• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CKPLUS

ಕೆಪಿಎಸ್‍ಸಿ ಸದಸ್ಯರಾಗಿ ನೇಮಕಗೊಂಡ ಡಾ.ಬಿ.ಪ್ರಭುದೇವ್; ಅಪ್ಪಟ ಮಣ್ಣಿನ ಮಗನ ಚಿನ್ನದಂಥ ಸಾಧನೆ

cknewsnow desk by cknewsnow desk
April 8, 2021
in CKPLUS, EDITORS'S PICKS
Reading Time: 1 min read
0
ಕೆಪಿಎಸ್‍ಸಿ ಸದಸ್ಯರಾಗಿ ನೇಮಕಗೊಂಡ ಡಾ.ಬಿ.ಪ್ರಭುದೇವ್; ಅಪ್ಪಟ ಮಣ್ಣಿನ ಮಗನ ಚಿನ್ನದಂಥ ಸಾಧನೆ
1.6k
VIEWS
FacebookTwitterWhatsuplinkedinEmail

ಬೆಂಗಳೂರು: ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಕಾರ್ಯ ನಿರ್ವಾಹಕ ನಿರ್ದೇಶಕ ನಿರ್ದೇಶಕರಾಗಿರುವ ಡಾ.ಬಿ.ಪ್ರಭುದೇವ್ ಅವರನ್ನು ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಸದಸ್ಯರನ್ನಾಗಿ ರಾಜ್ಯ ಸರಕಾರ ನೇಮಿಸಿದೆ.

ಮೂಲತಃ ರೈತ ಕುಟುಂಬದಿಂದ ಬಂದಿರುವ ಪ್ರಭುದೇವ್‌ ಅವರು ವ್ಯಾಸಂಗ ಮುಗಿದ ನಂತರ ವಿದೇಶದಲ್ಲಿ ಪ್ರತಿಷ್ಠಿತ ಕಂಪೆನಿಯಲ್ಲಿ ಕೆಲಸ ಮಾಡಿದ್ದರು. ಅವರು ಪಿಹೆಚ್‍ ಡಿ ಪದವೀಧರರೂ ಕೂಡ.

ಪ್ರಭುದೇವ್ ಅವರು ಮೂಲತಃ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನೆಲಮನೆ ಗ್ರಾಮದವರು. ದಿವಂಗತ ಬಸವೇಗೌಡ ಹಾಗೂ ದಿವಂಗತ ಕೆಂಪಮ್ಮ ಅವರ ಪುತ್ರ. ಪಾಂಡವಪುರದಲ್ಲಿ ಪ್ರಾಥಮಿಕ ಶಿಕ್ಷಣ ಪೂರೈಸಿ, ಮೈಸೂರಿನ ಮರಿಮಲ್ಲಪ್ಪ ಶಾಲೆಯಲ್ಲಿ ಪ್ರೌಢ ಶಿಕ್ಷಣ ಪಡೆದಿದ್ದರು. ಮಂಡ್ಯ ಜಿಲ್ಲೆಯ ಪಿಇಎಸ್ ಕಾಲೇಜಿನಲ್ಲಿ ಬಿ.ಇ. ಪದವಿ, ಮೈಸೂರಿನ ವಿವಿಯಲ್ಲಿ ವ್ಯವಹಾರ ಆಡಳಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ, ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯಲ್ಲಿ ಮೆಕಾನಿಕಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಪಿಹೆಚ್‍ ಡಿ ಪದವಿ ಪಡೆದಿದ್ದರು.

ಬೆಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ವೃತ್ತಿ ಜೀವನ ಆರಂಭಿಸಿದ ಅವರು, ಕನ್ನಡ ಮಾಧ್ಯಮದಲ್ಲಿ ಕರ್ನಾಟಕ ಆಡಳಿತ ಸೇವೆ ಪರೀಕ್ಷೆ ಬರೆದು ತೇರ್ಗಡೆಯಾಗಿ ವಾಣಿಜ್ಯ ತೆರಿಗೆ ಅಧಿಕಾರಿಯಾಗಿ, ಪ್ರವಾಸೋಧ್ಯಮ ಅಭಿವೃದ್ಧಿ ನಿಗಮ, ಕರಕುಶಲ ಅಭಿವೃದ್ಧಿ ನಿಗಮ, ಹಟ್ಟಿ ಚಿನ್ನದ ಗಣಿ, ಪರಿಸರ, ಪ್ರವಾಸೋಧ್ಯಮ ನಿಗಮಗಳಲ್ಲಿ ಪ್ರಧಾನ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

ಅಮೆರಿಕದ ಡೆಟ್ರಾಯಿಟ್ʼನಲ್ಲಿರುವ ಫೋರ್ಡ್ ಮೋಟಾರ್ ಕಂಪೆನಿಯಲ್ಲಿ ಕಾರ್ಯನಿರ್ವಹಿಸಿದ್ದಾರೆ. ಎ.ಎಸ್.ಕ್ಯೂ. ಸಂಸ್ಥೆಯಿಂದ ಸರ್ಟಿಫೈಡ್ ಕ್ವಾಲಿಟಿ ಎಂಜಿನಿಯರ್ ವಿಷಯದಲ್ಲಿ ಪರಿಣಿತಿಯನ್ನೂ ಹೊಂದಿದ್ದಾರೆ. ಅಮೆರಿಕದ ಕನ್ನಡ ಕೂಟಗಳ ಆಗರ, ಒಕ್ಕಲಿಗ ಪರಿಷತ್ ಆಗರ, ಉತ್ತರ ಅಮೆರಿಕದ ವೀರಶೈವ ಸಮಾಜ ಆಗರ ಸೇರಿದಂತೆ ಹಲವು ಸಂಸ್ಥೆಗಳಲ್ಲಿ ಸೇವೆ ಇವರು ಸಲ್ಲಿಸಿದ್ದಾರೆ.

ಪ್ರಸ್ತುತ ಕೌಶಲ್ಯಾಭಿವೃದ್ಧಿ ನಿಗಮದ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ಬಿ. ಪ್ರಭುದೇವ್ ಅವರನ್ನು ರಾಜ್ಯ ಸರಕಾರ ಕೆಪಿಎಸ್‍ಸಿ ಸದಸ್ಯರನ್ನಾಗಿ ನೇಮಿಸಿದೆ.

Tags: dr b prabhudevkarnatakakpscpublic service commission
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

by cknewsnow desk
October 16, 2026
0

ಕರುಣೆಪೂರಿತ ಸಮಾಜದ ಪುನರುಜ್ಜೀವನಕ್ಕೆ ಶ್ರೀಶ್ರೀ ಮಧುಸೂಧನ ಸಾಯಿ ಅವರ ನೇತೃತ್ವ ಬೇಕೆಂದ ಕೇಂದ್ರ ಸಚಿವರು

ಕೇಂದ್ರ ಸಚಿವ HD ಕುಮಾರಸ್ವಾಮಿ ಪ್ರೆಸ್ ಮೀಟ್ #Live

HDK #preesmeet #Live

by cknewsnow desk
October 15, 2026
0

ಮುಖ್ಯಮಂತ್ರಿ ಡಿಕೆಶಿ ಮತ್ತು ಸ್ಟಿಂಗ್ ಪಿನ್ ಸಂಬಂಧದ ಬಗ್ಗೆ ಮಹತ್ವದ ಅಂಶಗಳನ್ನು ಬಹಿರಂಗಪಡಿಸಿದ ಕೇಂದ್ರ ಸಚಿವರು

ಕೇಂದ್ರ ಸಚಿವ HD ಕುಮಾರಸ್ವಾಮಿ ಪ್ರೆಸ್ ಮೀಟ್ #Live

ಕೇಂದ್ರ ಸಚಿವ HD ಕುಮಾರಸ್ವಾಮಿ ಪ್ರೆಸ್ ಮೀಟ್ #Live

by cknewsnow desk
October 13, 2026
0

ಬೆಂಗಳೂರು ಜೆ.ಪಿ. ಭವನದಿಂದ ನೇರ ಪ್ರಸಾರ

ಡಿಕೆಶಿ ನೈಸ್ ಖರೀದಿ; ಹೈಕಮಾಂಡ್ ಅಂಗಳದಲ್ಲಿ ಅಲ್ಲೋಲ ಕಲ್ಲೋಲ

ಡಿಕೆಶಿ ನೈಸ್ ಖರೀದಿ; ಹೈಕಮಾಂಡ್ ಅಂಗಳದಲ್ಲಿ ಅಲ್ಲೋಲ ಕಲ್ಲೋಲ

by cknewsnow desk
October 10, 2026
0

ಹೆಚ್.ಡಿ.ಕುಮಾರಸ್ವಾಮಿ ಆರೋಪದಿಂದ ಕಾಂಗ್ರೆಸ್ ನಲ್ಲಿ ತಳಮಳ

ನಾಳೆ ಬಾ ಎತ್ತಿನಹೊಳೆ!

ನಾಳೆ ಬಾ ಎತ್ತಿನಹೊಳೆ!

by cknewsnow desk
October 11, 2026
0

ಚಿಕ್ಕಬಳ್ಳಾಪುರ, ಕೋಲಾರಕ್ಕೆ ಈ ಸರಕಾರಕ್ಕೆ ನೀರು ಕೊಡಲು ಸಾಧ್ಯವಿಲ್ಲ; ಯೋಜನೆ ಇನ್ನೂ ಹಾಸನ ದಾಟಿಲ್ಲ

Next Post
ರೂಪಾಂತರಗೊಂಡ ಕೋವಿಡ್‌ ವೈರಾಣುವಿಗೆ ಬ್ರೇಕ್‌ ಹಾಕಲು ಬೆಂಗಳೂರು ಸೇರಿ ರಾಜ್ಯಾದ್ಯಂತ ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ನೈಟ್‌ ಕರ್ಫ್ಯೂ; ಇಂದಿನಿಂದಲೇ ಜಾರಿ

ಖಡಕ್‌ ನಿರ್ಧಾರ ಕೈಗೊಂಡ ಮುಖ್ಯಮಂತ್ರಿ ಯಡಿಯೂರಪ್ಪ; ಏಪ್ರಿಲ್ 10ರಿಂದ ಬೆಂಗಳೂರು ಸೇರಿ 8 ಜಿಲ್ಲೆಗಳಲ್ಲಿ ರಾತ್ರಿ 10ರಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿ

Leave a Reply Cancel reply

Your email address will not be published. Required fields are marked *

Recommended

ಕೋಲಾರದ ಕಾಂಗ್ರೆಸ್‌ ಅಭ್ಯರ್ಥಿ ಗೌತಮ್‌ ವಿರುದ್ಧ Go Back ಚಳವಳಿ!

ಕೋಲಾರದ ಕಾಂಗ್ರೆಸ್‌ ಅಭ್ಯರ್ಥಿ ಗೌತಮ್‌ ವಿರುದ್ಧ Go Back ಚಳವಳಿ!

3 years ago
ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲಿ ವ್ಯಾಕ್ಸಿನೇಶನ್‌ ಪ್ರಕ್ರಿಯೆ ಯಶಸ್ವಿ ಟೇಕಾಫ್;‌ ಡಿ ಗ್ರೂಪ್‌ ಉದ್ಯೋಗಿ ಚಂದ್ರಕಲಾ ಅವರಿಗೆ ಕೋವಿಡ್‌ನ ಮೊದಲ ಲಸಿಕೆ

ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲಿ ವ್ಯಾಕ್ಸಿನೇಶನ್‌ ಪ್ರಕ್ರಿಯೆ ಯಶಸ್ವಿ ಟೇಕಾಫ್;‌ ಡಿ ಗ್ರೂಪ್‌ ಉದ್ಯೋಗಿ ಚಂದ್ರಕಲಾ ಅವರಿಗೆ ಕೋವಿಡ್‌ನ ಮೊದಲ ಲಸಿಕೆ

6 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ