• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಬೆಂಗಳೂರಿನ ಎಲ್ಲ ಚಿತಾಗಾರಗಳಲ್ಲೂ ಕೋವಿಡ್‌ ಮೃತರ ಅಂತ್ಯಕ್ರಿಯೆ; ಕೋವಿಡ್‌ ಪರೀಕ್ಷೆ ಹೆಚ್ಚಿಸಲು ಸೂಚನೆ, 24 ಗಂಟೆಯೊಳಗೇ ರಿಸಲ್ಟ್‌ ಕೊಡಲು ತಾಕೀತು

cknewsnow desk by cknewsnow desk
April 21, 2021
in COVID-19, STATE
Reading Time: 2 mins read
0
ಕಮ್ಯುನಿಸ್ಟರು ಮತ್ತು ಕಾಂಗ್ರೆಸ್‌ 7 ದಶಕದ ಆಡಳಿತದಿಂದ  ಭ್ರಮನಿರಸನಗೊಂಡ ಕೇರಳದಲ್ಲಿ ಬಿಜೆಪಿಯತ್ತ ಒಲವು; ದೇವರ ನಾಡಿನಲ್ಲಿ ಬದಲಾವಣೆಯ ಗಾಳಿ ಎಂದ ಡಿಸಿಎಂ
910
VIEWS
FacebookTwitterWhatsuplinkedinEmail

ಒಂದು ಕಡೆ ನಿರಂತರವಾಗಿ ಗಂಟಲು ದ್ರವ ಇತ್ಯಾದಿ ಕಲೆಕ್ಟ್ ಮಾಡುತ್ತಿದ್ದರೆ, ಮತ್ತೊಂದೆಡೆ ಪ್ರತಿ 3 ಗಂಟೆಗೊಮ್ಮೆ ಲ್ಯಾಬ್‌ಗಳು ರಿಸಲ್ಟ್‌ ಕೊಡುತ್ತಿರಲೇಬೇಕು. ಸ್ಯಾಂಪಲ್‌ ಕೊಟ್ಟ 24 ಗಂಟೆಯೊಳಗೆ ಫಲಿತಾಂಶ ಸಿಕ್ಕರೆ ಸೋಂಕಿಗೆ ಒಳಗಾದವರು ತಕ್ಷಣವೇ ಚಿಕಿತ್ಸೆ ಪಡೆಯಬಹುದು. ಆಗ ಜೀವಕ್ಕೆ ಹಾನಿಯಾಗುವವುದಿಲ್ಲ.

ಬೆಂಗಳೂರು: ಕೋವಿಡ್‌ ಎರಡನೇ ಅಲೆಯಿಂದ ನಗರದ ಜನರು ಕಂಗೆಟ್ಟಿರುವ ಹಿನ್ನೆಲೆಯಲ್ಲಿ ಬುಧವಾರ ವಿವಿಧ ಆಸ್ಪತ್ರೆ-ಲ್ಯಾಬ್‌ಗಳಿಗೆ ಮಿಂಚಿನ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ, ಜನರ ಸ್ಯಾಂಪಲ್‌ಗಳನ್ನು ಸ್ವೀಕರಿಸಿದ 24 ಗಂಟೆಯೊಳಗೆ ರಿಸಲ್ಟ್‌ ಕೊಡಬೇಕು ಎಂದು ಅವುಗಳಿಗೆ ತಾಕೀತು ಮಾಡಿದರು.

ಬೆಳಗ್ಗೆಯಿಂದಲೇ ಮಲ್ಲೇಶ್ವರದ ಕೆ.ಸಿ ಜನರಲ್‌ ಆಸ್ಪತ್ರೆ, ರಾಜಾಜಿನಗರದ ಇಎಸ್‌ಐ, ಲೈಫ್‌ಸೆಲ್ ಲ್ಯಾಬ್‌, ವಿಕ್ಟೋರಿಯಾ ಹಾಗೂ ಕಿದ್ವಾಯಿ ಆಸ್ಪತ್ರೆಗಳಿಗೆ ಭೇಟಿ ನೀಡಿದ ಅವರು; ಅಲ್ಲಿನ ಕೋವಿಡ್‌ ವ್ಯವಸ್ಥೆ, ಚಿಕಿತ್ಸೆ, ಲ್ಯಾಬ್‌, ಲಸಿಕೆ ನೀಡಿಕೆ ಇತ್ಯಾದಿ ಅಂಶಗಳನ್ನು ಪರಿಶೀಲನೆ ನಡೆಸಿದರು.

ಪ್ರತಿ ದಿನವೂ ಲ್ಯಾಬ್‌ಗಳಿಗೆ ಕನಿಷ್ಠ 3 ಬ್ಯಾಚ್‌ಗಳಲ್ಲಿ ಸ್ಯಾಂಪಲ್‌ ಕಳಿಸಬೇಕು ಹಾಗೂ ಆ ಸ್ಯಾಂಪಲ್‌ ಸ್ವೀಕರಿಸಿದ 24  ಗಂಟೆಯೊಳಗೆ ಲ್ಯಾಬ್‌ಗಳು ರಿಸಲ್ಟ್‌ ಕೊಡಬೇಕು ಎಂದು ಡಿಸಿಎಂ ಅವರು, ಆಸ್ಪತ್ರೆಗಳ ಹಿರಿಯ ವೈದ್ಯಾಧಿಕಾರಿಗಳು, ಆಡಳಿತ ವರ್ಗದವರಿಗೆ ಸ್ಪಷ್ಟ ನಿರ್ದೇಶನ ನೀಡಿದರು.

ಒಂದು ಕಡೆ ನಿರಂತರವಾಗಿ ಗಂಟಲು ದ್ರವ ಇತ್ಯಾದಿ ಕಲೆಕ್ಟ್ ಮಾಡುತ್ತಿದ್ದರೆ, ಮತ್ತೊಂದೆಡೆ ಪ್ರತಿ 3 ಗಂಟೆಗೊಮ್ಮೆ ಲ್ಯಾಬ್‌ಗಳು ರಿಸಲ್ಟ್‌ ಕೊಡುತ್ತಿರಲೇಬೇಕು. ಸ್ಯಾಂಪಲ್‌ ಕೊಟ್ಟ 24 ಗಂಟೆಯೊಳಗೆ ಫಲಿತಾಂಶ ಸಿಕ್ಕರೆ ಸೋಂಕಿಗೆ ಒಳಗಾದವರು ತಕ್ಷಣವೇ ಚಿಕಿತ್ಸೆ ಪಡೆಯಬಹುದು. ಆಗ ಜೀವಕ್ಕೆ ಹಾನಿಯಾಗುವವುದಿಲ್ಲ ಎಂದು ಡಿಸಿಎಂ ಅವರೆಲ್ಲರಿಗೂ ಮನವರಿಕೆ ಮಾಡಿಕೊಟ್ಟರು.

ಮಲ್ಲೇಶ್ವರದ ಕೆ. ಸಿ. ಜನರಲ್ ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್ ಪರಿಸ್ಥಿತಿ, ಆರೋಗ್ಯ ಸೌಲಭ್ಯಗಳ ಕುರಿತು ಪರಿಶೀಲಿಸಿದೆ.

ಬೆಡ್ ಗಳ ಲಭ್ಯತೆ, ಔಷಧಿಗಳ ಪೂರೈಕೆ, ಅಗತ್ಯ ಸೌಕರ್ಯಗಳ ಬಗ್ಗೆ ವೈದ್ಯಾಧಿಕಾರಿಗಳು, ಆರೋಗ್ಯ ಸಿಬ್ಬಂದಿಗಳೊಂದಿಗೆ ಚರ್ಚಿಸಿದೆ. pic.twitter.com/k9L1BPoOrS

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) April 21, 2021

ಕೆ.ಸಿ.ಜನರಲ್‌ʼನಲ್ಲಿ ಆಕ್ಸಿಜನ್‌ ಕೊರತೆ ಇಲ್ಲ

ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ಕೋವಿಡ್‌ ಮೆಡಿಕಲ್‌ ಕಿಟ್‌ ಪೂರೈಕೆಯಲ್ಲಿ ಕೊರತೆ ಇದೆ. ಖರೀದಿಯಲ್ಲಿ ಕೊಂಚ ಏರುಪೇರಾಗಿದೆ. ಅದೆಲ್ಲವನ್ನೂ ಸರಿಪಡಿಸಲಾಗುತ್ತದೆ ಎಂದ ಅವರು; ಇಲ್ಲಿ ಆಮ್ಲಜನಕ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಈ ಆಸ್ಪತ್ರೆಯಲ್ಲಿ ದಿನಕ್ಕೆ ಐದಾರು ಬ್ಯಾಚ್‌ನಲ್ಲಿ ಸ್ಯಾಂಪಲ್‌ಗಳನ್ನು ಲ್ಯಾಬ್‌ಗೆ ಕಳಿಸಲಾಗುತ್ತದೆ ಎಂದು ವೈದ್ಯರು ಡಿಸಿಎಂಗೆ ಮಾಹಿತಿ ನೀಡಿದರು. ಇನ್ನೂ ಹೆಚ್ಚು ಬ್ಯಾಚ್‌ಗಳಲ್ಲಿ ಸ್ಯಾಂಪಲ್‌ ಅನ್ನು ಲ್ಯಾಬ್‌ಗೆ ಕಳಿಸಿ ಎಂದು ಡಿಸಿಎಂ ಸೂಚಿಸಿದರು.

ಕೆ.ಸಿ ಜನರಲ್‌ ಆಸ್ಪತ್ರೆಯಲ್ಲಿ 8 ಸಾವಿರ ಲೀಟರ್ ಸಾಮರ್ಥ್ಯದ ಆ್ಯಕ್ಸಿಜನ್ ಪ್ಲಾಂಟ್ ಇದೆ. ನಿತ್ಯವೂ 4 ಸಾವಿರ ಲೀಟರ್‌ ಬಳಕೆ ಆಗುತ್ತಿದೆ ಎಂದು ಡಿಸಿಎಂಗೆ ಆಸ್ಪತ್ರೆ ಸೂಪರಿಂಟೆಂಡೆಂಟ್ ಡಾ.ವೆಂಕಟೇಶಯ್ಯ ಮಾಹಿತಿ ನೀಡಿದರು.

ಸೋಂಕು ಬಂದಾಗ ಜನರು ನಿರ್ದಿಷ್ಟ ಆಸ್ಪತ್ರೆಯೇ ಬೇಕು ಅಂತ ಹುಡುಕಬಾರದು. ಕೆ.ಸಿ ಜನರಲ್‌ನಲ್ಲಿ 120 ವೆಂಟಿಲೇಟರ್ ಇದೆ. 450 ಬೆಡ್‌ಗಳಿವೆ, ಅದರಲ್ಲಿ 180ಕ್ಕೂ ಹೆಚ್ಚು ಹಾಸಿಗೆಗಳನ್ನು ಕೋವಿಡ್ʼಗೆ ಮೀಸಲಿಡಲಾಗಿದೆ. ಇನ್ನೂ 100 ಬೆಡ್ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.

ಲೈಫ್‌ಸೆಲ್‌ಗೆ 3 ಬ್ಯಾಚ್‌ ಸ್ಯಾಂಪಲ್‌

ಈವರೆಗೆ ದಿನಕ್ಕೆ ಒಮ್ಮೆ ಮಾತ್ರ ಕೋವಿಡ್‌ ಸ್ಯಾಂಪಲ್‌ ಸ್ವೀಕರಿಸುತ್ತಿದ್ದ ರಾಜಾಜಿನಗರದ ಲೈಫ್ ಸೆಲ್ ಲ್ಯಾಬ್, ಈಗ 3  ಬ್ಯಾಚ್‌ಗಳಲ್ಲಿ ಸ್ಯಾಂಪಲ್‌ ಕಳಿಸಿದರೂ ಪರೀಕ್ಷೆ ಮಾಡಿ ರಿಸಲ್ಟ್‌ ಕೊಡಲು ಮುಂದೆ ಬಂದಿದೆ.

ಡಿಸಿಎಂ ಭೇಟಿ ನೀಡಿದ್ದ ಸಂದರ್ಭದಲ್ಲಿ ಪ್ರಯೋಗಾಲಯದ ತಜ್ಞರು ಈ ಭರವಸೆ ನೀಡಿದರು. ಇಂದಿನಿಂದಲೇ 3 ಬ್ಯಾಚ್‌ ಸ್ಯಾಂಪಲ್‌ ಸ್ವೀಕರಿಸಲು ಆಸ್ಪತ್ರೆ ಸಿದ್ಧವಾಗಿದ್ದು, ಈವರೆಗೆ ಲ್ಯಾಬಿಗೆ ಸ್ಯಾಂಪಲ್‌ ಹೋದ ಮೇಲೆ ರಿಸಲ್ಟ್‌ ಬರುವುದು 48ರಿಂದ 70 ಗಂಟೆ ಆಗುತ್ತಿತ್ತು. ಈ ವಿಳಂಬದಿಂದ ರೋಗವೂ ಉಲ್ಬಣವಾಗುತ್ತಿತ್ತಲ್ಲದೆ ಪ್ರಾಣಕ್ಕೆ ಹಾನಿ ಉಂಟು ಮಾಡುತ್ತಿತ್ತು. ಬೇಗ ರಿಸಲ್ಟ್‌, ಬೇಗ ಚಿಕಿತ್ಸೆ ಪಡದರೆ ಜೀವಕ್ಕೆ ಹಾನಿಯಾಗದು ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.

ರಾಜಾಜಿನಗರ ESI ಆಸ್ಪತ್ರೆಗೆ ಭೇಟಿ ನೀಡಿದೆ. ಈವರೆಗೆ ಇಲ್ಲಿ 494 ಹಾಸಿಗೆಗಳ ಪೈಕಿ 120 ಹಾಸಿಗೆಗಳನ್ನು ಕೋವಿಡ್ ಚಿಕಿತ್ಸೆಗೆ ಮೀಸಲಿಡಲಾಗಿದೆ. ಹೆಚ್ಚುವರಿಯಾಗಿ 60 ಹಾಸಿಗೆಗಳನ್ನು ಮೀಸಲಿಡುವಂತೆ ಸೂಚಿಸಿದ್ದೇನೆ.

ಅಲ್ಲದೆ, ಅಗತ್ಯವಿರುವ ಆರೋಗ್ಯ ಸೌಕರ್ಯಗಳ ಬಗ್ಗೆ ವೈದ್ಯರೊಂದಿಗೆ ಚರ್ಚಿಸಿದೆ. pic.twitter.com/3OJmBxUyuM

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) April 21, 2021

ಇಎಸ್‌ಐನಲ್ಲಿ ಹಾಸಿಗೆ ಕೊರತೆ ಇಲ್ಲ

ರಾಜಾಜಿನಗರದ ಎಎಸ್‌ಐ ಆಸ್ಪತ್ರೆಯಲ್ಲಿ 420 ಹಾಸಿಗೆಗಳಿದ್ದು, ಅವುಗಳಲ್ಲಿ ಕೋವಿಡ್‌ ಸೋಂಕಿತರಿಗೆ 120 ಬೆಡ್‌ ಮೀಸಲಿಡಲಾಗಿದೆ. ಇನ್ನೂ 60 ಬೆಡ್  ಮೀಸಲು ಇಡಲು ಸೂಚಿಸಲಾಯಿತು. ಅಲ್ಲಿಗೆ ಆರ್‌ಎನ್‌ಎ ಎಕ್ಸ್‌ಟ್ರ್ಯಾಕ್‌ ಮಿಷನ್‌ ಹಾಗೂ ವೆಂಟಿಲೇಟರ್‌ಗೆ ಅಳವಡಿಸಲಾಗುವ ಯೂಮಿಡಿಫಯರ್‌ ಯಂತ್ರದ ಅಗತ್ಯ ಇದ್ದು, ಅವುಗಳನ್ನು ಶೀಘ್ರವೇ ಒದಗಿಸಲಾಗುವುದು. ಜತೆಗೆ, ಡಾಟಾ ಎಂಟ್ರಿ ಮಾಡುವ ಸಿಬ್ಬಂದಿ ಹಾಗೂ ಲ್ಯಾಬ್‌ ಟೆಕ್ನಿಷಿಯನ್‌ಗಳ ಕೊರತೆ ಇದ್ದು ಕೂಡಲೇ ಪಾಲಿಕೆ ವತಿಯಿಂದ ಒದಗಿಸಲು ಡಿಸಿಎಂ ಸೂಚಿಸಿದರು.

ಯಾವುದೇ ತುರ್ತು ಸಂದರ್ಭದಲ್ಲಿ ಕೋವಿಡ್‌ ಸಹಾಯವಾಣಿ 1912 ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಿ ಎಂದ ಅವರು, ಎಲ್ಲ ಆಸ್ಪತ್ರೆಗಳಲ್ಲಿ ಟೆಸ್ಟಿಂಗ್, ವ್ಯಾಕ್ಸಿನೇಷನ್, ಹಾಸಿಗೆಗಳ ಪ್ರಮಾಣ, ಆ್ಯಕ್ಸಿಜನ್ ಸೇರಿ ಮುಂತಾದ ಸಿದ್ಧತೆಗಳನ್ನು ಪರಿಶೀಲಿಸಿದರು.

ಕೋವಿಡ್ ಚಿಕಿತ್ಸೆಗೆಂದೇ ಮೀಸಲಿಡಲಾಗಿರುವ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯಾಧಿಕಾರಿಗಳು, ಮಾಧ್ಯಮದವರೊಂದಿಗೆ ಪ್ರಸ್ತುತ ಸ್ಥಿತಿಗತಿ ಬಗ್ಗೆ ಚರ್ಚಿಸಿದೆ.

ವಿಕ್ಟೋರಿಯಾದಲ್ಲಿ 750 ಹಾಸಿಗೆಗಳ ವ್ಯವಸ್ಥೆಗೆ ನಿಶ್ಚಯಿಸಲಾಗಿದ್ದು, ಈಗ 400 ಹಾಸಿಗೆಗಳಿವೆ. ಪ್ರತಿದಿನ 50 ಹೆಚ್ಚುವರಿ ಹಾಸಿಗೆಗಳ ವ್ಯವಸ್ಥೆ ಮಾಡಲಾಗುತ್ತಿದೆ. pic.twitter.com/YN6UatR4Q8

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) April 21, 2021

ವಿಕ್ಟೋರಿಯಾ ಆಸ್ಪತ್ರೆಯಲ್ಲಿ 750 ಹಾಸಿಗೆ

ಈ ಆಸ್ಪತ್ರೆಯಲ್ಲಿ 750 ಹಾಸಿಗೆಗಳುಳ್ಳ ಕೋವಿಡ್‌ ಆಸ್ಪತ್ರೆ ಮಾಡಲು ನಿರ್ಧರಿಸಲಾಗಿದೆ. ಈಗಾಗಲೇ 350 ಬೆಡ್‌ಗಳ ಆಸ್ಪತ್ರೆ ಇದ್ದು, ಉಳಿದ 400 ಹಾಸಿಗೆಗಳನ್ನು ದಿನಕ್ಕೆ 50 ಬೆಡ್‌ನಂತೆ ವ್ಯವಸ್ಥೆ ಮಾಡಲಾಗುತ್ತಿದೆ. ಅಲ್ಲೇ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಹಿನ್ನೆಲೆಯಲ್ಲಿ ಹೀಗೆ ಮಾಡಲಾಗುತ್ತಿದೆ. ಈಗಾಗಲೇ ಇಲ್ಲಿ 50 ವೆಂಟಿಲೇಟರ್‌ಗಳಿವೆ ಎಂದು ಡಿಸಿಎಂ ಮಾಹಿತಿ ನೀಡಿದರು.

ಪರೀಕ್ಷೆ ಮಾಡಿಸಿಕೊಳ್ಳಲು ಮನವಿ

ಬಹಳ ಜನರಿಗೆ ಕೋವಿಡ್‌ ಲಕ್ಷಣಗಳಿದ್ದರೂ ಪರೀಕ್ಷೆ ಮಾಡಿಸಿಕೊಳ್ಳುತ್ತಿಲ್ಲ. ಕೆಮ್ಮು ಶೀತ, ನೆಗಡಿಯಂಥ ರೋಗ ಲಕ್ಷಣಗಳಿದ್ದವರು ತಪ್ಪದೇ ಕಡ್ಡಾಯವಾಗಿ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಬೇಕು. ವಿಳಂಬ ಮಾಡಬಾರದು ಎಂದು ಡಿಸಿಎಂ ಮನವಿ ಮಾಡಿದರು.

ಎಲ್ಲ ಚಿತಾಗಾರಗಳಲ್ಲಿ ಕೋವಿಡ್‌ ಮೃತರ ಅಂತ್ಯಕ್ರಿಯೆ

ಆಸ್ಪತ್ರೆಗಳಿಗೆ ಭೇಟಿ ಆರಂಭಿಸಿದ ವೇಳೆ ಕೆ.ಸಿ.ಜನರಲ್‌ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಡಿಸಿಎಂ ಅವರು, “ಬೆಳಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತ ಜತೆ ಮಾತುಕತೆ ನಡೆಸಿದೆ. ಕೆಲ ಆಯ್ದ ಚಿತಾಗಾರಗಳಲ್ಲಿ ಮಾತ್ರ ಕೋವಿಡ್‌ ಮೃತರ ಅಂತ್ಯಕ್ರಿಯೆ ನಡೆಸುತ್ತಿದ್ದ ಕಾರಣಕ್ಕೆ ನಗರದಲ್ಲಿ ಅಂತ್ಯ ಸಂಸ್ಕಾರಕ್ಕೆ ತೀವ್ರ ಸಮಸ್ಯೆಯಾಗಿತ್ತು. ಆ ಸಮಸ್ಯೆಯನ್ನು ಬಗೆಹರಿಸಲಾಗಿದೆ” ಎಂದರು.

ಇಂದಿನಿಂದ ನಗರದ ಎಲ್ಲ 13 ಚಿತಾಗಾರಗಳಲ್ಲೂ ಕೋವಿಡ್‌ ಮೃತರ ಅಂತ್ಯಕ್ರಿಯೆ ನಡೆಸಲು ಗುಪ್ತ ಅವರ ಜತೆ ನಡೆಸಿದ ಮಾತುಕತೆ ವೇಳೆ ನಿರ್ಧರಿಸಲಾಯಿತು. ಇನ್ನು ಈ ಸಮಸ್ಯೆ ಉಂಟಾಗುವುದಿಲ್ಲ. ಮೃತರ ಗೌರವಯುತ ಅಂತ್ಯಕ್ರಿಯೆಗೆ ಎಲ್ಲ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

Tags: bangalorebangalore crematoriumcovid19dr cn ashwath narayankarnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಮೇ 1ರಿಂದ ಎಲ್ಲ ಉನ್ನತ ಶಿಕ್ಷಣ  ವಿದ್ಯಾರ್ಥಿಗಳಿಗೆ ಲಸಿಕೆ; ರಾಜ್ಯದ ಸರಕಾರಿ, ಖಾಸಗಿ ಸ್ವಾಮ್ಯದ ಎಲ್ಲ 33 ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಗವರ್ನರ್‌, ಡಿಸಿಎಂ ಸೂಚನೆ

ಮೇ 1ರಿಂದ ಎಲ್ಲ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಲಸಿಕೆ; ರಾಜ್ಯದ ಸರಕಾರಿ, ಖಾಸಗಿ ಸ್ವಾಮ್ಯದ ಎಲ್ಲ 33 ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಗವರ್ನರ್‌, ಡಿಸಿಎಂ ಸೂಚನೆ

Leave a Reply Cancel reply

Your email address will not be published. Required fields are marked *

Recommended

ಜೆಡಿಎಸ್‌’ಗೆ ನಾಲ್ವರು ಕಾರ್ಯಾಧ್ಯಕ್ಷರು

ಜೆಡಿಎಸ್‌’ಗೆ ನಾಲ್ವರು ಕಾರ್ಯಾಧ್ಯಕ್ಷರು

4 years ago
ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ &  ₹25,000  ಕನಿಷ್ಠ ವೇತನ‌ ; ಮುಖ್ಯಮಂತ್ರಿ & ಹಣಕಾಸು ಇಲಾಖೆ ಅಧಿಕಾರಿಗಳ ಜತೆ ಚರ್ಚೆ ನಡೆಸಿ ಶೀಘ್ರ  ನಿರ್ಧಾರ: ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ

ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ & ₹25,000 ಕನಿಷ್ಠ ವೇತನ‌ ; ಮುಖ್ಯಮಂತ್ರಿ & ಹಣಕಾಸು ಇಲಾಖೆ ಅಧಿಕಾರಿಗಳ ಜತೆ ಚರ್ಚೆ ನಡೆಸಿ ಶೀಘ್ರ ನಿರ್ಧಾರ: ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ