• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಗುರುವಾರ ಬೆಳಗ್ಗೆಯಿಂದ 45 ವರ್ಷ ವಯಸ್ಸು ಮೀರಿದವರಿಗೆ ಕೋವಿಡ್ ವ್ಯಾಕ್ಸಿನ್;‌ ಐದು ಸಾವಿರ ಕೇಂದ್ರಗಳಲ್ಲಿ ವ್ಯವಸ್ಥೆ, ಎರಡನೇ ಅಲೆ ನಡುವೆಯೂ ಲಸಿಕೆ ಯಜ್ಞ

cknewsnow desk by cknewsnow desk
March 31, 2021
in COVID-19, STATE
Reading Time: 1 min read
0
ನಮ್ಮ ದೇಶದಲ್ಲೇ ತಯಾರಾದ ಕೊರೊನಾ ಲಸಿಕೆ ಕುರಿತು ಅಗೌರವ ಬೇಡ; ಭಾರತ್ ಬಯೋಟೆಕ್ ನಂಬಿಕೆಗೆ ಅರ್ಹವಾದ ಕಂಪನಿ ಎಂದ ಡಾ.ಕೆ.ಸುಧಾಕರ್
913
VIEWS
FacebookTwitterWhatsuplinkedinEmail

ಮಂಗಳೂರು: ಏಪ್ರಿಲ್ 1ರಿಂದ, ಅಂದರೆ; ಗುರುವಾರದಿಂದ 45 ವರ್ಷ ವಯಸ್ಸು ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡಲಾಗುವುದು.

ಇದಕ್ಕೆ ಅಗತ್ಯವಾದ ಎಲ್ಲ ಸಿದ್ಧತೆಗಳನ್ನು ಸರಕಾರ ಮಾಡಿಕೊಂಡಿದ್ದು, ಒಟ್ಟು 5 ಸಾವಿರ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುವುದು. ಜನರು ಸ್ವಯಂಪ್ರೇರಿತರಾಗಿ ಬಂದು ಲಸಿಕೆ ಪಡೆಯಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಭೆ ನಡೆಸಿದ ಬಳಿಕ ಅವರು ಮಾತನಾಡಿದರು.

ಈಗಾಗಲೇ 3 ಸಾವಿರ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಹೊಸದಾಗಿ 2 ಸಾವಿರ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುವುದು. ಇದು ಸೇರಿ ಒಟ್ಟು 5 ಸಾವಿರ ಕೇಂದ್ರಗಳಲ್ಲಿ ಲಸಿಕೆ ಸಿಗಲಿದೆ. ಒಂದು ಕೇಂದ್ರದಲ್ಲಿ 100 ಮಂದಿ ಲಸಿಕೆ ಪಡೆದರೆ 5 ಲಕ್ಷ ಹಾಗೂ 50 ಮಂದಿ ಲಸಿಕೆ ಪಡೆದರೆ, ಎರಡೂವರೆ ಲಕ್ಷ ಜನರಿಗೆ ಲಸಿಕೆ ನೀಡಬಹುದು. ಜನರು ಸ್ವಯಂಪ್ರೇರಿತರಾಗಿ ಬರಬೇಕು ಎಂದು ಅವರು ಕೋರಿದರು.

ಮಂಗಳೂರಿನ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.

ಕೊರೊನಾ ಪರಿಸ್ಥಿತಿ, ನಿಯಂತ್ರಣಾ ಕ್ರಮಗಳು, ಲಸಿಕೆ ವಿತರಣೆ, ಜಿಲ್ಲೆಗೆ ಅಗತ್ಯವಿರುವ ವೈದ್ಯರು, ಸಿಬ್ಬಂದಿಗಳ ನೇಮಕಾತಿ, ವಿವಿಧ ಯೋಜನೆಗಳ ಅನುಷ್ಠಾನ ಸೇರಿದಂತೆ ಹಲವು ವಿಷಯಗಳನ್ನು ಪರಾಮರ್ಶಿಸಲಾಯಿತು.

1/2 pic.twitter.com/5yu3RaMnL5

— Dr Sudhakar K (Modi ka Parivar) (@DrSudhakar_) March 31, 2021

ಕೇರಳಕ್ಕೂ ದಕ್ಷಿಣ ಕನ್ನಡಕ್ಕೂ ಅವಿನಾಭಾವ ಸಂಬಂಧ. ಈ ಎರಡು ಪ್ರದೇಶಗಳ ನಡುವೆ ಹೆಚ್ಚು ಜನರು ಸಂಚರಿಸುತ್ತಾರೆ. ಆರ್ʼಟಿಪಿಸಿಆರ್ ನೆಗೆಟಿವ್ ವರದಿ ಪರೀಕ್ಷಿಸಬೇಕು ಎಂಬ ಮಾರ್ಗಸೂಚಿ ನಿಯಮವೂ ಇದೆ. ಬಿಗಿಯಾದ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ನೀಡುತ್ತೇನೆ ಎಂದರು ಅವರು.

ಜಿಲ್ಲೆಯಲ್ಲಿ ಪ್ರತಿ ದಿನ 40-50 ಸಕ್ರಿಯ ಕೊರೊನಾ ಪ್ರಕರಣಗಳಿವೆ. ಹೆಚ್ಚು ಸೋಂಕಿತ ಪ್ರಕರಣಗಳು ಕಂಡುಬರುತ್ತಿಲ್ಲ. ಆದರೂ ಕೋವಿಡ್ ನಡವಳಿಕೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ಗಡಿಭಾಗ ಆಗಿರುವುದರಿಂದ ಎಚ್ಚರಕೆಯಿಂದಿರಬೇಕು. ಕೋವಿಡ್ ಲಸಿಕೆ ನೀಡುವ ಪ್ರಮಾಣ ಹೆಚ್ಚಿಸಬೇಕು. ಜಿಲ್ಲೆಯ ಆರೋಗ್ಯ ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಲಸಿಕೆ ಪಡೆದು ಬೇರೆಯವರಿಗೆ ಸ್ಪೂರ್ತಿ ನೀಡಬೇಕು ಎಂದರು ಡಾ.ಸುಧಾಕರ್.

ದಕ್ಷಿಣ ಕನ್ನಡದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಕೆಲಸ ನಡೆಯುತ್ತಿದೆ. ಇನ್ನಷ್ಟು ಕಾರ್ಯ ಚುರುಕು ಆಗಬೇಕಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನಷ್ಟು ಉತ್ತಮ ರೀತಿಯಲ್ಲಿ ಜನಸಾಮಾನ್ಯರಿಗೆ ಸೇವೆ ದೊರೆಯುವಂತೆ ಮಾಡಬೇಕಿದೆ. ತಜ್ಞವೈದ್ಯರು ತಮ್ಮ ಕ್ಷೇತ್ರದಲ್ಲಿ ಶಸ್ತ್ರಚಿಕಿತ್ಸೆಗಳನ್ನು ಹೆಚ್ಚಿಸಬೇಕೆಂದು ಸೂಚಿಸಲಾಗಿದೆ. ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಶೇ.40 ರಷ್ಟು ಪ್ರಗತಿಯಾಗಿದೆ. ಇನ್ನೂ 60% ಗುರಿಯನ್ನು ತಲುಪಬೇಕಿದೆ. ಜಿಲ್ಲೆಯ ಎಲ್ಲ ಪಿಎಚ್ ಸಿಗಳಲ್ಲಿ ಕಾಂಪೌಂಡ್, ಕೈತೋಟವನ್ನು ಗ್ರಾಮ ಪಂಚಾಯಿತಿ ಯೋಜನೆಗಳಡಿ ಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ ಎಂದರು.

Tags: covid 19 karnatakaCovid second wavecovid vaccinedr k sudhakarMangalore
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ತಮಿಳುನಾಡು ಚುನಾವಣೆ ಹೊತ್ತಿನಲ್ಲಿಯೇ ಸೂಪರ್‌ಸ್ಟಾರ್ ರಜನೀಕಾಂತ್‌ಗೆ ದಾದಾಸಾಹೇಬ್ ಫಾಲ್ಕೆ ಪುರಸ್ಕಾರ; ಅಭಿಮಾನಿಗಳ ಸಂಭ್ರಮಕ್ಕೆ ಎಣೆಯಿಲ್ಲ, ಸಂದರ್ಭದ ಬಗ್ಗೆ ಚರ್ಚೆ

ತಮಿಳುನಾಡು ಚುನಾವಣೆ ಹೊತ್ತಿನಲ್ಲಿಯೇ ಸೂಪರ್‌ಸ್ಟಾರ್ ರಜನೀಕಾಂತ್‌ಗೆ ದಾದಾಸಾಹೇಬ್ ಫಾಲ್ಕೆ ಪುರಸ್ಕಾರ; ಅಭಿಮಾನಿಗಳ ಸಂಭ್ರಮಕ್ಕೆ ಎಣೆಯಿಲ್ಲ, ಸಂದರ್ಭದ ಬಗ್ಗೆ ಚರ್ಚೆ

Leave a Reply Cancel reply

Your email address will not be published. Required fields are marked *

Recommended

ರೈತರಿಗೆ ದೀಪಾವಳಿ ಶಾಕ್‌ ಕೊಟ್ಟ ಕಾಂಗ್ರೆಸ್‌ ಸರಕಾರ: ಕೃಷಿ ಪಂಪ್‌ಸೆಟ್‌ ಹೊಸ ವಿದ್ಯುತ್ ಸಂಪರ್ಕದ ಸಬ್ಸಿಡಿಗೆ ಕತ್ತರಿ

ರೈತರಿಗೆ ದೀಪಾವಳಿ ಶಾಕ್‌ ಕೊಟ್ಟ ಕಾಂಗ್ರೆಸ್‌ ಸರಕಾರ: ಕೃಷಿ ಪಂಪ್‌ಸೆಟ್‌ ಹೊಸ ವಿದ್ಯುತ್ ಸಂಪರ್ಕದ ಸಬ್ಸಿಡಿಗೆ ಕತ್ತರಿ

2 years ago
ನಂದಿಬೆಟ್ಟ ಪರಿಸರಕ್ಕೆ ಹಾನಿ ಆಗದಂತೆ ಸಮಗ್ರ ಅಭಿವೃದ್ಧಿ: ಸಚಿವ ಸಿ ಪಿ ಯೋಗೇಶ್ವರ

ನಂದಿಬೆಟ್ಟ ಪರಿಸರಕ್ಕೆ ಹಾನಿ ಆಗದಂತೆ ಸಮಗ್ರ ಅಭಿವೃದ್ಧಿ: ಸಚಿವ ಸಿ ಪಿ ಯೋಗೇಶ್ವರ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ