• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಎಸ್‌ಎನ್‌ಆರ್‌ ಆಸ್ಪತ್ರೆಯಲ್ಲಿ ಐವರ ಸಾವು ಹಿನ್ನೆಲೆ; ಕೋಲಾರಕ್ಕೆ ಧಾವಿಸಿದ ಡಿಸಿಎಂ; ಆಮ್ಲಜನಕ, ರೆಮಿಡಿಸ್ವಿರ್ ಕೊರತೆ ಆಗದಂತೆ ವೈದ್ಯಾಧಿಕಾರಿಗೆ ತಾಕೀತು, ಅಧಿಕಾರಿಗಳ ಜತೆ ತುರ್ತು ಸಭೆ

cknewsnow desk by cknewsnow desk
April 27, 2021
in COVID-19, KOLAR, STATE
Reading Time: 2 mins read
0
ಎಸ್‌ಎನ್‌ಆರ್‌ ಆಸ್ಪತ್ರೆಯಲ್ಲಿ ಐವರ ಸಾವು ಹಿನ್ನೆಲೆ; ಕೋಲಾರಕ್ಕೆ ಧಾವಿಸಿದ ಡಿಸಿಎಂ; ಆಮ್ಲಜನಕ, ರೆಮಿಡಿಸ್ವಿರ್ ಕೊರತೆ ಆಗದಂತೆ ವೈದ್ಯಾಧಿಕಾರಿಗೆ ತಾಕೀತು, ಅಧಿಕಾರಿಗಳ ಜತೆ ತುರ್ತು ಸಭೆ
916
VIEWS
FacebookTwitterWhatsuplinkedinEmail

ವಾರ್‌ ರೂಂ ಪರಿಶೀಲನೆ I ಹಾಸಿಗೆ, ಆಮ್ಲಜನಕದ ಪ್ರಮಾಣ ಹೆಚ್ಚಳಕ್ಕೂ ಆದೇಶ I ವೈದ್ಯರು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯ ಧೋರಣೆಯನ್ನು ಸಹಿಸುವ ಪ್ರಶ್ನೆಯೇ ಇಲ್ಲI ಕರ್ತವ್ಯ ನಿರ್ವಹಣೆಯಲ್ಲಿ ಲೋಪದೋಷ ಉಂಟಾದರೆ ಮುಲಾಜಿಲ್ಲದೆ ಕ್ರಮ

ಕೋಲಾರ: ಇಲ್ಲಿನ ಎಸ್‌.ಎನ್‌.ಆರ್ ಜಿಲ್ಲಾ‌ ಆಸ್ಪತ್ರೆಯಲ್ಲಿ ಆಮ್ಲಜನಕದ ಸಮಸ್ಯೆ ಉಂಟಾಗಿ ಸೋಮವಾರ ರಾತ್ರಿ ಐವರು ಸಾವನ್ನಪ್ಪಿದ ಬೆನ್ನಲ್ಲೇ ಕೋಲಾರಕ್ಕೆ ಮಂಗಳವಾರ ಧಾವಿಸಿ ಬಂದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು, ಜಿಲ್ಲೆಯ ಇಡೀ ಕೋವಿಡ್‌ ಪರಿಸ್ಥಿತಿಯನ್ನು ಆಮೂಲಾಗ್ರವಾಗಿ ಪರಿಶೀಲನೆ ನಡೆಸಿದರು.

ಕೋವಿಡ್‌ ಎರಡನೇ ಅಲೆಯಿಂದ ಜಿಲ್ಲೆಯೂ ಸಾಕಷ್ಟು ಸಮಸ್ಯೆಗೀಡಾಗಿದ್ದು ಆಮ್ಲಜನಕ, ರೆಮಿಡಿಸ್ವಿರ್‌, ಐಸಿಯು ಹಾಸಿಗೆಗಳು, ವೆಂಟಿಲೇಟರ್‌, ರಿಮೋಟ್‌ ಐಸಿಯು, ಕೋವಿಡ್‌ ಪರೀಕ್ಷೆ, ಫಲಿತಾಂಶ ಮತ್ತಿತರೆ ಸೌಲಭ್ಯಗಳ ಬಗ್ಗೆ ಅವರು ಪರಿಶೀಲನೆ ಮಾಡಿದರಲ್ಲದೆ, ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದರು. ಜತೆಗೆ, ಆಸ್ಪತ್ರೆ ಹಾಗೂ ಕೋವಿಡ್‌ ವಾರ್‌ ರೂಂನಲ್ಲಿರುವ ಕೊರತೆಗಳ ಬಗ್ಗೆಯೂ ಮಾಹಿತಿ ಪಡೆದುಕೊಂಡರು. ಜತೆಗೆ, ವಾರ್‌ ರೂಮ್ ಸಿಬ್ಬಂದಿ ಜತೆ ಸಮಾಲೋಚನೆಯನ್ನೂ ನಡೆಸಿದರು.

ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಐವರು ಸಾವನ್ನಪ್ಪಿರುವ ಘಟನೆ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಅವರು, ವೈದ್ಯರು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯ ಧೋರಣೆಯನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕರ್ತವ್ಯ ನಿರ್ವಹಣೆಯಲ್ಲಿ ಲೋಪದೋಷ ಉಂಟಾದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ಕೊಟ್ಟರು.

ಕೋಲಾರದಲ್ಲಿರುವ ಡಿಜಿಟಲ್ ಅರೋಗ್ಯ ವಾಹಿನಿಯಲ್ಲಿರುವ ಕೋವಿಡ್‌ ವಾರ್‌ ರೂಮಿಗೆ ಭೇಟಿ ನೀಡಿದರಲ್ಲದೆ, ಎರಡನೇ ಅಲೆ ತಡೆಗಟ್ಟುತ್ತಿರುವ ವಿಧಾನವನ್ನು ಪರಿಶೀಲಿಸಿದರು. ಮನೆಯಲ್ಲೇ ಕ್ವಾರಂಟೈನ್‌ ಆಗಿ ಚಿಕಿತ್ಸೆ ಪಡೆಯುತ್ತಿರವವರ ಬಗ್ಗೆ ಮಾಹಿತಿ ಪಡೆದರಲ್ಲದೆ, ಅವರಿಗೆ ನೀಡಲಾಗುತ್ತಿರುವ ಚಿಕಿತ್ಸೆ, ಅದನ್ನು ಮತ್ತಷ್ಟು ಉತ್ತಮಪಡಿಸುವ ಬಗ್ಗೆ ವೈದ್ಯರಿಗೆ ಸಲಹೆ ನೀಡಿದರು ಉಪ ಮುಖ್ಯಮಂತ್ರಿ.

ಮಾಹಿತಿ ಕೊರತೆ, ಡಿಸಿಎಂ ಕಿಡಿ

ಕೋವಿಡ್‌ ಎರಡೂ ಅಲೆಗಳ ಸಂದರ್ಭದಲ್ಲಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದವರ ಬಗ್ಗೆ ಸಮರ್ಪಕ ಮಾಹಿತಿ ಇಲ್ಲದ ಕಾರಣಕ್ಕೆ ಡಾ.ಆಶ್ವತ್ಥನಾರಾಯಣ, ವೈದ್ಯಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.

ಮೊದಲ ಅಲೆ ಬಂದಾಗಿನಿಂದ ಏನು ಮಾಡುತ್ತಿದ್ದೀರಿ? ಎಷ್ಟು ಸೋಂಕಿತರು ಬಂದರು? ಎಷ್ಟು ಜನ ದಾಖಲಾದರು? ಎಷ್ಟು ಜನ ಚಿಕಿತ್ಸೆ ಪಡೆದರು? ಇತ್ಯಾದಿ ಮಾಹಿತಿ ಇಲ್ಲದಿದ್ದರೆ ಹೇಗೆ? ಸರಿಯಾಗಿ ಮಾಹಿತಿಯೇ ಇಲ್ಲದಿದ್ದರೆ ನೀವು ಉತ್ತಮ ಸೌಲಭ್ಯ ನೀಡಲು ಪೂರ್ವ ಸಿದ್ಧತೆ ಮಾಡಿಕೊಳ್ಳಲು ಹೇಗೆ ಸಾಧ್ಯ? ಎಂದು ತರಾಟೆಗೆ ತೆಗೆದುಕೊಂಡರು.

ಕೋಲಾರದಲ್ಲಿರುವ ಡಿಜಿಟಲ್ ಅರೋಗ್ಯ ವಾಹಿನಿಯ "Co-Win War Room" ಗೆ ಭೇಟಿ ನೀಡಿ ಕೊರೋನಾ ಪರಿಸ್ಥಿತಿಯ ನಿರ್ವಹಣೆಗೆ ತೆಗೆದುಕೊಳ್ಳಲಾದ ವಿಧಾನವನ್ನು ಪರಿಶೀಲಿಸಿದೆ.

ಅನೇಕ ಸಂಖ್ಯೆಯಲ್ಲಿ Home Isolation ಚಿಕಿತ್ಸೆ ಪಡೆಯುತ್ತಿರುವ ಜನರಿಗೆ ಇನ್ನೂ ಉತ್ತಮವಾಗಿ ಆರೋಗ್ಯ ಸೌಲಭ್ಯ ತಲುಪುವ ರೀತಿಯಲ್ಲಿ ಕಾರ್ಯನಿರ್ವಹಿಸಲು ಸೂಚಿಸಿದ್ದೇನೆ.

1/3 pic.twitter.com/hhIWzAy9bK

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) April 27, 2021

ಕೋಲಾರ ವಾರ್‌ ರೂಂ ಚೆನ್ನಾಗಿದೆ

ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಡಿಸಿಎಂ ಡಾ.ಅಶ್ವತ್ಥನಾರಾಯಣ ಅವರು, ಕೋವಿಡ್‌ ಸೋಂಕಿತರಾಗಿ ಮನೆಗಳಲ್ಲಿ ಮತ್ತು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರವವರ ಮಾಹಿತಿಯನ್ನು ಸರಿಯಾಗಿ ಸಂಗ್ರಹ ಮಾಡಬೇಕೆಂದು ಸೂಚಿಸಲಾಗಿದೆ. ಪ್ರತಿ ಮಾಹಿತಿಯನ್ನು ಕೋವಿಡ್‌ ವಾರ್‌ ರೂಂಗೆ ಅಪ್‌ಡೇಟ್‌ ಮಾಡಬೇಕು. ಪ್ರತಿ ಸೋಂಕಿನ ಮಾಹಿತಿಯನ್ನು ಚಾಚೂ ತಪ್ಪದೇ ಇಟ್ಟಿರಬೇಕು. ಹೋಮ್‌ ಐಸೋಲೇಷನ್‌ ಆದವರು ಮಾತ್ರವಲ್ಲ ಉಳಿದೆಲ್ಲ ಸೋಂಕಿತರಿಗೆ ಇರುವ ಸೌಲಭ್ಯ ಮತ್ತಿತರೆ ಎಲ್ಲ ಅಂಶಗಳ ಬಗ್ಗೆಯೂ ಕಾಲ್‌ ಸೆಂಟರ್‌ಗೆ ಮಾಹಿತಿ ನೀಡಬೇಕು ಎಂದರು.

ಹಾಗೆ ನೋಡಿದರೆ, ಕೋಲಾರ್‌ ವಾರ್‌ ರೂಂ ಬಹಳ ಚೆನ್ನಾಗಿದೆ. ಉತ್ತಮ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಮೆಚ್ಚುಗೆ ಸೂಚಿಸಿದ ಡಿಸಿಎಂ, ಜಿಲ್ಲೆಯ ಸಮಗ್ರ ಮಾಹಿತಿಯನ್ನೂ ಇಲ್ಲಿಗೆ ಒದಗಿಸಿದರೆ ಸರಕಾರಕ್ಕೆ ಸೌಲಭ್ಯಗಳನ್ನು ಕೊಡುವುದು ಸುಲಭವಾಗುತ್ತದೆ ಎಂದರು.

ಔಷಧಿ ಕೊರತೆ ಆಗಬಾರದು

ಯಾವುದೇ ಕಾರಣಕ್ಕೂ ಹೊರಗೆ ಭೇಟಿ ನೀಡುವ ಸಿಬ್ಬಂದಿ ಕೈಯ್ಯಲ್ಲಿ ಔಷಧಿ ಕೊರತೆ ಆಗದಂತೆ ನೋಡಿಕೊಳ್ಳಬೇಕು. ಇವತ್ತು ಶೇ.80ರಿಂದ 90ರಷ್ಟು ಸೋಂಕಿತರು ಮನೆಗಳಲ್ಲಿಯೇ ಐಸೋಲೇಷನ್‌ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಔಷಧಿ ಕೊರತೆ ಇರಬಾರದು. ಔಷಧಿಯ ಜತೆಗೆ ಅವರಿಗೆ ಅಗತ್ಯ ಮಾಹಿತಿಯನ್ನೂ ಕಾಲ ಕಾಲಕ್ಕೆ ಕೊಡುತ್ತಿರಬೇಕು ಎಂದು ತಾಕೀತು ಮಾಡಿದ್ದೇನೆಂದು ಡಿಸಿಎಂ ತಿಳಿಸಿದರು.

ರೋಗ ಲಕ್ಷಣ ಇದ್ದವರ ಪರೀಕ್ಷೆ

ಕೋಲಾರದಲ್ಲಿ ದಿನಕ್ಕೆ 1,400 ಜನರ ಸ್ಯಾಂಪಲ್‌ ಪರೀಕ್ಷೆ ನಡೆಯುತ್ತಿತ್ತು. ಇದುವರೆಗೂ ಇಲ್ಲಿ ʼಎʼ ಸಿಂಪ್ಟ್ಯಾಮಿಕ್‌ ಹೊಂದಿರುವವರ ಪರೀಕ್ಷೆಯನ್ನು ಮಾಡಲಾಗುತ್ತಿತ್ತು. ಇನ್ನು ಮುಂದೆ ರೋಗ ಲಕ್ಷಣ ಇರುವವರ ಸ್ಯಾಂಪಲ್‌ ಮಾತ್ರ ತೆಗೆದುಕೊಳ್ಳಿ ಎಂದು ಸೂಚಿಸಿದ್ದೇನೆ. ದಿನಕೆ ಸರಾಸರಿ 300 ಜನರಿಗೆ ಪಾಸಿಟೀವ್‌ ಬರುತ್ತಿದೆ. ಸ್ಯಾಂಪಲ್‌ ಪಡೆಯುವುದರ ಜತೆಗೆ ಅಷ್ಟೇ ಬೇಗ ರಿಸಲ್ಟ್‌ ಕೂಡ ಕೊಡಬೇಕು. ಆಯಾ ದಿನ ಸಂಗ್ರಹ ಮಾಡಿದ ದಿನವೇ ರಿಸಲ್ಟ್‌ ಕೊಡಲೇಬೇಕು. ಬಾಕಿ ಉಳಿಸಿಕೊಳ್ಳಬಾರದು. ನನಗೆ ಸಿಕ್ಕಿದ ಮಾಹಿತಿ ಪ್ರಕಾರ 6,500 ಸ್ಯಾಂಪಲ್‌ ಬಾಕಿ ಇದೆ. ಅದನ್ನು ಕೂಡಲೇ ಕ್ಲಿಯರ್‌ ಮಾಡಬೇಕು. ಪಾಸಿಟೀವ್‌ ಬಂದ ಕೂಡಲೇ ಚಿಕಿತ್ಸೆ ಆರಂಭ ಮಾಡಬೇಕು  ಎಂದು ನಿರ್ದೇಶನ ನೀಡಿದ್ದೇನೆ ಎಂದು ಡಾ.ಅಶ್ವತ್ಥನಾರಾಯಣ ಮಾಹಿತಿ ನೀಡಿದರು.

ಆಮ್ಲಜನಕ ಪೂರೈಕೆ ಬಗ್ಗೆ ಪರಿಶೀಲನೆ ನಡಸಿದ್ದೇನೆ. ಎಸ್‌ಎನ್‌ಆರ್‌ ಆಸ್ಪತ್ರೆಯಲ್ಲಿ ಒಂದು ಜಂಬೋ ಸಿಲಿಂಡರ್‌, ಒಂದು ಡ್ಯೂರಾ ಸಿಲಿಂಡರ್‌ ಇದೆ. ಅವುಗಳ ಸಂಗ್ರಹ ಪ್ರಮಾಣ 6 ಸಾವಿರ ಲೀಟರ್‌ಗೆ ಹೆಚ್ಚಿಸಲು ಸೂಚಿಸಿದ್ದೇನೆ. ಐಸಿಯುಗೆ ಪ್ರತ್ಯೇಕ ಪೈಪ್‌ಲೈನ್‌ ಮಾಡಲಾಗುವುದು, ಈಗಿರುವ ಪೈಪ್‌ಲೈನ್‌ಗೆ 60 ಪಾಯಿಂಟ್ಸ್‌ ಕ್ಯಾರಿ ಮಾಡುವ ಸಾಮರ್ಥ್ಯ ಇದೆ. ಅದನ್ನು 200 ಪಾಯಂಟ್ಸ್‌ ಪ್ರಮಾಣಕ್ಕೆ ಹೆಚ್ಚಿಸಲಾಗುವುದು ಎಂದರು ಅವರು.

ಆಸ್ಪತ್ರೆಯಲ್ಲಿ ಹಾಸಿಗೆಗಳ ಪ್ರಮಾಣ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು. ಈಗ ಆಸ್ಪತ್ರೆಯಲ್ಲಿ 500 ಬೆಡ್‌ಗಳಿವೆ. ಅದರಲ್ಲಿ 100 ಹಾಸಿಗೆಗಳನ್ನು ಮಕ್ಕಳು, ತಾಯಂದಿರಿಗೆ ಮೀಸಲು ಇಡಲಾಗಿದೆ. ಆರ್.ಎಲ್.‌ಜಾಲಪ್ಪ ಆಸ್ಪತ್ರೆಯಲ್ಲೂ ಆಕ್ಸಿಜನ್‌ ಬೆಡ್‌ಗಳನ್ನು ಹೆಚ್ಚಿಸಲಾಗುವುದು. ಜಿಲ್ಲಾಸ್ಪತ್ರೆಯಲ್ಲಿ ರೆಮಿಡಿಸ್ವೀರ್‌ ಸೇರಿ ಸಾಕಷ್ಟು ಔಷಧಿ ಸಂಗ್ರಹ ಇದೆ. ಅಗತ್ಯವಾದರೆ ಖಾಸಗಿ ಆಸ್ಪತ್ರೆಯವರು ಆನ್‌ಲೈನ್‌ನಲ್ಲಿ ಬೇಡಿಕೆ ಸಲ್ಲಿಸಿ ತಕ್ಷಣ ಪಡೆಯಬಹುದು ಎಂದ ಅವರು, ಎಲ್ಲ ತಾಲೂಕು ಆಸ್ಪತ್ರೆಗಳಲ್ಲೂ ಚಿಕಿತ್ಸೆಯನ್ನು ಚುರುಕು ಮಾಡಬೇಕು ಹಾಗೂ ವ್ಯಾಕ್ಸಿನೇಷನ್‌ ಅಭಿಯಾನಕ್ಕೆ ವೇಗ ಕೊಡಬೇಕು ಎಂದು ಸೂಚಿಸಿದ್ದೇನೆ ಎಂದರು.

ಕೋಲಾರ ಲೋಕಸಭೆ ಸದಸ್ಯ ಮುನಿಸ್ವಾಮಿ, ವಿಧಾನ ಪರಿಷತ್‌ ಸದಸ್ಯ ವೈ.ಎ.ನಾರಾಯಣ ಸ್ವಾಮಿ, ಶಾಸಕ ಶ್ರೀನಿವಾಸ ಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ವೇಣುಗೋಪಾಲ್‌ ಅವರು ಡಿಸಿಎಂ ಜತೆಯಲ್ಲಿದ್ದರು. ಶಾಸಕಿ ರೂಪಾ ಶಶಿದರ, ನಂಜೇಗೌಡ ಅವರು ವರ್ಚುವಲ್ ಮೂಲಕ ಡಿಸಿಎಂ ಸಭೆಯಲ್ಲಿ ಭಾಗವಹಿಸಿದ್ದರು. ಜಿಲ್ಲಾಧಿಕಾರಿ, ಎಸ್ಪಿ ಸೇರಿದಂತೆ ಇತರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Tags: covid19deputy chief ministerdr cn ashwathnarayankarnatakaKarnatakaFightsCoronakolarsnr hospitalvacination
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಕೋವಿಡ್‌ ಸಂಕಷ್ಟ ಕಾಲದಲ್ಲೂ ಒಳ್ಳೆಯ ಸುದ್ದಿ! ಬೆಳಗಿನಜಾವ ಕುಗ್ರಾಮದ ರಸ್ತೆಯ ಮೇಲೆಯೇ ಭೂಮಿಗೆ ಬಂದ ಕಂದ!! ಎರಡು ಜೀವ ಉಳಿಸಿದ ಆರೋಗ್ಯ ಸಿಬ್ಬಂದಿಗೆ ಜೈಹೋ

ಕೋವಿಡ್‌ ಸಂಕಷ್ಟ ಕಾಲದಲ್ಲೂ ಒಳ್ಳೆಯ ಸುದ್ದಿ! ಬೆಳಗಿನಜಾವ ಕುಗ್ರಾಮದ ರಸ್ತೆಯ ಮೇಲೆಯೇ ಭೂಮಿಗೆ ಬಂದ ಕಂದ!! ಎರಡು ಜೀವ ಉಳಿಸಿದ ಆರೋಗ್ಯ ಸಿಬ್ಬಂದಿಗೆ ಜೈಹೋ

Leave a Reply Cancel reply

Your email address will not be published. Required fields are marked *

Recommended

ಬಾಗೇಪಲ್ಲಿಯಲ್ಲಿ ʼವಿದ್ಯಾಸಿರಿʼ ಯೋಜನೆಯಡಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್‌ಲೆಟ್‌ ಪಿಸಿ ವಿತರಿಸಿದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿಯಲ್ಲಿ ʼವಿದ್ಯಾಸಿರಿʼ ಯೋಜನೆಯಡಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್‌ಲೆಟ್‌ ಪಿಸಿ ವಿತರಿಸಿದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

5 years ago
ಪ್ರಾಧ್ಯಾಪಕರಾದ ದಳಪತಿ

ಪ್ರಾಧ್ಯಾಪಕರಾದ ದಳಪತಿ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ