• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಸಿಐಡಿ ತನಿಖೆಗೆ ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣ; ಹಿರೇನಾಗವೇಲಿಗೆ ಬಂದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಛಿಧ್ರವಾದ ದೇಹಗಳನ್ನು ನೋಡಿ ಕಣ್ಣೀರಿಟ್ಟ ಗೃಹ ಸಚಿವ

cknewsnow desk by cknewsnow desk
February 23, 2021
in CHIKKABALLAPUR, STATE
Reading Time: 1 min read
1
ಸಿಐಡಿ ತನಿಖೆಗೆ ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣ; ಹಿರೇನಾಗವೇಲಿಗೆ ಬಂದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಛಿಧ್ರವಾದ ದೇಹಗಳನ್ನು ನೋಡಿ ಕಣ್ಣೀರಿಟ್ಟ ಗೃಹ ಸಚಿವ
926
VIEWS
FacebookTwitterWhatsuplinkedinEmail

ಚಿಕ್ಕಬಳ್ಳಾಪುರ: ಹಿರೇನಾಗವೇಲಿಯ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದ ತನಿಖೆಯನ್ನು ನಡೆಸುವಂತೆ ರಾಜ್ಯ ಸರಕಾರ ಸಿಐಡಿಗೆ ಆದೇಶಿಸಿದೆ ನೀಡಿದೆ.

ಹಿರೇನಾಗವೇಲಿ ಗ್ರಾಮ ಸಮೀಪದ ಕ್ವಾರಿಯಲ್ಲಿ ಕಳೆದ ರಾತ್ರಿ ಸಂಭವಿಸಿದ ಸ್ಫೋಟದಿಂದ ಆರು ಜನ ಧಾರುಣ ಸಾವನ್ನಪ್ಪಿದ್ದು, ಈ ಸಂಬಂಧ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಘಟನೆಯ ತನಿಖೆಯನ್ನು ಸಿಐಡಿಗೆ ವಹಿಸುತ್ತಿರುವುದಾಗಿ ಘೋಷಿಸಿದರು.

“ಈ ಸ್ಫೋಟ ನನಗೆ ದಿಗ್ಭ್ರಮೆ ಉಂಟು ಮಾಡಿದೆ. ಇದು ಅತ್ಯಂತ ಧಾರುಣ ಘಟನೆ. ಮೃತ ದೇಹಗಳನ್ನು ನೋಡುತ್ತಿದ್ದರೆ ಕಣ್ಣಲ್ಲಿ ನೀರು ಬಂತು. ದೇಹಗಳು ಛಿದ್ರವಾಗಿ ಗುರುತು ಹಿಡಿಯಲಾರದಷ್ಟು ರೀತಿಯಲ್ಲಿವೆ. ಇಂಥ ನೋವು ಯಾವ ಕುಟುಂಬಕ್ಕೂ ಆಗಬಾರದು. ಹೀಗಾಗಿ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಅತ್ಯಂತ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ತಿಳಿಸಿದರು.

ರಾಜಿ ಪ್ರಶ್ನೆಯೇ ಇಲ್ಲ. ತಪ್ಪಿತಸ್ಥರು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದ್ದರೂ ಕಠಿಣವಾಗಿ ಶಿಕ್ಷೆಗೊಳಪಡಿಸಲಾಗುವುದು. ನಿಸ್ಪಕ್ಷಪಾತವಾಗಿ ತನಿಖೆ ಆಗುತ್ತದೆ. ಬಳಿಕ ಮೃತರ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಲಾಗುವುದು. ಸಿಐಡಿ ವರದಿ ಬಂದ ಇಪ್ಪತ್ತನಾಲ್ಕು ಗಂಟೆಗಳ ಒಳಗಾಗಿಯೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ಹೇಳಿದರು.

ಲೋಪ ಪತ್ತೆ ಹಚ್ಚುತ್ತೇವೆ

ಹಿರೇನಾಗವೇಲಿ ಹತ್ತಿರದ ಸರ್ವೇ ನಂ.೧೧ರಲ್ಲಿ ಕಲ್ಲು ಕ್ವಾರಿ ಇತ್ತು. ಮೂರು ಎಕರೆಯಲ್ಲಿ ಕ್ವಾರಿ ಹಾಗೂ ಇನ್ನೂ ಮೂರು ಎಕರೆ ಪ್ರದೇಶದಲ್ಲಿ ಯಂತ್ರೋಪಕರಣಗಳು ಇವೆ. ಗೋಮಾಳ ಜಾಗದಲ್ಲಿ ನಡೆಸಲಾಗುತ್ತಿರುವ ಈ ಕ್ವಾರಿ ನಾಗರಾಜ್ ಎಂಬುವವರಿಗೆ ಸೇರಿದ್ದು. ಇವರ ಜತೆಗೆ, ಆಂಧ್ರ ಪ್ರದೇಶದ ಇನ್ನಿಬ್ಬರ ಪಾಲುದಾರಿಕೆ ಇದೆ. ಇದೇ ಫೆಬ್ರವರಿ 7ರಂದು ಜಿಲ್ಲೆಯ ಪೊಲೀಸರು ಇದರ ಮೇಲೆ ದಾಳಿ ನಡೆಸಿದ್ದರು. ಕೆಲ ವಾಹನಗಳನ್ನು ಹಾಗೂ ಸ್ಫೋಟಕಗಳನ್ನು ವಶಕ್ಕೆ ತೆಗೆದುಕೊಂಡಿದ್ದರು. ದಾಳಿ ಭೀತಿಯಿಂದ ಕ್ವಾರಿಯವರು ಸ್ಫೋಟಕಗಳನ್ನು ಬಚ್ಚಿಟ್ಟಿರುವ ಸಾಧ್ಯತೆ ಇದೆ. ಈ ಸ್ಫೋಟಕಗಳನ್ನು ಎಲ್ಲಿಂದ ತರಲಾಗಿತ್ತು? ಯಾರು ಪೂರೈಸಿದ್ದರು ಎಂಬ ಬಗ್ಗೆ ಇನ್ನಷ್ಟೇ ಮಾಹಿತಿ ಸಿಗಬೇಕಿದೆ. ಸ್ಥಳೀಯ ಪೊಲೀಸರು ಇದರಲ್ಲಿ ಶಾಮೀಲಾಗಿರಬಹುದು ಎಂಬ ಅನುಮಾನವಿದೆ. ಯಾವುದೇ ಹಂತದ ಅಧಿಕಾರಿ ತಪ್ಪು ಮಾಡಿದ್ದರೂ ಕ್ರಮ ಕೈಗೊಳ್ಳಲಾಗುವುದು. ಕಂದಾಯ, ಅರಣ್ಯ, ಗಣಿ-ಭೂ ವಿಜ್ಞಾನ ಸೇರಿ ಯಾವ ಇಲಾಖೆಯಿಂದ ಲೋಪವಾಗಿದೆ ಎಂಬುದನ್ನು ಪತ್ತೆ ಹಚ್ಚಿ ಕ್ರಮ ಜರುಗಿಸುತ್ತೇವೆ ಎಂದು ಬೊಮ್ಮಾಯಿ ತಿಳಿಸಿದರು.

ಪೆಟ್ರೋಲಿಯಂ ಜೆಲ್, ಅಮೋನಿಯಂ ನೈಟ್ರೇಟ್​

ಇನ್ನು ಈ ಸ್ಫೋಟದ ಬಗ್ಗೆ ತಜ್ಞರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಪೆಟ್ರೋಲಿಯಂ ಜೆಲ್, ಅಮೋನಿಯಂ ನೈಟ್ರೇಟ್​ನಿಂದ ಸ್ಫೋಟ ಆಗಿರುವ ಶಂಕೆ ಇದೆ. ಜಿಲೆಟಿನ್ ಕಡ್ಡಿಗಳನ್ನ ಎತ್ತಿಕೊಂಡು ಸಾಗಿಸುವಾಗ ದುರಂತ ಸಂಭವಿಸಿದೆ. ಮೃತಪಟ್ಟ ಆರು ಮಂದಿಯಲ್ಲಿ ಇಬ್ಬರ ದೇಹಗಳು ಪೂರ್ಣವಾಗಿ ಛಿದ್ರವಾಗಿವೆ. ಬಹುಶಃ ಅವರಿಬ್ಬರೂ ಸ್ಫೋಟಕಗಳನ್ನು ಹೊತ್ತೊಯ್ಯುತ್ತಿರಬಹುದು. ಸಾಮಾನ್ಯವಾಗಿ ಕ್ವಾರಿ ಮತ್ತು ಗಣಿಗಳಲ್ಲಿ ತಜ್ಞರು ಮಾತ್ರ ಸ್ಫೋಟಗಳನ್ನು ನಡೆಸಬೇಕು. ಆದರೆ, ಈ ಕ್ವಾರಿ ಅಂತಹ ನಿಪುಣರು ಇಲ್ಲವೆಂದು ಗೊತ್ತಾಗಿದೆ.

ಅಧಿಕಾರಿಗಳಿಗೆ ತರಾಟೆ

ಇದೇ ವೇಳೆ ಗೃಹ ಸಚಿವ ಬೊಮ್ಮಾಯಿ ಅವರು ಜಿಲ್ಲಾಧಿಕಾರಿ ಆರ್.‌ಲತಾ ಹಾಗೂ ಎಸ್‌ಪಿ ಮಿಥುನ್‌ ಕುಮಾರ್‌ ವಿರುದ್ಧ ಹರಿಹಾಯ್ದರು. ಹುಣಸೋಡು ಸ್ಫೋಟದ ನಂತರ ಎಲ್ಲಾ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸರಕಾರ ಕಟ್ಟುನಿಟ್ಟಾಗಿ ಸೂಚಿಸಿತ್ತು. ಆದರೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಆ ಆದೇಶವನ್ನು ನಿರ್ಲಕ್ಷ್ಯ ಮಾಡಲಾಗಿದೆ. ದಾಳಿ ನಡೆಸಿದ ವೇಳೆ ಅಕ್ರಮ ಸ್ಫೋಟಕಗಳು ಪತ್ತೆಯಾಗಿ ಎಫ್‌ಐಆರ್‌ ಆದ ಮೇಲೂ ಕ್ವಾರಿ ಮಾಲೀಕರನ್ನು ಬಂಧಿಸಿಲ್ಲ ಯಾಕೆ? ಎಂದು ಪ್ರಶ್ನಿಸಿದ್ದಾರೆ.

ಇನ್ನು ಹದಿನಾಲ್ಕು ಗಂಟೆಗಳ ಒಳಗಾಗಿ ಈ ಬಗ್ಗೆ ವರದಿ ಕೊಡಬೇಕು. ಇಡೀ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಬೇಕು. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇನ್ನೂ ಸಾಕಷ್ಟು ಅಕ್ರಮ ಕ್ವಾರಿಗಳಿವೆ ಇವೆ ಎಂಬ ಮಾಹಿತಿ ಇದೆ. ಈ ಎಲ್ಲ ಕ್ವಾರಿಗಳ ಮಾಹಿತಿ ಬೇಕು ಎಂದು ಬೊಮ್ಮಾಯಿ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.

ಗೃಹ ಸಚಿವರು ಬೇಟಿ ನೀಡಿದ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌, ಜಿಲ್ಲಾಧಿಕಾರಿ ಆರ್.ಲತಾ, ಎಸ್‌ಪಿ ಮಿಥುನ್‌ ಕುಮಾರ್‌, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಇದ್ದರು.

***

  • ಸ್ಫೋಟ ದುರಂತದ ಸುದ್ದಿ ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ..
ಜಿಲ್ಲಾ ಉಸ್ತುವಾರಿ ಸಚಿವ ಡಾ.ಸುಧಾಕರ್‌ ಹುಟ್ಟೂರು ಪೆರೇಸಂದ್ರಕ್ಕೆ ಕೂಗಳತೆ ದೂರದ ಬಿಜೆಪಿ ಲೀಡರ್‌ ಮಾಲೀಕತ್ವದ ಕ್ರಷರ್‌ನಲ್ಲಿ ಭಾರೀ ಸ್ಫೋಟ; 6 ಜನ ಬಲಿ, ದೇಹಗಳು ಛಿದ್ರ

ಮೃತರಿಗೆ ಐದು ಲಕ್ಷ ಪರಿಹಾರ

ಇದೇ ವೇಳೆ ಸರಕಾರ ಸ್ಫೋಟಕ್ಕೆ ಬಲಿಯಾದ ಆರು ದುರ್ದೈವಿಗಳಿಗೆ ತಲಾ ಐದು ಲಕ್ಷ ಪರಿಹಾರ ಘೋಷಣೆ ಮಾಡಿದೆ. ಶಿವಮೊಗ್ಗದ ಹುಣಸೋಡು ಸ್ಫೋಟದಲ್ಲಿ ಬಲಿಯಾದವರಿಗೆ ನೀಡಿದಷ್ಟೇ ಪರಿಹಾರವನ್ನೂ ಇಲ್ಲೂ ನೀಡುವಂತೆ ಸಿಎಂ ಹೇಳಿದ್ದಾರೆಂದು ಸ್ಥಳದಲ್ಲಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Tags: Basavaraj S Bommaichikkaballapur blastcid enquirykarnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ರಾಜ್ಯದಲ್ಲಿ 2,000 ಅಕ್ರಮ ಕ್ವಾರಿಗಳಿವೆ, ಹೈಕೋರ್ಟ್‌ ಹಾಲಿ ನ್ಯಾಯಮೂರ್ತಿಗಳಿಂದ ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣ ತನಿಖೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ

ರಾಜ್ಯದಲ್ಲಿ 2,000 ಅಕ್ರಮ ಕ್ವಾರಿಗಳಿವೆ, ಹೈಕೋರ್ಟ್‌ ಹಾಲಿ ನ್ಯಾಯಮೂರ್ತಿಗಳಿಂದ ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣ ತನಿಖೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ

Comments 1

  1. Pingback: ಚಿಕ್ಕಬಳ್ಳಾಪುರ ಭೂಕಂಪ ಪೀಡಿತ ಪ್ರದೇಶಗಳಿಗೆ ಕೇಂದ್ರ ತಂಡ ಭೇಟಿ, ಪರಿಶೀಲನೆ - cknewsnow

Leave a Reply Cancel reply

Your email address will not be published. Required fields are marked *

Recommended

ಬರ ಪರಿಹಾರ;‌ ಕೇಂದ್ರದ ಬಿಜೆಪಿ-ಕಾಂಗ್ರೆಸ್‌ ಸರಕಾರಗಳು ಕರ್ನಾಟಕಕ್ಕೆ ಕೊಟ್ಟಿದ್ದೆಷ್ಟು?

ಬರ ಪರಿಹಾರ;‌ ಕೇಂದ್ರದ ಬಿಜೆಪಿ-ಕಾಂಗ್ರೆಸ್‌ ಸರಕಾರಗಳು ಕರ್ನಾಟಕಕ್ಕೆ ಕೊಟ್ಟಿದ್ದೆಷ್ಟು?

2 years ago
#hijab : ಸಿಎಂ ಯು ಟರ್ನ್!!">
#hijab : ಸಿಎಂ ಯು ಟರ್ನ್!!

#hijab : ಸಿಎಂ ಯು ಟರ್ನ್!!

2 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ