• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಭಾರತದಲ್ಲಿ ವ್ಯಾಕ್ಸಿನ್‌ ಕ್ರಾಂತಿ: ಇನ್ನು ಕೆಲವೇ ತಿಂಗಳಲ್ಲಿ ಭಾರತ ತಯಾರು ಮಾಡುವ ಲಸಿಕೆ ಪ್ರಮಾಣ ಎಷ್ಟು? ಅಚ್ಚರಿಯ ಸಂಖ್ಯೆ ಹೇಳಿದ ಡಿಸಿಎಂ ಡಾ.ಸಿ.ಎನ್. ‌ಅಶ್ವತ್ಥನಾರಾಯಣ

cknewsnow desk by cknewsnow desk
April 15, 2021
in COVID-19, NATION, STATE
Reading Time: 1 min read
0
ಭಾರತದಲ್ಲಿ ವ್ಯಾಕ್ಸಿನ್‌ ಕ್ರಾಂತಿ: ಇನ್ನು ಕೆಲವೇ ತಿಂಗಳಲ್ಲಿ  ಭಾರತ ತಯಾರು ಮಾಡುವ ಲಸಿಕೆ ಪ್ರಮಾಣ ಎಷ್ಟು? ಅಚ್ಚರಿಯ ಸಂಖ್ಯೆ ಹೇಳಿದ ಡಿಸಿಎಂ ಡಾ.ಸಿ.ಎನ್. ‌ಅಶ್ವತ್ಥನಾರಾಯಣ
913
VIEWS
FacebookTwitterWhatsuplinkedinEmail

ಆವಿಷ್ಕಾರ, ನವೋದ್ಯಮ ಕ್ಷೇತ್ರದಲ್ಲಿ ಕರ್ನಾಟಕ- ಫ್ರಾನ್ಸ್‌ ನಡುವೆ ಮಹತ್ವದ ಒಪ್ಪಂದ, ಫ್ರೆಂಚ್‌ ವಿದೇಶಾಂಗ ಸಚಿವರ ಜತೆ ಉಪ ಮುಖ್ಯಮಂತ್ರಿ ಮಾತುಕತೆ

ಬೆಂಗಳೂರು: ಕೋವಿಡ್‌ ಮಹಾಮಾರಿಯಿಂದ ನಮ್ಮ ಜನರನ್ನು ರಕ್ಷಣೆ ಮಾಡಿಕೊಳ್ಳಲು ಭಾರತವು ಲಸಿಕೆ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದ್ದು, ಇನ್ನು ಕೆಲ ತಿಂಗಳಲ್ಲೇ ಮಾಸಿಕ 17 ಕೋಟಿ ಲಸಿಕೆಗಳನ್ನು ಉತ್ಪಾದನೆ ಮಾಡಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ‌ಅಶ್ವತ್ಥನಾರಾಯಣ ಹೇಳಿದರು.

ಬೆಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಆವಿಷ್ಕಾರ ಮತ್ತು ತಂತ್ರಜ್ಞಾನ ಸಂಸ್ಥೆ (KITS) ಮತ್ತು ಇಂಡೋ- ಫ್ರೆಂಚ್‌ ಕೈಗಾರಿಕಾ ಮತ್ತು ವಾಣಿಜ್ಯ ಒಕ್ಕೂಟ (IFCCI) ನಡುವೆ ಏರ್ಪಟ್ಟ ಒಪ್ಪಂದದ ವೇಳೆ ಮಾತನಾಡಿದ ಅವರು, “ಸದ್ಯಕ್ಕೆ ಮಾಸಿಕ 7 ಕೋಟಿ ಕೋವಿಡ್‌ ಲಸಿಕೆಯನ್ನು ಉತ್ಪಾದನೆ ಮಾಡುತ್ತಿದೆ. ಇದಕ್ಕೆ ಇನ್ನೂ 10 ಕೋಟಿ ಲಸಿಕೆ ಸೇರಲಿದೆ. ತದ ನಂತರ ಕರ್ನಾಟಕವೂ ಸೇರಿ ದೇಶಾದ್ಯಂತ ಲಸಿಕೆ ಅಭಿಯಾನ ಮತ್ತಷ್ಟು ವೇಗಗೊಳ್ಳಲಿದೆ. ಇದರ ಜತೆ ಮತ್ತಷ್ಟು ಹೊಸ ಲಸಿಕೆಗಳು ಕೂಡ ಬರಲಿವೆ. ಅವು ರಾಜ್ಯಕ್ಕೂ ಲಭ್ಯವಾಗಲಿವೆ” ಎಂದರು.

ಕೋವಿಡ್‌ ಮತ್ತಿತರೆ ಜಾಗತಿಕ ಸವಾಲುಗಳ ನಡುವೆಯೂ ಕರ್ನಾಟಕದಲ್ಲಿ ವಿದೇಶಿ ಹೂಡಿಕೆ ಮೇಲ್ಮುಖವಾಗಿಯೇ ಇದೆ. ಅದಕ್ಕೂ ಮೊದಲು, ಅಂದರೆ; 2000ರಿಂದ 2019ರವರೆಗೆ ರಾಜ್ಯಕ್ಕೆ 49.7 ಶತಕೋಟಿ ಡಾಲರ್‌ ವಿದೇಶಿ ಹೂಡಿಕೆ ಹರಿದುಬಂದಿದೆ. ವಿದೇಶಿ ಹೂಡಿಕೆ ಒಳಹರಿವಿನಲ್ಲಿ ರಾಜ್ಯವು ಮಹಾರಾಷ್ಟ್ರ ಮತ್ತು ನವದೆಹಲಿಯ ನಂತರ ಮೂರನೇ ಅಗ್ರರಾಜ್ಯವಾಗಿದೆ ಎಂದು ಡಿಸಿಎಂ ನುಡಿದರು.

ಕೋವಿಡ್‌ಗೂ ಮೊದಲು ಕರ್ನಾಟಕ ಹೂಡಿಕೆ ಅತ್ಯುತ್ತಮ ತಾಣವಾಗಿತ್ತು. ಅದೇ ರೀತಿ ಕೋವಿಡ್ಡೋತ್ತರ ಕಾಲದಲ್ಲಿಯೂ ಹೂಡಿಕೆಗೆ ಪ್ರಶಸ್ತ್ಯ ನೆಲೆಯಾಗಿದೆ ಎಂದು ಅವರು ಒತ್ತಿ ಹೇಳಿದರು.

ಮಾಹಿತಿ ತಂತ್ರಜ್ಞಾನ (ಐಟಿ) ಉತ್ಪನ್ನಗಳ ರಫ್ತು ವಹಿವಾಟಿನಲ್ಲಿ ಕರ್ನಾಟಕ ದೊಡ್ಡ ಶಕ್ತಿಯಾಗಿ ಹೊರಹೊಮ್ಮಿದೆ. ಭಾರತದ ಐಟಿ ರಫ್ತಿಗೆ ಕರ್ನಾಟಕ ಅತಿದೊಡ್ಡ ಕೊಡುಗೆ ಶೇ.40ರಷ್ಟಿ ಇದೆ. ಇದು ತೆಲಂಗಾಣ, ತಮಿಳುನಾಡು ಮತ್ತು ಮಹಾರಾಷ್ಟ್ರ ರಾಜ್ಯಗಳಿಗಿಂತ ಹೆಚ್ಚು ಹಾಗೂ ಅದರಲ್ಲಿ ಕರ್ನಾಟಕ ಮತ್ತಿತರೆ ರಾಜ್ಯಗಳ ನಡುವೆ ಭಾರೀ ಅಂತರವಿದೆ ಎಂದು ಅವರು ಹೇಳಿದರು.

ಕೈಗಾರಿಕೆ, ಆವಿಷ್ಕಾರ, ಸಂಶೋಧನೆ, ಅಭಿವೃದ್ಧಿ ಇತ್ಯಾದಿ ಕ್ಷೇತ್ರಗಳಲ್ಲಿ ಕರ್ನಾಟಕವು ಅತ್ಯಂತ ಸಮೃದ್ಧ ರಾಜ್ಯವಾಗಿದೆ. ಒಟ್ಟು ದೇಶಿಯ ಉತ್ಪನ್ನದಲ್ಲಿ (GSDP) 220 ಶತಕೋಟಿ ಡಾಲರ್‌ ಹೊಂದಿದೆ. ಮುಖ್ಯವಾಗಿ ಐಟಿ, ಬಿಟಿ, ಇಎಸ್‌ಡಿಎಂ (ಎಲೆಕ್ಟ್ರಾನಿಕ್ಸ್ ಸಿಸ್ಟಮ್ ವಿನ್ಯಾಸ ಮತ್ತು ಉತ್ಪಾದನೆ) ಮತ್ತು ಎವಿಜಿಸಿ (ಆನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್ ಮತ್ತು ಕಾಮಿಕ್ಸ್) ಮುಂತಾದ ಕ್ಷೇತ್ರಗಳಿಗಾಗಿ ಪ್ರತ್ಯೇಕ ನೀತಿಗಳನ್ನೂ ರೂಪಿಸಿರುವ ಏಕೈಕ ರಾಜ್ಯ ಕರ್ನಾಟಕವಾಗಿದೆ ಎಂದು ಅವರು ತಿಳಿಸಿದರು.

Deepening India-France ties that have been strengthened over the years in areas of culture, economy, science, education & defence!

By signing an MoU between KITS, @ITBTGoK and @IFCCI1, we are looking forward to a more engaging collaboration on digital innovation ecosystem.

1/5 pic.twitter.com/H6IYEwKaZV

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) April 15, 2021

ಈ ಒಪ್ಪಂದ ಬಹಳ ಮಹತ್ವದ್ದು

ಮೊದಲಿನಿಂದಲೂ ಭಾರತ ಮತ್ತು ಫ್ರಾನ್ಸ್‌ ಸಹಜ ಪಾಲುದಾರ ದೇಶಗಳಾಗಿವೆಯಲ್ಲದೆ ಸಾಂಸ್ಕೃತಿಕ, ಆರ್ಥಿಕ, ವಿಜ್ಞಾನ-ತಂತ್ರಜ್ಞಾನ, ಶಿಕ್ಷಣ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ಎರಡೂ ದೇಶಗಳು ನಿಕಟವಾಗಿ ಕೆಲಸ ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ಭಾರತ ಮತ್ತು ಫ್ರಾನ್ಸ್‌ ಬಹಳ ನಿಕಟವಾಗಿ ಕೆಲಸ ಮಾಡುತ್ತಿವೆ. ಕರ್ನಾಟಕ ಆವಿಷ್ಕಾರ ಮತ್ತು ತಂತ್ರಜ್ಞಾನ ಸಂಸ್ಥೆ (KITS)ಮತ್ತು ಇಂಡೋ-ಫ್ರೆಂಚ್‌ ಕೈಗಾರಿಕಾ ಮತ್ತು ವಾಣಿಜ್ಯ ಒಕ್ಕೂಟ (IFCCI) ನಡುವೆ ಏರ್ಪಟ್ಟ ಒಪ್ಪಂದ ಅತ್ಯಂತ ಮಹತ್ವಪೂರ್ಣವಾಗಿದೆ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.

ಈ ಒಪ್ಪಂದದ ಮೂಲಕ ಭಾರತ ಮತ್ತು ಫ್ರಾನ್ಸ್‌ ಬಾಂಧವ್ಯ ಇನ್ನಷ್ಟು ಗಟ್ಟಿಗೊಳಿಸುವಲ್ಲಿ ಕರ್ನಾಟಕದ ಪಾತ್ರ ಮುನ್ನೆಲೆಗೆ ಬಂದಂತೆ ಆಗಿದೆ. ತಂತ್ರಜ್ಞಾನ, ಸ್ಟಾರ್ಟ್ ಅಪ್‌ ಇನ್ನಿತರೆ ಕ್ಷೇತ್ರಗಳಲ್ಲಿ ರಾಜ್ಯವು ಫ್ರಾನ್ಸ್‌ ಜತೆ ಮತ್ತಷ್ಟು ನಿಕಟವಾಗಿ ಕೆಲಸ ಮಾಡಲಿದೆ. ಒಪ್ಪಂದವು ಎರಡೂ ದೇಶಗಳ ನಡುವಿನ ನಾವೀನ್ಯತಾ ಸಹಯೋಗದ ಬೆಳವಣಿಗೆಗೆ ಪ್ರಮುಖ ಮೈಲಿಗಲ್ಲು. ಈ ಒಪ್ಪಂದವು ಎರಡೂ ದೇಶಗಳ ಉದ್ಯಮಶೀಲತೆ ಮತ್ತು ಆವಿಷ್ಕಾರದ ಹಿನ್ನೆಲೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದು ಅವರು ಹೇಳಿದರು.

I am confident that it would give impetus to the entrepreneurial ecosystem and empower future innovators of the country.

This association will not only foster close linkages between academia and industry but will also open new avenues for resource sharing.

4/5 pic.twitter.com/ushI0Zjoiz

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) April 15, 2021

ಒಪ್ಪಂದಕ್ಕೆ ಐಟಿ ಇಲಾಖೆ ನಿರ್ದೇಶಕ ಗೋಪಾಲಕೃಷ್ಣ ಮತ್ತು ಇಂಡೋ-ಫ್ರೆಂಚ್‌ ಕೈಗಾರಿಕಾ ಮತ್ತು ವಾಣಿಜ್ಯ ಒಕ್ಕೂಟದ ಯಹೋನನ್‌ ಸ್ಯಾಮ್ಯುಯಲ್‌ ಅಂಕಿತ ಹಾಕಿದರು. ಒಪ್ಪಂದ ಏರ್ಪಡುವುದಕ್ಕೂ ಮುನ್ನ ಡಿಸಿಎಂ ಡಾಅಶ್ವತ್ಥನಾರಾಯಣ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ ಅವರು ಫ್ರಾನ್ಸ್‌ನ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಜೀನ್‌ ವಿಯಾಸ್‌ ಲೆ ಡ್ರಿಯಾನ್‌ ಹಾಗೂ ಭಾರತದಲ್ಲಿರುವ ಫ್ರಾನ್ಸ್‌ ರಾಯಭಾರಿ ಇಮ್ಯಾನ್ಯುಯಲ್‌ ಲೆನಿಯಾನ್‌, ಬೆಂಗಳೂರು ಫ್ರಾನ್ಸ್‌ ರಾಯಭಾರ ಕಚೇರಿಯ ಕಾನ್ಸುಲೇಟ್‌ ಜನರಲ್‌ ಮಾರ್ಜೋರಿ ವ್ಯಾನ್‌ಬೆಲಿಂಗ್ಹೆಮ್ ಜತೆ ಮಾತುಕತೆ ನಡೆಸಿದರು.

ಕಾರ್ಯಕ್ರಮದಲ್ಲಿ ಐಟಿ ಇಲಾಖೆಯ ಪ್ರಧಾನ ವ್ಯವಸ್ಥಾಪಕಿ ಚಂಪಾ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ರೋಗಿಗಳಿಗೆ ಬೆಡ್ ನೀಡದ ಖಾಸಗಿ ಆಸ್ಪತ್ರೆಗಳಿಗೆ ಖಡಕ್ ವಾರ್ನಿಂಗ್, ಹೋಟೆಲ್‌ಗಳಲ್ಲಿ ಕೋವಿಡ್ ಕೇರ್ ಸೆಂಟರ್: ಡಾ.ಕೆ.ಸುಧಾಕರ್

ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ರೋಗಿಗಳಿಗೆ ಬೆಡ್ ನೀಡದ ಖಾಸಗಿ ಆಸ್ಪತ್ರೆಗಳಿಗೆ ಖಡಕ್ ವಾರ್ನಿಂಗ್, ಹೋಟೆಲ್‌ಗಳಲ್ಲಿ ಕೋವಿಡ್ ಕೇರ್ ಸೆಂಟರ್: ಡಾ.ಕೆ.ಸುಧಾಕರ್

Leave a Reply Cancel reply

Your email address will not be published. Required fields are marked *

Recommended

ಚಿಕ್ಕಬಳ್ಳಾಪುರದ ಜಾನಪದಕ್ಕೆ ಜಗತ್ಮನ್ನಣೆ ತಂದುಕೊಟ್ಟ ಕೀಲುಕುದುರೆ ಖ್ಯಾತಿಯ ಗೊಂಬೆ ನಾರಾಯಣಪ್ಪಅವರಿಗೆ ಜಾನಪದ ಅಕಾಡೆಮಿ ಗರಿ

ಚಿಕ್ಕಬಳ್ಳಾಪುರದ ಜಾನಪದಕ್ಕೆ ಜಗತ್ಮನ್ನಣೆ ತಂದುಕೊಟ್ಟ ಕೀಲುಕುದುರೆ ಖ್ಯಾತಿಯ ಗೊಂಬೆ ನಾರಾಯಣಪ್ಪಅವರಿಗೆ ಜಾನಪದ ಅಕಾಡೆಮಿ ಗರಿ

4 years ago
ಕರೆಸ್ಪಾಂಡೆನ್ಸ್‌ಗೆ ಮೈಸೂರು ಮಾತ್ರ, ಇನ್ನು ಮುಂದೆ ದೂರಶಿಕ್ಷಣಕ್ಕೆ ಡಿಮಾಂಡ್‌ ಜಾಸ್ತಿ ಎಂದ ಡಿಸಿಎಂ; ಕರ್ನಾಟಕ ಮುಕ್ತ ವಿಶ್ವವಿದ್ಯಾಲಯಕ್ಕೆ ಬಿಗ್ ಟಾರ್ಗೆಟ್‌ ಫಿಕ್ಸ್‌

ಕರೆಸ್ಪಾಂಡೆನ್ಸ್‌ಗೆ ಮೈಸೂರು ಮಾತ್ರ, ಇನ್ನು ಮುಂದೆ ದೂರಶಿಕ್ಷಣಕ್ಕೆ ಡಿಮಾಂಡ್‌ ಜಾಸ್ತಿ ಎಂದ ಡಿಸಿಎಂ; ಕರ್ನಾಟಕ ಮುಕ್ತ ವಿಶ್ವವಿದ್ಯಾಲಯಕ್ಕೆ ಬಿಗ್ ಟಾರ್ಗೆಟ್‌ ಫಿಕ್ಸ್‌

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ