ಗೆ ವರದಿಯಾಗಿಲ್ಲ. ಈಗಾಗಲೇ ಮುಂಜಾಗ್ರತೆ ವಹಿಸಿಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಆರ್. ಲತಾ ಸ್ಪಷ್ಟಪಡಿಸಿದ್ದಾರೆ.

ಆರ್.ಲತಾ

ಅಮಾನಿ ಗೋಪಾಲಕೃಷ್ಣ ಕೆರೆಯಲ್ಲಿ ಗುರುವಾರ ಎರಡು ವಲಸೆ ಪಕ್ಷಿಗಳು ಮೃತಪಟ್ಟಿದ್ದು, ಮೃತಪಟ್ಟ ಹಕ್ಕಿಗಳನ್ನು ಬೆಂಗಳೂರಿನಲ್ಲಿರುವ ಪಶು ಆರೋಗ್ಯ ಮತ್ತು ಜೈವಿಕಾ ಸಂಶೋಧನಾ ಸಂಸ್ಥೆಯ ಪರೀಕ್ಷಾ ಕೇಂದ್ರಕ್ಕೆ ಕಳುಹಿಸಲಾಗಿದೆ. 25 ದಿನಗಳ ಹಿಂದೆ ಇದೇ ಅಮಾನಿ ಗೋಪಾಲ ಕೃಷ್ಣ ಕೆರೆಯಲ್ಲಿ ಮೃತಪಟ್ಟಿದ್ದ ಎರಡು ಹಕ್ಕಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಪರೀಕ್ಷಾ ವರದಿ ಪ್ರಕಾರ ಈ ಎರಡು ಹಕ್ಕಿಗಳು ಯಾವುದೇ ಸೋಂಕಿನಿಂದ ಮೃತಪಟ್ಟಿರುವುದಿಲ್ಲ ಎಂದು ದೃಢಪಟ್ಟಿದೆ. ಹಾಗಾಗಿ, ಜಿಲ್ಲೆಯ ನಾಗರಿಕರು ಹಕ್ಕಿ ಜ್ವರದ ಬಗ್ಗೆ ಹೆದರಬೇಕಾಗಿಲ್ಲ. ಈಗಾಗಲೇ ಜಿಲ್ಲೆಯ ಎಲ್ಲಾ ಕಡೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಮುನ್ನೆಚ್ಚರಿಕೆಯನ್ನು ವಹಿಸಲಾಗಿದೆ. ನಾಗರಿಕರು ವದಂತಿಗಳಿಗೆ ಕಿವಿಗೊಡಬಾರದು ಎಂದು  ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

Tags: bird fluchikkaballapurkarnatakared alert
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಬಲವಿದ್ದರೂ ಸೋತ ಕಾಂಗ್ರೆಸ್; ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷಗಿರಿ ಬಿಜೆಪಿ ಪಾಲು

ಎರಡು ದಿನಗಳಲ್ಲಿ ಕೇಂದ್ರದಿಂದ ರಾಜ್ಯಕ್ಕೆ 13.90 ಲಕ್ಷ ಕೋವಿಡ್ ಲಸಿಕೆ ರವಾನೆ; ಪ್ರಥಮ ಹಂತದಲ್ಲಿ 6.30 ಲಕ್ಷ ವೈದ್ಯ ಸಿಬ್ಬಂದಿಗೆ ಲಸಿಕೆ: ಡಾ.ಕೆ.ಸುಧಾಕರ್‌

Leave a Reply Cancel reply

Your email address will not be published. Required fields are marked *

Recommended

ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಗೆ ಹೈಕೋರ್ಟ್ ಟ್ರೀಟ್ಮೆಂಟ್

ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಗೆ ಹೈಕೋರ್ಟ್ ಟ್ರೀಟ್ಮೆಂಟ್

6 years ago
ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ CEO ಕಾರ್ ಡ್ರೈವರ್ ಹೆಸರಿನಲ್ಲಿ ಹಣ ವಸೂಲಿ

ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ CEO ಕಾರ್ ಡ್ರೈವರ್ ಹೆಸರಿನಲ್ಲಿ ಹಣ ವಸೂಲಿ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ