• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಲಾಕ್‌ಡೌನ್‌ ರೀತಿಯಲ್ಲೇ ವೀಕೆಂಡ್‌ ಕರ್ಫ್ಯೂ; ಅನವಶ್ಯಕವಾಗಿ ಹೊರಗಿನಿಂದ ಬೆಂಗಳೂರಿಗೆ ಬರುವವರನ್ನು ನಿರ್ಬಂಧಿಸಲು ಪೊಲೀಸರಿಗೆ ಸೂಚನೆ ಕೊಟ್ಟ ಬೊಮ್ಮಾಯಿ

cknewsnow desk by cknewsnow desk
April 22, 2021
in COVID-19, STATE
Reading Time: 1 min read
0
ಲಾಕ್‌ಡೌನ್‌ ರೀತಿಯಲ್ಲೇ ವೀಕೆಂಡ್‌ ಕರ್ಫ್ಯೂ; ಅನವಶ್ಯಕವಾಗಿ ಹೊರಗಿನಿಂದ  ಬೆಂಗಳೂರಿಗೆ ಬರುವವರನ್ನು ನಿರ್ಬಂಧಿಸಲು  ಪೊಲೀಸರಿಗೆ ಸೂಚನೆ ಕೊಟ್ಟ ಬೊಮ್ಮಾಯಿ
916
VIEWS
FacebookTwitterWhatsuplinkedinEmail

ಖಾಸಗಿ ಆಸ್ಪತ್ರೆಗಳಲ್ಲಿನ 50% ಹಾಸಿಗೆ ಸ್ವಾಧೀನಕ್ಕೆ ಜಂಟಿ ಕಾರ್ಯಾಚರಣೆ; ಬಿಎಂಪಿ ಹಾಗೂ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಎಂಟು ತಂಡಗಳ ರಚನೆ

ಲಾಕ್ಡೌನ್ ವೇಳೆ ಕೈಗೊಳ್ಳಲಾಗಿದ್ದ ಬಿಗಿ ಕ್ರಮಗಳನ್ನು ಶುಕ್ರವಾರ ರಾತ್ರಿಯಿಂದ ಆರಂಭಿಸಿ. ವಾರಾಂತ್ಯದ ಕರ್ಫ್ಯೂ ಸಂದರ್ಭದಲ್ಲಿಯೂ ಕಠಿಣ ನಿಯಮ ಜಾರಿಗೊಳಿಸಿ. ಮುಖ್ಯ & ಸಣ್ಣ ರಸ್ತೆಗಳಿಗೆ ಬ್ಯಾರಿಕೇಡ್ ಹಾಕಿ. ವಾಹನ ಸಂಚಾರ ನಿರ್ಬಂಧಿಸಿ.

ಬೆಂಗಳೂರು: ದಿನೇದಿನೇ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಖಾಸಗಿ ಆಸ್ಪತ್ರೆಗಳಲ್ಲಿನ ಶೇ.50ರಷ್ಟು ಹಾಸಿಗೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಜಂಟಿ ಕಾರ್ಯಾಚರಣೆ ಮಾಡುವಂತೆ ಬಿಬಿಎಂಪಿ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹಾಗೂ ಬೆಂಗಳೂರಿನ ಉಪ ಪೊಲೀಸ್ ಆಯುಕ್ತರ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಿದ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಈ ಆದೇಶ ಮಾಡಿದರು.

ಬೆಂಗಳೂರು ನಗರವನ್ನು 8 ವಲಯಗಳನ್ನಾಗಿ ವಿಂಗಡನೆ ಮಾಡಲಾಗಿದೆ. ಒಂದೊಂದು ವಲಯಕ್ಕೆ ಒಬ್ಬ ಉಪ ಪೊಲೀಸ್ ಆಯುಕ್ತ ಹಾಗೂ ಬಿಬಿಎಂಪಿ ಜಂಟಿ ಆಯುಕ್ತರ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ಮುಂದಿನ ಮೂರು ನಾಲ್ಕು ದಿನಗಳಲ್ಲಿ ತಮ್ಮ ವ್ಯಾಪ್ತಿಯ ಖಾಸಗಿ ಆಸ್ಪತ್ರೆಗಳಿಗೆ ದಿಡೀರ್ ಭೇಟಿ ನೀಡಬೇಕು. ಆಸ್ಪತ್ರೆಯಲ್ಲಿರುವ ವಾಸ್ತವ ಸ್ಥಿತಿಯನ್ನು ತಿಳಿದುಕೊಳ್ಳಲು ತಪಾಸಣೆ ಮಾಡಬೇಕು. ಅಲ್ಲಿ ಖಾಲಿ ಇರುವ ಬೆಡ್ʼಗಳ ಬಗ್ಗೆ ಮಾಹಿತಿ ಪಡೆಯಬೇಕು. ಪ್ರತಿಯೊಂದು ಆಸ್ಪತ್ರೆ ಸರ್ಕಾರಕ್ಕೆ ಶೇ.50ರಷ್ಟು ಹಾಸಿಗೆಗಳನ್ನು ಬಿಟ್ಟುಕೊಡುವಂತೆ ನೋಡಿಕೊಳ್ಳಬೇಕು ಎಂದು ಅವರು ಹೇಳೀದರು.

ಇದುವರೆಗೆ ಖಾಸಗಿ ಆಸ್ಪತ್ರೆಗಳು 7000 ಬೆಡ್ʼಗಳನ್ನು ಸರಕಾರಕ್ಕೆ ನೀಡಿವೆ. ಆದರೆ ಇನ್ನೂ 4000 ಹಾಸಿಗೆಗಳನ್ನು ಸರಕಾರದ ಸುಪರ್ದಿಗೆ ಪಡೆದುಕೊಳ್ಳಬೇಕಾಗಿದೆ. ಅದರಲ್ಲಿಯೂ ಆಕ್ಸಿಜನ್ ಇರುವ ಹಾಸಿಗೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಡೆಯಬೇಕಾಗಿದೆ. ಈ ನಿಟ್ಟಿನಲ್ಲಿ ಜಂಟಿ ಕಾರ್ಯಾಚರಣೆ ಮೂಲಕ ಆಕ್ಸಿಜನ್ ಇರುವ ಬೇಡಗಳನ್ನು ಪಡೆದುಕೊಳ್ಳುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವ ಬೊಮ್ಮಾಯಿ ತಾಕೀತು ಮಾಡಿದರು.

ಲಾಕ್ ಡೌನ್ ಮಾದರಿಯಲ್ಲಿ ಬಿಗಿ ಕ್ರಮ ಕೈಗೊಳ್ಳಿ

ಕಳೆದ ಬಾರಿಯ ಲಾಕ್ಡೌನ್ ಸಂದರ್ಭದಲ್ಲಿ ಕೈಗೊಳ್ಳಲಾಗಿದ್ದ ಬಿಗಿ ಕ್ರಮಗಳನ್ನು ನಾಳೆ ರಾತ್ರಿಯಿಂದ ಆರಂಭವಾಗಲಿರುವ ವಾರಾಂತ್ಯದ ಕರ್ಫ್ಯೂ ಸಂದರ್ಭದಲ್ಲಿಯೂ ಜಾರಿಗೊಳಿಸಿ. ಮುಖ್ಯ ಮತ್ತು ಸಣ್ಣ ರಸ್ತೆಗಳಿಗೆ ಬ್ಯಾರಿಕೇಡ್ʼಗಳನ್ನು ಅಳವಡಿಸಿ. ವಾಹನ ಸಂಚಾರ ನಿರ್ಬಂಧಿಸಿ. ಅನವಶ್ಯಕವಾಗಿ ಬೆಂಗಳೂರಿಗೆ ಬರುವವರನ್ನು ನಿರ್ಬಂಧಿಸಿ. ವಿನಾಕಾರಣ ತಿರುಗಾಡಲು ಜನರಿಗೆ ಅವಕಾಶ ನೀಡಬೇಡಿ. ಕಾನೂನು ಉಲ್ಲಂಘನೆ ಮಾಡುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ. ವಿನಾಕಾರಣ ಓಡಾಡುವ ಜನ ಬಳಸುವ ವಾಹನಗಳನ್ನು ಸೀಜ್ ಮಾಡಿ. ಒಳ್ಳೆ ಮಾತಿನಲ್ಲಿ ಕೇಳದಿದ್ದರೆ ಕಠಿಣ ಕ್ರಮ ಜರುಗಿಸಿ ಎಂದು ಪೊಲೀಸ್ ಅಧಿಕಾರಿಗಳಿಗೆ ಬೊಮ್ಮಾಯಿ ಕಟ್ಟುನಿಟ್ಟಿನ ಸೂಚನೆ ನೀಡಿದರು.

ವಾರಾಂತ್ಯದ ಕರ್ಫ್ಯೂ ಸಂದರ್ಭದಲ್ಲಿ ಮದುವೆ ಸಮಾರಂಭ ನಡೆಯುತ್ತಿವೆ. ಕಲ್ಯಾಣ ಮಂಟಪ ಹಾಗೂ ಸಭಾ ಮಂದಿರಗಳ ಮಾಲೀಕರ ಜೊತೆಗೆ ಮಾತನಾಡಿ. ಅವರಿಂದ ಕಾನೂನು ಉಲ್ಲಂಘನೆ ಆಗದಿರುವ ಕುರಿತು ಮುಚ್ಚಳಿಕೆಯನ್ನು ಪಡೆಯಿರಿ. ಕಾನೂನು ಉಲ್ಲಂಘನೆ ಮಾಡುವ ಚೌಟ್ರಿ ಹಾಗೂ ಕಲ್ಯಾಣ ಮಂಟಪಗಳನ್ನು ಮುಲಾಜಿಲ್ಲದೆ ಬಂದ್ ಮಾಡಿ ಎಂದು ಪೊಲೀಸ್ ಅಧಿಕಾರಿಗಳಿಗೆ ಸಚಿವ ಬೊಮ್ಮಾಯಿ ಕಟ್ಟುನಿಟ್ಟಿನ ಅಪ್ಪಣೆ ಮಾಡಿದರು.

ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದು ಪೊಲೀಸರ ಜವಾಬ್ದಾರಿ. ಹೀಗಾಗಿ ಪೊಲೀಸ್ ಸಿಬ್ಬಂದಿಯ ಸುರಕ್ಷತೆಗೆ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಪೊಲೀಸ್ ಠಾಣೆಗಳನ್ನು ಸ್ಯಾನಿಟೈಸ್ ಮಾಡಲಾಗುತ್ತಿದೆ. ಸೋಂಕು ತಗುಲದಂತೆ ಮುನ್ನೆಚ್ಚರಿಕೆ ವಹಿಸುವ ಮಾಸ್ಕ್, ಸ್ಯಾನಿಟೈಸರ್ ಸೇರಿದಂತೆ ಎಲ್ಲ ವೈದ್ಯಕೀಯ ಸೌಲಭ್ಯಗಳನ್ನು ಪೊಲೀಸ್ ಸಿಬ್ಬಂದಿಗೆ ಒದಗಿಸಲಾಗಿದೆ.

–ಬಸವರಾಜ ಬೊಮ್ಮಾಯಿ
ಗೃಹ & ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ

Tags: Basavaraj S BommaiBengaluruCovid second wavecovid19karnatakaweekend curfewweekend lockdown
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

by cknewsnow desk
October 29, 2026
0

ರಾಹುಲ್ ಗಾಂಧಿ ಪಡೆಗೆ ಟಾಂಗ್ ಕೊಟ್ಟ ಪ್ರಧಾನಿ ನರೇಂದ್ರ ಮೋದಿ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

Next Post
ಚಿಕ್ಕಬಳ್ಳಾಪುರ ಮೆಡಿಕಲ್‌ ಕಾಲೇಜು ಕಾಮಗಾರಿ 50% ಪೂರ್ಣ; ನಿಗದಿತ ಸಮಯದೊಳಗೆ ಜಿಲ್ಲೆಯ ಮಹತ್ವಾಕಾಂಕ್ಷಿ ಯೋಜನೆ ಸಾಕಾರ; ಹಾಗಾದರೆ, ವಿದ್ಯಾರ್ಥಿಗಳ ಪ್ರವೇಶ ಯಾವಾಗ?

ಕೋವಿಡ್‌ ಸಂಕಷ್ಟ ಕಾಲದಲ್ಲಿ ಅಧಿಕಾರಿ, ಸಿಬ್ಬಂದಿಗೆ ರಜೆ ಇಲ್ಲ ಎಂದ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ

Leave a Reply Cancel reply

Your email address will not be published. Required fields are marked *

Recommended

ಜಗದ್ವಿಖ್ಯಾತ ನಂದಿಬೆಟ್ಟದ ಬ್ರಹ್ಮಗಿರಿಯಲ್ಲಿ ಭಾರೀ ಭೂ ಕುಸಿತ; 10 ಅಡಿ ಆಳಕ್ಕೆ ಕುಸಿದ ರಸ್ತೆ

ಜಗದ್ವಿಖ್ಯಾತ ನಂದಿಬೆಟ್ಟದ ಬ್ರಹ್ಮಗಿರಿಯಲ್ಲಿ ಭಾರೀ ಭೂ ಕುಸಿತ; 10 ಅಡಿ ಆಳಕ್ಕೆ ಕುಸಿದ ರಸ್ತೆ

5 years ago
ತೇಜಸ್‌ ಯುದ್ಧ ವಿಮಾನದಲ್ಲಿ ಮೋದಿ ಹಾರಾಟ

ತೇಜಸ್‌ ಯುದ್ಧ ವಿಮಾನದಲ್ಲಿ ಮೋದಿ ಹಾರಾಟ

3 years ago

Popular News

  • ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

    ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

    0 shares
    Share 0 Tweet 0
  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

October 29, 2026
#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ