• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಉತ್ತರ ಪ್ರದೇಶದ ನೋಯಿಡಾದಲ್ಲಿ ಭರದಿಂದ ಸಿದ್ಧವಾಗುತ್ತಿದೆ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ವಿರಾಜಮಾನ ಪ್ರತಿಮೆ; ವರ್ಷದಲ್ಲಿಯೇ ಲೋಕಾರ್ಪಣೆ

cknewsnow desk by cknewsnow desk
February 6, 2021
in NATION, STATE
Reading Time: 1 min read
0
ಉತ್ತರ ಪ್ರದೇಶದ ನೋಯಿಡಾದಲ್ಲಿ ಭರದಿಂದ ಸಿದ್ಧವಾಗುತ್ತಿದೆ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ವಿರಾಜಮಾನ ಪ್ರತಿಮೆ; ವರ್ಷದಲ್ಲಿಯೇ ಲೋಕಾರ್ಪಣೆ
929
VIEWS
FacebookTwitterWhatsuplinkedinEmail

ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಗಳ ಜತೆ ಪ್ರತಿಮೆ ನಿರ್ಮಾಣ ಕೆಲಸ ವೀಕ್ಷಿಸಿದ ಡಿಸಿಎಂ

ನವದೆಹಲಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮುಂಭಾಗದಲ್ಲಿ ಸ್ಥಾಪನೆ ಮಾಡಲು ಉದ್ದೇಶಿಸಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಪ್ರತಿಮೆಯ ನಿರ್ಮಾಣ ಕಾರ್ಯದ ಪ್ರಗತಿಯನ್ನು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹಾಗೂ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಶನಿವಾರ ಪರಿಶೀಲಿಸಿದರು.

ಪ್ರತಿಮೆಯನ್ನು ನಿರ್ಮಾಣ ಮಾಡುತ್ತಿರುವ ಖ್ಯಾತ ಕಲಾವಿದ ರಾಮಸುತಾರ ಅವರ ಉತ್ತರ ಪ್ರದೇಶದ ನೋಯಿಡಾದಲ್ಲಿರುವ ಸ್ಟುಡಿಯೋಕ್ಕೆ ಸ್ವಾಮೀಜಿ ಅವರ ಜತೆ ಭೇಟಿ ನೀಡಿದ ಡಿಸಿಎಂ, ವಿವಿಧ ಹಂತಗಳಲ್ಲಿ ನಿರ್ಮಾಣವಾಗುತ್ತಿರುವ ನಾಡಪ್ರಭುಗಳ ಪ್ರತಿಮೆಯನ್ನು ವೀಕ್ಷಿಸಿದರು. ಜತೆಗೆ; ಈ ಮಹತ್ಕಾರ್ಯದ ಪ್ರಗತಿಯನ್ನು ಹಾಗೂ ಪ್ರತಿಮೆ ಮೂಡಿಬರುತ್ತಿರುವ ವಿವಿಧ ಹಂತಗಳ ಮಾಹಿತಿಯನ್ನು ಸುತಾರ ಅವರು ಸ್ವಾಮೀಜಿಗಳು ಮತ್ತು ಡಿಸಿಎಂ ಅವರಿಗೆ ವಿವರಿಸಿದರು.

ಒಟ್ಟು ಮೂರು ಹಂತಗಳಲ್ಲಿ ಪ್ರತಿಮೆ ನಿರ್ಮಾಣವಾಗಲಿದ್ದು, ಮೊದಲು ಥರ್ಮೋಕೋಲ್‌ನಲ್ಲಿ ಸಿದ್ಧವಾಗಲಿದೆ. ಈಗಾಗಲೇ ಎದೆಯ ಮಟ್ಟದವರೆಗೂ ಈ ಹಂತದ (ಥರ್ಮೋಕೋಲ್‌) ಪ್ರತಿಮೆ ಸಿದ್ಧವಾಗಿದೆ. ಶಿರಭಾಗದ ಕೆಲಸವೂ ರಾಮಸುತಾರ ಅವರ ಇನ್ನೊಂದು ಸ್ಟುಡಿಯೋದಲ್ಲಿ ಭರದಿಂದ ಸಾಗಿದೆ. ಸಂಜೆ ಅಲ್ಲಿಗೆ ಭೇಟಿ ನೀಡಿ ನಾಡಪ್ರಭುಗಳ ಮುಖಚಹರೆ ಮೂಡಿಬರುತ್ತಿರುವ ರೀತಿಯನ್ನು ವೀಕ್ಷಿಸಿದರು.

ನೋಯಿಡಾದಲ್ಲಿ ಪ್ರತಿಮೆಯ ನಿರ್ಮಾಣ ಕೆಲಸವನ್ನು ವೀಕ್ಷಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಉಪ ಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ; ಕೋವಿಡ್‌ ಮತ್ತು ಲಾಕ್‌ಡೌನ್‌  ಕಾರಣಕ್ಕೆ ಪ್ರತಿಮೆ ನಿರ್ಮಾಣ ಕೆಲಸವು ಸ್ವಲ್ಪ ತಡವಾಗಿದೆ. ಇಲ್ಲವಾಗದ್ದಿದ್ದರೆ, ಪೂರ್ವ ನಿಗಧಿಯಂತೆ ನಾಡಪ್ರಭುಗಳ ಮುಂದಿನ ಜಯಂತಿಯಂದು ಪ್ರತಿಷ್ಠಾಪನೆ ಕಾರ್ಯ ನೆರೆವೇರುತ್ತಿತ್ತು. ಆದರೆ, ಇನ್ನೊಂದು ವರ್ಷದಲ್ಲಿ ನಾಡಪ್ರಭುಗಳ ಪ್ರತಿಮೆಯನ್ನು ಲೋಕಾರ್ಪಣೆ ಮಾಡಲಾಗುವುದು. ಅತ್ಯಂತ ವೈಜ್ಞಾನಿಕವಾಗಿ, ತಾಂತ್ರಿಕವಾಗಿ ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ಪ್ರತಿಮೆ ಮೂಡಿಬರುತ್ತಿದೆ. ಪೂಜ್ಯ ಸ್ವಾಮೀಜಿ ಅವರು ಎಲ್ಲವನ್ನೂ ವೀಕ್ಷಿಸಿ ತೃಪ್ತಿ ವ್ಯಕ್ತಪಡಿಸಿದ್ದಾರೆ ಎಂದರು.

ಕೆಲಸ ವೇಗವಾಗಿ ಸಾಗಿದೆ

ಇದೇ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು; ಅತ್ಯುತ್ತಮ ತಂತ್ರಜ್ಞಾನವನ್ನು ಬಳಸಿಕೊಂಡು ಉತ್ಕೃಷ್ಟ ಗುಣಮಟ್ಟದಲ್ಲಿ ನಾಡಪ್ರಭುಗಳ ಪ್ರತಿಮೆಯನ್ನು ನಿರ್ಮಾಣ ಮಾಡಲಾಗುತ್ತಿದೆ. ವಿವಿಧ ಹಂತಗಳಲ್ಲಿ ನಡೆಯುತ್ತಿರುವ ಕೆಲಸಗಳನ್ನು ನಾವು ವೀಕ್ಷಣೆ ಮಾಡಿದೆವು. ಇವೆಲ್ಲವೂ ಮುಗಿಯಲಿಕ್ಕೆ ಇನ್ನು ಮೂರು-ನಾಲ್ಕು ಹಂತಗಳಿವೆ. ಇಡೀ ಕೆಲಸ ಮುಗಿಯಲು 9ರಿಂದ10 ತಿಂಗಳು ಬೇಕಾಗುತ್ತದೆ ಎಂದು ಸುತಾರ ಅವರೇ ಹೇಳಿದ್ದಾರೆ ಎಂದರು.

ರಾಮಸುತಾರ ಅವರು ಕೂಡ ಸುದ್ದಿಗಾರರ ಜತೆ ಮಾಹಿತಿ ಹಂಚಿಕೊಂಡರು. ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಹಾಗೂ ಡಿಸಿಎಂ ಅವರ ಕಾರ್ಯದರ್ಶಿ ಪ್ರದೀಪ್‌, ಕೆಂಪೇಗೌಡ ಪಾರಂಪರಿಕಾ ತಾಣ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ವಿನಯ್ ಅವರೂ ಈ ಸಂದರ್ಭದಲ್ಲಿ ಹಾಜರಿದ್ದರು.

ಕಳೆದ ವರ್ಷ ಜೂನ್‌ 27ರಂದು ಕೆಂಪೇಗೌಡರ ಜನ್ಮದಿನದಂದು ಪ್ರತಿಮೆ ಸ್ಥಾಪನೆ ಹಾಗೂ ಕೆಂಪೇಗೌಡ ಹೆರಿಟೇಜ್‌ ಪಾರ್ಕ್‌ ನಿರ್ಮಾಣಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭೂಮಿಪೂಜೆ ನೆರೆವೇರಿಸಿದ್ದರು. ವಿರಾಜಮಾನವಾನ ನಾಡಪ್ರಭುಗಳ ಪ್ರತಿಮೆಯು 23 ಎಕರೆಗಳ ವಿಶಾಲ ಪ್ರದೇಶದಲ್ಲಿ ಸ್ಥಾಪನೆಯಾಗಲಿದೆ.

.@BLRAirport ಆವರಣದಲ್ಲಿ ಸ್ಥಾಪನೆಯಾಗಲಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡ ಅವರ ಕಂಚಿನ ಪ್ರತಿಮೆಯ ಥರ್ಮೋಕಾಲ್ ಮಾದರಿಯನ್ನು ದೆಹಲಿಯಲ್ಲಿ ಡಾ.ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ದಿವ್ಯ ಉಪಸ್ಥಿತಿಯಲ್ಲಿ ಪರಿಶೀಲಿಸಲಾಯಿತು.

ಕಾಮಗಾರಿಯ ಪ್ರಗತಿ ವೇಗದಲ್ಲಿದ್ದು, ಯೋಜನೆಯ ಅನುಷ್ಠಾನ ಶೀಘ್ರವೇ ಪೂರ್ಣಗೊಳ್ಳಲಿದೆ. pic.twitter.com/QyvBt00hsa

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) February 6, 2021
Tags: kempegowda international airportNadaprabhu Kempegowdanoidaram v sutar
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಮಹಾನ್‌ ನೇನಾನಿ ಜನರಲ್‌ ತಿಮ್ಮಯ್ಯ ವಸ್ತು ಸಂಗ್ರಹಾಲಯ ಲೋಕಾರ್ಪಣೆ; ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ಮನಸೂರೆಗೊಂಡ ಕೊಡಗಿನ ಶೌರ್ಯಗಾಥೆ

ಮಹಾನ್‌ ನೇನಾನಿ ಜನರಲ್‌ ತಿಮ್ಮಯ್ಯ ವಸ್ತು ಸಂಗ್ರಹಾಲಯ ಲೋಕಾರ್ಪಣೆ; ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ಮನಸೂರೆಗೊಂಡ ಕೊಡಗಿನ ಶೌರ್ಯಗಾಥೆ

Leave a Reply Cancel reply

Your email address will not be published. Required fields are marked *

Recommended

ವೆಂಟಿಲೇಟರ್ ಲಭ್ಯತೆ 10 ಪಟ್ಟು ಹೆಚ್ಚಿಸಲು ಕ್ರಮ, ವಿದೇಶದಿಂದಲೂ ರೆಮ್ಡಿಸಿವಿರ್ ಆಮದು ಮಾಡಿಕೊಳ್ಳಲು ಮುಂದಾದ ರಾಜ್ಯ ಸರಕಾರ, ಕೇಂದ್ರ ಅನುಮತಿಗೆ ವೇಯ್ಟಿಂಗ್

ವೈದ್ಯರ ಲಿಖಿತ ಸಲಹೆ ಇಲ್ಲದೇ ಮನೆಯಲ್ಲೇ ರೆಮ್ಡಿಸಿವಿರ್ ಪಡೆಯುವಂತಿಲ್ಲ, ಮನೆಯಲ್ಲೂ ಇಟ್ಟುಕೊಳ್ಳುವಂತಿಲ್ಲ; ಆರೋಗ್ಯ ಸಚಿವ ಡಾ.ಕೆ.ಸುಧಾಕರ್

5 years ago
ಟೆಂಪಲ್ ಟೂರಿಸಂಗೆ ಆದ್ಯತೆ ಎಂದ ಸಿಎಂ

ಟೆಂಪಲ್ ಟೂರಿಸಂಗೆ ಆದ್ಯತೆ ಎಂದ ಸಿಎಂ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ