• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಕೋವಿಡ್‌ ನಿರ್ವಹಣೆಯಲ್ಲಿ ಲೋಪವಾದರೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೇ ಸಂಪೂರ್ಣ ಹೊಣೆ; ಪರೀಕ್ಷೆ-ಫಲಿತಾಂಶದ ಬಗ್ಗೆಯೂ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅತೃಪ್ತಿ

cknewsnow desk by cknewsnow desk
April 28, 2021
in COVID-19, STATE
Reading Time: 1 min read
0
ಹೊಸ ವರ್ಷಕ್ಕೆ ಕೋವಿಡ್‌ ವ್ಯಾಕ್ಸಿನ್
916
VIEWS
FacebookTwitterWhatsuplinkedinEmail

Lead Photo by Polina Tankilevitch from Pexels

ರೋಗ ನಿರೋಧಕ ಚಿಕಿತ್ಸೆ ತ್ವರಿತವಾಗಿ ಆರಂಭಿಸದಿದ್ದರೆ ಪರಿಸ್ಥಿತಿ ಕೈಮೀರಿ ಹೋಗುತ್ತದೆ ಎಂದ ಡಿಸಿಎಂ

ಬಳ್ಳಾರಿ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಹಿರಿಯ ಅಧಿಕಾರಿಗಳೊಂದಿಗೆ ಜಿಲ್ಲೆಯ #COVID19 ಪರಿಸ್ಥಿತಿ ಬಗ್ಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದೆ.

Backlogs ಪ್ರಕರಣಗಳು ಹಾಗೂ Pooling ಗೆ ಆಸ್ಪದ ನೀಡದೆ ತಕ್ಷಣ ರೋಗಲಕ್ಷಣ ಇರುವ ಸೋಂಕಿತರಿಗೆ ಚಿಕಿತ್ಸೆಯಾಗಬೇಕು. ಜಿಲ್ಲೆಯ positivity rate ಕಡಿಮೆ ಮಾಡಲು ಸೂಚಿಸಿದ್ದೇನೆ.

1/3 pic.twitter.com/DhFLlQApIG

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) April 28, 2021

ಬೆಂಗಳೂರು: ಜಿಲ್ಲೆಗಳ ಕೋವಿಡ್‌ ಪರಿಸ್ಥಿತಿ ನಿಯಂತ್ರಣ ಹಾಗೂ ವ್ಯವಸ್ಥೆ ನಿರ್ವಹಣೆ ಸಂಪೂರ್ಣ, ನೇರ ಹೊಣೆಗಾರಿಕೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳದ್ದೇ ಆಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ವರ್ಚುವಲ್‌ ವೇದಿಕೆಯ ಮೂಲಕ ಬುಧವಾರ ಬೆಂಗಳೂರಿನಿಂದಲೇ ಬಳ್ಳಾರಿ ಜಿಲ್ಲೆಯ ಕೋವಿಡ್‌ ಪರಿಸ್ಥಿತಿಯನ್ನು ಅವಲೋಕನ ಮಾಡಿದ ವೇಳೆ ಮಾತನಾಡಿದ ಡಿಸಿಎಂ, ಜಿಲ್ಲೆಯಲ್ಲಿ ಕೋವಿಡ್‌ ನಿರ್ವಹಣೆಯಲ್ಲಿ ಕಂಡುಬಂದಿರುವ ಲೋಪದೋಷಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು.

ಬಳ್ಳಾರಿ ಜಿಲ್ಲಾ ಕೇಂದ್ರದಿಂದಲೇ ವರ್ಚುಯಲ್‌ ಸಭೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹಾಗೂ ಎಲ್ಲ ತಾಲೂಕುಗಳ ತಹಸೀಲ್ದಾರ್‌ಗಳೊಂದಿಗೆ ಪಾಲ್ಗೊಂಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ಅವರ ಜತೆ ಮಾತನಾಡಿದ ಡಿಸಿಎಂ, ಕೋವಿಡ್‌ ನಿರ್ವಹಣೆ ಏನೇ ಲೋಪವಾದರೂ ಜಿಲ್ಲಾಧಿಕಾರಿಯೇ ಹೊಣೆ ಎಂದರು.

ಪರೀಕ್ಷೆ-ಫಲಿತಾಂಶದ ಬಗ್ಗೆಯೂ ಅತೃಪ್ತಿ

ನಿರೀಕ್ಷಿತ ಪ್ರಮಾಣದಲ್ಲಿ ಕೋವಿಡ್‌ ಪರೀಕ್ಷೆ ನಡೆಯುತ್ತಿಲ್ಲ. ಇದರಲ್ಲಿ ಬಹಳ ಲೋಪ ಕಂಡುಬರುತ್ತಿದೆ. ರಿಸಲ್ಟ್‌ ಕೂಡ ತುಂಬಾ ತಡವಾಗಿ ನೀಡಲಾಗುತ್ತಿದೆ. ರಿಸಲ್ಟ್‌ ಎಷ್ಟು ತಡವಾಗುತ್ತೋ ರೋಗವು ಅಷ್ಟು ಉಲ್ಬಣ ವಾಗುತ್ತದೆ. ಹೀಗಾಗಿ ಸಾವುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗುತ್ತಿದೆ ಎಂದು ಡಿಸಿಎಂ ಹೇಳಿದರಲ್ಲದೆ, ಬಳ್ಳಾರಿ ಜಿಲ್ಲೆಗೆ ಸಂಬಂಧಿಸಿ ತಮ್ಮ ಕೈಯ್ಯಲ್ಲಿದ್ದ ಮಾಹಿತಿಯ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದರಲ್ಲದೆ ಈ ಬಗ್ಗೆ ಕೂಡಲೇ ಎಚ್ಚರಿಕೆ ವಹಿಸದಿದ್ದರೆ ಪರಿಸ್ಥಿತಿ ಕೈಮೀರಿ ಹೋಗುತ್ತದೆ ಎಂದು ಆನಂದ್‌ ಸಿಂಗ್‌ ಅವರಿಗೆ ವಿವರಿಸಿದರು.

ಯಾವ ಕಾರಣಕ್ಕೂ ರೋಗ ಉಲ್ಬಣವಾಗುವ ಹಂತಕ್ಕೆ ಬಿಡಲೇಬಾರದು. ವ್ಯಕ್ತಿಯಿಂದ ಸ್ಯಾಂಪಲ್‌ ಸ್ವೀಕರಿಸಿದ 24 ಗಂಟೆಯೊಳಗೆ ಫಲಿತಾಂಶ ಕೊಡಬೇಕು. ಒಂದು ಫಲಿತಾಂಶ ಪಾಸಿಟೀವ್‌ ಬಂದರೆ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡುವುದೋ ಅಥವಾ ಅವರವ ಮನೆಯಲ್ಲೇ ಐಸೋಲೇಷನ್‌ ಮಾಡಿ ಸೂಕ್ತ ಔಷಧಗಳನ್ನು ಫೂರೈಕೆ ಮಾಡಬೇಕು. ಈ ಪ್ರಕ್ರಿಯೆ ಅತ್ಯಂತ ತ್ವರಿತವಾಗಿ ಆಗಬೇಕು ಹಾಗೂ ಸಮಯಕ್ಕೆ ಹೆಚ್ಚು ಮಹತ್ವ ನೀಡಬೇಕು. ರೋಗ ನಿರೋಧಕ ಚಿಕಿತ್ಸೆ ತ್ವರಿತವಾಗಿ ಆರಂಭಿಸದಿದ್ದರೆ ಪರಿಸ್ಥಿತಿ ಕೈಮೀರಿ ಹೋಗುತ್ತದೆ ಎಂದು ಡಿಸಿಎಂ ಅವರು ಸಚಿವ ಆನಂದ ಸಿಂಗ್‌ ಹಾಗೂ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಟ್ಟಿ ಅವರಿಗೆ ತಿಳಿಸಿದರು.

ಈಗ ಬಳ್ಳಾರಿ ಜಿಲ್ಲೆಯಲ್ಲಿ ತುರ್ತಾಗಿ ಆಗಬೇಕಿರುವ ಕೆಲಸವೆಂದರೆ, ರಿಸಲ್ಟ್‌ ಕೊಡುವ ಲ್ಯಾಬ್‌ಗಳನ್ನು ಹೆಚ್ಚಿಸಬೇಕು ಹಾಗೂ ಇರುವ ಲ್ಯಾಬ್‌ಗಳಿಗೆ ಶಕ್ತಿ ತುಂಬಬೇಕು. ಒಂದು ಸ್ಯಾಂಪಲ್‌ಗಳು ಹೋಗುತ್ತಿದ್ದರೆ, ಇನ್ನೊಂದೆಡೆ ರಿಸಲ್ಟ್‌ ಬರುತ್ತಿರಬೇಕು. ಅಗತ್ಯವಾದರೆ ರಿಸಲ್ಟ್‌ ನೀಡುವ ಎಕ್ಸ್‌ಟ್ರಾಕ್ಸಿನ್‌ ಯಂತ್ರವನ್ನು ಇನ್ನಷ್ಟು ಖರೀದಿ ಮಾಡಿ. ಈ ಬಗ್ಗೆ ಜಿಲ್ಲಾಧಿಕಾರಿ ಕೂಡಲೇ ಕ್ರಮ ಕೈಗೊಳ್ಳಬೇಕು. ಯಾವುದಕ್ಕೂ ಕೊರತೆ ಆಗಬಾರದು, ಬಳ್ಳಾರಿ ಮಾತ್ರವಲ್ಲ, ಎಲ್ಲ ಜಿಲ್ಲೆಗಳಿಗೂ ನಾನು ಇದೇ ಸಲಹೆಯನ್ನೇ ಮಾಡುತ್ತೇನೆಂದು ಡಾ.ಅಶ್ವತ್ಥನಾರಾಯಣ ಹೇಳಿದರು.

ಔಷಧ ಕೊರತೆ ಆಗಬಾರದು

ಇದೇ ವೇಳೆ ಸಭೆಯಲ್ಲಿ ಉಪಸ್ಥಿತರಿದ್ದ ವೈದ್ಯಾಧಿಕಾರಿಗಳ ಜತೆಯೂ ಸಂವಾದ ನಡೆಸಿದ ಡಿಸಿಎಂ ಅವರು, ರೋಗ ಲಕ್ಷಣ ಇರುವವರಿಗೆ ಯಾವ ಔಷಧ ನೀಡಬೇಕು ಎಂಬುದನ್ನು ತಿಳಿಸಿದರಲ್ಲದೆ ಯಾವುದೇ ಕಾರಣಕ್ಕೂ ಔಷಧಿ ಕೊರತೆ ಆಗದಂತೆ ನೋಡಿಕೊಳ್ಳಿ. ಎಲ್ಲಿಯೂ ಆಮ್ಲಜನಕ, ವೆಂಟಿಲೇಟರ್‌, ರೆಮಿಡಿಸ್ವರ್‌ ಕೊರತೆ ಆಗದಂತೆ ಎಚ್ಚರ ವಹಿಸಿ. ಯಾವುದೇ ಸಮಸ್ಯೆ ಇದ್ದರೂ ಜಿಲ್ಲಾಧಿಕಾರಿ ಗಮನಕ್ಕೆ ತಂದು ಕೊರತೆ ಆಗದಂತೆ ನೋಡಿಕೊಳ್ಳಿ. ಸಮಸ್ಯೆ ಎದುರಾದಾಗ ಒದ್ದಾಡುವುದು ಬೇಡ ಎಂದು ಸೂಚಿಸಿದರು.

ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್‌ ನಿರ್ವಹಣೆಗೆ ಪರಿಣಾಮಕಾರಿ ಸೌಲಭ್ಯಗಳ ಕೊರತೆ ಇದೆ ಎಂದು ಆನಂದ ಸಿಂಗ್‌ ಅವರ ಗಮನ ಸೆಳೆದ ಡಿಸಿಎಂ, ರೋಗ ಲಕ್ಷಣಗಳಿರುವ ಜನರಿಗೆ ತತ್‌ಕ್ಷಣದಿಂದಲೇ ಚಿಕಿತ್ಸೆ ಆಗತ್ಯವಿರುತ್ತದೆ ಎಂದು ಡಿಸಿಎಂ ಒತ್ತಿ ಹೇಳಿದರು.

ಆನಂದ ಸಿಂಗ್‌ ಸ್ಪಂದನೆ

ಡಿಸಿಎಂ ಸಲಹೆಗಳ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಆನಂದ್‌ ಸಿಂಗ್‌ ಅವರು, ತಮ್ಮ ಎಲ್ಲ ಸಲಹೆಗಳನ್ನು ಈ ಕೂಡಲೇ ಜಾರಿಗೆ ತರುತ್ತೇವೆ. ಈ ಸಭೆಯ ನಂತರ ಸಭೆ ನಡೆಸಿ ಎಲ್ಲ ಕೊರತೆಗಳನ್ನು ನೀಗಿಸಲಾಗುವುದು ಎಂದು ಭರವಸೆ ನೀಡಿದರು.

Tags: bellary meetinigCovid second wavecovid vaccinecovid19dcm dr cn ashwathnarayankarnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ವೆಂಟಿಲೇಟರ್ ಲಭ್ಯತೆ 10 ಪಟ್ಟು ಹೆಚ್ಚಿಸಲು ಕ್ರಮ, ವಿದೇಶದಿಂದಲೂ ರೆಮ್ಡಿಸಿವಿರ್ ಆಮದು ಮಾಡಿಕೊಳ್ಳಲು ಮುಂದಾದ ರಾಜ್ಯ ಸರಕಾರ, ಕೇಂದ್ರ ಅನುಮತಿಗೆ ವೇಯ್ಟಿಂಗ್

ವೈದ್ಯರ ಲಿಖಿತ ಸಲಹೆ ಇಲ್ಲದೇ ಮನೆಯಲ್ಲೇ ರೆಮ್ಡಿಸಿವಿರ್ ಪಡೆಯುವಂತಿಲ್ಲ, ಮನೆಯಲ್ಲೂ ಇಟ್ಟುಕೊಳ್ಳುವಂತಿಲ್ಲ; ಆರೋಗ್ಯ ಸಚಿವ ಡಾ.ಕೆ.ಸುಧಾಕರ್

Leave a Reply Cancel reply

Your email address will not be published. Required fields are marked *

Recommended

TATA ತೆಕ್ಕೆಗೆ ಕೋಲಾರದ ಐಫೋನ್‌ ಘಟಕ

TATA ತೆಕ್ಕೆಗೆ ಕೋಲಾರದ ಐಫೋನ್‌ ಘಟಕ

3 years ago
ಕಷ್ಟಗಳನ್ನೇ ಮೆಟ್ಟಿಲು ಮಾಡಿಕೊಂಡ ಅಕ್ಕ-ತಂಗಿ

ಚಿನ್ನದ ಸಹೋದರಿಯರಿಗೆ ಇಂದು ಸನ್ಮಾನ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ