ಚಿಕ್ಕಬಳ್ಳಾಪುರ: ನಗರದ ಪ್ರಮುಖ ವಾಣಿಜ್ಯೋದ್ಯಮಿ ಎಸ್.ಟಿ.ಸುಂಕಪ್ಪ (ಅಪ್ಪಾಲು) ಅವರು ಭಾನುವಾರ ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ ರತ್ನಮ್ಮ, ಇಬ್ಬರು ಪುತ್ರರ ಪೈಕಿ ಓರ್ವ ಪುತ್ರ ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಸಿ.ಎಸ್.ಮಂಜುನಾಥ್ ಸೇರಿ ನಾಲ್ವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ವಾಣಿಜ್ಯೋದ್ಯಮಿ ಎಸ್.ಟಿ.ಸುಂಕಪ್ಪ ನಿಧನರಾದ ವಿಷಯ ತಿಳಿದ ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರು ಧಾವಿಸಿ ಮೃತರ ಅಂತಿಮ ದರ್ಶನ ಪಡೆದರು.
ನಗರಸಭೆಯ ಅಧ್ಯಕ್ಷ ಡಿ.ಎಸ್.ಆನಂದರೆಡ್ಡಿ (ಬಾಬು), ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಅಧ್ಯಕ್ಷ ಕೆ.ವಿ.ನಾಗರಾಜ್, ಪಂಚಗಿರಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆ.ವಿ.ನವೀನ್ಕಿರಣ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರು, ಗಣ್ಯರು, ವರ್ತಕರು, ವಾಣಿಜ್ಯೋದ್ಯಮಿಗಳು ಹಾಗೂ ನಗರಸಭೆಯ ಬಹುತೇಕ ಸದಸ್ಯರು ಮೃತರ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದರು.